ಯಮಹಾ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಹಿತಿ ಬಹಿರಂಗ

ಜಪಾನಿನ ಬೈಕ್ ಉತ್ಪಾದನಾ ಕಂಪನಿಯಾಗಿರುವ ಯಮಹಾ ಮೋಟಾರ್ ಜಾಗತಿಕ ಮಾರುಕಟ್ಟೆಗಾಗಿ ತನ್ನ ಬಹುನೀರಿಕ್ಷಿತ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಪರಿಚಯಿಸಲು ಸಿದ್ದವಾಗುತ್ತಿದ್ದು, ಹೊಸ ಇವಿ ಸ್ಕೂಟರ್‌ಗಳನ್ನು ಕಂಪನಿಯು 2022ರ ಮೊದಲ ತ್ರೈಮಾಸಿಕ ವೇಳೆಗೆ ಬಿಡುಗಡೆ ಮಾಡುವುದು ಬಹುತೇಕ ಖಚಿತವಾಗಿದೆ.

ಯಮಹಾ ಎಲೆಕ್ಟ್ರಿಕ್ ಸ್ಕೂಟರ್ ಗಳ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಏಷ್ಯಾ ಮತ್ತು ಯುರೋಪಿನ ಪ್ರಮುಖ ಮಾರುಕಟ್ಟೆಗಳಲ್ಲಿ ಮುಂದಿನ ವರ್ಷ ಬಿಡುಗಡೆ ಮಾಡುವ ಸುಳಿವು ನೀಡಿರುವ ಯಮಹಾ ಕಂಪನಿಯು ಹಂತ-ಹಂತವಾಗಿ ಜಪಾನ್, ಚೀನಾ, ಮಲೇಷ್ಯಾ, ಥೈಲ್ಯಾಂಡ್‌, ಭಾರತ ಮತ್ತು ಇಂಡೋನೇಷ್ಯಾ ಪರಿಚಯಿಸಲಿದೆ. ಹೊಸ ಸ್ಕೂಟರ್‌ಗಳು 2019ರ ಟೊಕಿಯೋ ಮೋಟಾರ್ ಶೋನಲ್ಲಿ ಯಮಹಾ ಕಂಪನಿಯು ಅನಾವರಣಗೊಳಿಸಿದ್ದ ಇ-01 ಮತ್ತು ಇಸಿ-05 ಕಾನ್ಸೆಪ್ಟ್ ಮಾದರಿಗಳನ್ನು ಆಧರಿಸಿ ಬಿಡುಗಡೆಯಾಗಲಿವೆ.

ಯಮಹಾ ಎಲೆಕ್ಟ್ರಿಕ್ ಸ್ಕೂಟರ್ ಗಳ ಬಿಡುಗಡೆ ಮಾಹಿತಿ ಬಹಿರಂಗ

2030ರ ವೇಳೆಗೆ ವಾರ್ಷಿಕವಾಗಿ ಸುಮಾರು ಶೇ. 33 ರಷ್ಟು ಇವಿ ವಾಹನಗಳ ಮಾರಾಟವನ್ನು ವಿಸ್ತರಿಸುವ ಗುರಿಹೊಂದಿರುವ ಯಮಹಾ ಕಂಪನಿಯು 2050ರ ವೇಳೆಗೆ ತನ್ನ ಶ್ರೇಣಿಯ ಶೇ.90 ರಷ್ಟು ವಾಹನಗಳನ್ನು ವಿದ್ಯುದ್ದೀಕರಿಸುವ ಗುರಿ ಹೊಂದಿದೆ.

ಯಮಹಾ ಎಲೆಕ್ಟ್ರಿಕ್ ಸ್ಕೂಟರ್ ಗಳ ಬಿಡುಗಡೆ ಮಾಹಿತಿ ಬಹಿರಂಗ

ಹೆಚ್ಚುತ್ತಿರುವ ಇಂಧನ ಬೆಲೆಗಳ ಪರಿಣಾಮ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಹೊಸ ಆಟೋ ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಪರಿಚಯಿಸುತ್ತಿರುವುದು ಮಾರುಕಟ್ಟೆಯಲ್ಲಿ ಭಾರೀ ಬದಲಾವಣೆಗೆ ಕಾರಣವಾಗುತ್ತಿದೆ.

ಯಮಹಾ ಎಲೆಕ್ಟ್ರಿಕ್ ಸ್ಕೂಟರ್ ಗಳ ಬಿಡುಗಡೆ ಮಾಹಿತಿ ಬಹಿರಂಗ

ಈ ನಿಟ್ಟಿನಲ್ಲಿ ಯಮಹಾ ಕೂಡಾ ತನ್ನ ಹೊಸ ಎಲೆಕ್ಟ್ರಿಕ್ ವಾಹನ ಉತ್ಪನ್ನಗಳನ್ನು ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಇವಿ ಸ್ಕೂಟರ್ ವಿನೂತನ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲು ಸಜ್ಜುಗೊಂಡಿವೆ.

ಯಮಹಾ ಎಲೆಕ್ಟ್ರಿಕ್ ಸ್ಕೂಟರ್ ಗಳ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಇ-01 ಮತ್ತು ಇಸಿ-05 ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮೊದಲ ಬಾರಿಗೆ ಟೊಕಿಯೊ ಮೋಟಾರ್ ಶೋನಲ್ಲಿ ಪ್ರದರ್ಶನ ಮಾಡಿದ್ದ ಯಮಹಾ ಕಂಪನಿಯು ಈಗಾಗಲೇ ಟ್ರೇಡ್‌ ಮಾರ್ಕ್ ಸಲ್ಲಿಕೆ ಮಾಡಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲು ಸಿದ್ದವಾಗುತ್ತಿದೆ.

ಯಮಹಾ ಎಲೆಕ್ಟ್ರಿಕ್ ಸ್ಕೂಟರ್ ಗಳ ಬಿಡುಗಡೆ ಮಾಹಿತಿ ಬಹಿರಂಗ

ಯಮಹಾ ಮೋಟಾರ್‌ಸೈಕಲ್ ಕಂಪನಿಯು ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾರಾಟ ಜಾಲ ಹೊಂದಿದ್ದು, ಭಾರತದಲ್ಲೂ ಎಲೆಕ್ಟ್ರಿಕ್ ವಾಹನ ಉತ್ಪಾದನೆಗೆ ಮತ್ತು ಮಾರಾಟಕ್ಕಾಗಿ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ತೆರೆಯುವ ಯೋಜನೆಯಲ್ಲಿದೆ.

ಯಮಹಾ ಎಲೆಕ್ಟ್ರಿಕ್ ಸ್ಕೂಟರ್ ಗಳ ಬಿಡುಗಡೆ ಮಾಹಿತಿ ಬಹಿರಂಗ

ಎಲೆಕ್ಟ್ರಿಕ್ ವಾಹನಗಳಿಗಾಗಿಯೇ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ತೆರೆಯುವ ಮೂಲಕ ಸಂಪೂರ್ಣವಾಗಿ ಎಲೆಕ್ಟ್ರಿಕ್ ವಾಹನಗಳಿಗಾಗಿ ಮೀಸಲಿಡಲು ಸಹಕಾರಿಯಾಗಲಿದ್ದು, ಹೊಸ ಯೋಜನೆಗಾಗಿ ಕಂಪನಿಯು ಭಾರೀ ಪ್ರಮಾಣದ ಹೂಡಿಕೆ ಮಾಡುವ ಯೋಜನೆಯಲ್ಲಿದೆ.

ಯಮಹಾ ಎಲೆಕ್ಟ್ರಿಕ್ ಸ್ಕೂಟರ್ ಗಳ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬ್ಲೂಟೂತ್ ಕನೆಕ್ಟಿವಿಟಿ, ಎಬಿಎಸ್, ಸ್ವಾಪ್ ಬ್ಯಾಟರಿ, ಜಿಯೋ ಫೆನ್ಸಿಂಗ್, ಎರಡು ಬದಿಯಲ್ಲೂ ಡಿಸ್ಕ್ ಬ್ರೇಕ್ ಸೌಲಭ್ಯಗಳ ಜೊತೆ ಹಲವಾರು ತಾಂತ್ರಿಕ ಅಂಶಗಳು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡಲಾಗುತ್ತಿದ್ದು, ಹೊಸ ಸ್ಕೂಟರ್‌ಗಳನ್ನು ಜಾಗತಿಕ ಮಾರುಕಟ್ಟೆಗಳನ್ನು ಗುರಿಯಾಗಿಸಿ ಅಭಿವೃದ್ದಿಗೊಳಿಸಿದೆ.

ಯಮಹಾ ಎಲೆಕ್ಟ್ರಿಕ್ ಸ್ಕೂಟರ್ ಗಳ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅಭಿವೃದ್ದಿಗಾಗಿ ತೈವಾನ್ ಮೂಲದ ಇ-ಸ್ಕೂಟರ್ ತಯಾರಕರಾದ ಗೊಗೊ ಜೊತೆಗೂ ಸಹಭಾಗಿತ್ವ ಹೊಂದಿರುವ ಯಮಹಾ ಕಂಪನಿಯು ಹೊಸ ಯೋಜನೆ ಅಡಿ ಹಲವಾರು ಹೊಸ ಸ್ಕೂಟರ್‌ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

ಯಮಹಾ ಎಲೆಕ್ಟ್ರಿಕ್ ಸ್ಕೂಟರ್ ಗಳ ಬಿಡುಗಡೆ ಮಾಹಿತಿ ಬಹಿರಂಗ

ಗೊಗೊ ಕಂಪನಿಯು ಈಗಾಗಲೇ ಹಲವು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮಾಡುವ ಮೂಲಕ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಯಮಹಾ ಕಂಪನಿಯು ಇದೀಗ ಗೊಗೊ ಜೊತೆಗೂಡಿ ಜಾಗತಿಕ ಮಾರುಕಟ್ಟೆಗಾಗಿ ವಿವಿಧ ಮಾದರಿಯ ಇವಿ ಮಾದರಿಗಳನ್ನು ಸಿದ್ದಪಡಿಸುತ್ತಿದೆ.

ಯಮಹಾ ಎಲೆಕ್ಟ್ರಿಕ್ ಸ್ಕೂಟರ್ ಗಳ ಬಿಡುಗಡೆ ಮಾಹಿತಿ ಬಹಿರಂಗ

ಇ-01 ಮತ್ತು ಇಸಿ-05 ಎಲೆಕ್ಟ್ರಿಕ್ ಸ್ಕೂಟರ್‌ಗಳು ಸಹ ಹೊಸ ಸಹಭಾಗಿತ್ವ ಯೋಜನೆ ಅಡಿಯಲ್ಲಿಯೇ ನಿರ್ಮಾಣಗೊಳ್ಳುತ್ತಿದ್ದು, ಹೊಸ ಸ್ಕೂಟರ್‌ಗಳು ಮುಂದಿನ ವರ್ಷದ ಕೊನೆಯಲ್ಲಿ ಭಾರತದಲ್ಲೂ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಯಮಹಾ ಎಲೆಕ್ಟ್ರಿಕ್ ಸ್ಕೂಟರ್ ಗಳ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಇವಿ ಸ್ಕೂಟರ್‌ಗಳ ಬಗೆಗೆ ಯಾವುದೇ ನಿಖರವಾದ ತಾಂತ್ರಿಕ ಅಂಶಗಳಿಲ್ಲವಾದರೂ ಇ-01 ಮತ್ತು ಇಸಿ-05 ಎಲೆಕ್ಟ್ರಿಕ್ ಸ್ಕೂಟರ್‌ಗಳು ಅತ್ಯುತ್ತಮ ಬ್ಯಾಟರಿ ಪ್ಯಾಕ್ ಹೊಂದಿರಲಿದ್ದು, ಒಂದು ಬಾರಿ ಪೂರ್ಣ ಪ್ರಮಾಣದ ಚಾರ್ಜ್ ಮಾಡಿದ್ದಲ್ಲಿ 120ಕಿ.ಮೀ ನಿಂದ 150 ಕಿ.ಮೀ ಮೈಲೇಜ್‌ನೊಂದಿಗೆ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರಲಿವೆ ಎನ್ನಲಾಗಿದೆ.

More from DriveSpark

Article Published On: Thursday, December 16, 2021, 11:24 [IST]
English summary
Yamaha motor to launch mid size electric scooters details
Read more on ಯಮಹಾ yamaha
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+