ಬೆಲೆ ಏರಿಕೆ ಪಡೆದುಕೊಂಡ ಯಮಹಾ ಎಂಟಿ-15 ಬೈಕ್

ಹೊಸ ಹಣಕಾಸಿನ ವರ್ಷದಲ್ಲಿ ಹಲವಾರು ವಾಹನ ಉತ್ಪಾದನಾ ಕಂಪನಿಗಳು ಬೆಲೆ ಏರಿಕೆ ಮಾಡಿದೆ. ಯಮಹಾ ಕಂಪನಿಯು ಕೂಡ ತನ್ನ ಕೆಲವು ಆಯ್ದ ಮಾದರಿಗಳ ಬೆಲೆಯನ್ನು ಹೆಚ್ಚಿಸಲಾಗಿದೆ. ಇದರಲ್ಲಿ ಯಮಹಾ ಎಂಟಿ-15 ಬೈಕ್ ಕೂಡ ಒಳಗೊಂಡಿದೆ.

ಬೆಲೆ ಏರಿಕೆ ಪಡೆದುಕೊಂಡ ಯಮಹಾ ಎಂಟಿ-15 ಬೈಕ್

ಯಮಹಾ ಎಂಟಿ-15 ಬೈಕಿನ ಬೆಲೆಯನ್ನು ರೂ.1,000 ಗಳ ಕನಿಷ್ಠ ಬೆಲೆ ಏರಿಕೆಯನ್ನು ಪಡೆದುಕೊಂಡಿದೆ. ಲಭ್ಯವಿರುವ ವಿಭಿನ್ನ ಬಣ್ಣ ಆಯ್ಕೆಗಳಿಗೆ ಅನುಗುಣವಾಗಿ ಇದರ ಬೆಲೆಗಳು ಬದಲಾಗುತ್ತವೆ. ಈ ಯಮಹಾ ಎಂಟಿ-15 ಬೈಕ್ ಕಸ್ಟಮೈಸ್ ಯುವರ್ ವಾರಿಯರ್ ಜೊತೆಗೆ ಡಾರ್ಕ್ ಮ್ಯಾಟ್ ಬ್ಲೂ, ಮೆಟಾಲಿಕ್ ಬ್ಲೂ ಮತ್ತು ಐಸ್ ಫ್ಲೂ-ವರ್ಮಿಲಿಯನ್ ಎಂಬ ಮೂರು ಬಣ್ಣಗಳಲ್ಲಿ ಲಭ್ಯವಿದೆ.

ಬೆಲೆ ಏರಿಕೆ ಪಡೆದುಕೊಂಡ ಯಮಹಾ ಎಂಟಿ-15 ಬೈಕ್

ಯಮಹಾ ಕಂಪನಿಯು ಎಂಟಿ-15 ಬೈಕ್ ಅನ್ನು ಮೊದಲ ಬಾರಿಗೆ ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವರ್ಷದ ಮಾರ್ಚ್ ತಿಂಗಳಲ್ಲಿ ಬಿಡುಗಡೆಗೊಳಿಸಿತು. ಈ ಯಮಹಾ ಎಂಟಿ-15 ಬೈಕ್ ಬಿಡುಗಡೆಯಾದ ಮೊದಲ ತಿಂಗಳಲ್ಲಿ 5,203 ಯುನಿಟ್ ಗಳು ಮಾರಾಟವಾಗಿತ್ತು.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಬೆಲೆ ಏರಿಕೆ ಪಡೆದುಕೊಂಡ ಯಮಹಾ ಎಂಟಿ-15 ಬೈಕ್

ಯಮಹಾ ಎಂಟಿ-15 ಬೈಕಿನ ಬಗ್ಗೆ ಹೇಳುವುದಾದರೆ, ಈ ಬೈಕಿನಲ್ಲಿ 155 ಸಿಸಿ ಲಿಕ್ವಿಡ್ ಕೂಲಿಂಗ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 18.5 ಬಿ‍‍ಹೆಚ್‍‍ಪಿ ಪವರ್ ಮತ್ತು 13.9 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಬೆಲೆ ಏರಿಕೆ ಪಡೆದುಕೊಂಡ ಯಮಹಾ ಎಂಟಿ-15 ಬೈಕ್

ಈ ಹೊಸ ಯಮಹಾ ಎಂಟಿ-15 ಬೈಕಿನಲ್ಲಿ ಹೆಡ್‌ಲ್ಯಾಂಪ್ ಕ್ಲಸ್ಟರ್‌ನಲ್ಲಿ ಡ್ಯುಯಲ್ ಎಲ್‌ಇಡಿ ಸೆಟ್ ಅಪ್ ಹೊಂದಿರುವ ಹೊಸ ಬೈಕಿನಲ್ಲಿ ಮೇಲಿನ ಎರಡು ಲೈಟ್‌ಗಳು ಡೇ ಟೈಮ್ ರನ್ನಿಂಗ್ ಲೈಟ್‌ಗಳಾಗಿ ಕಾರ್ಯನಿರ್ವಹಿಸಿದ್ದಲ್ಲಿ, ಅದರ ಕೆಳಭಾಗದಲ್ಲಿಯೇ ಎಲ್ಇಡಿ ಹೆಡ್‌ಲ್ಯಾಂಪ್ ಅನ್ನು ಜೊಡಣೆ ಮಾಡಲಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಬೆಲೆ ಏರಿಕೆ ಪಡೆದುಕೊಂಡ ಯಮಹಾ ಎಂಟಿ-15 ಬೈಕ್

ಹಾಗೆಯೇ ಹೊಸ ಬೈಕಿನಲ್ಲಿ ಅಳವಡಿಸಲಾಗಿರುವ ಆಕರ್ಷಕ ಫ್ಯೂಲ್ ಟ್ಯಾಂಕ್ ಕೂಡಾ ಬೈಕಿನ ಬಲಿಷ್ಠತೆಗೆ ಮತ್ತಷ್ಟು ಮೆರಗು ತಂದಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಎಂಟಿ-10 ಬೈಕಿನಿಂದಲೂ ಕೆಲವು ವಿನ್ಯಾಸಗಳನ್ನು ಎಂಟಿ-15 ಮಾದರಿಯಲ್ಲಿ ಎರವಲು ಪಡೆಯಲಾಗಿದೆ.

ಬೆಲೆ ಏರಿಕೆ ಪಡೆದುಕೊಂಡ ಯಮಹಾ ಎಂಟಿ-15 ಬೈಕ್

ಇನ್ನು ಈ ಹೊಸ ಬೈಕಿನ ತೂಕದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಹೊಸ ಯಮಹಾ ಎಂಟಿ-15 ಬೈಕ್ 138 ಕೆಜಿ ತೂಕವನ್ನು ಹೊಂದಿದೆ. ಈ ಬೈಕಿನ ಹಿಂಭಾಗದಲ್ಲಿ ರೇಡಿಯಲ್ ಟಯರ್ ಅನ್ನು ಅಳವಡಿಸಲಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಬೆಲೆ ಏರಿಕೆ ಪಡೆದುಕೊಂಡ ಯಮಹಾ ಎಂಟಿ-15 ಬೈಕ್

ಇದರೊಂದಿಗೆ ಯಮಹಾ ಕಂಪನಿಯು ತನ್ನ ಆರ್ 15 ವಿ3, ಎಫ್‌ಝಡ್‌ಎಸ್‌ ಬೈಕುಗಳ ಬೆಲೆಯನ್ನು ಹೆಚ್ಚಿಸಿದೆ. ಯಮಹಾ ತನ್ನ ಬೈಕುಗಳ ಬೆಲೆಯನ್ನು ರೂ.1500ಗಳವರೆಗೆ ಹೆಚ್ಚಿಸಿದೆ. ಈ ಬೈಕುಗಳ ಬೆಲೆ ಅವುಗಳ ಬಣ್ಣಗಳನ್ನು ಅವಲಂಬಿಸಿರುತ್ತದೆ. ಯಮಹಾ ಆರ್ 15 ಬೈಕಿನ ಬೆಲೆ ರೂ.1.52 ಲಕ್ಷಗಳಿಂದ ರೂ.1.54 ಲಕ್ಷಗಳಾಗಿದೆ. ಇತ್ತೀಚೆಗೆ ಮೂರು ಬಣ್ಣಗಳ ಜೊತೆಗೆ ಹೊಸದಾಗಿ ರೆಡ್ ಮೆಟಾಲಿಕ್ ಬಣ್ಣವನ್ನು ಸೇರಿಸಲಾಗಿದೆ. ಈ ಬೈಕಿನ ಬೆಲೆ ರೂ.1.52 ಲಕ್ಷಗಳಾಗಿದೆ.

ಬೆಲೆ ಏರಿಕೆ ಪಡೆದುಕೊಂಡ ಯಮಹಾ ಎಂಟಿ-15 ಬೈಕ್

ಹೊಸ ಬಿ‍ಎಸ್-6 ಎಂಜಿನ್‍‍ನ ಯಮಹಾ ಎಂಟಿ-15 ಬೈಕ್ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಕಳೆದ ವರ್ಷ ನವೀಕರಿಸಲಾಗಿತ್ತು. ಇದರಿಂದ ಈ ಬೈಕಿನ ಪರ್ಫಾಮೆನ್ಸ್ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಆದರೆ ದೊಡ್ಡ ಮಟ್ಟದ ಬದಲಾವಣೆಗಳನ್ನು ಮಾಡಲಾಗಿಲ್ಲ. ಪರ್ಫಾಮೆನ್ಸ್ ಪ್ರಿಯರಿಗೆ ಈ ಬೈಕ್ ಒಂದು ಉತ್ತಮ ಆಯ್ಕೆಗಳಲ್ಲಿ ಒಂದಾಗಿದೆ.

Article Published On: Thursday, April 8, 2021, 10:00 [IST]
English summary
Yamaha MT15 Prices Increased For April 2021. Read In Kannada.
Read more on ಯಮಹಾ yamaha
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+