ಶೀಘ್ರದಲ್ಲೇ ಡ್ಯುಯಲ್ ಚಾನೆಲ್ ಎಬಿಎಸ್ ಪಡೆಯಲಿದೆ ಯಮಹಾ ಎಂಟಿ-15 ಬೈಕ್
ಯಮಹಾ ಕಂಪನಿಯು ಎಂಟಿ-15 ಬೈಕ್ ಅನ್ನು ಮೊದಲ ಬಾರಿಗೆ ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವರ್ಷದ ಮಾರ್ಚ್ ತಿಂಗಳಲ್ಲಿ ಬಿಡುಗಡೆಗೊಳಿಸಿತು. ಈ ಯಮಹಾ ಎಂಟಿ-15 ಬೈಕ್ ಬಿಡುಗಡೆಯಾದ ಮೊದಲ ತಿಂಗಳಲ್ಲಿ 5,203 ಯುನಿಟ್ ಗಳು ಮಾರಾಟವಾಗಿತ್ತು.

ಇದೀಗ ಜಪಾನ್ ಮೂಲದ ಯಮಹಾ ಕಂಪನಿಯು ತನ್ನ ಯಮಹಾ ಎಂಟಿ-15 ಬೈಕನ್ನು ಕೆಲವು ನವೀಕರಣಗಳನ್ನು ನಡೆಸಲಿದೆ. ವರದಿಗಳ ಪ್ರಕಾರ ಈ ಬೈಕ್ ಯಮಹಾ ಎಂಟಿ 15 ಶೀಘ್ರದಲ್ಲೇ ಡ್ಯುಯಲ್-ಚಾನೆಲ್ ಎಬಿಎಸ್ ಫೀಚರ್ ಅನ್ನು ಪಡೆಯಲಿದೆ. ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಮಾದರಿಯು ಸಿಂಗಲ್ ಚಾನೆಲ್ ಎಬಿಎಸ್ ಅನ್ನು ಹೊಂದಿದೆ. ಈ ಯಮಹಾ ಎಂಟಿ-15 ಬೈಕ್ ಕಸ್ಟಮೈಸ್ ಯುವರ್ ವಾರಿಯರ್ ಜೊತೆಗೆ ಡಾರ್ಕ್ ಮ್ಯಾಟ್ ಬ್ಲೂ, ಮೆಟಾಲಿಕ್ ಬ್ಲೂ ಮತ್ತು ಐಸ್ ಫ್ಲೂ-ವರ್ಮಿಲಿಯನ್ ಎಂಬ ಮೂರು ಬಣ್ಣಗಳಲ್ಲಿ ಲಭ್ಯವಿದೆ.

ಯಮಹಾ ಎಂಟಿ-15 ಬೈಕಿನಲ್ಲಿ 155 ಸಿಸಿ ಲಿಕ್ವಿಡ್ ಕೂಲಿಂಗ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 18.5 ಬಿಹೆಚ್‍ಪಿ ಪವರ್ ಮತ್ತು 13.9 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಈ ಹೊಸ ಯಮಹಾ ಎಂಟಿ-15 ಬೈಕಿನಲ್ಲಿ ಹೆಡ್‌ಲ್ಯಾಂಪ್ ಕ್ಲಸ್ಟರ್‌ನಲ್ಲಿ ಡ್ಯುಯಲ್ ಎಲ್‌ಇಡಿ ಸೆಟ್ ಅಪ್ ಹೊಂದಿರುವ ಹೊಸ ಬೈಕಿನಲ್ಲಿ ಮೇಲಿನ ಎರಡು ಲೈಟ್‌ಗಳು ಡೇ ಟೈಮ್ ರನ್ನಿಂಗ್ ಲೈಟ್‌ಗಳಾಗಿ ಕಾರ್ಯನಿರ್ವಹಿಸಿದ್ದಲ್ಲಿ, ಅದರ ಕೆಳಭಾಗದಲ್ಲಿಯೇ ಎಲ್ಇಡಿ ಹೆಡ್‌ಲ್ಯಾಂಪ್ ಅನ್ನು ಜೊಡಣೆ ಮಾಡಲಾಗಿದೆ.

ಹಾಗೆಯೇ ಹೊಸ ಬೈಕಿನಲ್ಲಿ ಅಳವಡಿಸಲಾಗಿರುವ ಆಕರ್ಷಕ ಫ್ಯೂಲ್ ಟ್ಯಾಂಕ್ ಕೂಡಾ ಬೈಕಿನ ಬಲಿಷ್ಠತೆಗೆ ಮತ್ತಷ್ಟು ಮೆರಗು ತಂದಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಎಂಟಿ-10 ಬೈಕಿನಿಂದಲೂ ಕೆಲವು ವಿನ್ಯಾಸಗಳನ್ನು ಎಂಟಿ-15 ಮಾದರಿಯಲ್ಲಿ ಎರವಲು ಪಡೆಯಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಇನ್ನು ಈ ಹೊಸ ಬೈಕಿನ ತೂಕದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಹೊಸ ಯಮಹಾ ಎಂಟಿ-15 ಬೈಕ್ 138 ಕೆಜಿ ತೂಕವನ್ನು ಹೊಂದಿದೆ. ಈ ಬೈಕಿನ ಹಿಂಭಾಗದಲ್ಲಿ ರೇಡಿಯಲ್ ಟಯರ್ ಅನ್ನು ಅಳವಡಿಸಲಾಗಿದೆ.

ಇನ್ನು ಹೊಸ ಹಣಕಾಸಿನ ವರ್ಷದಲ್ಲಿ ಹಲವಾರು ವಾಹನ ಉತ್ಪಾದನಾ ಕಂಪನಿಗಳು ಬೆಲೆ ಏರಿಕೆ ಮಾಡಿದೆ. ಯಮಹಾ ಕಂಪನಿಯು ಕೂಡ ತನ್ನ ಕೆಲವು ಆಯ್ದ ಮಾದರಿಗಳ ಬೆಲೆಯನ್ನು ಹೆಚ್ಚಿಸಲಾಗಿದೆ. ಇದರಲ್ಲಿ ಯಮಹಾ ಎಂಟಿ-15 ಬೈಕ್ ಕೂಡ ಒಳಗೊಂಡಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಯಮಹಾ ಎಂಟಿ-15 ಬೈಕಿನ ಬೆಲೆಯನ್ನು ರೂ.1,000 ಗಳ ಕನಿಷ್ಠ ಬೆಲೆ ಏರಿಕೆಯನ್ನು ಪಡೆದುಕೊಂಡಿದೆ. ಲಭ್ಯವಿರುವ ವಿಭಿನ್ನ ಬಣ್ಣ ಆಯ್ಕೆಗಳಿಗೆ ಅನುಗುಣವಾಗಿ ಇದರ ಬೆಲೆಗಳು ಬದಲಾಗುತ್ತವೆ.

ಹೊಸ ಬಿಎಸ್-6 ಎಂಜಿನ್‍ನ ಯಮಹಾ ಎಂಟಿ-15 ಬೈಕ್ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಕಳೆದ ವರ್ಷ ನವೀಕರಿಸಲಾಗಿತ್ತು. ಇದರಿಂದ ಈ ಬೈಕಿನ ಪರ್ಫಾಮೆನ್ಸ್ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಆದರೆ ದೊಡ್ಡ ಮಟ್ಟದ ಬದಲಾವಣೆಗಳನ್ನು ಮಾಡಲಾಗಿತ್ತಿಲ್ಲ. ಆದರೆ ಶೀಘ್ರದಲ್ಲೇ ಈ ಬೈಕ್ ಡ್ಯುಯಲ್ ಚಾನೆಲ್ ಎಬಿಎಸ್ ಅನ್ನು ಪಡೆಯಲಿದೆ. ಪರ್ಫಾಮೆನ್ಸ್ ಪ್ರಿಯರಿಗೆ ಈ ಬೈಕ್ ಒಂದು ಉತ್ತಮ ಆಯ್ಕೆಗಳಲ್ಲಿ ಒಂದಾಗಿದೆ.


Click it and Unblock the Notifications