ಕೋವಿಡ್ ಹೆಚ್ಚಳ ಹಿನ್ನಲೆಯಲ್ಲಿ ಬೈಕ್ ಉತ್ಪಾದನೆ ಸ್ಥಗಿತಗೊಳಿಸಿದ ಯಮಹಾ ಇಂಡಿಯಾ

ಕೋವಿಡ್ 2ನೇ ಅಲೆ ಹೆಚ್ಚಿರುವುದರಿಂದ ವಿವಿಧ ರಾಜ್ಯಗಳಲ್ಲಿ ಹಲವು ಕಠಿಣ ಕ್ರಮಗಳೊಂದಿಗೆ ಲಾಕ್ಡೌನ್, ಕರ್ಫ್ಯೂ ಕೈಗೊಳ್ಳಲಾಗುತ್ತಿದ್ದು, ಹೊಸ ಸುರಕ್ಷಾ ಕ್ರಮಗಳ ಪರಿಣಾಮ ಆಟೋ ಉದ್ಯಮ ಚಟುವಟಿಕೆಗಳು ಸ್ತಬ್ದಗೊಂಡಿವೆ.

ಕೋವಿಡ್ ಹೆಚ್ಚಳ ಹಿನ್ನಲೆಯಲ್ಲಿ ಬೈಕ್ ಉತ್ಪಾದನೆ ಸ್ಥಗಿತಗೊಳಿಸಿದ ಯಮಹಾ ಇಂಡಿಯಾ

ಕಳೆದ ವರ್ಷದ ಲಾಕ್‌ಡೌನ್‌ ಹೊಡೆತಕ್ಕೆ ಸಿಲುಕಿ ಸುಧಾರಿಸಿಕೊಳ್ಳುತ್ತಿದ್ದ ಆಟೋ ಉದ್ಯಮವು ಇದೀಗ ಮತ್ತೆ ಲಾಕ್‌ಡೌನ್ ಸಂಕಷ್ಟಕ್ಕೆ ಸಿಲುಕಿದ್ದು, ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ಮತ್ತೆ ಉತ್ಪಾದನೆಯು ತಗ್ಗಿರುವುರುವುದು ಭಾರೀ ನಷ್ಟ ಎದುರಿಸುವ ಭೀತಿ ಎದುರಾಗಿದೆ. ಆದರೆ ಉದ್ಯೋಗಿಗಳ ಆರೋಗ್ಯದ ದೃಷ್ಠಿಯಿಂದ ಹಲವು ಆಟೋ ಕಂಪನಿಗಳು ಈಗಾಗಲೇ ಕನಿಷ್ಠ ಪ್ರಮಾಣದ ಉತ್ಪಾದನೆ ಕೈಗೊಳ್ಳುತ್ತಿದ್ದರೆ ಇನ್ನು ಕೆಲವು ವಾಹನ ಕಂಪನಿಗಳು ವಾಹನ ಉತ್ಪಾದನೆಯನ್ನು ಸಂಪೂರ್ಣವಾಗಿ ಬಂದ್ ಮಾಡಿವೆ.

ಕೋವಿಡ್ ಹೆಚ್ಚಳ ಹಿನ್ನಲೆಯಲ್ಲಿ ಬೈಕ್ ಉತ್ಪಾದನೆ ಸ್ಥಗಿತಗೊಳಿಸಿದ ಯಮಹಾ ಇಂಡಿಯಾ

ಯಮಹಾ ಇಂಡಿಯಾ ಕಂಪನಿಯು ಕೋವಿಡ್ ಪರಿಣಾಮ ಈ ತಿಂಗಳು 15ರಿಂದ 15 ದಿನಗಳ ಕಾಲ ಉತ್ಪಾದನೆಯನ್ನು ಸ್ಥಗಿತಗೊಳಿಸುವುದಾಗಿ ಹೇಳಿಕೊಂಡಿದ್ದು, ತಮಿಳುನಾಡಿನಲ್ಲಿರುವ ಕಾಂಚೀಪುರಂ ಘಟಕ ಮತ್ತು ರಾಜಸ್ಥಾನದಲ್ಲಿ ಸುರಜ್‌ಪುರ್ ಘಟಕವನ್ನು ಮುಂದಿನ ಆದೇಶದ ತನಕ ಸ್ಥಗಿತಗೊಳಿಸುತ್ತಿರುವುದಾಗಿ ತಿಳಿಸಿದೆ.

ಕೋವಿಡ್ ಹೆಚ್ಚಳ ಹಿನ್ನಲೆಯಲ್ಲಿ ಬೈಕ್ ಉತ್ಪಾದನೆ ಸ್ಥಗಿತಗೊಳಿಸಿದ ಯಮಹಾ ಇಂಡಿಯಾ

ಉತ್ಪಾದನೆಯನ್ನು ಬಂದ್ ಮಾಡಿದರೂ ಕೂಡಾ ಗ್ರಾಹಕರ ಸೇವೆಗಳಲ್ಲಿ ಯಾವುದೇ ತೊಂದರೆ ಆಗದಂತೆ ಎಲ್ಲಾ ಅಗತ್ಯ ಸಿದ್ದತೆ ಮಾಡಿಕೊಂಡಿರುವುದಾಗಿ ತನ್ನ ಗ್ರಾಹಕರಿಗೆ ಭರವಸೆ ನೀಡಿರುವ ಯಮಹಾ ಕಂಪನಿಯು ವಾಹನ ಮಾರಾಟ ಮತ್ತು ಗ್ರಾಹಕರಿಗೆ ಸೇವೆಗಳಿಗೆ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ತೆರಿದಿದೆ.

ಕೋವಿಡ್ ಹೆಚ್ಚಳ ಹಿನ್ನಲೆಯಲ್ಲಿ ಬೈಕ್ ಉತ್ಪಾದನೆ ಸ್ಥಗಿತಗೊಳಿಸಿದ ಯಮಹಾ ಇಂಡಿಯಾ

ಅಗತ್ಯವಿದ್ದಲ್ಲಿ ಗ್ರಾಹಕರ ಮನೆ ಬಾಗಿಲುಗಳಿಗೆ ಸೇವೆ ಒದಗಿಸಲಿರುವ ಯಮಹಾ ಕಂಪನಿಯು ಸುರಕ್ಷಾ ಮಾರ್ಗಸೂಚಿ ಪಾಲಿಸಲಿದ್ದು, ಹೊಸ ವಾಹನ ಖರೀದಿ ಪ್ರಕ್ರಿಯೆಯನ್ನು ಯಾವುದೇ ರೀತಿಯಲ್ಲಿ ಸ್ಥಗಿತಗೊಳಿಸಿಲ್ಲ. ವಾಹನ ಖರೀದಿ ಪ್ರಕ್ರಿಯೆ ಎಂದಿನಂತೆ ಮುಂದುವರಿಯಲಿದ್ದು, ಪರಿಸ್ಥಿತಿಗೆ ಅನುಗುಣವಾಗಿ ವಾಹನ ವಿತರಣೆ ಪ್ರಕ್ರಿಯೆಯನ್ನು ಕೈಗೊಳ್ಳಲಿದೆ.

ಕೋವಿಡ್ ಹೆಚ್ಚಳ ಹಿನ್ನಲೆಯಲ್ಲಿ ಬೈಕ್ ಉತ್ಪಾದನೆ ಸ್ಥಗಿತಗೊಳಿಸಿದ ಯಮಹಾ ಇಂಡಿಯಾ

ಹೊಸ ವಾಹನಗಳ ಮಾರಾಟವು ಪರಿಸ್ಥಿತಿಗೆ ಅನುಗುಣವಾಗಿ ಏರಿಳಿಕೆ ಆಗುತ್ತಿದ್ದರೂ ಕರೋನಾ ವೈರಸ್ ಪರಿಣಾಮದಿಂದಾಗಿ ಹೊಸ ವಾಹನಕ್ಕೆ ಅಡಚಣೆ ಎದುರಾಗುತ್ತಿದ್ದು, ವಾಹನಗಳ ಮಾರಾಟವನ್ನು ಸರಳ ಮತ್ತು ಸುರಕ್ಷಿತವಾಗಿಸಲು ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳು ಸಾಕಷ್ಟು ಬಳಕೆಯಾಗುತ್ತಿವೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಕೋವಿಡ್ ಹೆಚ್ಚಳ ಹಿನ್ನಲೆಯಲ್ಲಿ ಬೈಕ್ ಉತ್ಪಾದನೆ ಸ್ಥಗಿತಗೊಳಿಸಿದ ಯಮಹಾ ಇಂಡಿಯಾ

ಹೊಸ ವಾಹನ ಖರೀದಿಗಾಗಿ ಬಹುತೇಕ ಗ್ರಾಹಕರು ನೇರವಾಗಿ ಮಾರಾಟ ಮಳಿಗೆಗಳಿಗೆ ಭೇಟಿ ನೀಡುವುದು ಸಾಮಾನ್ಯವಾಗಿರುತ್ತದೆ. ಆದರೆ ಕರೋನಾ ವೈರಸ್ ಪರಿಣಾಮ ಗ್ರಾಹಕರನ್ನು ಮಳಿಗೆಗಳಿಗೆ ಭೇಟಿ ನೀಡದೆ ವಾಹನ ಖರೀದಿ ಪ್ರಕ್ರಿಯೆಯತ್ತ ಸೆಳೆಯಲು ಆಟೋ ಕಂಪನಿಗಳು ಮಾಡಿದ ಹೊಸ ಪ್ರಯತ್ನವು ಇಂದು ಸಾಕಷ್ಟು ಪ್ರಯೋಜಕಾರಿಯಾಗಿದೆ.

ಕೋವಿಡ್ ಹೆಚ್ಚಳ ಹಿನ್ನಲೆಯಲ್ಲಿ ಬೈಕ್ ಉತ್ಪಾದನೆ ಸ್ಥಗಿತಗೊಳಿಸಿದ ಯಮಹಾ ಇಂಡಿಯಾ

ವೈರಸ್ ಹರಡುವಿಕೆಯ ಸಂದರ್ಭದಲ್ಲಿ ಮಾರಾಟ ಮಳಿಗೆಗಳಿಗೆ ಭೇಟಿ ನೀಡದೆ ವಾಹನ ಪ್ರಕ್ರಿಯೆಯನ್ನು ಸರಳಗೊಳಿಸಲು ಆನ್‌ಲೈನ್ ಮಾರಾಟ ಮಳಿಗೆಗಳು ಸಾಕಷ್ಟು ಸಹಕಾರಿಯಾಗಿದ್ದು, ಬಳಕೆದಾರರ ಸಂಖ್ಯೆಯಲ್ಲೂ ಕೂಡಾ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

MOST READ: ಕೋವಿಡ್ ಭೀತಿ: ಕಾರು ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಎಂಜಿ ಮೋಟಾರ್

ಕೋವಿಡ್ ಹೆಚ್ಚಳ ಹಿನ್ನಲೆಯಲ್ಲಿ ಬೈಕ್ ಉತ್ಪಾದನೆ ಸ್ಥಗಿತಗೊಳಿಸಿದ ಯಮಹಾ ಇಂಡಿಯಾ

ಕೋವಿಡ್ 19 ಹರಡುವಿಕೆಗೂ ಮೊದಲೇ ಹಲವಾರು ಆಟೋ ಕಂಪನಿಗಳು ಆನ್‌ಲೈನ್ ಪ್ಲ್ಯಾಟ್ ತೆರೆದಿದ್ದರೂ ಬಳಕೆದಾರರ ಸಂಖ್ಯೆಯು ತೀರಾ ವಿರಳವಾಗಿತ್ತು. ಆದರೆ ಕರೋನಾ ವೈರಸ್ ಹೆಚ್ಚಳವಾಗುತ್ತಿದ್ದಂತೆ ಸಾಮಾಜಿಕ ಅಂತರ ಅಗತ್ಯವಾಯಿತೋ ಆಗಿನಿಂದ ವಾಹನ ಮಾರಾಟಕ್ಕಾಗಿ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳ ಬಳಕೆಯು ಹೆಚ್ಚಳವಾಗುತ್ತಿದೆ.

Article Published On: Monday, May 10, 2021, 21:54 [IST]
English summary
Yamaha Temporarily Shuts Down Production Facilities In India. Read in Kannada.
Read more on ಯಮಹಾ yamaha
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+