ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲು ಮುಂದಾದ ಯಮಹಾ

ಭಾರತದಲ್ಲಿ ದಿನದಿಂದ ದಿನಕ್ಕೆ ಬ್ಯಾಟರಿ ಚಾಲಿತ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ದ್ವಿಚಕ್ರ ವಾಹನ ತಯಾರಕ ಕಂಪನಿಗಳು ದೇಶಿಯ ಮಾರುಕಟ್ಟೆಯಲ್ಲಿ ಹೊಸ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸುತ್ತಿವೆ.

ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲು ಮುಂದಾದ ಯಮಹಾ

ಈಗ ಭಾರತದಲ್ಲಿರುವ ಜನಪ್ರಿಯ ದ್ವಿಚಕ್ರ ವಾಹನ ಕಂಪನಿಗಳಲ್ಲಿ ಒಂದಾದ ಯಮಹಾ ಸಹ ಶೀಘ್ರದಲ್ಲಿಯೇ ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸಲು ನಿರ್ಧರಿಸಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲು ಮುಂದಾದ ಯಮಹಾ

ಯಮಹಾ ಕಂಪನಿಯು ಭಾರತ ಹಾಗೂ ವಿಶ್ವದಾದ್ಯಂತ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಇದರ ಬಗ್ಗೆ ಯಮಹಾ ಇಂಡಿಯಾದ ಹಿರಿಯ ಮಾರಾಟ ಅಧಿಕಾರಿ ರವೀಂದರ್ ಸಿಂಗ್ ಕಾರ್ ಅಂಡ್ ಬೈಕ್‌ಪತ್ರಿಕೆಯೊಂದಿಗೆಮಾತನಾಡಿ ಮಾಹಿತಿ ನೀಡಿದ್ದಾರೆ.

ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲು ಮುಂದಾದ ಯಮಹಾ

ಯಮಹಾ ಕಂಪನಿಯಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಂತ್ರಜ್ಞಾನವು ಸಿದ್ಧವಾಗಿದೆ. ಭಾರತದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ನೀತಿ, ಸಬ್ಸಿಡಿ ಯೋಜನೆ ಹಾಗೂ ಚಾರ್ಜಿಂಗ್ ಮೂಲಸೌಕರ್ಯಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ರವೀಂದರ್ ಸಿಂಗ್ ಹೇಳಿದರು.

ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲು ಮುಂದಾದ ಯಮಹಾ

ಭಾರತದಲ್ಲಿ ಇತ್ತೀಚೆಗೆ ಬಿಡುಗಡೆಯಾದ ಫ್ಯಾಸಿನೊ 125 ಹೈಬ್ರಿಡ್ ಸ್ಕೂಟರ್‌ಗಳು ನಮ್ಮ ಕಂಪನಿಯು ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಪ್ರವೇಶಿಸುವ ಮೊದಲ ಹೆಜ್ಜೆಯಾಗಿದೆ ಎಂದು ಅವರು ಹೇಳಿದ್ದಾರೆ.

ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲು ಮುಂದಾದ ಯಮಹಾ

ಭಾರತಕ್ಕಾಗಿ ಎಲೆಕ್ಟ್ರಿಕ್ ಸ್ಕೂಟರ್ ಅಭಿವೃದ್ಧಿಪಡಿಸುವ ಕೆಲಸವೂ ನಡೆಯುತ್ತಿದೆ. ನಾವು ಎರಡು ವರ್ಷಗಳಿಂದ ತೈವಾನ್‌ನಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಮಾರಾಟಮಾಡುತ್ತಿದ್ದೇವೆ.

ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲು ಮುಂದಾದ ಯಮಹಾ

ಇದರಿಂದ ನಮ್ಮಲ್ಲಿ ಎಲೆಕ್ಟ್ರಿಕ್ ವೆಹಿಕಲ್ ತಂತ್ರಜ್ಞಾನ ಸಿದ್ಧವಾಗಿದೆ ಎಂದು ಹೇಳಿದರು. ಟೋಕಿಯೊ ಮೋಟಾರ್ ಶೋದಲ್ಲಿ ಯಮಹಾ ಕಂಪನಿಯು ತನ್ನ ಇ 01 ಎಲೆಕ್ಟ್ರಿಕ್ ಸ್ಕೂಟರಿನ ಕಾನ್ಸೆಪ್ಟ್ ಮಾದರಿಯನ್ನು ಅನಾವರಣಗೊಳಿಸಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲು ಮುಂದಾದ ಯಮಹಾ

ಯಮಹಾ ಕಂಪನಿಯು ತೈವಾನ್ ಮೂಲದ ಕೊಕೊರೊ ಸಹಯೋಗದೊಂದಿಗೆ ಇಸಿ -05 ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಸಹ ಬಿಡುಗಡೆಗೊಳಿಸಿದೆ. ಈ ಸ್ಕೂಟರ್ 90 ಕಿ.ಮೀ ವೇಗದಲ್ಲಿ ಚಲಿಸುವ ಸಾಮರ್ಥ್ಯವನ್ನು ಹೊಂದಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲು ಮುಂದಾದ ಯಮಹಾ

ಪೂರ್ತಿಯಾಗಿ ಚಾರ್ಜ್ ಆದ ನಂತರ ಈ ಸ್ಕೂಟರ್ 100 ಕಿ.ಮೀಗಳವರೆಗೆ ಸಾಗುತ್ತದೆ. ಈ ಸ್ಕೂಟರ್‌ನಲ್ಲಿರುವ ತಂತ್ರಜ್ಞಾನದ ಆಧಾರದ ಮೇಲೆ ಯಮಹಾ ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ.

ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲು ಮುಂದಾದ ಯಮಹಾ

ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ನಂತರ ಯಮಹಾ ಎಲೆಕ್ಟ್ರಿಕ್ ಸ್ಕೂಟರ್, ಟಿವಿಎಸ್ ಐ-ಕ್ಯೂಬ್, ಎಥೆರ್ 450 ಎಕ್ಸ್ ಹಾಗೂ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಪೈಪೋಟಿ ನೀಡಲಿದೆ.

Most Read Articles

Kannada
Read more on ಯಮಹಾ yamaha
English summary
Yamaha to launch electric scooter in Indian market. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X