ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಿಡಗಡೆಗೆ ಸಿದ್ದವಾದ ಯಮಹಾ

ಜಪಾನ್ ದ್ವಿಚಕ್ರ ವಾಹನ ಕಂಪನಿಯಾಗಿರುವ ಯಮಹಾ ತನ್ನ ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಾದ ಇ-01 ಮತ್ತು ಇಸಿ-05 ಮಾದರಿಗಳನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲು ಸಿದ್ದವಾಗಿದ್ದು, ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳು ಮುಂದಿನ ಕೆಲವೇ ದಿನಗಳಲ್ಲಿ ಉತ್ಪಾದನಾ ಮಾದರಿಯೊಂದಿಗೆ ರಸ್ತೆಗಿಳಿಯಲಿವೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಿಡಗಡೆಗೆ ಸಿದ್ದವಾದ ಯಮಹಾ

ಹೆಚ್ಚುತ್ತಿರುವ ಇಂಧನ ಬೆಲೆಗಳ ಪರಿಣಾಮ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಹೊಸ ಆಟೋ ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಪರಿಚಯಿಸುತ್ತಿರುವುದು ಮಾರುಕಟ್ಟೆಯಲ್ಲಿ ಭಾರೀ ಬದಲಾವಣೆಗೆ ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ಯಮಹಾ ಕೂಡಾ ತನ್ನ ಹೊಸ ಎಲೆಕ್ಟ್ರಿಕ್ ವಾಹನ ಉತ್ಪನ್ನಗಳನ್ನು ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಇವಿ ಸ್ಕೂಟರ್ ವಿನೂತನ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲು ಸಜ್ಜುಗೊಂಡಿವೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಿಡಗಡೆಗೆ ಸಿದ್ದವಾದ ಯಮಹಾ

ಹೊಸ ಇ-01 ಮತ್ತು ಇಸಿ-05 ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮೊದಲ ಬಾರಿಗೆ ಟೊಕಿಯೊ ಮೋಟಾರ್ ಶೋನಲ್ಲಿ ಪ್ರದರ್ಶನ ಮಾಡಿದ್ದ ಯಮಹಾ ಕಂಪನಿಯು ಈಗಾಗಲೇ ಟ್ರೇಡ್‌ಮಾರ್ಕ್ ಸಲ್ಲಿಕೆ ಮಾಡಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಿಡಗಡೆಗೆ ಸಿದ್ದವಾದ ಯಮಹಾ

125ಸಿಸಿ ಸಾಮರ್ಥ್ಯದ ಮ್ಯಾಕ್ಸಿ ಸ್ಕೂಟರ್‌ಗಳ ಶೈಲಿಯಲ್ಲಿ ನಿರ್ಮಾಣವಾಗುತ್ತಿರುವ ಇ-01 ಮತ್ತು ಇಸಿ-05 ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಪೆಟ್ರೋಲ್ ಸ್ಕೂಟರ್‌ಗಳಿಂತಲೂ ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿವೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಿಡಗಡೆಗೆ ಸಿದ್ದವಾದ ಯಮಹಾ

ಹೊಸ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬ್ಲೂಟೂತ್ ಕನೆಕ್ಟಿವಿಟಿ, ಎಬಿಎಸ್, ಸ್ವಾಪ್ ಬ್ಯಾಟರಿ, ಜಿಯೋ ಫೆನ್ಸಿಂಗ್, ಎರಡು ಬದಿಯಲ್ಲೂ ಡಿಸ್ಕ್ ಬ್ರೇಕ್ ಸೌಲಭ್ಯಗಳ ಜೊತೆ ಹಲವಾರು ತಾಂತ್ರಿಕ ಅಂಶಗಳು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡಲಾಗುತ್ತಿದ್ದು, ಹೊಸ ಸ್ಕೂಟರ್‌ಗಳನ್ನು ಜಾಗತಿಕ ಮಾರುಕಟ್ಟೆಗಳನ್ನು ಗುರಿಯಾಗಿಸಿ ಅಭಿವೃದ್ದಿಗೊಳಿಸಿದೆ. ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅಭಿವೃದ್ದಿಗಾಗಿ ತೈವಾನ್ ಮೂಲದ ಇ-ಸ್ಕೂಟರ್ ತಯಾರಕರಾದ ಗೊಗೊ ಜೊತೆಗೆ ಸಹಭಾಗಿತ್ವ ಹೊಂದಿರುವ ಯಮಹಾ ಕಂಪನಿಯು ಹೊಸ ಯೋಜನೆ ಅಡಿ ಹಲವಾರು ಹೊಸ ಸ್ಕೂಟರ್‌ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಿಡಗಡೆಗೆ ಸಿದ್ದವಾದ ಯಮಹಾ

ಗೊಗೊ ಕಂಪನಿಯು ಈಗಾಗಲೇ ಹಲವು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮಾಡುವ ಮೂಲದ ಗ್ರಾಹಕರನ್ನು ಸೆಳೆಯಲು ಯಶಸ್ವಿಯಾಗಿದ್ದು, ಯಮಹಾ ಕಂಪನಿಯು ಇದೀಗ ಗೊಗೊ ಜೊತೆಗೂಡಿ ಜಾಗತಿಕ ಮಾರುಕಟ್ಟೆಗಾಗಿ ವಿವಿಧ ಮಾದರಿಯ ಇವಿ ಮಾದರಿಗಳನ್ನು ಸಿದ್ದಪಡಿಸುತ್ತಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಿಡಗಡೆಗೆ ಸಿದ್ದವಾದ ಯಮಹಾ

ಇದೀಗ ಬಿಡುಗಡೆಗೆ ಸಿದ್ದವಾಗಿರುವ ಇ-01 ಮತ್ತು ಇಸಿ-05 ಎಲೆಕ್ಟ್ರಿಕ್ ಸ್ಕೂಟರ್‌ಗಳು ಸಹ ಹೊಸ ಸಹಭಾಗಿತ್ವ ಯೋಜನೆ ಅಡಿಯಲ್ಲಿಯೇ ನಿರ್ಮಾಣಗೊಳ್ಳುತ್ತಿದ್ದು, ಹೊಸ ಸ್ಕೂಟರ್‌ಗಳು ಈ ವರ್ಷದ ಕೊನೆಯಲ್ಲಿ ಭಾರತದಲ್ಲೂ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಿಡಗಡೆಗೆ ಸಿದ್ದವಾದ ಯಮಹಾ

ಸಾರ್ವಜನಿಕ ಬಳಕೆಯ ಚಾರ್ಜಿಂಗ್ ನಿಲ್ದಾಣಗಳ ಕೊರೆತೆಯಿಂದಾಗಿ ಸದ್ಯಕ್ಕೆ ಭಾರತದಲ್ಲಿ ಹೊಸ ಇವಿ ಸ್ಕೂಟರ್ ಬಿಡುಗಡೆಯನ್ನು ಮುಂದೂಡಿಕೆ ಮಾಡುತ್ತಿರುವ ಯಮಹಾ ಕಂಪನಿಯು ಸದ್ಯಕ್ಕೆ ಯುರೋಪಿನ ಪ್ರಮುಖ ಮಾರುಕಟ್ಟೆಗಳಲ್ಲಿ ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಿಡಗಡೆಗೆ ಸಿದ್ದವಾದ ಯಮಹಾ

ಹೊಸ ಇವಿ ಸ್ಕೂಟರ್‌ಗಳ ಬಗೆಗೆ ಯಾವುದೇ ನಿಖರವಾದ ತಾಂತ್ರಿಕ ಅಂಶಗಳಿಲ್ಲವಾದರೂ ಇ-01 ಮತ್ತು ಇಸಿ-05 ಎಲೆಕ್ಟ್ರಿಕ್ ಸ್ಕೂಟರ್‌ಗಳು ಅತ್ಯುತ್ತಮ ಬ್ಯಾಟರಿ ಪ್ಯಾಕ್ ಹೊಂದಿರಲಿದ್ದು, ಒಂದು ಬಾರಿ ಪೂರ್ಣ ಪ್ರಮಾಣದ ಚಾರ್ಜ್ ಮಾಡಿದ್ದಲ್ಲಿ 120ಕಿ.ಮೀ ನಿಂದ 150 ಕಿ.ಮೀ ಮೈಲೇಜ್‌ನೊಂದಿಗೆ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರಲಿವೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಿಡಗಡೆಗೆ ಸಿದ್ದವಾದ ಯಮಹಾ

ಭಾರತದಲ್ಲಿ ಬಿಡುಗಡೆಯಾಗುವ ಇ-01 ಮತ್ತು ಇಸಿ-05 ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬೇಡಿಕೆಗೆ ಅನುಗುಣವಾಗಿ ಕೆಲವು ಬದಲಾವಣೆಗಳನ್ನು ಪಡೆದುಕೊಳ್ಳಬಹುದಾಗಿದ್ದು, ಎಲೆಕ್ಟ್ರಿಕ್ ಕ್ರೂಸರ್ ಸ್ಕೂಟರ್‌ಗಳಿಗೆ ಉತ್ತಮ ಬೇಡಿಕೆ ಹರಿದುಬರುವ ನೀರಿಕ್ಷೆಗಳಿವೆ.

Most Read Articles

Kannada
Read more on ಯಮಹಾ yamaha
English summary
Yamaha To Launch E01 And EC05 Electric Scooters Soon. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X