ಭಾರತದಲ್ಲಿ ನ್ಯೂ ಜನರೇಷನ್ ಅಡ್ವೆಂಚರ್ ಬೈಕ್ ಬಿಡುಗಡೆಗೆ ಸಿದ್ದವಾದ ಯಜ್ಡಿ
ಜಾವಾ ಬೈಕ್‌ಗಳನ್ನು ಹೊಸ ರೂಪದಲ್ಲಿ ಬಿಡುಗಡೆಗೊಳಿಸಿ ಯಶಸ್ವಿಯಾಗಿರುವ ಕ್ಲಾಸಿಕ್ ಲೆಜೆಂಡ್ ಕಂಪನಿಯು ಇದೀಗ ಯಜ್ಡಿ ಬೈಕ್‌ಗಳಿಗೂ ಇದೀಗ ಹೊಸ ರೂಪ ನೀಡಲು ಮುಂದಾಗಿದ್ದು, ಹೊಸ ಬೈಕ್ ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆ ನಡೆಸಿದೆ.

ಮಹೀಂದ್ರಾ ಅಂಗಸಂಸ್ಥೆಯಾಗಿರುವ ಕ್ಲಾಸಿಕ್ ಲೆಜೆಂಡ್ ಕಂಪನಿಯು ಜಾವಾ ಮೋಟಾರ್‌ಸೈಕಲ್‌ಗಳ ಬಿಡುಗಡೆ ನಂತರ ಯಜ್ಡಿ ಬೈಕ್ ಮಾದರಿಗಳನ್ನು ಸಹ ಹೊಸ ಎಂಜಿನ್ ಮತ್ತು ನವೀಕರಿಸಿದ ವಿನ್ಯಾಸದೊಂದಿಗೆ ಬಿಡುಗಡೆಗೊಳಿಸುತ್ತಿದ್ದು, ಕ್ಲಾಸಿಕ್ ಬೈಕ್ ಪ್ರಿಯರಲ್ಲಿ ಮತ್ತೊಮ್ಮೆ ಕುತೂಹಲ ಹುಟ್ಟುಹಾಕಿದೆ.

ಕ್ಲಾಸಿಕ್ ಲೆಜೆಂಡ್ ಕಂಪನಿಯು 2022ರ ಆರಂಭದಲ್ಲಿ ಹೊಸ ಯಜ್ಡಿ ಬೈಕ್ ಮಾದರಿಗಳನ್ನು ನವೀಕೃತ ವಿನ್ಯಾಸ ಮತ್ತು ಸುಧಾರಿತ ಎಂಜಿನ್‌ನೊಂದಿಗೆ ಬಿಡುಗಡೆಯ ಸುಳಿವು ನೀಡಿದ್ದು, ಹಳೆದ ಬೈಕ್ ಮಾದರಿಯಲ್ಲಿಯೇ ಕ್ಲಾಸಿಕ್ ಮತ್ತು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಅಡ್ವೆಂಚರ್ ಬೈಕ್ ಮಾದರಿಯನ್ನು ಬಿಡುಗಡೆ ಮಾಡಲಿದೆ.

ಹೊಸ ಮಾದರಿಯ ಯಜ್ಡಿ ಬೈಕ್ ಬಿಡುಗಡೆಯ ಕುರಿತಂತೆ ಸರಣಿ ಟ್ವಿಟ್‌ಗಳನ್ನು ಮಾಡಿರುವ ಕ್ಲಾಸಿಕ್ ಲೆಜೆಂಡ್ ಸಹ-ಸಂಸ್ಥಾಪಕ ಅನುಪಮ್ ಥರೇಜಾ ಅವರು ಶೀಘ್ರದಲ್ಲೇ ಹೊಸ ಬೈಕ್ ಬಗೆಗೆ ಮತ್ತಷ್ಟು ಮಾಹಿತಿ ಹಂಚಿಕೊಳ್ಳುವ ಸಿದ್ದತೆಯಲ್ಲಿದ್ದು, ಹೊಸ ಬೈಕ್‌ಗಳ ಅನಾವರಣಕ್ಕೂ ಕಂಪನಿಯು ನ್ಯೂ ಜನರೇಷನ್ ಮಾದರಿಗಳ ಉತ್ಪಾದನಾ ಮಾದರಿಯ ಚಿತ್ರೀಕರಣ ಮಾಡುತ್ತಿರುವ ಸಂದರ್ಭದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿವೆ.

ಹೊಸ ಬೈಕ್ ಉತ್ಪಾದನಾ ಮಾದರಿಗಳ ಪರ್ಫಾಮೆನ್ಸ್ ಕುರಿತಾದ ಟಿವಿ ಜಾಹೀರಾತು ಚಿತ್ರೀಕರಣ ಸಂದರ್ಭದಲ್ಲಿ ಯಜ್ಡಿ ನಿರ್ಮಾಣದ ರೋಡ್‌ಕಿಂಗ್ ಆಧರಿಸಿರುವ ಹೊಸ ಅಡ್ವೆಂಚರ್ ಮತ್ತು ಸ್ಕ್ಲ್ಯಾಂಬರ್ ಮತ್ತು ಕಫೆ ರೇಸರ್ ಮಾದರಿಗಳನ್ನು ಸಹ ಚಿತ್ರೀಕರಣ ಮಾಡಲಾಗಿದೆ.

ಯಜ್ಡಿ ಬ್ಯಾಜ್ಡ್ ಆಧರಿಸಿ ಒಟ್ಟು ಮೂರು ಹೊಸ ಬೈಕ್ ಮಾದರಿಗಳು ರಸ್ತೆಗಿಳಿಯುವ ಸಾಧ್ಯತೆಗಳಿದ್ದು, ಮೊದಲ ಹಂತದಲ್ಲಿ ಬಿಡುಗಡೆಯಾಗಲಿರುವ ರೋಡ್‌ಕಿಂಗ್ ಅಡ್ವೆಂಚರ್ ಮಾದರಿಯು ರಾಯಲ್ ಎನ್‌ಫೀಲ್ಡ್ ನಿರ್ಮಾಣದ ಹಿಮಾಲಯನ್ ಮಾದರಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಹೊಸ ಯಜ್ಡಿ ರೋಡ್‌ಕಿಂಗ್ ಅಡ್ವೆಂಚರ್ ಮಾದರಿಯು ಜಾವಾ ಪೆರಾಕ್ ಮಾದರಿಯಲ್ಲಿರುವ 6 ಸ್ಪೀಡ್ ಗೇರ್‌ಬಾಕ್ಸ್ ಮತ್ತು 30 ಬಿಎಚ್‌ಪಿ ಪ್ರೇರಿತ 334 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಎರವಲು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಇದು ಪರ್ಫಾಮೆನ್ಸ್ ಮತ್ತು ಅಡ್ವೆಂಚರ್ ವೈಶಿಷ್ಟ್ಯತೆಗಳನ್ನು ಒಳಗೊಂಡಿರಲಿದೆ.

ಜೊತೆಗೆ ಅಡ್ವೆಂಚರ್ ಮಾದರಿಯಾಗಿ ಗುರುತಿಸಿಕೊಳ್ಳಲು ಹೊಸ ರೋಡ್‌ಕಿಂಗ್ ಬೈಕ್ ಮಾದರಿಯಲ್ಲಿ ಹಲವಾರು ಹೊಸ ವೈಶಿಷ್ಟ್ಯತೆಗಳನ್ನು ನೀಡಲಾಗಿದ್ದು, ಹೊಸ ಬೈಕ್ ಮಾದರಿಯು ಹೈ ಸೆಟ್ ಹ್ಯಾಂಡಲ್‌ಬಾರ್, ಫುಲ್ ಎಲ್ಇಡಿ ಲೈಟಿಂಗ್ಸ್, ಫ್ರಂಟ್ ಮಡ್‌ಗಾರ್ಡ್, ಫ್ರಂಟ್ ವಿಂಡ್‌ಸ್ಕ್ರೀನ್, ನಾಕಲ್ ಗಾರ್ಡ್, ಲಗೇಜ್ ರಾಕ್, ಹೆಚ್ಚುವರಿ ಪೆಟ್ರೋಲ್ ಟ್ಯಾಂಕ್, ಅಪ್‌ಸ್ವೆಪ್ಟ್ ಎಕ್ಸಾಸ್ಟ್ ಫೀಚರ್ಸ್ ಹೊಂದಿದೆ.

ಜೊತೆಗೆ ಹೊಸ ಬೈಕ್ ಮಾದರಿಗಳು ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಹಲವಾರು ಹೊಸ ಫೀಚರ್ಸ್‌ಗಳನ್ನು ಹೊಂದಿರಲಿದ್ದು, ಹೊಸ ಬೈಕ್‌ಗಳು ಮುಂದಿನ ವರ್ಷದ ಆರಂಭದಲ್ಲಿ ಹಂತ-ಹಂತವಾಗಿ ಮಾರುಕಟ್ಟೆ ಪ್ರವೇಶಿಸಲಿವೆ.

ಸದ್ಯ ಮಾರುಕಟ್ಟೆಯಲ್ಲಿರುವ ಜಾವಾ, ಜಾವಾ 42 ಮತ್ತು ಪೆರಾಕ್ ಬೈಕ್‌ಗಳನ್ನು ಕ್ಲಾಸಿಕ್ ಲೆಜೆಂಡ್ ಪ್ರೈವೆಟ್ ಲಿಮಿಟೆಡ್ ಕಂಪನಿಯೇ ಅಭಿವೃದ್ದಿಗೊಳಿಸಿ ನಿರ್ಮಾಣ ಮಾಡುತ್ತಿದ್ದು, ಇದು ಜಾಗತಿಕ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆ ಪಡೆದಿರುವ ಬಿಎಸ್ಎ ಮೋಟಾರ್‌ಸೈಕಲ್ ಕಂಪನಿಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿದೆ.

ಅಸಲಿಗೆ ಜಾವಾ ಮತ್ತು ಯೆಜ್ಡಿ ಕಂಪನಿಗಳು 90ರ ದಶಕದಲ್ಲೇ ಬಿಎಸ್ಎ ಮೋಟಾರ್‌ಸೈಕಲ್ ಕಂಪನಿಯ ಪಾಲಾಗಿದ್ದು, ಬಿಎಸ್ಎ ಮೋಟಾರ್‌ಸೈಕಲ್ ಕಂಪನಿಯು ಭಾರತವನ್ನು ಹೊರತುಪಡಿಸಿ ಯುರೋಪ್ ಮತ್ತು ದಕ್ಷಿಣ ಅಮೆರಿಕದ ಕೆಲವು ರಾಷ್ಟ್ರಗಳಲ್ಲಿ ಮಾತ್ರ ತನ್ನ ಮಾರಾಟ ಜಾಲವನ್ನು ಹೊಂದಿದೆ.

ಹಲವು ಪ್ರಯತ್ನಗಳ ನಂತರ ಮಹೀಂದ್ರಾ ಅಂಗಸಂಸ್ಥೆಯಾದ ಕ್ಲಾಸಿಕ್ ಲೆಜೆಂಡ್ ಪ್ರೈವೆಟ್ ಲಿಮಿಟೆಡ್ ಕಂಪನಿಯು ಬಿಎಸ್ಎ ಕಂಪನಿಯೊಂದಿಗೆ ಮಹತ್ವದ ಒಪ್ಪಂದ ಮಾಡಿಕೊಂಡಿದ್ದು, ಭಾರತದಲ್ಲಿ ಜಾವಾ ನಂತರ ಯಜ್ಡಿ ಬೈಕ್‌ಗಳನ್ನು ಸಹ ಪ್ರಸ್ತುತ ಮಾರುಕಟ್ಟೆಯಲ್ಲಿ ಬೇಡಿಕೆಯ ಅನುಸಾರ ಉತ್ಪಾದನೆ ಪುನಾರಂಭಿಸುವ ಬಗ್ಗೆ ಯೋಜನೆ ರೂಪಿಸಿವೆ.

ಜಾವಾ ಹೊಸ ಕ್ಲಾಸಿಕ್ ಬೈಕ್‌ಗಳು 300ಸಿಸಿ ವಿಭಾಗದಲ್ಲಿ ಸದ್ದು ಮಾಡಲಿದ್ದರೆ ಯಜ್ಡಿ ಹೊಸ ಬೈಕ್ ಮಾದರಿಗಳು 250ಸಿಸಿ, 650 ಸಿಸಿ ಸಾಮರ್ಥ್ಯ ಎಂಜಿನ್‌ನೊಂದಿಗೆ ಮಾರುಕಟ್ಟೆ ಲಗ್ಗೆಯಿಡಲಿದ್ದು, ರೆಟ್ರೋ ಲುಕ್‌ನೊಂದಿಗೆ ಸುಧಾರಿತ ಮಾದರಿಯ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಳ್ಳಲಿವೆ.

ಇದಷ್ಟೇ ಅಲ್ಲದೇ ಬಿಎಸ್ಎ ಮೋಟಾರ್‌ಸೈಕಲ್ ಕಂಪನಿಯು ಕೆಲವು ಪ್ರೀಮಿಯಂ ಬೈಕ್‌ಗಳನ್ನು ಸಹ ಭಾರತದಲ್ಲಿ ಬಿಡುಗಡೆ ಮಾಡುವ ನೀರಿಕ್ಷೆಗಳಿದ್ದು, ಸದ್ಯ ವಿದೇಶಿ ಮಾರುಕಟ್ಟೆಯಲ್ಲಿರುವ ಬಿಎಸ್ಎ 550ಸಿಸಿ, 750ಸಿಸಿ ಬೈಕ್‌ಗಳನ್ನೇ ಭಾರತದಲ್ಲೂ ಮಾರಾಟ ಆರಂಭಿಸುವ ಚಿಂತನೆ ನಡೆಸಿದೆ.


Click it and Unblock the Notifications








