ಎಲೆಕ್ಟ್ರಿಕ್ ವಾಹನಗಳ ಬಳಕೆಗಾಗಿ ಮಹತ್ವದ ನಿರ್ಣಯ ಕೈಗೊಂಡ ಝೊಮ್ಯಾಟೊ

ದುಬಾರಿ ಇಂಧನ ದರ ಮತ್ತು ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ಪರಿಣಾಮಕಾರಿಯಾಗಿ ತಗ್ಗಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳಿಗೆ ಜಾರಿಗೆ ತಂದಿದ್ದು, ಹೊಸ ಯೋಜನೆಗಳ ಪರಿಣಾಮ ಇವಿ ವಾಹನ ಮಾರಾಟದಲ್ಲಿ ಸಾಕಷ್ಟು ಏರಿಕೆಯಾಗಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆಗಾಗಿ ಮಹತ್ವದ ನಿರ್ಣಯ ಕೈಗೊಂಡ ಝೊಮ್ಯಾಟೊ

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯವನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದ್ದು, ಹೊಸ ಯೋಜನೆಗಳ ಪರಿಣಾಮ ಹಲವಾರು ಇ-ಕಾರ್ಮಸ್ ಕಂಪನಿಗಳು ತಮ್ಮ ಗ್ರಾಹಕರ ಸೇವೆಗಳ ವಾಹನಗಳನ್ನು ಎಲೆಕ್ಟ್ರಿಕ್ ನತ್ತು ಬದಲಾಯಿಸುತ್ತಿವೆ.

ಎಲೆಕ್ಟ್ರಿಕ್ ವಾಹನಗಳ ಬಳಕೆಗಾಗಿ ಮಹತ್ವದ ನಿರ್ಣಯ ಕೈಗೊಂಡ ಝೊಮ್ಯಾಟೊ

ಇತ್ತೀಚೆಗೆ ಫುಡ್ ಡೆಲಿವರಿಯಲ್ಲಿ ಮುಂಚೂಣಿಯಲ್ಲಿರುವ ಝೊಮ್ಯಾಟೊ ಕಂಪನಿಯು ಸಹ ಆಹಾರ ಪೂರೈಸುವ ತನ್ನ ಪಾಲುದಾರಿಕೆ ವಾಹನಗಳನ್ನು ಸಂಪೂರ್ಣವಾಗಿ ಎಲೆಕ್ಟ್ರಿಕ್ ನತ್ತ ಬದಲಾಯಿಸಿಕೊಳ್ಳುವ ನಿರ್ಣಯ ಕೈಗೊಂಡಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆಗಾಗಿ ಮಹತ್ವದ ನಿರ್ಣಯ ಕೈಗೊಂಡ ಝೊಮ್ಯಾಟೊ

ಮುಂದಿನ 10 ವರ್ಷಗಳಲ್ಲಿ ಹಂತ-ಹಂತವಾಗಿ ಆಹಾರ ಪೂರೈಕೆ ಮಾಡುವ ದ್ವಿಚಕ್ರ ವಾಹನಗಳನ್ನು ಶೇ.100ರಷ್ಟು ಎಲೆಕ್ಟ್ರಿಕ್ ನತ್ತ ಬದಲಾಯಿಸಿಕೊಳ್ಳುವ ನಿರ್ಣಯ ಕೈಗೊಂಡಿದ್ದು, ಹೊಸ ಯೋಜನೆಯೊಂದಿಗೆ ಸಾರಿಗೆ ವೆಚ್ಚ ತಗ್ಗಿಸುವುದರ ಹೆಚ್ಚುತ್ತಿರುವ ಮಾಲಿನ್ಯಕ್ಕೂ ಕಡಿವಾಣ ಹಾಕಬಹುದೆಂಬ ವಿಶ್ವಾಸ ವ್ಯಕ್ತಪಡಿಸಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆಗಾಗಿ ಮಹತ್ವದ ನಿರ್ಣಯ ಕೈಗೊಂಡ ಝೊಮ್ಯಾಟೊ

ಹೊಸ ಯೋಜನೆಗೆ ಪೂರಕವಾಗಿ ಪಾಲುದಾರಿಕೆ ವಾಹನಗಳಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಹೊಂದಿರುವವರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಎಲೆಕ್ಟ್ರಿಕ್ ವಾಹನಗಳಿಗೆ ಬೇಕಿರುವ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಲು ಕಂಪನಿಯು ಬದ್ದವಾಗಿದೆ ಎಂದಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆಗಾಗಿ ಮಹತ್ವದ ನಿರ್ಣಯ ಕೈಗೊಂಡ ಝೊಮ್ಯಾಟೊ

ಇನ್ನು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅವಲಂಬನೆ ತಗ್ಗಿಸಲು ಕೈಗೊಂಡ ನಿರ್ಣಯಗಳಿಂದಾಗಿ ಕಳೆದ 10 ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ 2020-21 ಹಣಕಾಸು ವರ್ಷದಲ್ಲಿ ಹೆಚ್ಚಿನ ಮಟ್ಟದ ಎಲೆಕ್ಟ್ರಿಕ್ ವಾಹನಗಳು ಮಾರಾಟಗೊಂಡಿದ್ದು, ಕಳೆದ ಹತ್ತು ಅವಧಿಯಲ್ಲಿ ಸುಮಾರು 6.38 ಲಕ್ಷ ಎಲೆಕ್ಟ್ರಿಕ್ ವಾಹನಗಳು ನೋಂದಣಿಯಾಗಿವೆ.

MOST READ: ಪ್ರತಿ ಚಾರ್ಜ್‌ಗೆ 240ಕಿ.ಮೀ ಮೈಲೇಜ್ ನೀಡುವ ಸಿಂಪಲ್ ಎನರ್ಜಿ ಸ್ಕೂಟರ್ ಬೆಲೆ ಮಾಹಿತಿ ಬಹಿರಂಗ

ಎಲೆಕ್ಟ್ರಿಕ್ ವಾಹನಗಳ ಬಳಕೆಗಾಗಿ ಮಹತ್ವದ ನಿರ್ಣಯ ಕೈಗೊಂಡ ಝೊಮ್ಯಾಟೊ

ಸಿಇಇ-ಸಿಇಎಫ್ ಎಲೆಕ್ಟ್ರಿಕ್ ಮೊಬಿಲಿಟಿ ವರದಿಯ ಪ್ರಕಾರ, 2020-21ರಲ್ಲಿನ ಒಟ್ಟು ವಾಹನಗಳ ನೋಂದಣಿಯಲ್ಲಿ ಎಲೆಕ್ಟ್ರಿಕ್ ವಾಹನಗಳು ಶೇಕಡಾ 0.88 ರಷ್ಟನ್ನು ನೋಂದಣಿ ಹೊಂದಿದ್ದು, ಇದು ಈ ವರ್ಷದ ವಾಹನ ಮಾರಾಟದಲ್ಲಿ ಮತ್ತಷ್ಟು ಹೆಚ್ಚಳವಾಗುವ ನೀರಿಕ್ಷೆಯಲ್ಲಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆಗಾಗಿ ಮಹತ್ವದ ನಿರ್ಣಯ ಕೈಗೊಂಡ ಝೊಮ್ಯಾಟೊ

ಎಲೆಕ್ಟ್ರಿಕ್ ವಾಹನಗಳ ನೋಂದಣಿ ಹೆಚ್ಚಿಸುವಲ್ಲಿ ಇತರೆ ರಾಜ್ಯಗಳಿಂತಲೂ ಮುಂದಿರುವ ದೆಹಲಿ ಸರ್ಕಾರವು ಹೊಸ ಇವಿ ವಾಹನ ನೀತಿ ಮೂಲಕ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಎಲೆಕ್ಟ್ರಿಕ್ ವಾಹನಗಳನ್ನು ರಸ್ತೆ ತೆರಿಗೆಯಿಂದ ವಿನಾಯ್ತಿ ಮೂಲಕ 2025ರ ವೇಳೆಗೆ ಶೇ.25ರಷ್ಟು ಎಲೆಕ್ಟ್ರಿಕ್ ವಾಹನಗಳನ್ನು ಹೊಂದುವ ಗುರಿ ಹೊಂದಲಾಗಿದೆ.

MOST READ: ಭಾರತದಲ್ಲಿ ಮಾರಾಟವಾಗುತ್ತಿರುವ ಪ್ರಮುಖ ಹೈ ಪರ್ಫಾಮೆನ್ಸ್ ಸ್ಕೂಟರ್‌ಗಳಿವು

ಎಲೆಕ್ಟ್ರಿಕ್ ವಾಹನಗಳ ಬಳಕೆಗಾಗಿ ಮಹತ್ವದ ನಿರ್ಣಯ ಕೈಗೊಂಡ ಝೊಮ್ಯಾಟೊ

ಹಾಗೆಯೇ ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳಲ್ಲೂ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

Most Read Articles

Kannada
English summary
Zomato To Completely Switch To Electric Vehicles By 2030. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X