Just In
- 2 hrs ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 4 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 6 hrs ago
ವಾರದ ಪ್ರಮುಖ ಸುದ್ದಿ: ಏರ್ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 16 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- News
Breaking: ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರು ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ?
- Sports
ಐಪಿಎಲ್ 2021: ಈ ಬಾರಿಯ ಆವೃತ್ತಿಯ ಕೆಲ ಗಮನಾರ್ಹ ಬದಲಾವಣೆಗಳು
- Movies
ದೀದಿ ಸಾಮ್ರಾಜ್ಯದಲ್ಲಿ ಕಮಲದ ಕೈ ಹಿಡಿದ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಎಲೆಕ್ಟ್ರಿಕ್ ವಾಹನಗಳಿಗೆ ಬ್ಯಾಟರಿ ಸೌಲಭ್ಯ ಒದಗಿಸಲು ವಿನಿಮಯ ಕೇಂದ್ರಗಳನ್ನು ತೆರೆಯಲಿದೆ ಜೈಪ್
ಇಂಧನಗಳ ಬೆಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಭಾರೀ ಏರಿಕೆಯಾಗುತ್ತಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ.

ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಆಸಕ್ತಿ ಇದ್ದರೂ ಕೂಡಾ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ಇವಿ ವಾಹನಗಳ ಬ್ಯಾಟರಿ ರೇಂಜ್ ಸಾಮಾರ್ಥ್ಯವು ಖರೀದಿಗೆ ಹಿಂದೇಟು ಹಾಕುವಂತೆ ಮಾಡಿದ್ದು, ಬ್ಯಾಟರಿ ಸಮಸ್ಯೆ ನಿವಾರಣೆಗಾಗಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ತ್ವರಿತವಾಗಿ ಚಾರ್ಜಿಂಗ್ ಸೌಲಭ್ಯ ಒದಗಿಸಲು ಬ್ಯಾಟರಿ ವಿನಿಮಯ ಕೇಂದ್ರಗಳನ್ನು ನಿರ್ಮಾಣ ಮಾಡುತ್ತಿವೆ.

ಎಲೆಕ್ಟ್ರಿಕ್ ವಾಹನಗಳಿಗೆ ತ್ವರಿತವಾಗಿ ಚಾರ್ಜಿಂಗ್ ಒದಗಿಸಲು ಬ್ಯಾಟರಿ ವಿನಿಮಯ ಕೇಂದ್ರಗಳನ್ನು ನಿರ್ಮಾಣ ಮಾಡುವುದರಿಂದ ಇವಿ ವಾಹನ ಮಾರಾಟ ಸಾಕಷ್ಟು ಏರಿಕೆಯಾಗುವ ನೀರಿಕ್ಷೆಗಳಿದ್ದು, ಫುಡ್ ಡೆಲಿವರಿ ಆ್ಯಪ್ ಕಂಪನಿಯಾಗಿರುವ ಜೈಪ್ ಕೂಡಾ ಈ ನಿಟ್ಟಿನಲ್ಲಿ ಹೊಸ ಹೂಡಿಕೆಗೆ ಮುಂದಾಗಿದೆ.

ಬ್ಯಾಟರಿ ವಿನಿಯಮ ಕೇಂದ್ರಗಳಿಂದ ಎಲೆಕ್ಟ್ರಿಕ್ ವಾಹನಗಳಿಗೆ ತ್ವರಿತವಾಗಿ ಬ್ಯಾಟರಿ ಸೌಲಭ್ಯಗಳನ್ನು ಒದಗಿಸಬಹುದಾಗಿದ್ದು, ಬ್ಯಾಟರಿ ರೇಂಜ್ ಆಧಾರದ ಮೇಲೆ ಇಂತಿಷ್ಟು ಪ್ರಮಾಣದ ದರ ಪಾವತಿಸಿಬೇಕಾಗುತ್ತದೆ.

ಬ್ಯಾಟರಿ ವಿನಿಮಯದ ವೇಳೆ ಗ್ರಾಹಕರು ತಮ್ಮ ಬಳಿಯಿರುವ ಚಾರ್ಜ್ ಖಾಲಿಯಾದ ಬ್ಯಾಟರಿಯನ್ನು ವಿನಿಮಯ ಕೇಂದ್ರಗಳಿಗೆ ಹಿಂದಿರುಗಿಸುವ ಮೂಲಕ ಚಾರ್ಜ್ ಮಾಡಲಾದ ಬ್ಯಾಟರಿ ಪಡೆದುಕೊಳ್ಳುವ ವ್ಯವಸ್ಥೆ ಇದಾಗಿದ್ದು, ಹೊಸ ಸೌಲಭ್ಯವು ಚಾರ್ಜಿಂಗ್ ಸಮಯವನ್ನು ಉಳಿಸುವ ಮೂಲಕ ಬ್ಯಾಟರಿ ಖಾಲಿಯಾದ ತಕ್ಷಣವೇ ಮತ್ತೊಂದು ಬ್ಯಾಟರಿ ಪಡೆದುಕೊಳ್ಳಲು ಸಹಕಾರಿಯಾಗುತ್ತದೆ.

ಸದ್ಯ ಬೆಂಗಳೂರು, ಮುಂಬೈ, ದೆಹಲಿ ಮತ್ತು ಅಹಮದಾಬಾದ್ ನಗರಗಳಲ್ಲಿ ಹೊಸ ಬ್ಯಾಟರಿ ವಿನಿಯಮ ಕೇಂದ್ರಗಳಿಗೆ ವಿವಿಧ ಕಂಪನಿಗಳು ಪ್ರಾಯೋಗಿಕವಾಗಿ ಚಾಲನೆ ನೀಡಿದ್ದು, ಶೀಘ್ರದಲ್ಲೇ ಜೈಪ್ ಕಂಪನಿಯು ಕೂಡಾಹೊಸ ಉದ್ಯಮದ ಮೇಲೆ ಭಾರೀ ಪ್ರಮಾಣದ ಬಂಡವಾಳ ಹೂಡಿಕೆಗೆ ಸಿದ್ದತೆ ನಡೆಸಿದೆ.

ಮಾಹಿತಿಗಳ ಪ್ರಕಾರ ಜೈಪ್ ಕಂಪನಿಯು ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಬರೋಬ್ಬರಿ 5 ಸಾವಿರ ಬ್ಯಾಟರಿ ವಿನಿಯಮ ಕೇಂದ್ರಗಳನ್ನು ತೆರೆಯುವ ಸಿದ್ದತೆಯಲ್ಲಿದ್ದು, ಹೊಸ ಯೋಜನೆಗಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದೆ.

ಜೈಪ್ ಕಂಪನಿಯು ಪ್ರಾಯೋಗಿಕವಾಗಿ ಈಗಾಗಲೇ ಜೈಪುರ್ ಮತ್ತು ದೆಹಲಿ ನಗರಗಳಲ್ಲಿನ ಆಯ್ದ ಪ್ರದೇಶಗಳಲ್ಲಿ ಬ್ಯಾಟರಿ ವಿನಿಯಮ ಕೇಂದ್ರಗಳಿಗೆ ಚಾಲನೆ ನೀಡಿದ್ದು, ಹೊಸ ಬ್ಯಾಟರಿ ವಿನಿಯಮ ಕೇಂದ್ರಗಳಲ್ಲಿ ಬ್ಯಾಟರಿ ವಿನಿಯಮ ಪ್ರಕ್ರಿಯೆಯಲ್ಲಿ ಸಾಕಷ್ಟು ಏರಿಕೆ ಕಂಡುಬಂದಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಸದ್ಯ ಪ್ರಾಯೋಗಿಕ ಕೇಂದ್ರಗಳಲ್ಲಿ ದ್ವಿಚಕ್ರ ವಾಹನಗಳಿಗೆ ಮತ್ತು ತ್ರಿ ಚಕ್ರ ವಾಹನಗಳಿಗೆ ಮಾತ್ರವೇ ಬ್ಯಾಟರಿ ವಿನಿಯಮ ಸೌಲಭ್ಯವನ್ನು ನೀಡಲಾಗಿದ್ದು, ಮುಂಬರುವ ದಿನಗಳಲ್ಲಿ ನಿರ್ಮಾಣಗೊಳ್ಳಲಿರುವ ಬ್ಯಾಟರಿ ವಿನಿಯಮ ಕೇಂದ್ರಗಳಲ್ಲಿ ಎಲ್ಲಾ ಮಾದರಿಯ ಎಲೆಕ್ಟ್ರಿಕ್ ವಾಹನಗಳಿಗೂ ಬ್ಯಾಟರಿ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಲಿದೆ.

ಜೈಪ್ ಕಂಪನಿಯು ವಿವಿಧ ಇ-ಕಾಮರ್ಸ್ ಕಂಪನಿಗಳ ಉತ್ಪನ್ನಗಳನ್ನು ಗ್ರಾಹಕರಿಗೆ ತಲುಪಿಸುವ ಮಧ್ಯವರ್ತಿ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಉತ್ಪನ್ನಗಳನ್ನು ತಲುಪಿಸಲು ಸಂಪೂರ್ಣವಾಗಿ ಎಲೆಕ್ಟಿಕ್ ವಾಹನಗಳನ್ನೇ ಬಳಕೆ ಮಾಡುವ ಗುರಿಹೊಂದಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಜೈಪ್ ಎಲೆಕ್ಟ್ರಿಕ್ ಕಂಪನಿಯು ಇ-ಕಾರ್ಮಸ್ ಕಂಪನಿಗಳ ಉತ್ಪನ್ನಗಳ ಪೂರೈಸಲು ಮಾತ್ರವಲ್ಲ ರೆಂಟಲ್ ವಾಹನಗಳನ್ನು ಸಹ ಒದಗಿಸುತ್ತಿದ್ದು, ಸಂಪೂರ್ಣವಾಗಿ ಎಲೆಕ್ಟ್ರಿಕ್ ವಾಹನಗಳನ್ನೇ ಬಳಕೆ ಮಾಡುವ ಗುರಿಹೊಂದಿರುವುದರ ಜೊತೆಗೆ ಭವಿಷ್ಯ ಯೋಜನೆಗಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.