ಪ್ರತಿ ಚಾರ್ಜ್‌ಗೆ 120 ಕಿ.ಮೀ ಮೈಲೇಜ್ ನೀಡುವ ಎಮೊ ಜಾಂಟಿ ಪ್ಲಸ್ ಇವಿ ಸ್ಕೂಟರ್ ಬಿಡುಗಡೆ

ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿ ಸ್ಟಾರ್ಟ್ಅಪ್ ಕಂಪನಿಗಳ ಹೊಸ ಇವಿ ವಾಹನಗಳ ಬಿಡುಗಡೆ ಪ್ರಕ್ರಿಯೆ ಜೋರಾಗಿದ್ದು, ಮುಂಬೈ ಮೂಲದ ಎಮೊ (AMO) ಕಂಪನಿಯು ತನ್ನ ಬಹುನೀರಿಕ್ಷಿತ ಜಾಂಟಿ ಪ್ಲಸ್ ಸ್ಕೂಟರ್ ಮಾದರಿಯನ್ನು ಬಿಡುಗಡೆ ಮಾಡಿದೆ.

ಪ್ರತಿ ಚಾರ್ಜ್‌ಗೆ 120 ಕಿ.ಮೀ ಮೈಲೇಜ್ ನೀಡುವ ಎಮೊ ಜಾಂಟಿ ಪ್ಲಸ್ ಇವಿ ಸ್ಕೂಟರ್ ಬಿಡುಗಡೆ

ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಮಾರಾಟವು ತೀವ್ರಗತಿಯಲ್ಲಿ ಬೆಳವಣಿಗೆ ಸಾಧಿಸುತ್ತಿದ್ದು, ಪ್ರಮುಖ ಇವಿ ಸ್ಟಾರ್ಟ್ಅಪ್ ಕಂಪನಿಗಳು ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಇವಿ ಆವೃತ್ತಿಗಳನ್ನು ಪರಿಚಯಿಸುವ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿವೆ. ದುಬಾರಿ ಇಂಧನಗಳ ದರ ಪರಿಣಾಮ ಎಲೆಕ್ಟ್ರಿಕ್ ವಾಹನ ಬಳಕೆ ಉತ್ತೇಜಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳಿಗೆ ಜಾರಿಗೆ ತಂದಿದ್ದು, ಹೊಸ ಯೋಜನೆಗಳಿಂದಾಗಿ ಇವಿ ವಾಹನಗಳ ಮಾರಾಟವು ಸಾಕಷ್ಟು ಏರಿಕೆಯಾಗಿದೆ.

ಪ್ರತಿ ಚಾರ್ಜ್‌ಗೆ 120 ಕಿ.ಮೀ ಮೈಲೇಜ್ ನೀಡುವ ಎಮೊ ಜಾಂಟಿ ಪ್ಲಸ್ ಇವಿ ಸ್ಕೂಟರ್ ಬಿಡುಗಡೆ

ಹೀಗಾಗಿ ಸ್ಟಾರ್ಟ್ಅಪ್ ಕಂಪನಿಗಳು ವಿವಿಧ ಮಾದರಿಯ ಹಲವಾರು ಇವಿ ಆವೃತ್ತಿಗಳನ್ನು ಮಾರುಕಟ್ಟೆಗೆ ಪರಿಚಯಿಸಿದ್ದು, ಮುಂಬೈ ಮೂಲದ ಸ್ಟಾರ್ಟ್ಅಪ್ ಕಂಪನಿಯಾಗಿರುವ ಎಮೊ ಕೂಡಾ ಹೊಸ ವಿನ್ಯಾಸದೊಂದಿಗೆ ಹೆಚ್ಚಿನ ಮೈಲೇಜ್ ರೇಂಜ್ ಹೊಂದಿರುವ ಜಾಂಟಿ ಪ್ಲಸ್ ಇವಿ ಸ್ಕೂಟರ್ ಬಿಡುಗಡೆ ಮಾಡಿದೆ.

ಪ್ರತಿ ಚಾರ್ಜ್‌ಗೆ 120 ಕಿ.ಮೀ ಮೈಲೇಜ್ ನೀಡುವ ಎಮೊ ಜಾಂಟಿ ಪ್ಲಸ್ ಇವಿ ಸ್ಕೂಟರ್ ಬಿಡುಗಡೆ

ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದ್ದು, ಗ್ರಾಹಕರ ಬೇಡಿಕೆ ವಿವಿಧ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿಗೊಳಿಸುವಲ್ಲಿ ಸ್ಟಾರ್ಟ್ ಕಂಪನಿಗಳು ಯಶಸ್ವಿಯಾಗುತ್ತಿವೆ.

ಪ್ರತಿ ಚಾರ್ಜ್‌ಗೆ 120 ಕಿ.ಮೀ ಮೈಲೇಜ್ ನೀಡುವ ಎಮೊ ಜಾಂಟಿ ಪ್ಲಸ್ ಇವಿ ಸ್ಕೂಟರ್ ಬಿಡುಗಡೆ

ಎಮೊ ಕೂಡಾ ಗ್ರಾಹಕರ ಬೇಡಿಕೆಯೆಂತೆ ಜಾಂಟಿ ಪ್ಲಸ್ ಇವಿ ಸ್ಕೂಟರ್ ಬಿಡುಗಡೆ ಮಾಡಿದ್ದು, ಹೊಸ ಇವಿ ಸ್ಕೂಟರ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 1,10,460 ಬೆಲೆ ಹೊಂದಿದೆ. ಜಾಂಟಿ ಪ್ಲಸ್ ಇವಿ ಸ್ಕೂಟರ್ ಮಾದರಿಯಲ್ಲಿ 60 V/40 Ah ಸುಧಾರಿತ ಲಿಥಿಯಂ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದ್ದು, ಇದು ಹೈ ಪರ್ಫಾಮೆನ್ಸ್ ಜೊತೆ ಹೆಚ್ಚಿನ ಮೈಲೇಜ್ ಖಾತ್ರಿಪಡಿಸುತ್ತದೆ.

ಪ್ರತಿ ಚಾರ್ಜ್‌ಗೆ 120 ಕಿ.ಮೀ ಮೈಲೇಜ್ ನೀಡುವ ಎಮೊ ಜಾಂಟಿ ಪ್ಲಸ್ ಇವಿ ಸ್ಕೂಟರ್ ಬಿಡುಗಡೆ

ಜಾಂಟಿ ಪ್ಲಸ್ ಇವಿ ಸ್ಕೂಟರ್ ಮಾದರಿಯು ಪ್ರತಿ ಚಾರ್ಜ್‌ಗೆ 120 ಕಿ.ಮೀ ಮೈಲೇಜ್ ನೀಡಲಿದ್ದು, 60 V/40 Ah ಸುಧಾರಿತ ಲಿಥಿಯಂ ಬ್ಯಾಟರಿ ಪ್ಯಾಕ್ ಪೂರ್ತಿಯಾಗಿ ಚಾರ್ಜ್‌ಗೊಳ್ಳಲು ಗರಿಷ್ಠ ನಾಲ್ಕು ಗಂಟೆಗಳ ಕಾಲಾವಕಾಶ ತೆಗೆದುಕೊಳ್ಳುತ್ತದೆ.

ಪ್ರತಿ ಚಾರ್ಜ್‌ಗೆ 120 ಕಿ.ಮೀ ಮೈಲೇಜ್ ನೀಡುವ ಎಮೊ ಜಾಂಟಿ ಪ್ಲಸ್ ಇವಿ ಸ್ಕೂಟರ್ ಬಿಡುಗಡೆ

ಎಮೊ ಕಂಪನಿಯು ಜಾಂಟಿ ಪ್ಲಸ್ ಇವಿ ಸ್ಕೂಟರ್ ಮಾದರಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಒಟ್ಟು ಐದು ಬಣ್ಣಗಳ ಆಯ್ಕೆ ನೀಡಿದ್ದು, ಸ್ಕೂಟರ್‌ ಬ್ಯಾಟರಿ ಮತ್ತು ಮೋಟಾರ್ ಮೇಲೆ 3 ವರ್ಷಗಳ ಸ್ಟ್ಯಾಂಡರ್ಡ್ ವಾರಂಟಿ ನೀಡಲಾಗಿದೆ.

ಪ್ರತಿ ಚಾರ್ಜ್‌ಗೆ 120 ಕಿ.ಮೀ ಮೈಲೇಜ್ ನೀಡುವ ಎಮೊ ಜಾಂಟಿ ಪ್ಲಸ್ ಇವಿ ಸ್ಕೂಟರ್ ಬಿಡುಗಡೆ

ಜಾಂಟಿ ಪ್ಲಸ್ ಇವಿ ಸ್ಕೂಟರ್ ಮಾದರಿಯು ಸೊಗಸಾದ ವಿನ್ಯಾಸ, ಡಿಜಿಟಲ್ ಡಿಸ್‌ಪ್ಲೇ ಮತ್ತು ಅತ್ಯುತ್ತಮವಾದ ಸುರಕ್ಷತಾ ವೈಶಿಷ್ಟ್ಯಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಇವಿ ಸ್ಕೂಟರ್ ಮಾದರಿಯಲ್ಲಿ ಕ್ರೂಸ್ ಕಂಟ್ರೋಲ್, ಎಲೆಕ್ಟ್ರಾನಿಕ್ ಅಸಿಸ್ಟೆಡ್ ಬ್ರೇಕಿಂಗ್ ಸಿಸ್ಟಮ್ (ಇ-ಎಬಿಎಸ್), ಆ್ಯಂಟಿ ಥೆಫ್ಟ್ ಅಲಾರ್ಮ್ ಸೇರಿದಂತೆ ಮುಂತಾದ ವೈಶಿಷ್ಟ್ಯಗಳನ್ನು ಈ ಸ್ಕೂಟರ್‌ನಲ್ಲಿ ನೀಡಲಾಗಿದೆ.

ಪ್ರತಿ ಚಾರ್ಜ್‌ಗೆ 120 ಕಿ.ಮೀ ಮೈಲೇಜ್ ನೀಡುವ ಎಮೊ ಜಾಂಟಿ ಪ್ಲಸ್ ಇವಿ ಸ್ಕೂಟರ್ ಬಿಡುಗಡೆ

ಇದಲ್ಲದೆ, ಮುಂಭಾಗದ ಟೆಲಿಸ್ಕೋಪಿಕ್ ಫೋರ್ಕ್ ಸಸ್ಪೆನ್ಷನ್, ಸೈಡ್ ಸ್ಟ್ಯಾಂಡ್ ಸೆನ್ಸಾರ್, ಸೆಂಟ್ರಲ್ ಲಾಕಿಂಗ್, ಫ್ರಂಟ್ ಡಿಸ್ಕ್ ಬ್ರೇಕ್, ಡಿಆರ್‌ಎಲ್ ಲೈಟ್‌ಗಳು ಮತ್ತು ಎಂಜಿನ್ ಕಿಲ್ ಸ್ವಿಚ್‌ನಂತಹ ವೈಶಿಷ್ಟ್ಯತೆಗಳನ್ನು ಸಹ ಸ್ಕೂಟರ್‌ನಲ್ಲಿ ಒದಗಿಸಲಾಗಿದ್ದು, ಸ್ಕೂಟರ್‌ನಲ್ಲಿ ಹೈ ಗ್ರೌಂಡ್ ಕ್ಲಿಯರೆನ್ಸ್ ನೀಡಿರುವುದರಿಂದ ಹದಗೆಟ್ಟ ರಸ್ತೆಗಳಲ್ಲೂ ಸರಾಗವಾಗಿ ನುಗ್ಗಬಲ್ಲದು.

ಪ್ರತಿ ಚಾರ್ಜ್‌ಗೆ 120 ಕಿ.ಮೀ ಮೈಲೇಜ್ ನೀಡುವ ಎಮೊ ಜಾಂಟಿ ಪ್ಲಸ್ ಇವಿ ಸ್ಕೂಟರ್ ಬಿಡುಗಡೆ

ಹೊಸ ಸ್ಕೂಟರ್‌ನಲ್ಲಿ ಹೆಚ್ಚಿನ ಕಾರ್ಯಕ್ಷಮತೆಗಾಗಿ ಡಿಸಿ ಮೋಟಾರ್ ಅಳವಡಿಸಲಾಗಿದ್ದು, ಸ್ಕೂಟರ್‌ನಲ್ಲಿ ಸ್ಥಿರ ಮತ್ತು ಪೋರ್ಟಬಲ್ ಬ್ಯಾಟರಿ ಪ್ಯಾಕ್‌ಗಳ ಆಯ್ಕೆಯನ್ನು ಹೊಂದಿದೆ. ಜಾಂಟಿ ಪ್ಲಸ್ ಇ-ಸ್ಕೂಟರ್ ಬಳಕೆದಾರರಿಗೆ ಮೊಬೈಲ್ ಚಾರ್ಜಿಂಗ್ ಸೌಲಭ್ಯಕ್ಕಾಗಿ ಯುಎಸ್‌ಬಿ ಪೋರ್ಟ್‌ನೊಂದಿಗೆ ಬರಲಿದ್ದು, ಈ ಮೂಲಕ ಹೆಚ್ಚಿನ ವೇಗ ಮತ್ತು ಶ್ರೇಣಿಯ ಅತ್ಯುತ್ತಮ ಎಲೆಕ್ಟ್ರಿಕ್ ಸ್ಕೂಟರ್ ಹುಡುಕುವ ಗ್ರಾಹಕರಿಗೆ ಪರಿಪೂರ್ಣ ಪ್ಯಾಕೇಜ್ ಹೊಂದಿದೆ.

ಪ್ರತಿ ಚಾರ್ಜ್‌ಗೆ 120 ಕಿ.ಮೀ ಮೈಲೇಜ್ ನೀಡುವ ಎಮೊ ಜಾಂಟಿ ಪ್ಲಸ್ ಇವಿ ಸ್ಕೂಟರ್ ಬಿಡುಗಡೆ

ಎಮೊ ಕಂಪನಿಯು ಹೊಸ ಜಾಂಟಿ ಪ್ಲಸ್ ಇವಿ ಸ್ಕೂಟರ್ ಮಾದರಿಯನ್ನು ಫೆಬ್ರವರಿ 15 ರಿಂದ ದೇಶಾದ್ಯಂತ ಪ್ರಮುಖ 140 ಮಲ್ಟಿ ಬ್ರಾಂಡ್ ಇವಿ ಸ್ಕೂಟರ್ ಡೀಲರ್‌ಶಿಪ್‌ಗಳಲ್ಲಿ ಮಾರಾಟಕ್ಕೆ ಚಾಲನೆ ನೀಡುತ್ತಿದ್ದು, ಮಾರಾಟ ನಂತರದ ಸೇವೆಗಳಿಗೂ ಹೆಚ್ಚಿನ ಆದ್ಯತೆ ನೀಡುತ್ತಿರುವುದಾಗಿ ಮಾಹಿತಿ ಹಂಚಿಕೊಂಡಿದೆ.

ಪ್ರತಿ ಚಾರ್ಜ್‌ಗೆ 120 ಕಿ.ಮೀ ಮೈಲೇಜ್ ನೀಡುವ ಎಮೊ ಜಾಂಟಿ ಪ್ಲಸ್ ಇವಿ ಸ್ಕೂಟರ್ ಬಿಡುಗಡೆ

ಭಾರತದಲ್ಲಿ ಇವಿ ವಾಹನ ಮಾರಾಟ ಮತ್ತು ಅಭಿವೃದ್ದಿ ಯೋಜನೆಗಳು ಇಂಧನ ಮಾದರಿಗಳಿಗೆ ಹೋಲಿಕೆ ಮಾಡಿದರೆ ಇನ್ನಷ್ಟು ಸಾಕಷ್ಟು ಸುಧಾರಿಸಬೇಕಿದ್ದು, ಈ ಹಿನ್ನೆಲೆ ಪ್ರತ್ಯೇತ ಮಾರಾಟ ಮಳಿಗೆಗಳನ್ನು ತೆರೆಯದೆ ಮಲ್ಟಿ ಬ್ರಾಂಡ್ ಮಾರಾಟ ಮಳಿಗೆಗಳ ಜೊತೆ ಎಮೊ ಕಂಪನಿಯು ಪಾಲುದಾರಿಕೆ ಪಡೆದುಕೊಂಡಿದೆ.

More from DriveSpark

Article Published On: Tuesday, February 8, 2022, 8:45 [IST]
English summary
Amo jaunty plus ev scooter launched price features range details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+