ದೇಶದಲ್ಲಿ ಬೆಂಗಳೂರು ಮೂಲದ ಎಲೆಕ್ಟ್ರಿಕ್ ಸ್ಕೂಟರ್‌ಗಳ ಅಬ್ಬರ: ಬಿಡುಗಡೆಯಾಯ್ತು ಮತ್ತೊಂದು ಇವಿ

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗಿದೆ. ಇದಕ್ಕೆ ಉತ್ತಮ ಉದಾಹರಣೆ ಎಂದರೆ ವಾರಕ್ಕೊಂದಾದರೂ ಎಲೆಕ್ಟ್ರಿಕ್ ವಾಹನ ಬಿಡುಗಡೆಯಾಗುತ್ತಿರುವುದು. ಇದೀಗ ಭಾರತದಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬೆಂಗಳೂರು ಮೂಲದ 'ಸ್ಟೆಲ್ಲಾ ಮೋಟೋ' ಕಂಪನಿಯು ಬಿಡುಗಡೆ ಮಾಡಿದೆ. ಇದು ಆಕರ್ಷಕ ನೋಟವನ್ನು ಪಡೆದಿದ್ದು, ಮಧ್ಯಮ ವರ್ಗದವರಿಗೆ ಕೈಗೆಟುಕುವ ಬೆಲೆಗೆ ಬಿಡುಗಡೆ ಮಾಡಲಾಗಿದೆ.

ಸ್ಟೆಲ್ಲಾ ಮೋಟೋ 'ಬಝ್' ಎಂಬ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಬೆಲೆಯು ರೂ. 95,000 (ಎಕ್ಸ್ ಶೋ ರೂಂ)ವಿದ್ದು, ಒಟ್ಟು ನಾಲ್ಕು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಅವುಗಳೆಂದರೆ ಗ್ರೇ, ಮ್ಯಾಟ್ ಬ್ಲೂ, ರೆಡ್ ಮತ್ತು ಬ್ರೌನ್ ಬಣ್ಣಗಳಾಗಿವೆ. ಈ ಸ್ಕೂಟರ್ ಉತ್ತಮ ವಿನ್ಯಾಸದೊಂದಿಗೆ ಸುಧಾರಿತ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಈ ಎಲೆಕ್ಟ್ರಿಕ್ ಸ್ಕೂಟರ್‌ಗೆ ಕಂಪನಿಯು ಮೂರು ವರ್ಷಗಳ ವಾರಂಟಿ ನೀಡುತ್ತಿದೆ.

ದೇಶದಲ್ಲಿ ಬೆಂಗಳೂರು ಮೂಲದ ಎಲೆಕ್ಟ್ರಿಕ್ ಸ್ಕೂಟರ್‌ಗಳ ಅಬ್ಬರ: ಬಿಡುಗಡೆಯಾಯ್ತು ಮತ್ತೊಂದು ಇವಿ

ಬಝ್ ಎಲೆಕ್ಟ್ರಿಕ್ ಸ್ಕೂಟರ್ ಸ್ಟೈಲಿಷ್ ಹೆಡ್‌ಲೈಟ್, ವಿಶೇಷವಾಗಿ ವಿನ್ಯಾಸಗೊಳಿಸಿದ ಬ್ಯಾಕ್ ಲೈಟ್ ಮತ್ತು ಅಲಾಯ್ ರಿಮ್ಡ್ ವೀಲ್‌ಗಳನ್ನು ಪಡೆದಿದೆ. ಅದೇ ಸಮಯದಲ್ಲಿ ಇದು ಎ ಗ್ರೇಡ್ ಲಿಥಿಯಂ ಐರನ್ ಫಾಸ್ಫೇಟ್ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ವಿಶೇಷವಾಗಿ ಭಾರತೀಯ ಹವಾಮಾನ ಪರಿಸ್ಥಿತಿಗಳಿಗಾಗಿ ವಿನ್ಯಾಸಗೊಳಿಸಲಾಗಿದೆ. ಆದ್ದರಿಂದ ಬ್ಯಾಟರಿಗೆ ಬೆಂಕಿ ತಗುಲುವ ಸಾಧ್ಯತೆ ಇಲ್ಲ, ಇದು ಅತ್ಯಂತ ಸುರಕ್ಷಿತವಾದ ಎಲೆಕ್ಟ್ರಿಕ್ ವಾಹನವಾಗಿದೆ ಎಂದು ಕಂಪನಿ ಹೇಳಿಕೊಂಡಿದೆ.

ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬೆಂಕಿಯ ಸಮಸ್ಯೆಯನ್ನು ಪರಿಹರಿಸಲು, ಕಂಪನಿಯು ಬ್ಯಾಟರಿ ಪ್ಯಾಕ್‌ನಲ್ಲಿ 4 ಟೆಂಪ್ರೇಚರ್ ಸೆನ್ಸಾರ್‌ಗಳನ್ನು ಅಳವಡಿಸಿದೆ. ಇದು ಯಾವಾಗಲೂ ವಾಹನದ ತಾಪಮಾನವನ್ನು ಮೇಲ್ವಿಚಾರಣೆ ಮಾಡುತ್ತದೆ. ಹೆಚ್ಚಿನ ತಾಪಮಾನದಲ್ಲಿ ವಿದ್ಯುತ್ ಅನ್ನು ಕಡಿತಗೊಳಿಸುತ್ತದೆ. ಮೈಕ್ರೊಪ್ರೊಸೆಸರ್ ಆಧಾರಿತ ಸ್ಮಾರ್ಟ್ ಬಿಎಂಎಸ್ ಸಹ ಲಭ್ಯವಿದ್ದು, ಬ್ಯಾಟರಿಯ ನಿಖರವಾದ ಸ್ಥಿತಿಯನ್ನು ಟ್ರ್ಯಾಕ್ ಮಾಡಲು ಬಳಕೆದಾರರಿಗೆ ತುಂಬಾ ಉಪಯುಕ್ತವಾಗಿದೆ. ಈ ಎಲ್ಲಾ ಸೌಲಭ್ಯಗಳಿಂದ ಹೊಸ ಸ್ಕೂಟರ್ ಇತರ ಇವಿಗಳಿಗಿಂತ ಹೆಚ್ಚು ವಿಭಿನ್ನಾವಾಗಿದೆ.

ಹೊಸ ಬಝ್ ಎಲೆಕ್ಟ್ರಿಕ್ ಸ್ಕೂಟರ್ 2.16-ಕಿಲೋವ್ಯಾಟ್ ಬ್ಯಾಟರಿ ಪ್ಯಾಕ್ ಅನ್ನು ಹೊಂದಿದೆ. ಇದು ಒಂದು ಸಂಪೂರ್ಣ ಚಾರ್ಜ್‌ನಲ್ಲಿ ಗರಿಷ್ಠ 90 ಕಿ.ಮೀ ವ್ಯಾಪ್ತಿಯನ್ನು ನೀಡುತ್ತದೆ. ಜೊತೆಗೆ ಇದು 2-kW BLDC ಮೋಟಾರ್ ಅನ್ನು ಹೊಂದಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಗಂಟೆಗೆ ಗರಿಷ್ಠ 55 ಕಿ.ಮೀ ವೇಗದಲ್ಲಿ ವೇಗವನ್ನು ತಲುಪುವ ಸಾಮರ್ಥ್ಯವನ್ನು ಹೊಂದಿದೆ. ಇದು ಸುಮಾರು 150 ಕೆ.ಜಿ ಇರುವುದರಿಂದ ಯಾವುದೇ ಸಣ್ಣ ವಸ್ತುಗಳನ್ನು ಸಾಗಿಸಲು ಬಹಳ ಉಪಯುಕ್ತವಾಗಿದೆ.

ಬಝ್ ಎಲೆಕ್ಟ್ರಿಕ್ ಸ್ಕೂಟರ್ ನೆಲದಿಂದ 180 ಮಿ.ಮೀ ಎತ್ತರದಲ್ಲಿದೆ. ಈ ಮೂಲಕ ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್ ಸಿಗುವುದರಿಂದ ಇದು ಯಾವುದೇ ರಸ್ತೆಯಲ್ಲಿ ಸರಾಗವಾಗಿ ಚಲಿಸುತ್ತದೆ. ಇದಲ್ಲದೇ ಬ್ರೇಕಿಂಗ್ ಸಿಸ್ಟಂ ಕೂಡ ಅದ್ಭುತವಾಗಿದೆ. ಹೀಗಾಗಿ ಯಾವುದೇ ಸಮಯದಲ್ಲಿ ವಾಹನವನ್ನು ನಿಯಂತ್ರಿಸಲು ಅನುವು ಮಾಡಿಕೊಡುತ್ತದೆ. ಒಟ್ಟಾರೆಯಾಗಿ ಈ ಎಲೆಕ್ಟ್ರಿಕ್ ಸ್ಕೂಟರ್ ನೋಟದಲ್ಲಿ ಸರಳವಾಗಿರುವುದರ ಜೊತೆಗೆ ಉತ್ತಮ ಕಾರ್ಯಕ್ಷಮತೆಯನ್ನು ಒದಗಿಸಲು ವಿನ್ಯಾಸಗೊಳಿಸಲಾಗಿದೆ. ಹಾಗಾಗಿ ಸಿಟಿ ಲಿಮಿಟ್ಸ್‌ನಲ್ಲಿ ಪರ್ಫಾಮೆನ್ಸ್ ಬಯಸುವವರು ಕೂಡ ಖರೀದಿಸಬಹುದು.

ಈ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯ ಸಂದರ್ಭದಲ್ಲಿ, ಸ್ಟೆಲ್ಲಾ ಮೋಟೋ ಸಿಇಒ ಮತ್ತು ಸಂಸ್ಥಾಪಕ ನಕುಲ್ ಜೈದ್ಕಾ ಅವರು ಮಾತನಾಡಿ, ನಾವು ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದೇವೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಭಾರೀ ಬೇಡಿಕೆಯಿರುವ ಕಾರಣ, ಬಝ್ ಎಲೆಕ್ಟ್ರಿಕ್ ಸ್ಕೂಟರ್ ದೇಶೀಯ ಮಾರುಕಟ್ಟೆಯಲ್ಲಿ ಉತ್ತಮ ಪ್ರತಿಕ್ರಿಯೆ ಪಡೆಯುವ ನಿರೀಕ್ಷೆಯಿದೆ. ಕಂಪನಿಯು ಈ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ದೇಶಾದ್ಯಂತ ಲಭ್ಯವಾಗುವಂತೆ ಮಾಡಲಿದೆ ಎಂದು ಹೇಳಿದರು.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.

Most Read Articles

Kannada
English summary
Another bengaluru based electric scooter launched
Story first published: Thursday, December 8, 2022, 18:07 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X