ಬೆಲೆ ಏರಿಕೆ: ಎಥರ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮತ್ತಷ್ಟು ದುಬಾರಿ

ಹೆಚ್ಚುತ್ತಿರುವ ಆಟೋಮೊಬೈಲ್ ಬಿಡಿಭಾಗಗಳ ಬೆಲೆ ಪರಿಣಾಮ ಹೊಸ ವಾಹನ ಬೆಲೆಯು ಸಾಕಷ್ಟು ಏರಿಕೆಯಾಗುತ್ತಿದ್ದು, ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಎಥರ್ ಎನರ್ಜಿ ಕಂಪನಿಯು ಸಹ ತನ್ನ ಇವಿ ಉತ್ಪನ್ನಗಳ ಬೆಲೆಯಲ್ಲಿ ಹೆಚ್ಚಳ ಮಾಡಿದೆ.

ಬೆಲೆ ಏರಿಕೆ: ಎಥರ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮತ್ತಷ್ಟು ದುಬಾರಿ

ಎಥರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಹೊಸ ದರ ಪಟ್ಟಿಯಲ್ಲಿ ಇವಿ ಸ್ಕೂಟರ್‌ಗಳ ಬೆಲೆಯು ರೂ. 6 ಸಾವಿರ ತನಕ ಹೆಚ್ಚಳವಾಗಿದೆ. ಬೆಲೆ ಏರಿಕೆಯ ನಂತರ ಬೆಂಗಳೂರು ಎಕ್ಸ್‌ಶೋರೂಂ ಪ್ರಕಾರ 450 ಪ್ಲಸ್ ಮಾದರಿಯು ರೂ. 1,31,647ಕ್ಕೆ ಮತ್ತು 450ಎಕ್ಸ್ ಬೆಲೆಯನ್ನು ರೂ. 1,50,657ಕ್ಕೆ ಬೆಲೆ ಏರಿಕೆಯಾಗಿದೆ.

ಬೆಲೆ ಏರಿಕೆ: ಎಥರ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮತ್ತಷ್ಟು ದುಬಾರಿ

ಎಥರ್ ಎಲೆಕ್ಟ್ರಿಕ್ ಸ್ಕೂಟರ್‌ಗಳು ಇತ್ತೀಚೆಗೆ ಬಿಡುಗಡೆಯಾಗಿರುವ ಇವಿ ಸ್ಕೂಟರ್‌ಗಳಿಂತಲೂ ತುಸು ಕಡಿಮೆ ಮೈಲೇಜ್ ಹೊಂದಿದ್ದರೂ ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಮತ್ತು ಎಲೆಕ್ಟ್ರಿಕ್ ಎಂಜಿನ್ ಕಾರ್ಯಕ್ಷಮತೆ, ತಾಂತ್ರಿಕ ಸೇವೆಗಳ ವಿಚಾರವಾಗಿ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿರುವುದೇ ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ಬೆಲೆ ಏರಿಕೆ: ಎಥರ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮತ್ತಷ್ಟು ದುಬಾರಿ

ಸದ್ಯ ಮಾರುಕಟ್ಟೆಯಲ್ಲಿರುವ 2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಬ್ಯಾಟರಿ ಬ್ಯಾಟರಿ ಪ್ಯಾಕ್‌ನೊಂದಿಗೆ 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಬೆಲೆ ಏರಿಕೆ: ಎಥರ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮತ್ತಷ್ಟು ದುಬಾರಿ

450 ಪ್ಲಸ್ ಮಾದರಿಯು ಪ್ರತಿ ಚಾರ್ಜ್‌ಗೆ 70 ಕಿ.ಮೀ ಮೈಲೇಜ್ ಹೊಂದಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ 450ಎಕ್ಸ್ ಮಾದರಿಯು ಕೇವಲ 10 ನಿಮಿಷಗಳಲ್ಲಿ ಚಾರ್ಜ್ ಮಾಡಿದಲ್ಲಿ 10 ಕಿ.ಮೀ ಹಿಂದಿರುಗಿಸಿದ್ದಲ್ಲಿ 450 ಪ್ಲಸ್ ಮಾದರಿಯು 15 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಬೆಲೆ ಏರಿಕೆ: ಎಥರ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮತ್ತಷ್ಟು ದುಬಾರಿ

ಸ್ಟ್ಯಾಂಡರ್ಡ್ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಮಾರಾಟದಿಂದ ಸ್ಥಗಿತಗೊಳಿಸಿದ ನಂತರ ಎಥರ್ ಕಂಪನಿಯು 450 ಪ್ಲಸ್ ಮತ್ತು 450ಎಕ್ಸ್ ಮಾದರಿಯ ಮೇಲೆ ಹೆಚ್ಚು ಗಮನಹರಿಸಿದ್ದು, ಅತಿ ಹೆಚ್ಚು ಮೈಲೇಜ್ ನೀಡುವ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿರುವ ಎಥರ್ ಕಂಪನಿಯು ಕಳೆದ ಒಂದು ವರ್ಷದ ಅವಧಿಯಲ್ಲಿ 12 ಪಟ್ಟು ಹೆಚ್ಚು ಬೆಳವಣಿಗೆ ಸಾಧಿಸಿದೆ.

ಬೆಲೆ ಏರಿಕೆ: ಎಥರ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮತ್ತಷ್ಟು ದುಬಾರಿ

ಎಥರ್ ಎನರ್ಜಿ ಕಂಪನಿಯು ಪ್ರೀಮಿಯಂ ಸ್ಕೂಟರ್‌ಗಳ ಜೊತೆಗೆ ಬಜೆಟ್ ಬೆಲೆಯ ಇವಿ ಮಾದರಿಗಳನ್ನು ಸಹ ಅಭಿವೃದ್ದಿಗೊಳಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಉತ್ಪನ್ನಗಳೊಂದಿಗೆ ಇನ್ನು ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಬೆಲೆ ಏರಿಕೆ: ಎಥರ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮತ್ತಷ್ಟು ದುಬಾರಿ

ಹೊಸ ಯೋಜನೆಗೆ ಪೂರಕವಾಗಿ ಕಂಪನಿಯು ಉತ್ಪಾದನಾ ಸಾಮರ್ಥ್ಯವನ್ನು ಸಹ ಹೆಚ್ಚಿಸಲು ನಿರ್ಧರಿಸಿದ್ದು, ಇದಕ್ಕಾಗಿ ಕಂಪನಿಯು ಎರಡನೇ ಉತ್ಪಾದನಾ ಘಟಕ ತೆರೆಯಲು ಸಿದ್ದವಾಗಿದೆ. ಎಥರ್ ಕಂಪನಿಯು ಸದ್ಯ ತಮಿಳುನಾಡಿನ ಹೊಸೂರಿನಲ್ಲಿ ವಾರ್ಷಿಕವಾಗಿ 1.20 ಲಕ್ಷ ಸ್ಕೂಟರ್‌ಗಳ ಉತ್ಪಾದನೆ ಮಾಡಬಹುದಾದ ಸಾಮರ್ಥ್ಯದ ಇವಿ ಘಟಕವನ್ನು ಹೊಂದಿದ್ದು, ಇದೀಗ ಕಂಪನಿಯು ಎರಡನೇ ಘಟಕವನ್ನು ಸಹ ಹೊಸೂರಿನಲ್ಲಿಯೇ ತೆರೆಯಲು ನಿರ್ಧರಿಸಿದೆ.

ಬೆಲೆ ಏರಿಕೆ: ಎಥರ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮತ್ತಷ್ಟು ದುಬಾರಿ

ಎರಡನೇ ಘಟಕ ನಿರ್ಮಾಣ ಕಾರ್ಯ ಈಗಾಗಲೇ ಆರಂಭಗೊಂಡಿದ್ದು, ಈ ವರ್ಷದ ಕೊನೆಯಲ್ಲಿ ಕಾರ್ಯಾರಂಭ ನಡೆಸಲಿರುವ ಹೊಸ ಘಟಕವು ವಾರ್ಷಿಕವಾಗಿ 2.80 ಲಕ್ಷ ಯುನಿಟ್ ಉತ್ಪಾದನಾ ಸಾಮರ್ಥ್ಯ ಹೊಂದಿರಲಿದೆ ಎನ್ನಲಾಗಿದೆ.

ಬೆಲೆ ಏರಿಕೆ: ಎಥರ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮತ್ತಷ್ಟು ದುಬಾರಿ

ಎಥರ್ ಕಂಪನಿಯು ಎರಡು ಘಟಕಗಳ ಮೂಲಕ ವಾರ್ಷಿಕವಾಗಿ 4 ಲಕ್ಷ ಯುನಿಟ್ ಇವಿ ಸ್ಕೂಟರ್ ಉತ್ಪಾದನಾ ಗುರಿಹೊಂದಿದ್ದು, ಹೊಸ ಯೋಜನೆಗಳಿಗಾಗಿ ಕಂಪನಿಯು ಮುಂದಿನ ಐದು ವರ್ಷಗಳಿಗೆ ಹಂತ-ಹಂತವಾಗಿ ರೂ. 650 ಕೋಟಿ ಹೂಡಿಕೆ ಮಾಡಲು ನಿರ್ಧರಿಸಿದೆ.

ಬೆಲೆ ಏರಿಕೆ: ಎಥರ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮತ್ತಷ್ಟು ದುಬಾರಿ

ದುಬಾರಿ ಬೆಲೆ ನಡುವೆಯೂ ಗ್ರಾಹಕರಿಂದ ಉತ್ತಮ ಪ್ರಕ್ರಿಯೆ ಪಡೆದುಕೊಳ್ಳುತ್ತಿರುವ ಎಥರ್ ಎನರ್ಜಿ ಕಂಪನಿಯು ಇದುವರೆಗೂ ರೂ. 650 ಕೋಟಿ ಮೌಲ್ಯದ ಇವಿ ಸ್ಕೂಟರ್ ಉದ್ಯಮ ವ್ಯವಹಾರ ಕೈಗೊಂಡಿದ್ದು, ಕಳೆದ ವರ್ಷ ಎಥರ್ ಸ್ಕೂಟರ್ ಮಾರಾಟದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದೆ.

ಬೆಲೆ ಏರಿಕೆ: ಎಥರ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮತ್ತಷ್ಟು ದುಬಾರಿ

ಬೇಡಿಕೆಗೆ ಪೂರಕವಾಗಿ ಕಂಪನಿಯು ಕಳೆದ ಒಂದು ತಿಂಗಳ ಅವಧಿಯಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಹೊಸ ಶೋರೂಂಗಳಿಗೆ ಚಾಲನೆ ನೀಡಿದ್ದು, ಇದುವರೆಗೆ ಸುಮಾರು 25 ಶೋರೂಂಗಳನ್ನು ಹೊಂದಿದಂತಾಗಿದೆ.

ಬೆಲೆ ಏರಿಕೆ: ಎಥರ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮತ್ತಷ್ಟು ದುಬಾರಿ

ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಪ್ರಕ್ರಿಯೆಯು ಚುರುಕುಗೊಂಡಿರುವುದರಿಂದ ವಿವಿಧ ನಗರಗಳಲ್ಲಿ ಮತ್ತಷ್ಟು ಹೊಸ ಶೋರೂಂಗಳನ್ನು ತೆರೆಯುವ ಸಿದ್ದತೆಯಲ್ಲಿರುವ ಕಂಪನಿಯು ಈ ವರ್ಷಾಂತ್ಯಕ್ಕೆ ನೂರು ಶೋರೂಂ ತೆರೆಯುವ ಯೋಜನೆಯಲ್ಲಿದ್ದು, ಶೋರೂಂ ಹೆಚ್ಚಳದೊಂದಿಗೆ ಇವಿ ವಾಹನಗಳಿಗೆ ಚಾರ್ಜಿಂಗ್ ನಿಲ್ದಾಣ ಸೌಲಭ್ಯವನ್ನು ಒದಗಿಸಲು ಹೊಸ ಯೋಜನೆ ಅಡಿ ಎಥರ್ ಗ್ರಿಡ್ 2.0 ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುತ್ತಿದೆ.

ಬೆಲೆ ಏರಿಕೆ: ಎಥರ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮತ್ತಷ್ಟು ದುಬಾರಿ

ಎಥರ್ ಕಂಪನಿಯು ದೇಶದ ಪ್ರಮುಖ ನಗರಗಳಲ್ಲಿ ಈಗಾಗಲೇ 200 ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೊಂದಿದ್ದು, 2022ರ ಕೊನೆಯಲ್ಲಿ ಹೊಸದಾಗಿ 500 ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಯೋಜಿಸಲಾಗಿದೆ.

Most Read Articles

Kannada
English summary
Ather 450x 450 plus ev scooter price hiked upto rs 6000
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X