ಆಕರ್ಷಕ ಬೆಲೆಯಲ್ಲಿ ಹೆಚ್ಚು ಮೈಲೇಜ್ ಪ್ರೇರಿತ ಎಥರ್ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಬಿಡುಗಡೆ

ಎಥರ್ ಎನರ್ಜಿ ಕಂಪನಿಯು ತನ್ನ ಜನಪ್ರಿಯ ಇವಿ ಸ್ಕೂಟರ್ ಮಾದರಿಗಳಾದ 450 ಪ್ಲಸ್ ಮತ್ತು 450ಎಕ್ಸ್ ಮಾದರಿಗಳ ಹೊಸ ತಲೆಮಾರಿನ ಆವೃತ್ತಿಗಳನ್ನು ಬಿಡುಗಡೆ ಮಾಡಿದ್ದು, ಹೊಸ ಇವಿ ಸ್ಕೂಟರ್‌ಗಳು ನವೀಕೃತ ಬ್ಯಾಟರಿ ಪ್ಯಾಕ್ ಜೊತೆ ಹೆಚ್ಚುವರಿ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿವೆ.

ಆಕರ್ಷಕ ಬೆಲೆಯಲ್ಲಿ ಹೆಚ್ಚು ಮೈಲೇಜ್ ಪ್ರೇರಿತ ಎಥರ್ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಬಿಡುಗಡೆ

ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಸದ್ಯ ಮುಂಚೂಣಿಯಲ್ಲಿರುವ ಎಥರ್ ಕಂಪನಿಯು ವಿಸ್ತರಿತ ಮೈಲೇಜ್ ಪ್ರೇರಿತ 450 ಪ್ಲಸ್ ಮತ್ತು 450ಎಕ್ಸ್ ಮಾದರಿಗಳನ್ನು ಮೂರನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಳಿಸಿದ್ದು, ಹೊಸ ಮಾದರಿಗಳು ಹೊಸ ಬ್ಯಾಟರಿ ಪ್ಯಾಕ್ ಜೋಡಣೆಯೊಂದಿಗೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿರಲಿವೆ.

ಆಕರ್ಷಕ ಬೆಲೆಯಲ್ಲಿ ಹೆಚ್ಚು ಮೈಲೇಜ್ ಪ್ರೇರಿತ ಎಥರ್ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಬಿಡುಗಡೆ

ಹೊಸ ಫೀಚರ್ಸ್‌ಗಳ ಹೊರತಾಗಿಯೂ ಸುಧಾರಿತ ತಂತ್ರಜ್ಞಾನ ಪ್ರೇರಿತ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಮಾದರಿಗಳಲ್ಲಿ ಕಂಪನಿಯು ಈ ಹಿಂದಿನ ಮಾದರಿಯಲ್ಲಿನ ಹಲವು ಫೀಚರ್ಸ್‌ಗಳನ್ನು ಮುಂದುವರಿಸಿದ್ದು, ವಿಸ್ತರಿತ ಬ್ಯಾಟರಿ ಪ್ಯಾಕ್ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

ಆಕರ್ಷಕ ಬೆಲೆಯಲ್ಲಿ ಹೆಚ್ಚು ಮೈಲೇಜ್ ಪ್ರೇರಿತ ಎಥರ್ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಬಿಡುಗಡೆ

ಎಥರ್ ಕಂಪನಿಯು ವಿವಿಧ ರಾಜ್ಯಗಳಲ್ಲಿ ಸಬ್ಸಡಿಗೆ ಅನುಗುಣವಾಗಿ ಹೊಸ ಸ್ಕೂಟರ್‌ಗಳ ಬೆಲೆ ಮಾಹಿತಿಯನ್ನು ಹಂಚಿಕೊಂಡಿದ್ದು, ನಮ್ಮ ಬೆಂಗಳೂರಿನಲ್ಲಿ ಎಕ್ಸ್‌ಶೋರೂಂ ಪ್ರಕಾರ 450 ಪ್ಲಸ್ ಮಾದರಿಯು ರೂ. 1,34,147 ಬೆಲೆ ಹೊಂದಿದ್ದರೆ 450ಎಕ್ಸ್ ಮಾದರಿಯು ರೂ. 1,55,657 ಬೆಲೆ ಹೊಂದಿದೆ.

ಆಕರ್ಷಕ ಬೆಲೆಯಲ್ಲಿ ಹೆಚ್ಚು ಮೈಲೇಜ್ ಪ್ರೇರಿತ ಎಥರ್ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಬಿಡುಗಡೆ

ಹೆಚ್ಚಿನ ಮಟ್ಟದ ಸಬ್ಸಡಿಯಿಂದಾಗಿ ಅಹಮದಾಬಾದ್‌ನಲ್ಲಿ ಹೊಸ ಇವಿ ಸ್ಕೂಟರ್‌ಗಳು ಕ್ರಮವಾಗಿ ರೂ. 1,16,101 ಮತ್ತು ರೂ. 1,37,612 ಬೆಲೆ ಹೊಂದಿದ್ದು, ಸಬ್ಸಡಿಗೆ ಅನುಗುಣವಾಗಿ ವಿವಿಧ ರಾಜ್ಯಗಳಲ್ಲಿ ಹೊಸ ಸ್ಕೂಟರ್ ಬೆಲೆಯು ಏರಿಳಿತವಾಗುತ್ತದೆ.

ಆಕರ್ಷಕ ಬೆಲೆಯಲ್ಲಿ ಹೆಚ್ಚು ಮೈಲೇಜ್ ಪ್ರೇರಿತ ಎಥರ್ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಬಿಡುಗಡೆ

ಹೊಸ ಸ್ಕೂಟರ್‌ಗಳಲ್ಲಿ ಕಂಪನಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ 3.7kWh ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದ್ದು, ಹೊಸ ಬ್ಯಾಟರಿ ಪ್ಯಾಕ್ ಮೂಲಕ ಇದೀಗ ಹೊಸ ಸ್ಕೂಟರ್‌ಗಳು ಪ್ರತಿ ಚಾರ್ಜ್‌ಗೆ ಗರಿಷ್ಠ 146 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತವೆ.

ಆಕರ್ಷಕ ಬೆಲೆಯಲ್ಲಿ ಹೆಚ್ಚು ಮೈಲೇಜ್ ಪ್ರೇರಿತ ಎಥರ್ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಬಿಡುಗಡೆ

ಹೊಸ ಬ್ಯಾಟರಿ ಜೋಡಣೆ ನಂತರ ಹೊಸ ಸ್ಕೂಟರ್‌ಗಳ ತೂಕದಲ್ಲಿ ಈ ಮೊದಲಿಗಿಂತ 19 ಕೆ.ಜಿ ಹೆಚ್ಚಳವಾಗಿದ್ದು, ಪ್ರಮುಖ ನಾಲ್ಕು ರೈಡ್ ಮೋಡ್‌ಗಳೊಂದಿಗೆ ಇಕೋ ಮೋಡ್‌ನಲ್ಲಿ ಕನಿಷ್ಠ 105 ಕಿ.ಮೀ ರಿಯಲ್ ವರ್ಲ್ಡ್ ಮೈಲೇಜ್ ಪಡೆದುಕೊಳ್ಳಬಹುದಾಗಿ ಕಂಪನಿಯು ಭರವಸೆ ನೀಡಿದೆ.

ಆಕರ್ಷಕ ಬೆಲೆಯಲ್ಲಿ ಹೆಚ್ಚು ಮೈಲೇಜ್ ಪ್ರೇರಿತ ಎಥರ್ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಬಿಡುಗಡೆ

ಇದರೊಂದಿಗೆ ಹೊಸ ಸ್ಕೂಟರ್ ಮತ್ತೊಂದು ಪ್ರಮುಖ ಬದಲಾವಣೆ ಎಂದರೆ ಕಂಪನಿಯು ಈ ಬಾರಿಗೆ ಹೊಸ ಸ್ಕೂಟರ್‌ಗಳಲ್ಲಿ ಎಂಆರ್‌ಎಫ್ ಜೊತೆಗೆ ನಿರ್ಮಾಣ ಮಾಡಲಾದ ಹೊಸ ತಂತ್ರಜ್ಞಾನ ಪ್ರೇರಿತ ಹೊಸ ವಿನ್ಯಾಸ ಟೈರ್ ಜೋಡಣೆ ಮಾಡಲಾಗಿದೆ.

ಆಕರ್ಷಕ ಬೆಲೆಯಲ್ಲಿ ಹೆಚ್ಚು ಮೈಲೇಜ್ ಪ್ರೇರಿತ ಎಥರ್ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಬಿಡುಗಡೆ

ಹೊಸ ಎಂಆರ್‌ಎಫ್ ಟೈರ್‌ನಿಂದ ಇವಿ ಸ್ಕೂಟರ್ ಆಕ್ಸಿಲೇಷನ್, ಕಾರ್ನರ್ ರೈಡ್ ಮತ್ತು ಬ್ರೇಕಿಂಗ್ ಫರ್ಪಾಮೆನ್ಸ್ ಸಾಕಷ್ಟು ಸುಧಾರಣೆಗೊಂಡಿದ್ದು, ಹೊಸ ಮಾದರಿಗಳಲ್ಲಿ ಕಂಪನಿಯು ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ(ಟಿಪಿಎಂಎಸ್), ಕ್ಯಾಸ್ಟ್ ಅಲ್ಯೂನಿಯಂನಿಂದ ನಿರ್ಮಿಸಲಾದ ವಿಸ್ತರಿತ ಸೈಡ್ ಸ್ಟೆಪ್ ಮತ್ತು ಹೊಸ ವಿನ್ಯಾಸದ ರಿಯರ್ ವ್ಯೂ ಮಿರರ್ ನೀಡಿದೆ.

ಆಕರ್ಷಕ ಬೆಲೆಯಲ್ಲಿ ಹೆಚ್ಚು ಮೈಲೇಜ್ ಪ್ರೇರಿತ ಎಥರ್ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಬಿಡುಗಡೆ

ಇದರ ಜೊತೆಯಲ್ಲಿ ಹೊಸ ಮಾದರಿಗಳ ಕನೆಕ್ಟ್ ಸೌಲಭ್ಯಗಳನ್ನು ಮತ್ತಷ್ಟು ಸುಧಾರಣೆಗೊಳಿಸಲು ಎಥರ್ ಕಂಪನಿಯು ಹೆಚ್ಚುವರಿ ಸ್ಟೋರೆಜ್ ಸರ್ಪೊಟ್ ಮಾಡುವ ರ‍್ಯಾಮ್ ಜೋಡಣೆ ಮಾಡಿದ್ದು, ಮುಂಬರುವ ದಿನಗಳಲ್ಲಿ ಕಂಪನಿಯು ಹೊಸ ಮಾದರಿಗಳಲ್ಲಿನ ಹಲವಾರು ಹೊಸ ಫೀಚರ್ಸ್‌ಗಳನ್ನು ಓವರ್-ದ-ಏರ್ ಅಪ್‌ಡೇಟ್ ಮೂಲಕ ಅನ್‌ಲಾಕ್ ಮಾಡಲಿದೆ.

ಆಕರ್ಷಕ ಬೆಲೆಯಲ್ಲಿ ಹೆಚ್ಚು ಮೈಲೇಜ್ ಪ್ರೇರಿತ ಎಥರ್ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಬಿಡುಗಡೆ

ಇನ್ನು ಎಥರ್ ಕಂಪನಿಯು ಹೊಸ ಮಾದರಿಗಳಿಗಾಗಿ ಈಗಾಗಲೇ ಅಧಿಕೃತ ಬುಕಿಂಗ್ ಮೂಲಕ ಭಾರೀ ಪ್ರಮಾಣದಲ್ಲಿ ಬುಕಿಂಗ್ ಪಡೆದುಕೊಂಡಿದ್ದು, ಬುಕಿಂಗ್ ಮಾಡಲಾದ ಗ್ರಾಹಕರಿಗೆ ಇಂದಿನಿಂದಲೇ ಟೆಸ್ಟ್ ರೈಡ್ ಸೌಲಭ್ಯವನ್ನು ಒದಗಿಸುತ್ತಿದೆ.

ಆಕರ್ಷಕ ಬೆಲೆಯಲ್ಲಿ ಹೆಚ್ಚು ಮೈಲೇಜ್ ಪ್ರೇರಿತ ಎಥರ್ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಬಿಡುಗಡೆ

ಟೆಸ್ಟ್ ರೈಡ್ ನಂತರ ಖರೀದಿ ಪ್ರಕ್ರಿಯೆಯನ್ನು ಮುಂದುವರಿಸುವ ಗ್ರಾಹಕರಿಗೆ ಈ ತಿಂಗಳಾಂತ್ಯಕ್ಕೆ ಹೊಸ ಸ್ಕೂಟರ್‌ಗಳು ವಿತರಣೆಯಾಗುವುದಾಗಿ ಕಂಪನಿಯು ಭರವಸೆ ನೀಡಿದ್ದು, ಹೊಸ ಮಾದರಿಗಳ ಮೂಲಕ ಕಂಪನಿಯು ಪ್ರತಿಸ್ಪರ್ಧಿ ಕಂಪನಿಗಳಿಗೆ ಉತ್ತಮ ಪೈಪೋಟಿ ನೀಡುವ ತವಕದಲ್ಲಿದೆ.

ಆಕರ್ಷಕ ಬೆಲೆಯಲ್ಲಿ ಹೆಚ್ಚು ಮೈಲೇಜ್ ಪ್ರೇರಿತ ಎಥರ್ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಬಿಡುಗಡೆ

ಪ್ರಸ್ತುತ ಮಾರುಕಟ್ಟೆಯಲ್ಲಿ ಎಥರ್ ಇವಿ ಸ್ಕೂಟರ್‌ಗಳ ಪ್ರಮುಖ ಸ್ಪರ್ಧಿ ಮಾದರಿಗಳು ಹೆಚ್ಚಿನ ಮಟ್ಟದ ಮೈಲೇಜ್ ಹೊಂದಿರುವುದರಿಂದ ಕಂಪನಿಯು ಇದೀಗ ಗ್ರಾಹಕರ ಬೇಡಿಕೆಯಂತೆ ವಿಸ್ತರಿತ ಮೈಲೇಜ್ ಪ್ರೇರಿತ ಬ್ಯಾಟರಿ ಆಯ್ಕೆ ನೀಡಿದ್ದು, ಹೊಸ ಮಾದರಿಯೊಂದಿಗೆ ಮುಂದಿನ ಕೆಲವು ತಿಂಗಳ ಕಾಲ ಹಳೆಯ ಮಾದರಿಯ ಮಾರಾಟವು ಸಹ ಮುಂದುವರಿಯಲಿದೆ.

ಆಕರ್ಷಕ ಬೆಲೆಯಲ್ಲಿ ಹೆಚ್ಚು ಮೈಲೇಜ್ ಪ್ರೇರಿತ ಎಥರ್ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಬಿಡುಗಡೆ

ಹೀಗಾಗಿ ಗ್ರಾಹಕರು ತಮ್ಮ ಆದ್ಯತೆಗೆ ಅನುಗುಣವಾಗಿ ಕಡಿಮೆ ಮೈಲೇಜ್ ಮಾದರಿ ಇಲ್ಲದೇ ವಿಸ್ತರಿತ ಮೈಲೇಜ್ ಪ್ರೇರಿತ ಮಾದರಿಯನ್ನು ಆಯ್ಕೆ ಮಾಡಬಹುದಾಗಿದ್ದು, ವಿಸ್ತರಿತ ಮೈಲೇಜ್ ಪ್ರೇರಿತ ಮಾದರಿಯು ಪ್ರಸ್ತುತ ಮಾದರಿಗಿಂತ ರೂ. 4 ಸಾವಿರದಿಂದ ರೂ. 5,500 ರಷ್ಟು ದುಬಾರಿಯಾಗಿರಲಿವೆ.

ಆಕರ್ಷಕ ಬೆಲೆಯಲ್ಲಿ ಹೆಚ್ಚು ಮೈಲೇಜ್ ಪ್ರೇರಿತ ಎಥರ್ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಬಿಡುಗಡೆ

ಮುಂಬರುವ ದಿನಗಳಲ್ಲಿ ಇಂಧನ ಬೆಲೆಗಳು ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಗಳಿರುವುದರಿಂದ ಇವಿ ವಾಹನ ಉತ್ಪಾದನಾ ಕಂಪನಿಗಳು ಗ್ರಾಹಕರ ಆದ್ಯತೆಗೆ ತಕ್ಕಂತೆ ಹೊಸ ಇವಿ ಮಾದರಿಗಳನ್ನು ರಸ್ತೆಗಿಳಿಸುತ್ತಿದ್ದು, ಎಥರ್ ಕಂಪನಿಯು ಸಹ ಹೊಸ ಮಾದರಿಗಳೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಆಕರ್ಷಕ ಬೆಲೆಯಲ್ಲಿ ಹೆಚ್ಚು ಮೈಲೇಜ್ ಪ್ರೇರಿತ ಎಥರ್ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಬಿಡುಗಡೆ

ಇವಿ ವಾಹನಗಳ ಸುರಕ್ಷತೆಗಾಗಿ ಸರ್ಕಾರದ ಹೊಸ ಮಾನದಂಡಗಳನ್ನು ಜಾರಿಗೆ ತಂದಿರುವುದರಿಂದ ಗ್ರಾಹಕರಲ್ಲಿ ವಿಶ್ವಾಸ ಹೆಚ್ಚುತ್ತಿರುವ ಬಗ್ಗೆ ಭರವಸೆ ವ್ಯಕ್ತಪಡಿಸಿರುವ ಎಥರ್ ಸಿಇಒ ತರುಣ್ ಮೆಹ್ತಾ ಅವರು ಮುಂದಿನ ಒಂದು ವರ್ಷದೊಳಗಾಗಿ ಎಥರ್ ಇವಿ ಸ್ಕೂಟರ್ ಮಾರಾಟವು ಪ್ರತಿ ತಿಂಗಳು 1 ಲಕ್ಷಕ್ಕೆ ತಲುಪುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆಕರ್ಷಕ ಬೆಲೆಯಲ್ಲಿ ಹೆಚ್ಚು ಮೈಲೇಜ್ ಪ್ರೇರಿತ ಎಥರ್ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಬಿಡುಗಡೆ

ಹೆಚ್ಚುತ್ತಿರುವ ಇಂಧನಗಳ ಬೆಲೆ ಪರಿಣಾಮ ಎಥರ್ ಕಂಪನಿಗೆ ದಿನದಿಂದ ದಿನಕ್ಕೆ ಗ್ರಾಹಕರಿಂದ ಉತ್ತಮ ಪ್ರಕ್ರಿಯೆ ವ್ಯಕ್ತವಾಗುತ್ತಿದ್ದು, ಕಂಪನಿಯು ಹೊಸ ಉತ್ಪನ್ನಗಳೊಂದಿಗೆ ಮುಂದಿನ ಕೆಲವೇ ದಿನಗಳಲ್ಲಿ ಮತ್ತಷ್ಟು ಹೊಸ ಮಾರಾಟ ಮಳಿಗೆಗಳನ್ನು ಪ್ರಮುಖ ನಗರಗಳಿಗೆ ವಿಸ್ತರಿಸಲಿದೆ.

Most Read Articles

Kannada
English summary
Ather 450x 450 plus gen 3 launched in india prices start at rs 1 16 lakh details
Story first published: Tuesday, July 19, 2022, 17:52 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X