450ಎಕ್ಸ್ ಇವಿ ಸ್ಕೂಟರ್ ಉತ್ಪಾದನೆಯಲ್ಲಿ ಎಥರ್ ಎನರ್ಜಿ ಹೊಸ ಮೈಲಿಗಲ್ಲು
ದೇಶದ ಮುಂಚೂಣಿ ಇವಿ ಸ್ಕೂಟರ್ ಉತ್ಪಾದನಾ ಕಂಪನಿಯಾಗಿರುವ ಎಥರ್ ಎನರ್ಜಿ ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸುತ್ತಿದ್ದು, ಕಂಪನಿಯು ಇತ್ತೀಚೆಗೆ 450ಎಕ್ಸ್ ಮಾದರಿಯ ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದೆ.

ಎಥರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, 450ಎಕ್ಸ್ ಮಾದರಿಯು 450 ಪ್ಲಸ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಅಧಿಕ ಮೈಲೇಜ್ ಪಡೆದುಕೊಂಡಿದೆ. ಹೀಗಾಗಿ ಎಥರ್ ಇವಿ ಸ್ಕೂಟರ್ ಮಾರಾಟದಲ್ಲಿ ಕೆಲವೇ ದಿನಗಳಲ್ಲಿ ಹೊಸ ದಾಖಲೆ ನಿರ್ಮಿಸಿರುವ 450ಎಕ್ಸ್ ಮಾದರಿಯು ಉತ್ಪಾದನೆ ಆರಂಭವಾದ 25 ತಿಂಳಗಳ ಅವಧಿಯಲ್ಲಿ 25 ಸಾವಿರ ಯುನಿಟ್ ಉತ್ಪಾದನಾ ಗುರಿತಲುಪಿದೆ.

2020ರ ಜನವರಿ 28ರಂದು ಹೊಸೂರಿನಲ್ಲಿರುವ ಹೊಸ ಇವಿ ಸ್ಕೂಟರ್ ಉತ್ಪಾದನಾ ಘಟಕದಲ್ಲಿ ಮೊದಲ ಬಾರಿಗೆ 450ಎಕ್ಸ್ ಉತ್ಪಾದನೆ ಆರಂಭದ ನಂತರ ಇದುವರೆಗೆ 25 ಸಾವಿರ ಯುನಿಟ್ ಉತ್ಪಾದನೆ ಪೂರ್ಣಗೊಂಡಿದ್ದು, ಮುಂಬರುವ ದಿನಗಳಲ್ಲಿ 450ಎಕ್ಸ್ ಭಾರೀ ಪ್ರಮಾಣದಲ್ಲಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

450ಎಕ್ಸ್ ಉತ್ಪಾದನೆಯ ಆರಂಭದಲ್ಲಿ ಕೋವಿಡ್‌ನಿಂದಾಗಿ ಉತ್ಪಾದನಾ ಪ್ರಮಾಣದಲ್ಲಿ ತುಸು ಕುಂಠಿತಗೊಂಡರು ಕಳೆದ ಕೆಲ ತಿಂಗಳಿನಿಂದ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿದ್ದು, ದುಬಾರಿ ಇಂಧನ ಬೆಲೆಗಳ ಪರಿಣಾಮ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟವು ಸಾಕಷ್ಟು ಬೆಳವಣಿಗೆ ಸಾಧಿಸುತ್ತಿದೆ.

ಹೀಗಾಗಿ ಗ್ರಾಹಕರ ಬೇಡಿಕೆಯೆಂತೆ ಸ್ಟ್ಯಾಂಡರ್ಡ್ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಮಾರಾಟದಿಂದ ಸ್ಥಗಿತಗೊಳಿಸಿರುವ ಎಥರ್ ಕಂಪನಿಯು 450 ಪ್ಲಸ್ ಮತ್ತು 450ಎಕ್ಸ್ ಮಾದರಿಯ ಮೇಲೆ ಹೆಚ್ಚು ಗಮನಹರಿಸಿದ್ದು, 450 ಪ್ಲಸ್ ಬೆಲೆಯು ಬೆಂಗಳೂರು ಎಕ್ಸ್‌ಶೋರೂಂ ಪ್ರಕಾರ ರೂ. 1,31,647 ಮತ್ತು 450ಎಕ್ಸ್ ಬೆಲೆಯನ್ನು ರೂ. 1,50,657ಕ್ಕೆ ಮಾರಾಟಗೊಳ್ಳುತ್ತಿವೆ.

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಬ್ಯಾಟರಿ ಬ್ಯಾಟರಿ ಪ್ಯಾಕ್‌ನೊಂದಿಗೆ 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

450 ಪ್ಲಸ್ ಮಾದರಿಯು ಪ್ರತಿ ಚಾರ್ಜ್‌ಗೆ 70 ಕಿ.ಮೀ ಮೈಲೇಜ್ ಹೊಂದಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ 450ಎಕ್ಸ್ ಮಾದರಿಯು ಕೇವಲ 10 ನಿಮಿಷಗಳಲ್ಲಿ ಚಾರ್ಜ್ ಮಾಡಿದಲ್ಲಿ 10 ಕಿ.ಮೀ ಹಿಂದಿರುಗಿಸಿದ್ದಲ್ಲಿ 450 ಪ್ಲಸ್ ಮಾದರಿಯು 15 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ದುಬಾರಿ ಬೆಲೆ ನಡುವೆಯೂ ಗ್ರಾಹಕರಿಂದ ಉತ್ತಮ ಪ್ರಕ್ರಿಯೆ ಪಡೆದುಕೊಳ್ಳುತ್ತಿರುವ ಎಥರ್ ಎನರ್ಜಿ ಕಂಪನಿಯು ಮುಂಬರುವ ಕೆಲ ತಿಂಗಳಿನಲ್ಲಿ ಮತ್ತಷ್ಟು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಯೋಜನೆಗೆ ಪೂರಕವಾಗಿ ಕಂಪನಿಯು ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ನಿರ್ಧರಿಸಿದ್ದು, ಇದಕ್ಕಾಗಿ ಕಂಪನಿಯು ಎರಡನೇ ಉತ್ಪಾದನಾ ಘಟಕವನ್ನು ತೆರೆಯುತ್ತಿದೆ.

ಎಥರ್ ಕಂಪನಿಯು ಸದ್ಯ ತಮಿಳುನಾಡಿನ ಹೊಸೂರಿನಲ್ಲಿ ವಾರ್ಷಿಕವಾಗಿ 1.20 ಲಕ್ಷ ಸ್ಕೂಟರ್‌ಗಳ ಉತ್ಪಾದನೆ ಮಾಡಬಹುದಾದ ಸಾಮರ್ಥ್ಯದ ಇವಿ ಘಟಕವನ್ನು ಹೊಂದಿದ್ದು, ಇದೀಗ ಕಂಪನಿಯು ಎರಡನೇ ಘಟಕವನ್ನು ಸಹ ಹೊಸೂರಿನಲ್ಲಿಯೇ ತೆರೆಯಲು ನಿರ್ಧರಿಸಿದೆ.

ಎರಡನೇ ಘಟಕದ ನಿರ್ಮಾಣ ಕಾರ್ಯ ಈಗಾಗಲೇ ಆರಂಭಗೊಂಡಿದ್ದು, ಈ ವರ್ಷದ ಮಧ್ಯಂತರ ಕಾರ್ಯಾರಂಭ ನಡೆಸಲಿರುವ ಹೊಸ ಘಟಕವು ವಾರ್ಷಿಕವಾಗಿ 2.80 ಲಕ್ಷ ಯುನಿಟ್ ಉತ್ಪಾದನಾ ಸಾಮರ್ಥ್ಯ ಹೊಂದಿರಲಿದೆ. ಎಥರ್ ಕಂಪನಿಯು ಎರಡು ಘಟಕಗಳ ಮೂಲಕ ವಾರ್ಷಿಕವಾಗಿ 4 ಲಕ್ಷ ಯುನಿಟ್ ಇವಿ ಸ್ಕೂಟರ್ ಉತ್ಪಾದನಾ ಗುರಿಹೊಂದಿದ್ದು, ಹೊಸ ಯೋಜನೆಗಳಿಗಾಗಿ ಕಂಪನಿಯು ಮುಂದಿನ ಐದು ವರ್ಷಗಳಲ್ಲಿ ರೂ. 650 ಕೋಟಿ ಹೂಡಿಕೆ ಮಾಡಲು ನಿರ್ಧರಿಸಿದೆ.

ಹೊಸ ಯೋಜನೆಯೊಂದಿಗೆ ಕಂಪನಿಯು ಮುಂದಿನ ಮೂರು ವರ್ಷಗಳಲ್ಲಿ ವಾರ್ಷಿಕವಾಗಿ 1 ಮಿಲಿಯನ್ ಸ್ಕೂಟರ್ ಉತ್ಪಾದನೆ, 5 ಸಾವಿರ ಫಾಸ್ಟ್ ಚಾರ್ಜಿಂಗ್ ಮತ್ತು 600 ಮಾರಾಟ ಮಳಿಗೆಗಳನ್ನು ತೆರೆಯುವ ಗುರಿಹೊಂದಿದೆ.

ಎಥರ್ ಎನರ್ಜಿ ಈಗಾಗಲೇ ಬೆಂಗಳೂರಿನಲ್ಲಿ ಎರಡು ಶೋರೂಂಗಳನ್ನು ಮತ್ತು ಮೈಸೂರು, ಹುಬ್ಬಳ್ಳಿ, ಬೆಳಗಾವಿಯಲ್ಲಿ ತಲಾ ಒಂದು ಶೋರೂಂ ಹೊಂದುವ ಮೂಲಕ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಬೆಳಗಾವಿಯಲ್ಲಿನ ಹೊಸ ಶೋರೂಂನೊಂದಿಗೆ ಎಥರ್ ಕಂಪನಿಯು ಇದುವರೆಗೆ ದೇಶಾದ್ಯಂತ ಒಟ್ಟು 30 ಶೋರೂಂ ತೆರೆದಂತಾಗಿದೆ.

ಕಂಪನಿಯು ಮುಂದಿನ ಕೆಲವೇ ದಿನಗಳಲ್ಲಿ ಮಂಗಳೂರು, ದಾವಣಗೆರೆ ಸೇರಿದಂತೆ ಪ್ರಮುಖ ನಗರಗಳಲ್ಲಿ ಇವಿ ಸ್ಕೂಟರ್ ಶೋರೂಂ ತೆರೆಯುವ ಸಿದ್ದತೆಯಲ್ಲಿದ್ದು, ಗ್ರಾಹಕರಿಂದ ಉತ್ತಮ ಪ್ರಕ್ರಿಯೆ ಪಡೆದುಕೊಳ್ಳುತ್ತಿರುವ ಎಥರ್ ಎನರ್ಜಿ ಕಂಪನಿಯು ಮುಂಬರುವ ಕೆಲ ತಿಂಗಳಿನಲ್ಲಿ ಮತ್ತಷ್ಟು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.


Click it and Unblock the Notifications








