ಸೆಪ್ಟೆಂಬರ್ ತಿಂಗಳ ಇವಿ ಸ್ಕೂಟರ್ ಮಾರಾಟದಲ್ಲಿ ಮೂರಂಕಿ ಬೆಳವಣಿಗೆ ಸಾಧಿಸಿದ ಎಥರ್

ಎಥರ್ ಎನರ್ಜಿ ಕಂಪನಿಯು ಸೆಪ್ಟೆಂಬರ್ ಅವಧಿಯ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ವರದಿಯನ್ನು ಪ್ರಕಟಿಸಿದ್ದು, ಕಂಪನಿಯು ಹೊಸ ಇವಿ ಸ್ಕೂಟರ್ ಮಾದರಿಯೊಂದಿಗೆ ಕಳೆದು ತಿಂಗಳು ಶೇ. 247 ರಷ್ಟು ಬೆಳವಣಿಗೆ ಸಾಧಿಸಿದೆ.

ಸೆಪ್ಟೆಂಬರ್ ತಿಂಗಳ ಇವಿ ಸ್ಕೂಟರ್ ಮಾರಾಟದಲ್ಲಿ ಮೂರಂಕಿ ಬೆಳವಣಿಗೆ ಸಾಧಿಸಿದ ಎಥರ್

ಪ್ರೀಮಿಯಂ ಇವಿ ಸ್ಕೂಟರ್ ಮಾರಾಟದಲ್ಲಿ ನಿರಂತರವಾಗಿ ಹೊಸ ಬದಲಾವಣೆಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿರುವ ಎಥರ್ ಎನರ್ಜಿ ಕಂಪನಿಯು ಸೆಪ್ಟೆಂಬರ್ ಅವಧಿಯಲ್ಲಿ 7,435 ಯುನಿಟ್ ಮಾರಾಟ ಮಾಡಿದ್ದು, ಇದು ಒಂದು ತಿಂಗಳ ಅವಧಿಯಲ್ಲಿ ಎಥರ್ ಕಂಪನಿಯು ಅತಿಹೆಚ್ಚು ಮಾರಾಟ ಸಂಖ್ಯೆಯಾಗಿದೆ.

ಸೆಪ್ಟೆಂಬರ್ ತಿಂಗಳ ಇವಿ ಸ್ಕೂಟರ್ ಮಾರಾಟದಲ್ಲಿ ಮೂರಂಕಿ ಬೆಳವಣಿಗೆ ಸಾಧಿಸಿದ ಎಥರ್

ಎಥರ್ ಎನರ್ಜಿ ಕಂಪನಿಯು ಸದ್ಯ 450ಎಕ್ಸ್ ಮತ್ತು 450 ಪ್ಲಸ್ ನವೀಕೃತ ಮಾದರಿಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದು, 2022ರ ಇವಿ ಸ್ಕೂಟರ್ ಮಾದರಿಗಳೊಂದಿಗೆ ಎಥರ್ ಕಂಪನಿಯು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಸೆಪ್ಟೆಂಬರ್ ತಿಂಗಳ ಇವಿ ಸ್ಕೂಟರ್ ಮಾರಾಟದಲ್ಲಿ ಮೂರಂಕಿ ಬೆಳವಣಿಗೆ ಸಾಧಿಸಿದ ಎಥರ್

ದುಬಾರಿ ಬೆಲೆಯ ನಡುವೆಯೂ ಕಂಪನಿಯು ಕಳೆದ ಕೆಲ ತಿಂಗಳಿನಿಂದ ದಾಖಲೆ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ದಾಖಲೆ ಪ್ರಮಾಣದ ಬೇಡಿಕೆ ಪಡೆದುಕೊಂಡಿದೆ.

ಸೆಪ್ಟೆಂಬರ್ ತಿಂಗಳ ಇವಿ ಸ್ಕೂಟರ್ ಮಾರಾಟದಲ್ಲಿ ಮೂರಂಕಿ ಬೆಳವಣಿಗೆ ಸಾಧಿಸಿದ ಎಥರ್

ಅತ್ಯಧಿಕ ಮೈಲೇಜ್ ಹೊಂದಿರುವ ಹೊಸ 450ಎಕ್ಸ್ ಮತ್ತು 450 ಪ್ಲಸ್ ಮಾದರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡಿದ್ದು, ಅಗಸ್ಟ್ ತಿಂಗಳ ಇವಿ ಸ್ಕೂಟರ್ ಮಾರಾಟದಲ್ಲಿ ಟಾಪ್ 3 ಸ್ಥಾನದಲ್ಲಿ ಮುಂದುವರೆದಿದೆ.

ಸೆಪ್ಟೆಂಬರ್ ತಿಂಗಳ ಇವಿ ಸ್ಕೂಟರ್ ಮಾರಾಟದಲ್ಲಿ ಮೂರಂಕಿ ಬೆಳವಣಿಗೆ ಸಾಧಿಸಿದ ಎಥರ್

ಇದು ಕಳೆದ ವರ್ಷದ ಸೆಪ್ಟೆಂಬರ್ ಅವಧಿಯಲ್ಲಿನ ಇವಿ ಸ್ಕೂಟರ್ ಮಾರಾಟ ಪ್ರಮಾಣಕ್ಕಿಂತ ಇದೀಗ ಶೇ. 247 ರಷ್ಟು ಹೆಚ್ಚಳವಾಗಿದ್ದು, ಇವಿ ಸ್ಕೂಟರ್ ಆರಂಭ ನಂತರ ಎಥರ್ ಕಂಪನಿಯು ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಇವಿ ಸ್ಕೂಟರ್‌ಗಳನ್ನು ಮಾರಾಟ ಮಾಡಿದೆ.

ಸೆಪ್ಟೆಂಬರ್ ತಿಂಗಳ ಇವಿ ಸ್ಕೂಟರ್ ಮಾರಾಟದಲ್ಲಿ ಮೂರಂಕಿ ಬೆಳವಣಿಗೆ ಸಾಧಿಸಿದ ಎಥರ್

2022ರ 450ಎಕ್ಸ್ ಮತ್ತು 450 ಪ್ಲಸ್ ಇವಿ ಸ್ಕೂಟರ್ ಮಾದರಿಗಳನ್ನು ಮೂರನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಉನ್ನತೀಕರಿಸಿ ಬಿಡುಗಡೆ ಮಾಡಲಾಗಿದ್ದು,ನವೀಕೃತ ಬ್ಯಾಟರಿ ಪ್ಯಾಕ್ ಜೊತೆ ಹೆಚ್ಚುವರಿ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿವೆ.

ಸೆಪ್ಟೆಂಬರ್ ತಿಂಗಳ ಇವಿ ಸ್ಕೂಟರ್ ಮಾರಾಟದಲ್ಲಿ ಮೂರಂಕಿ ಬೆಳವಣಿಗೆ ಸಾಧಿಸಿದ ಎಥರ್

ಜೊತೆಗೆ ಹೊಸ ಮಾದರಿಗಳಲ್ಲಿ ಹಲವು ಸುಧಾರಿತ ತಾಂತ್ರಿಕ ಸೌಲಭ್ಯಗಳನ್ನು ಇದೀಗ ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದ್ದು, ಹೊಸ ಫೀಚರ್ಸ್‌ಗಳ ಹೊರತಾಗಿಯೂ ಸುಧಾರಿತ ತಂತ್ರಜ್ಞಾನ ಪ್ರೇರಿತ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಮಾದರಿಗಳಲ್ಲಿ ಕಂಪನಿಯು ಈ ಹಿಂದಿನ ಮಾದರಿಯಲ್ಲಿನ ಹಲವು ಫೀಚರ್ಸ್‌ಗಳನ್ನು ಮುಂದುವರಿಸಿದೆ.

ಸೆಪ್ಟೆಂಬರ್ ತಿಂಗಳ ಇವಿ ಸ್ಕೂಟರ್ ಮಾರಾಟದಲ್ಲಿ ಮೂರಂಕಿ ಬೆಳವಣಿಗೆ ಸಾಧಿಸಿದ ಎಥರ್

ಆದರೆ ವಿಸ್ತರಿತ ಬ್ಯಾಟರಿ ಪ್ಯಾಕ್ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದ್ದು, ನವೀಕೃತ 450ಎಕ್ಸ್ ಮತ್ತು 450 ಪ್ಲಸ್ ಇವಿ ಸ್ಕೂಟರ್‌‌ಗಳಲ್ಲಿ ಎಥರ್ ಕಂಪನಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ 3.7kWh ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದೆ.

ಸೆಪ್ಟೆಂಬರ್ ತಿಂಗಳ ಇವಿ ಸ್ಕೂಟರ್ ಮಾರಾಟದಲ್ಲಿ ಮೂರಂಕಿ ಬೆಳವಣಿಗೆ ಸಾಧಿಸಿದ ಎಥರ್

6.2kW ಮೋಟಾರ್ ಮೂಲಕ ಹೊಸ ಬ್ಯಾಟರಿ ಪ್ಯಾಕ್ ಮೂಲಕ ಇದೀಗ ಹೊಸ ಸ್ಕೂಟರ್‌ಗಳು ARAI ಸಂಸ್ಥೆಯು ಪ್ರಮಾಣೀಕರಿಸಿದಂತೆ ಪ್ರತಿ ಚಾರ್ಜ್‌ಗೆ ಗರಿಷ್ಠ 146 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತವೆ.

ಸೆಪ್ಟೆಂಬರ್ ತಿಂಗಳ ಇವಿ ಸ್ಕೂಟರ್ ಮಾರಾಟದಲ್ಲಿ ಮೂರಂಕಿ ಬೆಳವಣಿಗೆ ಸಾಧಿಸಿದ ಎಥರ್

ನಮ್ಮ ಬೆಂಗಳೂರಿನಲ್ಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ಮಾದರಿಯಾದ 450 ಪ್ಲಸ್ ಮಾದರಿಯು ರೂ. 1,34,147 ಬೆಲೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಯಾದ 450ಎಕ್ಸ್ ಆವೃತ್ತಿಯು ಎಕ್ಸ್‌ಶೋರೂಂ ಪ್ರಕಾರ ರೂ. 1,55,657 ಬೆಲೆ ಹೊಂದಿದೆ.

ಸೆಪ್ಟೆಂಬರ್ ತಿಂಗಳ ಇವಿ ಸ್ಕೂಟರ್ ಮಾರಾಟದಲ್ಲಿ ಮೂರಂಕಿ ಬೆಳವಣಿಗೆ ಸಾಧಿಸಿದ ಎಥರ್

ಸುಧಾರಿತ ಬ್ಯಾಟರಿ ಜೋಡಣೆ ನಂತರ ಹೊಸ ಸ್ಕೂಟರ್‌ಗಳ ತೂಕದಲ್ಲಿ ಈ ಮೊದಲಿಗಿಂತಲೂ ಇದೀಗ 4 ಕೆ.ಜಿಯಷ್ಟು ಹೆಚ್ಚಳವಾಗಿದ್ದು, ಪ್ರಮುಖ ನಾಲ್ಕು ರೈಡ್ ಮೋಡ್‌ಗಳೊಂದಿಗೆ ಇಕೋ ಮೋಡ್‌ನಲ್ಲಿ ಕನಿಷ್ಠ 105 ಕಿ.ಮೀ ರಿಯಲ್ ವರ್ಲ್ಡ್ ಮೈಲೇಜ್ ಪಡೆದುಕೊಳ್ಳಬಹುದಾಗಿದೆ.

ಸೆಪ್ಟೆಂಬರ್ ತಿಂಗಳ ಇವಿ ಸ್ಕೂಟರ್ ಮಾರಾಟದಲ್ಲಿ ಮೂರಂಕಿ ಬೆಳವಣಿಗೆ ಸಾಧಿಸಿದ ಎಥರ್

ಎಥರ್ ಕಂಪನಿಯು ಹೊಸ ಸ್ಕೂಟರ್‌ಗಳಲ್ಲಿ ಈ ಬಾರಿ ಎಂಆರ್‌ಎಫ್ ಜೊತೆಗೆ ನಿರ್ಮಾಣ ಮಾಡಲಾದ ಹೊಸ ತಂತ್ರಜ್ಞಾನ ಪ್ರೇರಿತ ಟೈರ್ ಜೋಡಣೆ ಮಾಡಿದ್ದು, ಹೊಸ ಎಂಆರ್‌ಎಫ್ ಟೈರ್‌ನಿಂದ ಹೊಸ ಸ್ಕೂಟರ್‌ಗಳ ಶೇ.22ರಷ್ಟು ಆಕ್ಸಿಲೇಷನ್, ಕಾರ್ನರ್ ರೈಡ್ ಮತ್ತು ಬ್ರೇಕಿಂಗ್ ಫರ್ಪಾಮೆನ್ಸ್ ಸಾಕಷ್ಟು ಸುಧಾರಣೆಗೊಂಡಿದೆ.

ಸೆಪ್ಟೆಂಬರ್ ತಿಂಗಳ ಇವಿ ಸ್ಕೂಟರ್ ಮಾರಾಟದಲ್ಲಿ ಮೂರಂಕಿ ಬೆಳವಣಿಗೆ ಸಾಧಿಸಿದ ಎಥರ್

ಜೊತೆಗೆ ಹೊಸ ಸ್ಕೂಟರ್ ಮಾದರಿಗಳಲ್ಲಿ ಕಂಪನಿಯು ಏರ್ ಪ್ರೆಷರ್ ಮಾಹಿತಿಯನ್ನು ತಿಳಿಯಲು ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ(ಟಿಪಿಎಂಎಸ್) ನೊಂದಿಗೆ ಕ್ಯಾಸ್ಟ್ ಅಲ್ಯೂನಿಯಂನಿಂದ ನಿರ್ಮಿಸಲಾದ ವಿಸ್ತರಿತ ಸೈಡ್ ಸ್ಟೆಪ್ ಮತ್ತು ಹೊಸ ವಿನ್ಯಾಸದ ರಿಯರ್ ವ್ಯೂ ಮಿರರ್ ಜೋಡಣೆ ಮಾಡಿದೆ.

ಸೆಪ್ಟೆಂಬರ್ ತಿಂಗಳ ಇವಿ ಸ್ಕೂಟರ್ ಮಾರಾಟದಲ್ಲಿ ಮೂರಂಕಿ ಬೆಳವಣಿಗೆ ಸಾಧಿಸಿದ ಎಥರ್

ಹೊಸ ಇವಿ ಸ್ಕೂಟರ್ ಮಾದರಿಗಳಲ್ಲಿನ ಕನೆಕ್ಟೆಡ್ ಸೌಲಭ್ಯಗಳನ್ನು ಮತ್ತಷ್ಟು ಸುಧಾರಣೆಗೊಳಿಸಲು ಎಥರ್ ಕಂಪನಿಯು ಹೆಚ್ಚುವರಿ ಸ್ಟೋರೆಜ್ ನೀಡಲು 2 ಜಿಬಿ ರ‍್ಯಾಮ್ ಜೋಡಣೆ ಮಾಡಿದ್ದು, ಮುಂಬರುವ ದಿನಗಳಲ್ಲಿ ಕಂಪನಿಯು ಹೊಸ ಮಾದರಿಗಳಲ್ಲಿನ ಹಲವಾರು ಹೊಸ ಫೀಚರ್ಸ್‌ಗಳನ್ನು ಓವರ್-ದ-ಏರ್ ಅಪ್‌ಡೇಟ್ ಮೂಲಕ ಒಂದೊಂದಾಗಿ ಅನ್‌ಲಾಕ್ ಮಾಡಲಿದೆ.

More from DriveSpark

Article Published On: Saturday, October 1, 2022, 20:43 [IST]
English summary
Ather energy highest ever monthly sales in september 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+