Just In
- 1 hr ago
ಭಾರತದಲ್ಲಿ ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳ ಬಿಡುಗಡೆಗೆ ಸಿದ್ದವಾದ ಎಲೆಕ್ಟ್ರಾನ್ ಇವಿ
- 15 hrs ago
ಆಕರ್ಷಕ ವಿನ್ಯಾಸದ 2022ರ ಹ್ಯುಂಡೈ ಟ್ಯೂಸಾನ್ ಎಸ್ಯುವಿಯ ವಿಶೇಷತೆಗಳು
- 16 hrs ago
ಪಾಸ್ಫೋರ್ಟ್ ಪ್ರಯೋಜನಗಳೇನು? ಏಕೆ ವಿವಿಧ ಬಣ್ಣಗಳಲ್ಲಿ ಲಭ್ಯವಿರುತ್ತವೆ ನೋಡಿ..
- 16 hrs ago
ಬ್ರೇಕ್ ಫೇಲ್ ಆದಾಗ ಕೇವಲ 8 ಸೆಕೆಂಡುಗಳಲ್ಲಿ ಕಾರು ನಿಲ್ಲಿಸುವುದು ಹೇಗೆ? ಇಲ್ಲಿದೆ ಉಪಯುಕ್ತ ಸಲಹೆ
Don't Miss!
- Movies
'ದಿ ಡರ್ಟಿ ಪಿಕ್ಟರ್' ಸೀಕ್ವೆಲ್ ಫಿಕ್ಸ್: ನಾಯಕಿ ಯಾರು?
- News
UIDAI ಹೊಸ ಸುತ್ತೋಲೆ: ಸರ್ಕಾರಿ ಸವಲತ್ತು, ಸಬ್ಸಿಡಿ ಪಡೆಯಲು ಆಧಾರ್ ಕಡ್ಡಾಯ
- Travel
ಕರ್ನಾಟಕದ ಭದ್ರಾವತಿಯಲ್ಲಿರುವ ಲಕ್ಷ್ಮೀ ನರಸಿಂಹ ದೇವಾಲಯವು ಒಂದು ಪ್ರಾಚೀನ ಅದ್ಬುತಕ್ಕೆ ಸಾಕ್ಷಿ!
- Education
UGC Scholarship : ಯುಜಿಸಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
- Lifestyle
ಶನಿದೋಷ ನಿವಾರಣೆ ಹಾಗೂ ಸಂಪತ್ತು ವೃದ್ಧಿಗೆ ಕೃಷ್ಣ ಜನ್ಮಾಷ್ಟಮಿಗೆ ಮಾಡಿ ಈ ವಿಶೇಷ ಪರಿಹಾರ
- Technology
ಧಮಾಕಾ ಕೊಡುಗೆ!..ಭರ್ಜರಿ ಡಿಸ್ಕೌಂಟ್ನಲ್ಲಿ ಹೊಸ ಸ್ಮಾರ್ಟ್ಟಿವಿ ನಿಮ್ಮದಾಗಿಸಿಕೊಳ್ಳಿ!
- Finance
ಆಗಸ್ಟ್ 17: ಭಾರತದ ಮೆಟ್ರೋ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು
- Sports
ಮ್ಯಾಂಚೆಸ್ಟರ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಖರೀದಿಸುತ್ತೇನೆ ಎಂದ ಎಲಾನ್ ಮಸ್ಕ್!
35ನೇ ಮಾರಾಟ ಮಳಿಗೆಯನ್ನು ಆರಂಭಿಸಿದ ಎಥರ್ ಎನರ್ಜಿ
ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಎಥರ್ ಎನರ್ಜಿ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಮಾರಾಟ ಮಳಿಗೆಗಳನ್ನು ವಿಸ್ತರಿಸುತ್ತಿದ್ದು, ಕಂಪನಿಯು ಇತ್ತೀಚೆಗೆ ತನ್ನ 35ನೇ ಮಾರಾಟ ಮಳಿಗೆಗೆ ಚಾಲನೆ ನೀಡಿತು.

ಎಥರ್ ಎನರ್ಜಿ ಕಂಪನಿಯು ವಿನೂತನ ಸೌಲಭ್ಯಗಳನ್ನು ಒಳಗೊಂಡಿರುವ ಹೊಸ ಶೋರೂಂಗಳ ಮೂಲಕ ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ತನ್ನ ಹೊಸ ಮಾರಾಟ ಮಳಿಗೆಯನ್ನು ಕಂಪನಿಯು ಮಹಾರಾಷ್ಟ್ರದ ಥಾಣೆಯಲ್ಲಿ ಆರಂಭಿಸಿತು. ಹೊಸ ಮಾರಾಟ ಮಳೆಗೆಯೊಂದಿಗೆ ದೇಶಾದ್ಯಂತ ಒಟ್ಟು 35 ಮಳಿಗೆಗಳನ್ನು ಹೊಂದಿದಂತಾಗಿದ್ದು, ಹೊಸ ಮಾರಾಟ ಮಳಿಗೆಗಳ ಮೂಲಕ ಕಂಪನಿಯು ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಹೊಸ ಶೋರೂಂಗಳನ್ನು ಕಂಪನಯು ವಿಶೇಷವಾಗಿ 'ಎಕ್ಸ್ಪಿರೆನ್ಸ್ ಸೆಂಟರ್' ಹೆಸರಿನಲ್ಲಿ ಕರೆಯುತ್ತಿದ್ದು, ಎಕ್ಸ್ಪಿರೆನ್ಸ್ ಸೆಂಟರ್‌ಗಳಲ್ಲಿ ಕೇವಲ ವಾಹನ ಖರೀದಿ ಪ್ರಕ್ರಿಯೆ ಮಾತ್ರವಲ್ಲದೆ ಗ್ರಾಹಕರಿಗೆ ಕಂಪನಿಯು ತನ್ನ ಸ್ಕೂಟರ್ ಉತ್ಪನ್ನಗಳ ನಿರ್ಮಾಣ, ಗುಣಮಟ್ಟ ಮತ್ತು ತಂತ್ರಜ್ಞಾನದ ಕುರಿತಾಗಿ ನುರಿತ ಉದ್ಯೋಗಿಗಳಿಂದ ತಿಳುವಳಿಕೆ ನೀಡುತ್ತದೆ.

ಹೀಗಾಗಿ ಇದನ್ನು ಅನುಭವ ಕೇಂದ್ರವೆಂದು ಕರೆಯಲಾಗಿದ್ದು, ಕಂಪನಿಯು ಶೀಘ್ರದಲ್ಲಿ ಮತ್ತಷ್ಟು ಹೊಸ ಮಾರಾಟ ಮಳಿಗೆಗಳಿಗೆ ಚಾಲನೆ ನೀಡಲು ಸಿದ್ದವಾಗಿದೆ. ಕರ್ನಾಟಕದಲ್ಲೂ ಈಗಾಗಲೇ ಆರು ಮಾರಾಟ ಮಳಿಗೆಗಳನ್ನು ಹೊಂದಿದ್ದು, ಶೀಘ್ರದಲ್ಲೇ ಮತ್ತೆರಡು ಹೊಸ ಶೋರೂಂಗಳು ಮಾರಾಟಕ್ಕೆ ಸಿದ್ದಗೊಳ್ಳುತ್ತಿವೆ.

ಬೆಂಗಳೂರಿನಲ್ಲಿ ಒಟ್ಟು ಮೂರು ಮಾರಾಟ ಮಳಿಗೆಗಳನ್ನು ಹೊಂದಿರುವ ಎಥರ್ ಕಂಪನಿಯು ಮೈಸೂರು, ಹುಬ್ಬಳ್ಳಿ ಮತ್ತು ಬೆಳಗಾವಿಯಲ್ಲಿ ತಲಾ ಒಂದೊಂದು ಮಾರಾಟ ಮಳಿಗೆಯಿದ್ದು, ಈ ವರ್ಷಾಂತ್ಯಕ್ಕೆ ಕಂಪನಿಯು ದೇಶಾದ್ಯಂತ ಸುಮಾರು ನೂರು ಮಾರಾಟ ಮಳಿಗೆಗಳನ್ನು ತೆರೆಯಲು ನಿರ್ಧರಿಸಿದೆ.

ಹೆಚ್ಚುತ್ತಿರುವ ಇಂಧನ ಬೆಲೆ ಪರಿಣಾಮ ಎಥರ್ ಕಂಪನಿಗೆ ದಿನದಿಂದ ದಿನಕ್ಕೆ ಗ್ರಾಹಕರಿಂದ ಉತ್ತಮ ಪ್ರಕ್ರಿಯೆ ವ್ಯಕ್ತವಾಗುತ್ತಿದ್ದು, ಕಂಪನಿಯು ಹೊಸ ಮಾರಾಟ ಮಳಿಗೆ ವಿಸ್ತರಣೆಯೊಂದಿಗೆ ಮುಂಬರುವ ಕೆಲ ತಿಂಗಳಿನಲ್ಲಿ ಮತ್ತೆರಡು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಎಥರ್ ಕಂಪನಿಯು ಸದ್ಯ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟಗೊಳಿಸುತ್ತಿದ್ದು, ಸಬ್ಸಡಿ ಯೋಜನೆಯೊಂದಿಗೆ 450 ಪ್ಲಸ್ ಬೆಲೆಯು ಬೆಂಗಳೂರು ಎಕ್ಸ್‌ಶೋರೂಂ ಪ್ರಕಾರ ರೂ. 1,31,647 ಮತ್ತು 450ಎಕ್ಸ್ ಬೆಲೆಯನ್ನು ರೂ. 1,50,657ಕ್ಕೆ ಬೆಲೆ ಹೊಂದಿವೆ.

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಬ್ಯಾಟರಿ ಬ್ಯಾಟರಿ ಪ್ಯಾಕ್‌ನೊಂದಿಗೆ 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

450 ಪ್ಲಸ್ ಮಾದರಿಯು ಪ್ರತಿ ಚಾರ್ಜ್‌ಗೆ 70 ಕಿ.ಮೀ ಮೈಲೇಜ್ ಹೊಂದಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ 450ಎಕ್ಸ್ ಮಾದರಿಯು ಕೇವಲ 10 ನಿಮಿಷಗಳಲ್ಲಿ ಚಾರ್ಜ್ ಮಾಡಿದಲ್ಲಿ 10 ಕಿ.ಮೀ ಹಿಂದಿರುಗಿಸಿದ್ದಲ್ಲಿ 450 ಪ್ಲಸ್ ಮಾದರಿಯು 15 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಎಥರ್ ಕಂಪನಿಯು ಇತರೆ ಇವಿ ಮಾದರಿಗಿಂತಲೂ ತುಸು ದುಬಾರಿಯಾಗಿದ್ದರೂ ಅತ್ಯುತ್ತಮ ಫೀಚರ್ಸ್ ಮತ್ತು ಹೆಚ್ಚಿನ ಮಟ್ಟದ ಸುರಕ್ಷಾ ಫೀಚರ್ಸ್‌ಗಳೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಎಥರ್ ಕಂಪನಿಯು ಕಳೆದ ಕೆಲ ತಿಂಗಳಿನಲ್ಲಿ ವಾರ್ಷಿಕವಾಗಿ 12 ಪಟ್ಟು ಹೆಚ್ಚು ಬೆಳವಣಿಗೆ ಸಾಧಿಸಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಉತ್ಪನ್ನಗಳೊಂದಿಗೆ ಇನ್ನು ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಮೂಲ ಮಾದರಿಗಳಲ್ಲಿನ ಗುಣಮಟ್ಟವನ್ನು ಆಧರಿಸಿ ಕಂಪನಿಯು ಮುಂಬರುವ ದಿನಗಳಲ್ಲಿ ಒಂದು ಬಜೆಟ್ ಬೆಲೆಯ ಸ್ಕೂಟರ್ ಮಾದರಿಯನ್ನು ಮತ್ತೊಂದು 450ಎಕ್ಸ್ ಮಾದರಿಗಿಂತಲೂ ಹೆಚ್ಚಿನ ಶ್ರೇಣಿ ಮತ್ತು ತಂತ್ರಜ್ಞಾನ ಸೌಲಭ್ಯ ಹೊಂದಿರುವ ಮ್ಯಾಕ್ಸಿ ಸ್ಕೂಟರ್ ಪರಿಚಯಿಸಲಿದೆ.

ಬಜೆಟ್ ಬೆಲೆಯ ಇವಿ ಸ್ಕೂಟರ್ ಮಾದರಿಯು ಪ್ರತಿ ಚಾರ್ಜ್‌ಗೆ ಕನಿಷ್ಠ 90 ಕಿ.ಮೀ ನಿಂದ 100 ಕಿ.ಮೀ ಮೈಲೇಜ್ ರೇಂಜ್‌ನೊಂದಿಗೆ ಬಿಡುಗಡೆಯಾಗಲಿದ್ದು, ಇದರಲ್ಲಿ ಕೆಲವು ಪ್ರೀಮಿಯಂ ಫೀಚರ್ಸ್ ತೆಗೆದುಹಾಕಲಿರುವ ಕಂಪನಿಯು ರೂ.1 ಲಕ್ಷದೊಳಗೆ ಬಿಡುಗಡೆ ಮಾಡಬಹುದಾಗಿದೆ.

ಮತ್ತೊಂದು ಹೊಸ ಮಾದರಿಯಾದ ಮ್ಯಾಕ್ಸಿ ಇವಿ ಸ್ಕೂಟರ್ ಮಾದರಿಯು 450ಎಕ್ಸ್ ಮಾದರಿಗಿಂತಲೂ ಹೆಚ್ಚು ಫೀಚರ್ಸ್ ಮತ್ತು ಬ್ಯಾಟರಿ ಮಾದರಿಯೊಂದಿಗೆ ಬಿಡುಗಡೆಯಾಗಲಿದ್ದು, ಇದು ಪ್ರತಿ ಚಾರ್ಜ್‌ಗೆ 140 ಕಿ.ಮೀ ಗಿಂತಲೂ ಹೆಚ್ಚು ಮೈಲೇಜ್‌ನೊಂದಿಗೆ 450ಎಕ್ಸ್ ಮಾದರಿಗಿಂತಲೂ ತುಸು ದುಬಾರಿಯಾಗಿರಲಿದೆ.