ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಎಥರ್ ಎನರ್ಜಿ

ಪ್ರೀಮಿಯಂ ಇವಿ ಸ್ಕೂಟರ್ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಎಥರ್ ಎನರ್ಜಿ ಕಂಪನಿಯು ಮೇ ತಿಂಗಳ ಮಾರಾಟ ವರದಿ ಪ್ರಕಟಿಸಿದ್ದು, ಕಂಪನಿಯು ತಿಂಗಳ ಮಾರಾಟದಲ್ಲಿ ಶೇ. 0.21 ರಷ್ಟು ಬೆಳವಣಿಗೆಯೊಂದಿಗೆ 3,787 ಯುನಿಟ್ ಮಾರಾಟ ಮಾಡಿದೆ.

ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಎಥರ್ ಎನರ್ಜಿ

ಎಥರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, 450ಎಕ್ಸ್ ಮಾದರಿಯು 450 ಪ್ಲಸ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಅಧಿಕ ಮೈಲೇಜ್‌ನೊಂದಿಗೆ ಹೆಚ್ಚಿನ ಬೇಡಿಕೆ ಪಡೆದುಕೊಂಡಿದೆ. ಎಥರ್ ಕಂಪನಿಯು ಇತರೆ ಇವಿ ಮಾದರಿಗಿಂತಲೂ ತುಸು ದುಬಾರಿಯಾಗಿದ್ದರೂ ಅತ್ಯುತ್ತಮ ಫೀಚರ್ಸ್ ಮತ್ತು ಹೆಚ್ಚಿನ ಮಟ್ಟದ ಸುರಕ್ಷಾ ಫೀಚರ್ಸ್‌ಗಳೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಎಥರ್ ಎನರ್ಜಿ

ಗ್ರಾಹಕರ ಬೇಡಿಕೆಯೆಂತೆ ಸ್ಟ್ಯಾಂಡರ್ಡ್ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಮಾರಾಟದಿಂದ ಸ್ಥಗಿತಗೊಳಿಸಿರುವ ಎಥರ್ ಕಂಪನಿಯು 450 ಪ್ಲಸ್ ಮತ್ತು 450ಎಕ್ಸ್ ಮಾದರಿಯ ಮೇಲೆ ಹೆಚ್ಚು ಗಮನಹರಿಸಿದ್ದು, 450 ಪ್ಲಸ್ ಬೆಲೆಯು ಬೆಂಗಳೂರು ಎಕ್ಸ್‌ಶೋರೂಂ ಪ್ರಕಾರ ರೂ. 1,31,647 ಮತ್ತು 450ಎಕ್ಸ್ ಬೆಲೆಯನ್ನು ರೂ. 1,50,657ಕ್ಕೆ ಮಾರಾಟಗೊಳ್ಳುತ್ತಿವೆ.

ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಎಥರ್ ಎನರ್ಜಿ

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಬ್ಯಾಟರಿ ಬ್ಯಾಟರಿ ಪ್ಯಾಕ್‌ನೊಂದಿಗೆ 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಎಥರ್ ಎನರ್ಜಿ

450 ಪ್ಲಸ್ ಮಾದರಿಯು ಪ್ರತಿ ಚಾರ್ಜ್‌ಗೆ 70 ಕಿ.ಮೀ ಮೈಲೇಜ್ ಹೊಂದಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ 450ಎಕ್ಸ್ ಮಾದರಿಯು ಕೇವಲ 10 ನಿಮಿಷಗಳಲ್ಲಿ ಚಾರ್ಜ್ ಮಾಡಿದಲ್ಲಿ 10 ಕಿ.ಮೀ ಹಿಂದಿರುಗಿಸಿದ್ದಲ್ಲಿ 450 ಪ್ಲಸ್ ಮಾದರಿಯು 15 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಎಥರ್ ಎನರ್ಜಿ

ಎಥರ್ ಕಂಪನಿಯು ಕಳೆದ ಕೆಲ ತಿಂಗಳಿನಲ್ಲಿ ವಾರ್ಷಿಕವಾಗಿ 12 ಪಟ್ಟು ಹೆಚ್ಚು ಬೆಳವಣಿಗೆ ಸಾಧಿಸಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಉತ್ಪನ್ನಗಳೊಂದಿಗೆ ಇನ್ನು ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಎಥರ್ ಎನರ್ಜಿ

ಮುಂಬರುವ ಕೆಲ ತಿಂಗಳಿನಲ್ಲಿ ಮತ್ತಷ್ಟು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿರುವ ಎಥರ್ ಎನರ್ಜಿ ಕಂಪನಿಯು ಹೊಸ ಯೋಜನೆಗೆ ಪೂರಕವಾಗಿ ಕಂಪನಿಯು ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ಎರಡನೇ ಉತ್ಪಾದನಾ ಘಟಕವನ್ನು ತೆರೆಯುತ್ತಿದೆ.

ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಎಥರ್ ಎನರ್ಜಿ

ಎಥರ್ ಕಂಪನಿಯು ಸದ್ಯ ತಮಿಳುನಾಡಿನ ಹೊಸೂರಿನಲ್ಲಿ ವಾರ್ಷಿಕವಾಗಿ 1.20 ಲಕ್ಷ ಸ್ಕೂಟರ್‌ಗಳ ಉತ್ಪಾದನೆ ಮಾಡಬಹುದಾದ ಸಾಮರ್ಥ್ಯದ ಇವಿ ಘಟಕವನ್ನು ಹೊಂದಿದ್ದು, ಇದೀಗ ಕಂಪನಿಯು ಎರಡನೇ ಘಟಕವನ್ನು ಸಹ ಹೊಸೂರಿನಲ್ಲಿಯೇ ತೆರೆಯಲು ನಿರ್ಧರಿಸಿದೆ.

ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಎಥರ್ ಎನರ್ಜಿ

ಎರಡನೇ ಘಟಕದ ನಿರ್ಮಾಣ ಕಾರ್ಯ ಈಗಾಗಲೇ ಆರಂಭಗೊಂಡಿದ್ದು, ಈ ವರ್ಷಾಂತ್ಯಕ್ಕೆ ಕಾರ್ಯಾರಂಭ ನಡೆಸಲಿರುವ ಹೊಸ ಘಟಕವು ವಾರ್ಷಿಕವಾಗಿ 2.80 ಲಕ್ಷ ಯುನಿಟ್ ಉತ್ಪಾದನಾ ಸಾಮರ್ಥ್ಯ ಹೊಂದಿರಲಿದೆ. ಎಥರ್ ಕಂಪನಿಯು ಎರಡು ಘಟಕಗಳ ಮೂಲಕ ವಾರ್ಷಿಕವಾಗಿ 4 ಲಕ್ಷ ಯುನಿಟ್ ಇವಿ ಸ್ಕೂಟರ್ ಉತ್ಪಾದನಾ ಗುರಿಹೊಂದಿದ್ದು, ಹೊಸ ಯೋಜನೆಗಳಿಗಾಗಿ ಕಂಪನಿಯು ಮುಂದಿನ ಐದು ವರ್ಷಗಳಲ್ಲಿ ರೂ. 650 ಕೋಟಿ ಹೂಡಿಕೆ ಮಾಡಲು ನಿರ್ಧರಿಸಿದೆ.

ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಎಥರ್ ಎನರ್ಜಿ

ಹೊಸ ಯೋಜನೆಯೊಂದಿಗೆ ಕಂಪನಿಯು ಮುಂದಿನ ಮೂರು ವರ್ಷಗಳಲ್ಲಿ ವಾರ್ಷಿಕವಾಗಿ 1 ಮಿಲಿಯನ್ ಸ್ಕೂಟರ್ ಉತ್ಪಾದನೆ, 5 ಸಾವಿರ ಫಾಸ್ಟ್ ಚಾರ್ಜಿಂಗ್ ಮತ್ತು 600 ಮಾರಾಟ ಮಳಿಗೆಗಳನ್ನು ತೆರೆಯುವ ಗುರಿಹೊಂದಿದೆ.

ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಎಥರ್ ಎನರ್ಜಿ

ಎಥರ್ ಎನರ್ಜಿ ಈಗಾಗಲೇ ಬೆಂಗಳೂರಿನಲ್ಲಿ ಎರಡು ಶೋರೂಂಗಳನ್ನು ಮತ್ತು ಮೈಸೂರು, ಹುಬ್ಬಳ್ಳಿ, ಬೆಳಗಾವಿಯಲ್ಲಿ ತಲಾ ಒಂದು ಶೋರೂಂ ಹೊಂದುವ ಮೂಲಕ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಮುಂಬರುವ ಕೆಲ ತಿಂಗಳಿನಲ್ಲಿ ಮತ್ತಷ್ಟು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಎಥರ್ ಎನರ್ಜಿ

ಮೂಲ ಮಾದರಿಗಳಲ್ಲಿನ ಗುಣಮಟ್ಟವನ್ನು ಆಧರಿಸಿ ಕಂಪನಿಯು ಮುಂಬರುವ ದಿನಗಳಲ್ಲಿ ಒಂದು ಬಜೆಟ್ ಬೆಲೆಯ ಸ್ಕೂಟರ್ ಮಾದರಿಯನ್ನು ಮತ್ತೊಂದು 450ಎಕ್ಸ್ ಮಾದರಿಗಿಂತಲೂ ಹೆಚ್ಚಿನ ಶ್ರೇಣಿ ಮತ್ತು ತಂತ್ರಜ್ಞಾನ ಸೌಲಭ್ಯ ಹೊಂದಿರುವ ಮ್ಯಾಕ್ಸಿ ಸ್ಕೂಟರ್ ಪರಿಚಯಿಸಲಿದೆ.

ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಎಥರ್ ಎನರ್ಜಿ

ಬಜೆಟ್ ಬೆಲೆಯ ಇವಿ ಸ್ಕೂಟರ್ ಮಾದರಿಯು ಪ್ರತಿ ಚಾರ್ಜ್‌ಗೆ ಕನಿಷ್ಠ 90 ಕಿ.ಮೀ ನಿಂದ 100 ಕಿ.ಮೀ ಮೈಲೇಜ್ ರೇಂಜ್‌ನೊಂದಿಗೆ ಬಿಡುಗಡೆಯಾಗಲಿದ್ದು, ಇದರಲ್ಲಿ ಕೆಲವು ಪ್ರೀಮಿಯಂ ಫೀಚರ್ಸ್ ತೆಗೆದುಹಾಕಲಿರುವ ಕಂಪನಿಯು ರೂ.1 ಲಕ್ಷದೊಳಗೆ ಬಿಡುಗಡೆ ಮಾಡಬಹುದಾಗಿದೆ.

ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಎಥರ್ ಎನರ್ಜಿ

ಮತ್ತೊಂದು ಹೊಸ ಮಾದರಿಯಾದ ಮ್ಯಾಕ್ಸಿ ಇವಿ ಸ್ಕೂಟರ್ ಮಾದರಿಯು 450ಎಕ್ಸ್ ಮಾದರಿಗಿಂತಲೂ ಹೆಚ್ಚು ಫೀಚರ್ಸ್ ಮತ್ತು ಬ್ಯಾಟರಿ ಮಾದರಿಯೊಂದಿಗೆ ಬಿಡುಗಡೆಯಾಗಲಿದ್ದು, ಇದು ಪ್ರತಿ ಚಾರ್ಜ್‌ಗೆ 140 ಕಿ.ಮೀ ಗಿಂತಲೂ ಹೆಚ್ಚು ಮೈಲೇಜ್‌ನೊಂದಿಗೆ 450ಎಕ್ಸ್ ಮಾದರಿಗಿಂತಲೂ ತುಸು ದುಬಾರಿಯಾಗಿರಲಿದೆ.

More from DriveSpark

Article Published On: Thursday, June 2, 2022, 12:07 [IST]
English summary
Ather energy records highest ever on sales in may
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+