ವಾರ್ಷಿಕವಾಗಿ 1 ಮಿಲಿಯನ್ ಇವಿ ಸ್ಕೂಟರ್ ಉತ್ಪಾದನಾ ಯೋಜನೆ ಸಿದ್ದಪಡಿಸಿದ ಎಥರ್ ಎನರ್ಜಿ

ಪ್ರೀಮಿಯಂ ಇವಿ ಸ್ಕೂಟರ್ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಎಥರ್ ಎನರ್ಜಿ ಕಂಪನಿಯು ಮಾರುಕಟ್ಟೆಯಲ್ಲಿನ ಬೇಡಿಕೆ ಪೂರೈಕೆಗಾಗಿ ಹೊಸ ಯೋಜನೆಗಳನ್ನು ರೂಪಿಸುತ್ತಿದ್ದು, ಕಂಪನಿಯು ಭವಿಷ್ಯ ಯೋಜನೆಗಳಿಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾಗುತ್ತಿದೆ.

ವಾರ್ಷಿಕವಾಗಿ 1 ಮಿಲಿಯನ್ ಇವಿ ಸ್ಕೂಟರ್ ಉತ್ಪಾದನಾ ಯೋಜನೆ ಸಿದ್ದಪಡಿಸಿದ ಎಥರ್ ಎನರ್ಜಿ

ಹೊಸ ಯೋಜನೆಗೆ ಪೂರಕವಾಗಿ ಕಂಪನಿಯು ಉತ್ಪಾದನಾ ಸಾಮರ್ಥ್ಯವನ್ನು ಸಹ ಹೆಚ್ಚಿಸಲು ನಿರ್ಧರಿಸಿದ್ದು, ಇದಕ್ಕಾಗಿ ಕಂಪನಿಯು ಎರಡನೇ ಉತ್ಪಾದನಾ ಘಟಕ ತೆರೆಯಲು ಸಿದ್ದವಾಗಿದೆ. ಎಥರ್ ಕಂಪನಿಯು ಸದ್ಯ ತಮಿಳುನಾಡಿನ ಹೊಸೂರಿನಲ್ಲಿ ವಾರ್ಷಿಕವಾಗಿ 1.20 ಲಕ್ಷ ಸ್ಕೂಟರ್‌ಗಳ ಉತ್ಪಾದನೆ ಮಾಡಬಹುದಾದ ಸಾಮರ್ಥ್ಯದ ಇವಿ ಘಟಕವನ್ನು ಹೊಂದಿದ್ದು, ಇದೀಗ ಕಂಪನಿಯು ಎರಡನೇ ಘಟಕವನ್ನು ಸಹ ಹೊಸೂರಿನಲ್ಲಿಯೇ ತೆರೆಯಲು ನಿರ್ಧರಿಸಿದೆ.

ವಾರ್ಷಿಕವಾಗಿ 1 ಮಿಲಿಯನ್ ಇವಿ ಸ್ಕೂಟರ್ ಉತ್ಪಾದನಾ ಯೋಜನೆ ಸಿದ್ದಪಡಿಸಿದ ಎಥರ್ ಎನರ್ಜಿ

ಎರಡನೇ ಘಟಕ ನಿರ್ಮಾಣ ಕಾರ್ಯ ಈಗಾಗಲೇ ಆರಂಭಗೊಂಡಿದ್ದು, ಈ ವರ್ಷದ ಕೊನೆಯಲ್ಲಿ ಕಾರ್ಯಾರಂಭ ನಡೆಸಲಿರುವ ಹೊಸ ಘಟಕವು ವಾರ್ಷಿಕವಾಗಿ 2.80 ಲಕ್ಷ ಯುನಿಟ್ ಉತ್ಪಾದನಾ ಸಾಮರ್ಥ್ಯ ಹೊಂದಿರಲಿದೆ ಎನ್ನಲಾಗಿದೆ.

ವಾರ್ಷಿಕವಾಗಿ 1 ಮಿಲಿಯನ್ ಇವಿ ಸ್ಕೂಟರ್ ಉತ್ಪಾದನಾ ಯೋಜನೆ ಸಿದ್ದಪಡಿಸಿದ ಎಥರ್ ಎನರ್ಜಿ

ಎಥರ್ ಕಂಪನಿಯು ಎರಡು ಘಟಕಗಳ ಮೂಲಕ ವಾರ್ಷಿಕವಾಗಿ 4 ಲಕ್ಷ ಯುನಿಟ್ ಇವಿ ಸ್ಕೂಟರ್ ಉತ್ಪಾದನಾ ಸಾಮಾರ್ಥ್ಯ ಹೊಂದಿರಲಿದ್ದು, 2025ರ ವೇಳೆಗೆ ಮತ್ತಷ್ಟು ಹೂಡಿಕೆಯೊಂದಿಗೆ ವಾರ್ಷಿಕವಾಗಿ ಒಟ್ಟು 10 ಲಕ್ಷ ಯುನಿಟ್ ಉತ್ಪಾದನೆ ಮಾಡಬಹುದಾದ ಸಾಧ್ಯತೆಗಳ ಕುರಿತು ಯೋಜನೆ ರೂಪಿಸುತ್ತಿದೆ.

ವಾರ್ಷಿಕವಾಗಿ 1 ಮಿಲಿಯನ್ ಇವಿ ಸ್ಕೂಟರ್ ಉತ್ಪಾದನಾ ಯೋಜನೆ ಸಿದ್ದಪಡಿಸಿದ ಎಥರ್ ಎನರ್ಜಿ

ವಾರ್ಷಿಕವಾಗಿ 10 ಲಕ್ಷ ಯುನಿಟ್ ಉತ್ಪಾದನೆಗಾಗಿ ಹೂಡಿಕೆ ಕೂಡಾ ಪ್ರಮುಖವಾಗಿದ್ದು, ಈಗಾಗಲೇ ಪ್ರಮುಖ ಕಂಪನಿಗಳಿಂದ ಭಾರೀ ಪ್ರಮಾಣದ ಹೂಡಿಕೆ ಪಡೆದುಕೊಂಡಿರುವ ಎಥರ್ ಕಂಪನಿಯು ಭವಿಷ್ಯದಲ್ಲಿ ಇನ್ನಷ್ಟು ಹೆಚ್ಚಳ ಮಾಡಲು ನಿರ್ಧರಿಸಿದೆ.

ವಾರ್ಷಿಕವಾಗಿ 1 ಮಿಲಿಯನ್ ಇವಿ ಸ್ಕೂಟರ್ ಉತ್ಪಾದನಾ ಯೋಜನೆ ಸಿದ್ದಪಡಿಸಿದ ಎಥರ್ ಎನರ್ಜಿ

2025ರ ವೇಳೆಗೆ ಇವಿ ವಾಹನ ಬೇಡಿಕೆ ಶೇ.20ಕ್ಕೆ ಏರಿಕೆಯಾಗುವ ಎಲ್ಲಾ ಸಾಧ್ಯತೆ ಕುರಿತು ಮಾರುಕಟ್ಟೆ ಅಧ್ಯಯನ ನಡೆಸಿರುವ ಎಥರ್ ಕಂಪನಿಯು ಇವಿ ವಾಹನ ಹೆಚ್ಚಳಕ್ಕೆ ತಕ್ಕಂತೆ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆಯನ್ನು ಸಹ ಹೆಚ್ಚಿಸುತ್ತಿದೆ.

ವಾರ್ಷಿಕವಾಗಿ 1 ಮಿಲಿಯನ್ ಇವಿ ಸ್ಕೂಟರ್ ಉತ್ಪಾದನಾ ಯೋಜನೆ ಸಿದ್ದಪಡಿಸಿದ ಎಥರ್ ಎನರ್ಜಿ

ಎಥರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಉತ್ಪನ್ನಗಳ ಬಿಡುಗಡೆಗೆ ಸಿದ್ದವಾಗುತ್ತಿದೆ.

ವಾರ್ಷಿಕವಾಗಿ 1 ಮಿಲಿಯನ್ ಇವಿ ಸ್ಕೂಟರ್ ಉತ್ಪಾದನಾ ಯೋಜನೆ ಸಿದ್ದಪಡಿಸಿದ ಎಥರ್ ಎನರ್ಜಿ

ದುಬಾರಿ ಬೆಲೆ ನಡುವೆಯೂ ಗ್ರಾಹಕರಿಂದ ಉತ್ತಮ ಪ್ರಕ್ರಿಯೆ ಪಡೆದುಕೊಳ್ಳುತ್ತಿರುವ ಎಥರ್ ಎನರ್ಜಿ ಕಂಪನಿಯು ಮುಂಬರುವ ಕೆಲ ತಿಂಗಳಿನಲ್ಲಿ ಮತ್ತಷ್ಟು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಕಂಪನಿಯು ಇದುವರೆಗೂ ರೂ. 650 ಕೋಟಿ ಮೌಲ್ಯದ ಇವಿ ಸ್ಕೂಟರ್ ಉದ್ಯಮ ವ್ಯವಹಾರ ಕೈಗೊಂಡಿದೆ.

ವಾರ್ಷಿಕವಾಗಿ 1 ಮಿಲಿಯನ್ ಇವಿ ಸ್ಕೂಟರ್ ಉತ್ಪಾದನಾ ಯೋಜನೆ ಸಿದ್ದಪಡಿಸಿದ ಎಥರ್ ಎನರ್ಜಿ

ಎಥರ್ ಸ್ಕೂಟರ್‌ಗಳು ಇತ್ತೀಚೆಗೆ ಬಿಡುಗಡೆಯಾಗಿರುವ ಇವಿ ಸ್ಕೂಟರ್‌ಗಳಿಂತಲೂ ತುಸು ಕಡಿಮೆ ಮೈಲೇಜ್ ಹೊರತುಪಡಿಸಿ ಪ್ರೀಮಿಯಂ ಫೀಚರ್ಸ್ ಮತ್ತು ಅತ್ಯುತ್ತಮ ಎಲೆಕ್ಟ್ರಿಕ್ ಎಂಜಿನ್ ಕಾರ್ಯಕ್ಷಮತೆ ಮತ್ತು ತಾಂತ್ರಿಕ ಸೇವೆಗಳ ವಿಚಾರವಾಗಿ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ಹೊಂದಿದೆ.

ವಾರ್ಷಿಕವಾಗಿ 1 ಮಿಲಿಯನ್ ಇವಿ ಸ್ಕೂಟರ್ ಉತ್ಪಾದನಾ ಯೋಜನೆ ಸಿದ್ದಪಡಿಸಿದ ಎಥರ್ ಎನರ್ಜಿ

ಹೀಗಾಗಿ ಅತಿ ಹೆಚ್ಚು ಮೈಲೇಜ್ ನೀಡುವ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿರುವ ಎಥರ್ ಕಂಪನಿಯು ಕಳೆದ ವರ್ಷಕ್ಕಿಂತ 2021ರಲ್ಲಿ 12 ಪಟ್ಟು ಹೆಚ್ಚು ಬೆಳವಣಿಗೆ ಸಾಧಿಸಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಉತ್ಪನ್ನಗಳೊಂದಿಗೆ ಇನ್ನು ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ವಾರ್ಷಿಕವಾಗಿ 1 ಮಿಲಿಯನ್ ಇವಿ ಸ್ಕೂಟರ್ ಉತ್ಪಾದನಾ ಯೋಜನೆ ಸಿದ್ದಪಡಿಸಿದ ಎಥರ್ ಎನರ್ಜಿ

ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್‌ಗಳಿಂತಲೂ ಹೆಚ್ಚು ಬಜೆಟ್ ಬೆಲೆಯಲ್ಲಿ ಉತ್ತಮ ಮೈಲೇಜ್ ಹೊಂದಿರುವ ಸ್ಕೂಟರ್‌ಗಳ ಗ್ರಾಹಕರು ಆಸಕ್ತಿ ತೋರುತ್ತಿದ್ದು, ಆರಂಭದಲ್ಲಿ ಪ್ರೀಮಿಯಂ ಇವಿ ಸ್ಕೂಟರ್‌ಗಳನ್ನು ಮಾತ್ರ ಅಭಿವೃದ್ದಿ ಮಾಡಲು ನಿರ್ಧರಿಸಿದ್ದ ಎಥರ್ ಕಂಪನಿಯು ಇದೀಗ ಗ್ರಾಹಕರ ಬೇಡಿಕೆಯೆಂತೆ ಬಜೆಟ್ ಮಾದರಿಗಳನ್ನು ಸಹ ಉತ್ಪಾದನೆ ಮಾಡುವ ಆಸಕ್ತಿ ತೋರಿದೆ.

ವಾರ್ಷಿಕವಾಗಿ 1 ಮಿಲಿಯನ್ ಇವಿ ಸ್ಕೂಟರ್ ಉತ್ಪಾದನಾ ಯೋಜನೆ ಸಿದ್ದಪಡಿಸಿದ ಎಥರ್ ಎನರ್ಜಿ

ಎಥರ್ ಮುಂಬರುವ ಸ್ಕೂಟರ್ ಮಾದರಿಯು ರೂ. 1 ಲಕ್ಷ ಬೆಲೆಯೊಳಗೆ ಬಿಡುಗಡೆಯಾಗಲಿದ್ದು, ಪ್ರತಿಸ್ಪರ್ಧಿ ಮಾದರಿಗಳಿಗೆ ಅನುಗುಣವಾಗಿ ಅಧಿಕ ಮೈಲೇಜ್ ಪ್ರೇರಿತ ಬ್ಯಾಟರಿ ಅಳವಡಿಸಲಿದೆ.

ವಾರ್ಷಿಕವಾಗಿ 1 ಮಿಲಿಯನ್ ಇವಿ ಸ್ಕೂಟರ್ ಉತ್ಪಾದನಾ ಯೋಜನೆ ಸಿದ್ದಪಡಿಸಿದ ಎಥರ್ ಎನರ್ಜಿ

ಎಥರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, 450ಎಕ್ಸ್ ಮಾದರಿಯು 450 ಪ್ಲಸ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಅಧಿಕ ಮೈಲೇಜ್ ಪಡೆದುಕೊಂಡಿದೆ.

ವಾರ್ಷಿಕವಾಗಿ 1 ಮಿಲಿಯನ್ ಇವಿ ಸ್ಕೂಟರ್ ಉತ್ಪಾದನಾ ಯೋಜನೆ ಸಿದ್ದಪಡಿಸಿದ ಎಥರ್ ಎನರ್ಜಿ

ಸ್ಟ್ಯಾಂಡರ್ಡ್ 450ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಮಾರಾಟದಿಂದ ಸ್ಥಗಿತಗೊಳಿಸಿರುವ ಎಥರ್ ಕಂಪನಿಯು 450 ಪ್ಲಸ್ ಮತ್ತು 450ಎಕ್ಸ್ ಮಾದರಿಯ ಮೇಲೆ ಹೆಚ್ಚು ಗಮನಹರಿಸಿದ್ದು, ಹೊಸ ಸಬ್ಸಡಿ ನಂತರ 450 ಪ್ಲಸ್ ಬೆಲೆಯು ಬೆಂಗಳೂರು ಎಕ್ಸ್‌ಶೋರೂಂ ಪ್ರಕಾರ ರೂ. 1,31,647 ಮತ್ತು 450ಎಕ್ಸ್ ಬೆಲೆಯನ್ನು ರೂ. 1,50,657ಕ್ಕೆ ನಿಗದಿಪಡಿಸಲಾಗಿದೆ.

ವಾರ್ಷಿಕವಾಗಿ 1 ಮಿಲಿಯನ್ ಇವಿ ಸ್ಕೂಟರ್ ಉತ್ಪಾದನಾ ಯೋಜನೆ ಸಿದ್ದಪಡಿಸಿದ ಎಥರ್ ಎನರ್ಜಿ

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಬ್ಯಾಟರಿ ಬ್ಯಾಟರಿ ಪ್ಯಾಕ್‌ನೊಂದಿಗೆ 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. 450 ಪ್ಲಸ್ ಮಾದರಿಯು ಪ್ರತಿ ಚಾರ್ಜ್‌ಗೆ 70 ಕಿ.ಮೀ ಮೈಲೇಜ್ ಹೊಂದಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ 450ಎಕ್ಸ್ ಮಾದರಿಯು ಕೇವಲ 10 ನಿಮಿಷಗಳಲ್ಲಿ ಚಾರ್ಜ್ ಮಾಡಿದಲ್ಲಿ 10 ಕಿ.ಮೀ ಹಿಂದಿರುಗಿಸಿದ್ದಲ್ಲಿ 450 ಪ್ಲಸ್ ಮಾದರಿಯು 15 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

More from DriveSpark

Article Published On: Tuesday, February 1, 2022, 12:53 [IST]
English summary
Ather energy to increase production capacity to annually million details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+