Just In
Don't Miss!
- News
ಪಲ್ಲವಿ ಡೇ ಬಳಿಕ ಮತ್ತೊಬ್ಬ ಯುವ ರೂಪದರ್ಶಿ ಆತ್ಮಹತ್ಯೆ
- Sports
ಮಹಿಳಾ ಟಿ20 ಚಾಲೆಂಜ್: ವೆಲಾಸಿಟಿ ವಿರುದ್ಧ ಗೆದ್ದ ಟ್ರೈಲ್ಬ್ಲೇಜರ್ಸ್, ಆದ್ರೂ ಫೈನಲ್ ಮಿಸ್
- Finance
ಮೇ 26ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Movies
ಬಾಲಕೃಷ್ಣ 107ನೇ ಸಿನಿಮಾದ ಟೈಟಲ್ 'ಜೈ ಬಾಲಯ್ಯ'
- Technology
ಸ್ಯಾಮ್ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್ಫೋನ್ ಬಿಡುಗಡೆ! ವಿಶೇಷತೆ ಏನು?
- Lifestyle
ಕಿಚನ್ ಟಿಪ್ಸ್: ಫ್ರಿಡ್ಜ್ನಲ್ಲಿ ಆಹಾರಗಳನ್ನು ಹೀಗೆ ಇಟ್ಟರೆ ಆರೋಗ್ಯಕ್ಕೆ ಕುತ್ತು ಎಚ್ಚರ..!
- Education
Karnataka SSLC Revaluation 2022 : ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಪ್ರಮುಖ ಕಂಪನಿಗಳ ಮಧ್ಯೆ ಭರ್ಜರಿ ಪೈಪೋಟಿ
ದುಬಾರಿ ಇಂಧನಗಳ ಪರಿಣಾಮ ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚವು ಸಹ ಸಾಕಷ್ಟು ಏರಿಕೆಯಾಗುತ್ತಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಕಳೆದ ಕೆಲ ತಿಂಗಳಿನಿಂದ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಸರ್ಕಾರದ ಜೊತೆಗೆ ವಿವಿಧ ಖಾಸಗಿ ಕಂಪನಿಗಳು ಸಹ ಇವಿ ವಾಹನ ಪೂರಕವಾದ ಯೋಜನೆಗಳನ್ನು ಜಾರಿಗೆ ತರುತ್ತಿವೆ.

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರದ ಫೇಮ್ 2 ಹೊರತುಪಡಿಸಿ ರಾಜ್ಯಗಳ ಮಟ್ಟದಲ್ಲಿ ದೆಹಲಿ ಸರ್ಕಾರವು ಹೆಚ್ಚಿನ ಮಟ್ಟದ ಪ್ರೊತ್ಸಾಹ ನೀಡುತ್ತಿದ್ದು, ತದನಂತರ ವಿವಿಧ ಸರ್ಕಾರವು ಸಹ ರಾಜ್ಯ ಮಟ್ಟದಲ್ಲಿ ಹೊಸ ಇವಿ ನೀತಿ ಅಳವಡಿಸಿಕೊಳ್ಳುತ್ತಿವೆ.

ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಹೊರತುಪಡಿಸಿ ವಿವಿಧ ರಾಜ್ಯ ಸರ್ಕಾರಗಳು ರಾಜ್ಯ ಮಟ್ಟದಲ್ಲಿ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇಂಧನಗಳ ಬೆಲೆ ಹೆಚ್ಚಳ ಮತ್ತು ಇವಿ ವಾಹನಗಳಿಗೆ ನೀಡಲಾಗುತ್ತಿರುವ ಸಬ್ಸಡಿ ಯೋಜನೆಗಳಿಂದಾಗಿ ಇವಿ ವಾಹನ ಮಾರಾಟವು ಕಳೆದ ಎರಡು ವರ್ಷಗಳಲ್ಲಿ ಸಾಕಷ್ಟು ಏರಿಕೆಯಾಗಿದ್ದು, ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸದ್ಯ ಇವಿ ಸ್ಕೂಟರ್ ಬೇಡಿಕೆಯು ಅಗ್ರಸ್ಥಾನದಲ್ಲಿದೆ.

ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಸದ್ಯ ಎಥರ್ ಎನರ್ಜಿ, ಟಿವಿಎಸ್ ಮೋಟಾರ್, ಬಜಾಜ್ ಆಟೋ ಕಂಪನಿಗಳು ಮುಂಚೂಣಿಯಲ್ಲಿದ್ದು, ಕಳೆದ ತಿಂಗಳು ಜನವರಿಯಲ್ಲಿ ಇವಿ ಸ್ಕೂಟರ್ ಮಾರಾಟದಲ್ಲಿ ಮೂರು ಕಂಪನಿಗಳು ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡಿವೆ.

ಎಥರ್ ಎನರ್ಜಿ ಕಂಪನಿಯು ಜನವರಿ ಅವಧಿಯಲ್ಲಿ 2,825 ಯುನಿಟ್ ಮಾರಾಟದೊಂದಿಗೆ ಕಳೆದ ಜನವರಿಗಿಂತಲೂ ಶೇ. 366 ರಷ್ಟು ಬೆಳವಣಿಗೆ ಸಾಧಿಸಿದರೆ ಟಿವಿಎಸ್ ಐಕ್ಯೂಬ್ ಮಾದರಿಯು 1,529 ಯುನಿಟ್ ಮಾರಾಟದೊಂದಿಗೆ ಶೇ.625ರಷ್ಟು ಮತ್ತು ಬಜಾಜ್ ಚೇತಕ್ ಮಾದರಿಯು 1,268 ಯುನಿಟ್ ಮಾರಾಟದೊಂದಿಗೆ ಶೇ.300 ರಷ್ಟು ಹೆಚ್ಚು ಬೆಳವಣಿಗೆ ಸಾಧಿಸಿದೆ.

ದುಬಾರಿ ಬೆಲೆ ನಡುವೆಯೂ ಗ್ರಾಹಕರಿಂದ ಉತ್ತಮ ಪ್ರಕ್ರಿಯೆ ಪಡೆದುಕೊಳ್ಳುತ್ತಿರುವ ಎಥರ್ ಎನರ್ಜಿ ಕಂಪನಿಯು ಮುಂಬರುವ ಕೆಲ ತಿಂಗಳಿನಲ್ಲಿ ಮತ್ತಷ್ಟು ಹೊಸ ಉತ್ಪನ್ನಗಳೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಕಂಪನಿಯು ಇದುವರೆಗೂ ರೂ. 650 ಕೋಟಿ ಮೌಲ್ಯದ ಇವಿ ಸ್ಕೂಟರ್ ಉದ್ಯಮ ವ್ಯವಹಾರ ಕೈಗೊಂಡಿದೆ.

ಎಥರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, 450ಎಕ್ಸ್ ಮಾದರಿಯು 450 ಪ್ಲಸ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಅಧಿಕ ಮೈಲೇಜ್ ಪಡೆದುಕೊಂಡಿದೆ.

ಸ್ಟ್ಯಾಂಡರ್ಡ್ 450ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಮಾರಾಟದಿಂದ ಸ್ಥಗಿತಗೊಳಿಸಿರುವ ಎಥರ್ ಕಂಪನಿಯು 450 ಪ್ಲಸ್ ಮತ್ತು 450ಎಕ್ಸ್ ಮಾದರಿಯ ಮೇಲೆ ಹೆಚ್ಚು ಗಮನಹರಿಸಿದ್ದು, ಹೊಸ ಸಬ್ಸಡಿ ನಂತರ 450 ಪ್ಲಸ್ ಬೆಲೆಯು ಬೆಂಗಳೂರು ಎಕ್ಸ್‌ಶೋರೂಂ ಪ್ರಕಾರ ರೂ. 1,31,647 ಮತ್ತು 450ಎಕ್ಸ್ ಬೆಲೆಯನ್ನು ರೂ. 1,50,657ಕ್ಕೆ ನಿಗದಿಪಡಿಸಲಾಗಿದೆ.

2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಬ್ಯಾಟರಿ ಬ್ಯಾಟರಿ ಪ್ಯಾಕ್‌ನೊಂದಿಗೆ 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. 450 ಪ್ಲಸ್ ಮಾದರಿಯು ಪ್ರತಿ ಚಾರ್ಜ್‌ಗೆ 70 ಕಿ.ಮೀ ಮೈಲೇಜ್ ಹೊಂದಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ 450ಎಕ್ಸ್ ಮಾದರಿಯು ಕೇವಲ 10 ನಿಮಿಷಗಳಲ್ಲಿ ಚಾರ್ಜ್ ಮಾಡಿದಲ್ಲಿ 10 ಕಿ.ಮೀ ಹಿಂದಿರುಗಿಸಿದ್ದಲ್ಲಿ 450 ಪ್ಲಸ್ ಮಾದರಿಯು 15 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸಹ ಸದ್ಯ ಮಾರುಕಟ್ಟೆಯಲ್ಲಿರುವ ಇತರೆ ಎಲೆಕ್ಟ್ರಿಕ್ ಸ್ಕೂಟರ್‌ಗಿಂತಲೂ ಆಕರ್ಷಕ ವಿನ್ಯಾಸ ಮತ್ತು ತಾಂತ್ರಿಕ ಸೌಲಭ್ಯಗಳನ್ನು ಹೊತ್ತುಬಂದಿದ್ದು, ಹೊಸ ಸ್ಕೂಟರ್‌ನಲ್ಲಿ 4.4kW ಎಲೆಕ್ಟ್ರಿಕ್ ಮೋಟಾರ್ ಸೌಲಭ್ಯದೊಂದಿಗೆ ಉತ್ತಮ ಮೈಲೇಜ್ ಹೊಂದಿದೆ. ಪ್ರತಿ ಗಂಟೆಗೆ ಗರಿಷ್ಠ 78 ಕಿಮೀ ಟಾಪ್ ಸ್ಪೀಡ್‌ನೊಂದಿಗೆ ಎಕಾನಮಿ ಮತ್ತು ಪವರ್ ಮೊಡ್ ಮೂಲಕ ಅತ್ಯುತ್ತಮ ರೈಡಿಂಗ್ ಸೌಲಭ್ಯವನ್ನು ಒದಗಿಸುತ್ತದೆ.

ಎಕಾನಮಿ ಮೋಡ್‌ನಲ್ಲಿ ಐಕ್ಯೂಬ್ ಸ್ಕೂಟರ್ ಮಾದರಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 75 ಕಿಮೀ ಮೈಲೇಜ್ ಮತ್ತು ಪವರ್ ಮೋಡ್ ರೈಡಿಂಗ್‌ನಲ್ಲಿ ಗರಿಷ್ಠ 70 ಕಿಮೀ ಮೈಲೇಜ್ ಹಿಂದಿರುಗಿಸಲಿದ್ದರೂ ಉತ್ತಮ ಬ್ಯಾಟರಿ ಪ್ಯಾಕ್‌ನೊಂದಿಗೆ ಟಾಪ್ ಸ್ಪೀಡ್‌ನಲ್ಲಿ ಗಮನಸೆಳೆಯುತ್ತದ್ದು, ಈ ಸ್ಕೂಟರ್ ಸದ್ಯ 1.15 ಲಕ್ಷ ಆನ್‌ರೋಡ್ ದರ ಹೊಂದಿದೆ.

ಇನ್ನು ಹೊಸ ಚೇತಕ್ ಇವಿ ಮಾದರಿಯು ಅರ್ಬೈನ್ ಮತ್ತು ಪ್ರೀಮಿಯಂ ಎನ್ನುವ ಪ್ರಮುಖ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, 3kWh ಲೀಥಿಯಂ ಅಯಾನ್ ಬ್ಯಾಟರಿ ಮತ್ತು 4.08kW ಎಲೆಕ್ಟ್ರಿಕ್ ಮೋಟಾರ್ ಮೂಲಕ ಇಕೋ ಮೋಡ್‍ನಲ್ಲಿ ಪ್ರತಿ ಚಾರ್ಜ್‌ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 85 ಕಿ.ಮೀ ಚಲಿಸುತ್ತದೆ.

ಅರ್ಬೈನ್ ಮಾದರಿಯು ಆನ್‌ರೋಡ್ ಪ್ರಕಾರ ರೂ. 1.48 ಲಕ್ಷ ಮತ್ತು ಪ್ರೀಮಿಯಂ ವೆರಿಯೆಂಟ್‌ಗೆ ರೂ. 1.54 ಲಕ್ಷ ಬೆಲೆ ಹೊಂದಿದೆ. ಹೊಸ ಸ್ಕೂಟರ್ನಲ್ಲಿ ಬಳಕೆ ಮಾಡಲಾಗಿರುವ ಬ್ಯಾಟರಿಯು ಬರೋಬ್ಬರಿ 70 ಸಾವಿರ ಕಿ.ಮೀ ನಷ್ಟು ಕಾರ್ಯಕ್ಷಮತೆ ಹೊಂದಿದೆ.

ಸದ್ಯ ಮಾರುಕಟ್ಟೆಯಲ್ಲಿ ಎಥರ್, ಬಜಾಜ್, ಟಿವಿಎಸ್ ಹೊರತಾಗಿಯೂ ಹಲವಾರು ಸ್ಟಾರ್ಟ್ ಕಂಪನಿಗಳು ಇವಿ ಸ್ಕೂಟರ್ ಮಾರಾಟ ಮಾಡುತ್ತಿದ್ದು, ಸ್ಟಾರ್ಟ್ ಕಂಪನಿಗಳಿಂತಲೂ ಈ ಮೂರು ಇವಿ ಸ್ಕೂಟರ್ ಮಾರಾಟ ಸೌಲಭ್ಯ, ಗ್ರಾಹಕರ ಸೇವೆಗಳ ವಿಚಾರವಾಗಿ ಇತರೆ ಮಾದರಿಗಳಿಂತಲೂ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿಯಲ್ಲಿವೆ.