Just In
- 8 min ago
ಯಾವುದೇ ಏರ್ಪೋರ್ಟ್ಗೂ ಕಮ್ಮಿಯಿಲ್ಲ ಬೆಂಗಳೂರಿನ ಈ ರೈಲು ನಿಲ್ದಾಣ: ಹೇಗಿದೆ ಒಮ್ಮೆ ನೋಡಿ
- 17 min ago
ಹೊಸ ಫೀಚರ್ಸ್ಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಸೆಲ್ಟೋಸ್ ಫೇಸ್ಲಿಫ್ಟ್
- 1 hr ago
ಮನಕಲುಕುವ ಘಟನೆ: ಮೃತ ತಾಯಿಯನ್ನು 80 ಕಿ.ಮೀ ಬೈಕ್ನಲ್ಲೇ ಸಾಗಿಸಿದ ಮಗ
- 1 hr ago
ಹೊಸ ಆಫ್-ರೋಡರ್ ಆರ್ಜೆಡ್ಆರ್ ಪ್ರೊ ಆರ್ ಸ್ಪೋರ್ಟ್ ಬಿಡುಗಡೆ ಮಾಡಿದ ಪೋಲಾರಿಸ್ ಇಂಡಿಯಾ
Don't Miss!
- Finance
4 ತಿಂಗಳಲ್ಲೇ ಭಾರಿ ಏರಿಕೆ ಕಂಡ ಸೆನ್ಸೆಕ್ಸ್: ಆಟೋ, ಪವರ್ ಸ್ಟಾಕ್ ಬಲ
- News
ಬಲವಂತವಾಗಿ ಹಿಡಿದ ಅಭಿಮಾನಿಯ ಕೈಯಿಂದ ತಂದೆಯನ್ನು ರಕ್ಷಿಸಿದ ಆರ್ಯನ್ ಖಾನ್
- Movies
ಕಾಫಿ ನಾಡು ಚಂದು ಕಾಪಿ ಹೊಡೆದ 'ನಾಗಿಣಿ 2' ನಮ್ರತಾ: ವಿಡಿಯೋ ವೈರಲ್
- Technology
ಇದೇ ತಿಂಗಳು 5G ಸೇವೆ ಬರಲಿದೆ ಅಂತಾ ನಿರೀಕ್ಷಿಸುತ್ತಿದ್ದೀರಾ?..ಈ ಸುದ್ದಿಯನ್ನೊಮ್ಮೆ ಗಮನಿಸಿ!
- Sports
CWG 2022: ಬ್ಯಾಡ್ಮಿಂಟನ್ಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ, ಸಿಂಗಲ್ಸ್ನಲ್ಲಿ ಚಾಂಪಿಯನ್ ಆದ ಲಕ್ಷ್ಯಸೇನ್
- Lifestyle
ಬೆಚ್ಚಗಾಗಲು ಬಳಸುವ ರೂಮ್ ಹೀಟರ್ ಎಷ್ಟು ಅಪಾಯಕಾರಿ ಗೊತ್ತಾ?
- Travel
ಭಾರತದಲ್ಲಿರುವ ಕೆಲವು ಸ್ಥಳಗಳು ಅಸ್ತಮಾ ರೋಗಿಗಳಿಗೆ ಸಲ್ಪ ಮಟ್ಟದಲ್ಲಿ ಅಪಾಯಕಾರಿಯಾಗಬಹುದು!
- Education
CSB Recruitment 2022 : 66 ಸೈಂಟಿಸ್ಟ್-ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೇಡಿಕೆ ಹೆಚ್ಚಳ: ಚೇತಕ್ ಇವಿ ಉತ್ಪಾದನಾ ಹೆಚ್ಚಳಕ್ಕೆ ಬಜಾಜ್ ಬೃಹತ್ ಯೋಜನೆ
ದುಬಾರಿ ಇಂಧನಗಳ ಪರಿಣಾಮ ಇವಿ ವಾಹನಗಳ ಬೇಡಿಕೆ ಹೆಚ್ಚುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಬಜಾಜ್ ಆಟೋ ಕಂಪನಿಯು ಕೂಡಾ ತನ್ನ ಚೇತಕ್ ಇವಿ ಉತ್ಪಾದನಾ ಪ್ರಮಾಣವನ್ನು ಹೆಚ್ಚಳ ಮಾಡಲು ನಿರ್ಧರಿಸಿದೆ.

ವಿವಿಧ ಕಾರಣಗಳಿಂದಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಗ್ರಾಹಕರು ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡಲಾಗುತ್ತಿರುವುದರಿಂದ ಇವಿ ವಾಹನಗಳ ಮಾರಾಟದಲ್ಲಿ ಸಾಕಷ್ಟು ಏರಿಕೆಯಾಗಿದೆ.

ಇವಿ ವಾಹನಗಳ ಬೇಡಿಕೆ ಹೆಚ್ಚಳ ಪರಿಣಾಮ ಬಜಾಜ್ ಕಂಪನಿಯು ಚೇತಕ್ ಇವಿ ಸ್ಕೂಟರ್ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಲು ನಿರ್ಧರಿಸಿದ್ದು, ಪ್ರತ್ಯೇಕ ಪ್ಲ್ಯಾಟ್ಫಾರ್ಮ್ ಮೂಲಕ ಪ್ರತಿ ತಿಂಗಳು 5 ಸಾವಿರ ಯುನಿಟ್ ಉತ್ಪಾದನೆಗೆ ಯೋಜನೆ ರೂಪಿಸಿದೆ.

ಚೇತಕ್ ಇವಿ ಸ್ಕೂಟರ್ ಬಿಡುಗಡೆಯ ಆರಂಭದಲ್ಲಿ ಪುಣೆ ಮತ್ತು ಬೆಂಗಳೂರಿನಲ್ಲಿ ಮಾತ್ರ ಮಾರಾಟ ಆರಂಭಿಸಿದ್ದ ಬಜಾಜ್ ಕಂಪನಿಯು ಇದೀಗ ದೇಶದ ಪ್ರಮುಖ ನಗರಗಳಲ್ಲಿ ಮಾರಾಟ ಆರಂಭಿಸಿದ್ದು, ಬೇಡಿಕೆಗೆ ಅನುಗುಣವಾಗಿ ಉತ್ಪಾದನೆಯನ್ನು ಹೆಚ್ಚಿಸಲಾಗುತ್ತಿದೆ.

ಎಲೆಕ್ಟ್ರಿಕ್ ಸ್ಕೂಟರ್ಗಳಿಗೆ ಬೇಡಿಕೆ ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಪ್ರತ್ಯೇಕ ಉತ್ಪಾದನಾ ಸೌಲಭ್ಯವನ್ನು ತೆರೆಯುತ್ತಿದ್ದು, 6.5 ಎಕರೆ ವಿಸ್ತೀರ್ಣ ಹೊಂದಿರುವ ಹೊಸ ಘಟಕದಲ್ಲಿ ಕಂಪನಿಯು ಹಂತ-ಹಂತವಾಗಿ ಮುಂಬರುವ ಕೆಲವು ವರ್ಷಗಳಲ್ಲಿ ವಾರ್ಷಿಕವಾಗಿ 5 ಲಕ್ಷ ದ್ವಿಚಕ್ರ ವಾಹನಗಳನ್ನು ಉತ್ಪಾದನೆ ಮಾಡಲಿದೆ.

ಪ್ರೀಮಿಯಂ ಇವಿ ಸ್ಕೂಟರ್ ಮಾರಾಟದಲ್ಲಿ ಸದ್ಯ ಅತ್ಯುತ್ತಮ ಬೇಡಿಕೆ ಹೊಂದಿರುವ ಹೊಸ ಚೇತಕ್ ಇವಿ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಎರಡು ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದ್ದು, ಅರ್ಬೈನ್ ಮಾದರಿಯು ಬೆಂಗಳೂರಿನಲ್ಲಿ ಆನ್ರೋಡ್ ಪ್ರಕಾರ ರೂ. 1.54 ಲಕ್ಷ ಮತ್ತು ಪ್ರೀಮಿಯಂ ವೆರಿಯೆಂಟ್ಗೆ ರೂ. 1.59 ಲಕ್ಷ ಬೆಲೆ ಹೊಂದಿದೆ.

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು 4kW ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿದ್ದು, ಇಕೋ ಮೋಡ್ನಲ್ಲಿ ಪ್ರತಿ ಚಾರ್ಜ್ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್ನಲ್ಲಿ ಪ್ರತಿ ಚಾರ್ಜ್ಗೆ 85 ಕಿ.ಮೀ ಚಲಿಸುತ್ತದೆ.

ಹೊಸ ಇವಿ ಸ್ಕೂಟರ್ನಲ್ಲಿ ಬಜಾಜ್ ಅಪ್ಲಿಕೇಶನ್ ಹೆಚ್ಚು ಅನುಕೂಲಕವಾಗಿದ್ದು, ಈ ಆ್ಯಪ್ ಮೂಲಕ ಲೈವ್ ಟ್ರ್ಯಾಕಿಂಗ್ ಜೊತೆಗೆ ಟ್ರಿಪ್ ಅಂಕಿ ಅಂಶಗಳು, ಬಳಕೆದಾರರ ಮಾಹಿತಿ ಮತ್ತು ಹಲವಾರು ಸುರಕ್ಷತಾ ಫೀಚರ್ಸ್ ಬಳಕೆ ಮಾಡಿಕೊಳ್ಳಬಹುದಾಗಿದೆ.

ಹಾಗೆಯೇ ಹೊಸ ಸ್ಕೂಟರ್ನಲ್ಲಿ ರೌಂಡ್ ಹೆಡ್ಲ್ಯಾಂಪ್, ಎಲ್ಇಡಿ ಡಿಆರ್ಎಲ್, ಶಾರ್ಪ್ ಡಿಸೈನ್, ರೆಟ್ರೋ ಸ್ಟೈಲ್ ಬಾಡಿ ಡಿಸೈನ್, ಹಾರ್ನ್ ಮತ್ತು ಇಂಡಿಕೇಟರ್ ಸ್ವಿಚ್, ಎಲ್ಇಡಿ ಇಂಡಿಕೇಟರ್, ದೊಡ್ಡದಾದ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ರಿರ್ವಸ್ ಅಸಿಸ್ಟ್ ಮೋಡ್ನೊಂದಿಗೆ ಮೊಬಿಲಿಟಿ ತಂತ್ರಜ್ಞಾನ ಹೊಂದಿದೆ.

ಚೇತಕ್ ಸ್ಕೂಟರ್ ಮೊದಲ ನೋಟದಲ್ಲಿ ವೆಸ್ಪಾ ಸ್ಕೂಟರ್ನಂತೆ ಕಂಡರೂ ಹಲವಾರು ಫೀಚರ್ಸ್ಗಳ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಹೊಸ ಸ್ಕೂಟರ್ನಲ್ಲಿ ಬಳಕೆ ಮಾಡಲಾಗಿರುವ ಬ್ಯಾಟರಿಯು ಬರೋಬ್ಬರಿ 70 ಸಾವಿರ ಕಿ.ಮೀ ನಷ್ಟು ಕಾರ್ಯಕ್ಷಮತೆ ಹೊಂದಿದೆ.

ಹೊಸ ಸ್ಕೂಟರ್ನಲ್ಲಿ ಸವಾರರ ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್, ಜೀಯೊ ಫೆನ್ಸಿಂಗ್, ವೆಹಿಕಲ್ ಟ್ರಾಕಿಂಗ್ ಸೌಲಭ್ಯಗಳನ್ನು ನೀಡಲಾಗಿದ್ದು, ಪ್ರತಿ 15 ಸಾವಿರ ಕಿ.ಮೀ ಗೆ ಒಂದು ಬಾರಿ ಸರ್ವೀಸ್ ಸೇರಿದಂತೆ ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ ಸೌಲಭ್ಯಗಳನ್ನು ಅಪ್ಡೇಟ್ ಮಾಡಲಾಗುತ್ತದೆ.

ಇಂಧನಗಳ ಬೆಲೆ ಹೆಚ್ಚಳ ಮತ್ತು ಇವಿ ವಾಹನಗಳಿಗೆ ನೀಡಲಾಗುತ್ತಿರುವ ಸಬ್ಸಡಿ ಯೋಜನೆಗಳಿಂದಾಗಿ ಇವಿ ವಾಹನ ಮಾರಾಟವು ಕಳೆದ ಎರಡು ವರ್ಷಗಳಲ್ಲಿ ಸಾಕಷ್ಟು ಏರಿಕೆಯಾಗಿದ್ದು, ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸದ್ಯ ಇವಿ ಸ್ಕೂಟರ್ ಬೇಡಿಕೆಯು ಅಗ್ರಸ್ಥಾನದಲ್ಲಿದೆ.

ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಹೊರತುಪಡಿಸಿ ವಿವಿಧ ರಾಜ್ಯ ಸರ್ಕಾರಗಳು ರಾಜ್ಯ ಮಟ್ಟದಲ್ಲಿ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಸದ್ಯ ಎಥರ್ ಎನರ್ಜಿ, ಟಿವಿಎಸ್ ಮೋಟಾರ್, ಬಜಾಜ್ ಆಟೋ ಕಂಪನಿಗಳು ಮುಂಚೂಣಿಯಲ್ಲಿದ್ದು, ಕಳೆದ ತಿಂಗಳು ಜನವರಿಯಲ್ಲಿ ಇವಿ ಸ್ಕೂಟರ್ ಮಾರಾಟದಲ್ಲಿ ಮೂರು ಕಂಪನಿಗಳು ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡಿವೆ.