ಬೆಲೆ ಏರಿಕೆ ಪಡೆದುಕೊಂಡ ಬೆನೆಲ್ಲಿ ಟಿಆರ್‌ಕೆ 251 ಅಡ್ವೆಂಚರ್ ಟೂರರ್ ಬೈಕ್

ಇಟಲಿ ಮೂಲದ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಬೆನೆಲ್ಲಿ ತನ್ನ ಟಿಆರ್‌ಕೆ 251 ಕ್ವಾರ್ಟರ್-ಲೀಟರ್ ಅಡ್ವೆಂಚರ್ ಟೂರರ್ ಬೈಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಇದೀಗ ಬೆನೆಲ್ಲಿ ಕಂಪನಿಯು ಈ ಟಿಆರ್‌ಕೆ 251 ಬೈಕಿನ ಬೆಲೆಯನ್ನು ಹೆಚ್ಚಿಸಿದೆ.

ಬೆಲೆ ಏರಿಕೆ ಪಡೆದುಕೊಂಡ ಬೆನೆಲ್ಲಿ ಟಿಆರ್‌ಕೆ 251 ಅಡ್ವೆಂಚರ್ ಟೂರರ್ ಬೈಕ್

ಈ ಹೊಸ ಬೆನೆಲ್ಲಿ ಟಿಆರ್‌ಕೆ 251 ಅಡ್ವೆಂಚರ್ ಟೂರರ್ ಬೈಕ್ ಅನ್ನು ಎಕ್ಸ್ ಶೋರೂಂ ಪ್ರಕಾರ ರೂ.2.51 ಲಕ್ಷ ಬೆಲೆಯಲ್ಲಿ ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಿಡುಗಡೆಗೊಳಿಸಿತ್ತು. ಇದೀಗ ಈ ಬೈಕಿನ ಬೆಲೆಯನ್ನು ರೂ,3,000 ವರೆಗೆ ಬೆಲೆಯನು ಹೆಚ್ಚಿಸಿದೆ. ಇನ್ನು ಬೆನೆಲ್ಲಿ ಕಂಪನಿಯು ಈ ಹೊಸ ಟಿಆರ್‌ಕೆ 251 ಅಡ್ವೆಂಚರ್ ಬೈಕ್ ಖರೀದಿಗಾಗಿ ಬುಕ್ಕಿಂಗ್ ಅನ್ನು ಈಗಾಗಲೇ ಪ್ರಾರಂಭಿಸಿದ್ದಾರೆ. ಈ ಹೊಸ ಎಂಟ್ರಿ-ಲೆವೆಲ್ ಅಡ್ವೆಂಚರ್ ಟೂರರ್ ಬೈಕ್ ಖರೀದಿಸಲು ಬಯಸುವ ಗ್ರಾಹಕರು ಟೋಕನ್ ಮೊತ್ತ ರೂ.6,000 ಪಾವತಿಸಿ ಆನ್‌ಲೈನ್ ಅಥವಾ ಭಾರತದಾದ್ಯಂತ ಅಧಿಕೃತ ಡೀಲರ್‌ಶಿಪ್‌ಗಳ ಮೂಲಕ ಬುಕ್ಕಿಂಗ್ ಮಾಡಿಕೊಳ್ಳಬಹುದು.

ಬೆಲೆ ಏರಿಕೆ ಪಡೆದುಕೊಂಡ ಬೆನೆಲ್ಲಿ ಟಿಆರ್‌ಕೆ 251 ಅಡ್ವೆಂಚರ್ ಟೂರರ್ ಬೈಕ್

ಅಡ್ವೆಂಚರ್ ಬೈಕ್ ಪ್ರಸ್ತುತ ಭಾರತದಲ್ಲಿ ಬೆನೆಲ್ಲಿಯ ಅತ್ಯಂತ ಕೈಗೆಟುಕುವ ಮಾದರಿಯಾಗಿದೆ. ಈ ಹೊಸ ಬೆನೆಲ್ಲಿ ಟಿಆರ್‌ಕೆ 251 ಅಡ್ವೆಂಚರ್ ಟೂರರ್ ಬೈಕ್ ಸಾಕಷ್ಟು ಸ್ಟೈಲಿಂಗ್ ಅಂಶವು ಟಿಆರ್‌ಕೆ 502 ಮಾದರಿಯಿಂದ ಎರವಲು ಪಡೆದುಕೊಂಡಿದೆ.

ಬೆಲೆ ಏರಿಕೆ ಪಡೆದುಕೊಂಡ ಬೆನೆಲ್ಲಿ ಟಿಆರ್‌ಕೆ 251 ಅಡ್ವೆಂಚರ್ ಟೂರರ್ ಬೈಕ್

ಈ ಕ್ವಾರ್ಟರ್-ಲೀಟರ್ ಬೈಕಿನಲ್ಲಿ ಇದು ದೊಡ್ಡ ವಿಂಡ್‌ಸ್ಕ್ರೀನ್, ಫ್ರಂಟ್ ಹೆವಿ ಕ್ವಾರ್ಟರ್ ಫೇರಿಂಗ್, ತೆರೆದ ಟ್ರೆಲ್ಲಿಸ್ ಫ್ರೇಮ್ ಮತ್ತು ಸ್ಕಲಪಟಡ್ ಫ್ಯೂಯಲ್ ಟ್ಯಾಂಕ್‌ನಂತಹ ಸಿಗ್ನೇಚರ್ ಅಡ್ವೆಂಚರ್ ಸ್ಟೈಲಿಂಗ್ ಅಂಶಗಳನ್ನು ಪಡೆಯುತ್ತದೆ.

ಬೆಲೆ ಏರಿಕೆ ಪಡೆದುಕೊಂಡ ಬೆನೆಲ್ಲಿ ಟಿಆರ್‌ಕೆ 251 ಅಡ್ವೆಂಚರ್ ಟೂರರ್ ಬೈಕ್

ಹೊಸ ಬೆನೆಲ್ಲಿ ಟಿಆರ್‌ಕೆ 251 ಅಡ್ವೆಂಚರ್ ಟೂರರ್ ಬೈಕ್ ಮುಂಭಾಗ ಮತ್ತು ಬದಿಯ ಫೇರಿಂಗ್ ಮತ್ತು ಟೈಲ್ ವಿಭಾಗದಲ್ಲಿ ಸ್ಪೋರ್ಟಿ ಗ್ರಾಫಿಕ್ಸ್ ನಿಂದ ಗೋಚರಿಸುತ್ತದೆ. ಅಗಲ ಮತ್ತು ಎತ್ತರದ ಹ್ಯಾಂಡಲ್‌ಬಾರ್‌ಗಳು ಸೆಂಟರ್-ಸೆಟ್ ಫುಟ್‌ಪೆಗ್‌ಗಳನ್ನು ಹೊಂದಿದೆ. 800 ಎಂಎಂ ಪ್ರವೇಶಿಸಬಹುದಾದ ಸ್ಯಾಡಲ್ ಎತ್ತರವು ಆರಾಮದಾಯಕ ರೈಡಿಂಗ್ ಅನುಭವ ನೀಡುತ್ತದೆ.

ಬೆಲೆ ಏರಿಕೆ ಪಡೆದುಕೊಂಡ ಬೆನೆಲ್ಲಿ ಟಿಆರ್‌ಕೆ 251 ಅಡ್ವೆಂಚರ್ ಟೂರರ್ ಬೈಕ್

ಇನ್ನು ಟ್ವಿನ್-ಪಾಡ್ ಎಲ್‌ಇಡಿ ಹೆಡ್‌ಲ್ಯಾಂಪ್ ಜೊತೆಗೆ ಸೈಡ್ ಫೇರಿಂಗ್‌ಗಳಲ್ಲಿ ಅಳವಡಿಸಲಾಗಿರುವ ಟರ್ನ್ ಇಂಡಿಕೇಟರ್‌ಗಳು ಬೈಕಿಗೆ ಆಕರ್ಷಣೆಯನ್ನು ನೀಡುತ್ತದೆ. ಟೂರಿಂಗ್ ಸಾಮರ್ಥ್ಯಗಳನ್ನು ಲಗೇಜ್ ಮೌಂಟಿಂಗ್ ರ್ಯಾಕ್ ಮತ್ತು ಪ್ಯಾನಿಯರ್ ಬಾಕ್ಸ್‌ಗಳನ್ನು ಒಳಗೊಂಡಿದೆ,

ಬೆಲೆ ಏರಿಕೆ ಪಡೆದುಕೊಂಡ ಬೆನೆಲ್ಲಿ ಟಿಆರ್‌ಕೆ 251 ಅಡ್ವೆಂಚರ್ ಟೂರರ್ ಬೈಕ್

ಇದರೊಂದಿಗೆ ಈ ಬೈಕಿನಲ್ಲಿ ಸೈಡ್-ಆನ್ ಎಕ್ಸಾಸ್ಟ್ ಮತ್ತು ಕಡಿದಾದ ಟೇಲ್ ವಿಭಾಗ ಸೇರಿವೆ. ವೈಶಿಷ್ಟ್ಯಗಳ ವಿಷಯದಲ್ಲಿ ಟಿಆರ್‌ಕೆ 251 ಬೈಕ್ ಸಂಪೂರ್ಣ ಡಿಜಿಟಲ್ ಎಲ್ಸಿಡಿ ಇನ್ಸ್ ಟ್ರೂಮೆಂಟ್ ಕನ್ಸೋಲ್ ಅನ್ನು ಹೊಂದಿದ್ದು ಇದ್ ಸ್ಪೀಡ್, ಆರ್ಪಿಎಂ, ಫ್ಯೂಯಲ್ ಗೇಜ್, ಗೇರ್ ಪೋಷಿಸನ್, ಟೈಮ್ ಮತ್ತು ಟ್ರಿಪ್ ಮೀಟರ್‌ನಂತಹ ಮಾಹಿತಿಗಳನ್ನು ಪ್ರದರ್ಶಿಸುತ್ತದೆ.

ಬೆಲೆ ಏರಿಕೆ ಪಡೆದುಕೊಂಡ ಬೆನೆಲ್ಲಿ ಟಿಆರ್‌ಕೆ 251 ಅಡ್ವೆಂಚರ್ ಟೂರರ್ ಬೈಕ್

ಭಾರತದಲ್ಲಿನ ಹೆಚ್ಚಿನ ಅಡ್ವೆಂಚರ್ ಬೈಕ್ ಗಳಂತೆ ಟಿಆರ್‌ಕೆ 251 ರೋಡ್-ಆಧಾರಿತ ಟೂರರ್ ಆಗಿದೆ. ಆದ್ದರಿಂದ ಇದು ರಸ್ತೆ-ಉದ್ದೇಶದ ಟೈರ್‌ಗಳೊಂದಿಗೆ 17-ಇಂಚಿನ ಮುಂಭಾಗ ಮತ್ತು ಹಿಂಭಾಗದ ಅಲಾಯ್ ವ್ಹೀಲ್ ಗಳನ್ನು ಒಳಗೊಂಡಿದೆ,

ಬೆಲೆ ಏರಿಕೆ ಪಡೆದುಕೊಂಡ ಬೆನೆಲ್ಲಿ ಟಿಆರ್‌ಕೆ 251 ಅಡ್ವೆಂಚರ್ ಟೂರರ್ ಬೈಕ್

ಈ ಹೊಸ ಬೆನೆಲ್ಲಿ ಟಿಆರ್‌ಕೆ 251 ಬೈಕಿನಲ್ಲಿ 249 ಸಿಸಿ ಲಿಕ್ವಿಡ್-ಕೂಲ್ಡ್, ಸಿಂಗಲ್-ಸಿಲಿಂಡರ್, DOHC ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 9,250 ಆರ್‌ಪಿಎಂನಲ್ಲಿ 25 ಬಿಹೆಚ್‍ಪಿ ಪವರ್ ಮತ್ತು 8,000 ಆರ್‌ಪಿಎಂನಲ್ಲಿ 21 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6 ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಈ ಹೊಸ ಅಡ್ವೆಂಚರ್ ಬೈಕ್ 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಅನ್ನು ನೀಡುತ್ತದೆ

ಬೆಲೆ ಏರಿಕೆ ಪಡೆದುಕೊಂಡ ಬೆನೆಲ್ಲಿ ಟಿಆರ್‌ಕೆ 251 ಅಡ್ವೆಂಚರ್ ಟೂರರ್ ಬೈಕ್

ಈ ಹೊಸ ಅಡ್ವೆಂಚರ್ ಟೂರರ್ ಬೈಕ್ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಯುಎಸ್‌ಡಿ ಫೋರ್ಕ್‌ಗಳಲ್ಲಿ ಸ್ಟೀಲ್ ಟ್ರೆಲ್ಲಿಸ್ ಫ್ರೇಮ್ ಮತ್ತು ಹಿಂಭಾಗದಲ್ಲಿ ಟಿ-ಸ್ವಿಂಗರ್ಮ್ ಮಾದರಿಯ ಮೊನೊ-ಶಾಕ್ ಅಬ್ಸಾರ್ಬರ್ ಅನ್ನು ಒಳಗೊಂಡಿದೆ.ಇನ್ನು ಪ್ರಮುಖವಾಗಿ ಈ ಹೊಸ ಅಡ್ವೆಂಚರ್ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 4-ಪಿಸ್ಟನ್ ಕ್ಯಾಲಿಪರ್‌ಗಳೊಂದಿಗೆ 280 ಎಂಎಂ ಸಿಂಗಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ ಸಿಂಗಲ್-ಪಿಸ್ಟನ್ ಕ್ಯಾಲಿಪರ್‌ನೊಂದಿಗೆ 240 ಎಂಎಂ ಸಿಂಗಲ್ ಡಿಸ್ಕ್ ಅನ್ನು ಹೊಂದಿದೆ, ಇದರೊಂದಿಗೆ ಹೆಚ್ಚಿನ ಸುರಕ್ಷತೆಗಾಗಿ ಸ್ಟ್ಯಾಂಡರ್ಡ್ ಆಗಿ ಡ್ಯುಯಲ್-ಚಾನೆಲ್ ಎಬಿಎಸ್ ನೊಂದಿಗೆ ಆಂಕಾರೇಜ್ ನೀಡಿದೆ,

ಬೆಲೆ ಏರಿಕೆ ಪಡೆದುಕೊಂಡ ಬೆನೆಲ್ಲಿ ಟಿಆರ್‌ಕೆ 251 ಅಡ್ವೆಂಚರ್ ಟೂರರ್ ಬೈಕ್

ಇನ್ನು ಹೊಸ ಟಿಆರ್‌ಕೆ 502 ಅಡ್ವೆಂಚರ್ ಟೂರರ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವರ್ಷದ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಳಿಸಿತ್ತು. ಬೆನೆಲ್ಲಿ ಕಂಪನಿಯು ಇದೀಗ ಟಿಆರ್‌ಕೆ 502ಎಕ್ಸ್ ಅಡ್ವೆಂಚರ್ ಟೂರರ್ ಬೈಕ್ ಗಾಗಿ ಹೊಸ ಬಣ್ಣದ ಆಯ್ಕೆಯನ್ನು ಸೇರಿಸಿದೆ. ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಅಡ್ವೆಂಚರ್ ಟೂರರ್ ಬೈಕ್ ಮೆಟಾಲಿಕ್ ಡಾರ್ಕ್ ಗ್ರೇ, ರೆಡ್, ಪ್ಯೂರ್ ವೈಟ್ ಮತ್ತು ಅಡ್ವೆಂಚರ್ ಯೆಲ್ಲೋ ಬಣ್ಣಗಳ ಆಯ್ಕೆಗಳೊಂದಿಗೆ ಲಭ್ಯವಿದೆ.ಈ ಹೊಸ ಬೆನೆಲ್ಲಿ ಟಿಆರ್‌ಕೆ 502ಎಕ್ಸ್ ಅಡ್ವೆಂಚರ್ ಟೂರರ್ ಬೈಕಿನಲ್ಲಿ 499 ಸಿಸಿ, ಪ್ಯಾರಲಲ್ ಟ್ವಿನ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಬೆಲೆ ಏರಿಕೆ ಪಡೆದುಕೊಂಡ ಬೆನೆಲ್ಲಿ ಟಿಆರ್‌ಕೆ 251 ಅಡ್ವೆಂಚರ್ ಟೂರರ್ ಬೈಕ್

ಈ ಹೊಸ ಬೆನೆಲ್ಲಿ ಟಿಆರ್‌ಕೆ 251 ಬೈಕ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಕೆಟಿಎಂ ಅಡ್ವೆಂಚರ್ 250, ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಮತ್ತು ದುಬಾರಿ ಬಿಎಂಡಬ್ಲ್ಯು ಜಿ310 ಜಿಎಸ್ ಬೈಕ್ ಗಳಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Friday, March 4, 2022, 17:24 [IST]
English summary
Benelli hiked trk 251 adventure motorcycle price in india details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+