Just In
- 2 hrs ago
ಎಲೆಕ್ಟ್ರಿಕ್, ಹೈಬ್ರಿಡ್ ಕಾರುಗಳಲ್ಲಿ ಮಾತ್ರ ರಿಜನರೇಟಿವ್ ಬ್ರೇಕಿಂಗ್ ಏಕೆ ಲಭ್ಯವಿದೆ: ಇದರ ಉಪಯೋಗವೇನು?
- 3 hrs ago
ಹೊಸ ನವೀಕರಣಗಳೊಂದಿಗೆ ಸಿಎಫ್ಮೋಟೋ 150ಎನ್ಕೆ ಬೈಕ್ ಬಿಡುಗಡೆ
- 5 hrs ago
ಏಪ್ರಿಲ್ ತಿಂಗಳ ಟಿವಿಎಸ್ ವಾಹನ ಮಾರಾಟ ವರದಿ: ರಫ್ತಿನಲ್ಲಿ ದಾಖಲೆ ನಿರ್ಮಾಣ
- 5 hrs ago
ಎಲೆಕ್ಟ್ರಿಕ್ ಕಾರ್ ಆಗಿ ಪರಿವರ್ತನೆಗೊಂಡು ಮಿಂಚುತ್ತಿದೆ 1954ರ ಫಿಯೆಟ್ ಕಾರು
Don't Miss!
- Sports
MI ಆಡುವ 11ರ ಬಳಗದಲ್ಲಿ ಮಗನಿಗೆ ಅವಕಾಶ ಸಿಗದ ಕುರಿತು ಸಚಿನ್ ತೆಂಡೂಲ್ಕರ್ ಹೇಳಿದ್ದೇನು?
- News
ವಿಡಿಯೋ: ಚಳ್ಳಕೆರೆ ಶಾಸಕ ಟಿ ರಘುಮೂರ್ತಿ ಕಾರು ಅಪಘಾತ
- Lifestyle
ಮೇ. 30ಕ್ಕೆ ಶನಿ ಜಯಂತಿ: ಶನಿ ಧೈಯ್ಯಾ, ಶನಿ ದೋಷವಿದ್ದರೆ ಈ ಪರಿಹಾರಗಳನ್ನು ಮಾಡಿ
- Finance
ಮೇ 24ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Movies
'ಯುಗಾಂತರ' ಧಾರಾವಾಹಿಗೆ ಪ್ರಾಮಾಣಿಕ ಐಎಎಸ್ ಅಧಿಕಾರಿ ಪ್ರೇರಣೆ: ವಾಹಿನಿ ಮುಖ್ಯಸ್ಥರ ಸ್ಪಷ್ಟನೆಯೇನು?
- Technology
ಭಾರತದಲ್ಲಿ ಎಲ್ಜಿ OLED 2022 ಸ್ಮಾರ್ಟ್ ಟಿವಿ ಸರಣಿ ಅನಾವರಣ!
- Education
BSF Recruitment 2022 : 281 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬೆಲೆ ಏರಿಕೆ ಪಡೆದುಕೊಂಡ ಬೆನೆಲ್ಲಿ ಟಿಆರ್‌ಕೆ 502 ಮತ್ತು ಟಿಆರ್‌ಕೆ 502ಎಕ್ಸ್ ಬೈಕ್‌ಗಳು
ಇಟಲಿ ಮೂಲದ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಬೆನೆಲ್ಲಿ ತನ್ನ ಬೈಕ್‌ಗಳ ಬೆಲೆಯನ್ನು ಪರಿಷ್ಕರಿಸಿದೆ. ಈ ಬೆಲೆ ಪರಿಷ್ಕರಣೆಯು ಅದರ ಮಿಡಲ್‌ವೇಟ್ ಅಡ್ವೆಂಚರ್ ಟೂರರ್ ಮೋಟಾರ್‌ಸೈಕಲ್‌ಗಳಾದ ಟಿಆರ್‌ಕೆ 502 ಮತ್ತು ಟಿಆರ್‌ಕೆ 502ಎಕ್ಸ್ ಮೇಲೆ ಪರಿಣಾಮ ಬೀರುತ್ತದೆ.

ಬೆಲೆ ಏರಿಕೆಯ ಬಳಿಕ ಬೆನೆಲ್ಲಿ ಟಿಆರ್‌ಕೆ 502 ಬೈಕಿನ ಆರಂಭಿಕ ಬೆಲೆಯು ರೂ,5.24 ಲಕ್ಷವಾದರೆ, ಆಫ್-ರೋಡ್-ಫೋಕಸ್ಡ್ ಟಿಆರ್‌ಕೆ 502ಎಕ್ಸ್ ಬೈಕಿನ ಬೆಲೆಯು ರೂ,5.69 ಲಕ್ಷಗಳಾಗಿದೆ. ಬೆಲೆ ಏರಿಕೆಯನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬದಲಾವಣೆಗಳನ್ನು ಹೊಂದಿರುವುದಿಲ್ಲ. ಮೊದಲಿಗೆ ಬೆನೆಲ್ಲಿ ಟಿಆರ್‌ಕೆ 502 ಬೈಕ್ ಬಗ್ಗೆ ಹೇಳುವುದಾದರೆ, ಇದು ಮೆಟಾಲಿಕ್ ಡಾರ್ಕ್ ಗ್ರೇ ಮತ್ತು ರೆಡ್ ಮತ್ತು ಪ್ಯೂರ್ ವೈಟ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

ಈ ಬೆನೆಲ್ಲಿ ಟಿಆರ್‌ಕೆ 502 ಬೈಕಿನಲ್ಲಿ 500ಸಿಸಿ ಲಿಕ್ವಿಡ್-ಕೂಲ್ಡ್ ಪ್ಯಾರೆಲಲ್-ಟ್ವಿನ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 8,500 ಆರ್‌ಪಿಎಂನಲ್ಲಿ 47 ಬಿಎಚ್‌ಪಿ ಪವರ್ ಮತ್ತು 6,000 ಆರ್‌ಪಿಎಂನಲ್ಲಿ 46 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

ಈ ಬೈಕಿನ ಎಂಜಿನ್ ಅನ್ನು ಬಿಎಸ್ 6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸುವುದರ ಜೊತೆಗೆ ಬೆನೆಲ್ಲಿ ಮರುವಿನ್ಯಾಸಗೊಳಿಸಿದ ಸೈಡ್ ಮೀರರ್ ಗಳನ್ನು ಅಳವಡಿಸಿದ್ದಾರೆ. ಇನ್ನು ಅಲ್ಯೂಮಿನಿಯಂ ಫ್ರೇಮ್ ನಕಲ್ ಗಾರ್ಡ್‌ಗಳನ್ನು ಸಹ ನೀಡಲಾಗಿದೆ.

ಈ ಹಿಂದೆ ಬಿಡುಗಡೆಗೊಂಡಾಗ ಬೆನೆಲ್ಲಿ ಟಿಆರ್‌ಕೆ 502 ಬೈಕಿನಲ್ಲಿ ವೈಟ್ ಮತ್ತು ಅರೇಂಜ್ ಬಣ್ಣದ ಸೆಮಿ-ಡಿಜೆಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಬ್ಯಾಕ್‌ಲಿಟ್, ಹೊಸ ಹ್ಯಾಂಡಲ್‌ಬಾರ್, ಪರಿಷ್ಕೃತ ಬಾಡಿ ಗ್ರಾಫಿಕ್ಸ್ ಮತ್ತು ಇದರ ಕಂಫರ್ಟ್ ಲೆವೆಲ್ ಕೂಡ ಹೆಚ್ಚಾಗಿದೆ ಎಂದು ಕಂಪನಿ ಹೇಳಿಕೊಂಡಿದೆ.

ಈ ಬೆನೆಲ್ಲಿ ಟಿಆರ್‌ಕೆ 502 ಬೈಕಿನಲ್ಲಿ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಈ ಬೈಕಿನ ಮುಂಭಾಗದಲ್ಲಿ ಯುಎಸ್ಡಿ ಫೋರ್ಕ್ ಗಳು ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಸೆಟಪ್ ಅನ್ನು ಹೊಂದಿದೆ ಇನ್ನು ಇದರ ಬ್ರೇಕಿಂಗ್ ಸಿಸ್ಟಂಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 320 ಎಂಎಂ ಡ್ಯುಯಲ್ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 260 ಎಂಎಂ ಸಿಂಗಲ್ ಡಿಸ್ಕ್ ಬ್ರೇಕ್ ಅನ್ನು ನೀಡಿದೆ. ಇದರೊಂದಿದೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಕೂಡ ಹೊಂದಿದೆ.

ಬೆನೆಲ್ಲಿ ಇಂಡಿಯಾ ಕಂಪನಿಯು ತನ್ನ ಹೊಸ ಟಿಆರ್‌ಕೆ 502 ಅಡ್ವೆಂಚರ್ ಟೂರರ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವರ್ಷ ಬಿಡುಗಡೆಗೊಳಿಸಿತ್ತು. ಈ ವೇಳೆ ಬೆನೆಲ್ಲಿ ಕಂಪನಿಯು ಟಿಆರ್‌ಕೆ 502ಎಕ್ಸ್ ಅಡ್ವೆಂಚರ್ ಟೂರರ್ ಬೈಕ್ ಗಾಗಿ ಹೊಸ ಬಣ್ಣದ ಆಯ್ಕೆಯನ್ನು ಸೇರಿಸಿತು. ಅಡ್ವೆಂಚರ್ ಟೂರರ್ ಬೈಕ್ ಮೆಟಾಲಿಕ್ ಡಾರ್ಕ್ ಗ್ರೇ, ರೆಡ್ ಮತ್ತು ಪ್ಯೂರ್ ವೈಟ್ ಬಣ್ಣಗಳ ಆಯ್ಕೆಗಳೊಂದಿಗೆ ಲಭ್ಯವಿದೆ.

ಈ ಬೆನೆಲ್ಲಿ ಟಿಆರ್‌ಕೆ 502ಎಕ್ಸ್ ಅಡ್ವೆಂಚರ್ ಟೂರರ್ ಬೈಕಿನಲ್ಲಿ 499 ಸಿಸಿ, ಪ್ಯಾರಲಲ್ ಟ್ವಿನ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 8,500 ಆರ್‌ಪಿಎಂನಲ್ಲಿ 46.8 ಬಿಹೆಚ್‌ಪಿ ಪವರ್ ಮತ್ತು 6,000 ಆರ್‌ಪಿಎಂನಲ್ಲಿ 46 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಇನ್ನು ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್‌ಬಾಕ್ಸ್ ಅನ್ನು ಜೋಡಿಸಲಾಗಿದೆ.

ಬೆನೆಲ್ಲಿ ಟಿಆರ್‌ಕೆ 502ಎಕ್ಸ್ ಅಡ್ವೆಂಚರ್ ಬೈಕಿನಲ್ಲಿ ಬ್ಯಾಕ್‌ಲಿಟ್ ಸ್ವಿಚ್‌ಗಿಯರ್, ಅಲ್ಯೂಮಿನಿಯಂ-ಫ್ರೇಮ್ ನಕಲ್ ಗಾರ್ಡ್‌ಗಳು, ಮರುವಿನ್ಯಾಸಗೊಳಿಸಲಾದ ಮೀರರ್ ಮತ್ತು ಹೊಸ ಹ್ಯಾಂಡಲ್‌ಬಾರ್ ಅನ್ನು ಒಳಗೊಂಡಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಈ ಬೈಕಿನಲ್ಲಿ ವಿಭಿನ್ನ ವಿನ್ಯಾಸದ ಎಲ್ಸಿಡಿ ಮತ್ತು ಬಿಳಿ ಬ್ಯಾಕ್ಲಿಟ್ ಅನಲಾಗ್ ಟ್ಯಾಕೋಮೀಟರ್ ನೊಂದಿಗೆ ಪರಿಷ್ಕೃತ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಕನ್ಸೋಲ್ ಅನ್ನು ಪಡೆಯುತ್ತದೆ. ಹೊಸ ಬೆನೆಲ್ಲಿ ಟಿಆರ್‌ಕೆ 502ಎಕ್ಸ್ ಬೈಕಿನ ಮುಂಭಾಗ 19 ಇಂಚಿನ ವ್ಹೀಲ್ ಮತ್ತು ಹಿಂಭಾಗದಲ್ಲಿ 17 ಇಂಚಿನ ಸ್ಪೋಕ್ ವೀಲ್ ಅನ್ನು ಅಳವಡಿಸಿದೆ. ಇನ್ನು ಈ ಅಡ್ವೆಂಚರ್ ಟೂರರ್ ಬೈಕ್ 220 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಅನ್ನು ಹೊಂದಿದೆ.

ಇನ್ನು ಈ ಬೈಕಿನಲ್ಲಿ ದೊಡ್ಡ 20-ಲೀಟರ್ ಸಾಮರ್ಥ್ಯದ ಫ್ಯೂಯಲ್ ಟ್ಯಾಂಕ್ ಅನ್ನು ಹೊಂದಿದೆ. ಲಾಂಗ್ ರೈಡ್ ತೆರಳುವಾಗ ಇದರಲ್ಲಿ ದೊಡ್ಡ ಪ್ಯೂಯಲ್ ಟ್ಯಾಂಕ್ ನೀಡಿರುವುದು ಉತ್ತಮ ಸಹಕಾರಿಯಾಗಿರುತ್ತದೆ. ಇನ್ನು ಗಾಳಿಯ ರಕ್ಷಣೆಗೆ ದೊಡ್ಡ ವಿಂಡ್‌ಸ್ಕ್ರೀನ್ ಮತ್ತು ಹೊಸ ಅಲ್ಯೂಮಿನಿಯಂ ರೇರ್ ಬಾಕ್ಸ್ ಬ್ರ್ಯಾಕೆಟ್ ಅನ್ನು ನೀಡಿದೆ. ಈ ಹೊಸ ಬೈಕ್ 2,220 ಎಂಎಂ ಉದ್ದ, 915 ಎಂಎಂ ಅಗಲ ಮತ್ತು 1,505 ಎಂಎಂ ವ್ಜೀಲ್ ಬೇಸ್ ಅನ್ನು ಹೊಂದಿದೆ. ಇನ್ನು ಈ ಬೈಕಿನ ಸೀಟ್ 840 ಎಂಎಂ ಎತ್ತರವನ್ನು ಹೊಂದಿದೆ.

ಇನ್ನು ಈ ಬೆನೆಲ್ಲಿ ಟಿಆರ್‌ಕೆ 502ಎಕ್ಸ್ ಅಡ್ವೆಂಚರ್ ಟೂರರ್ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 320 ಎಂಎಂ ಡ್ಯುಯಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ 260 ಎಂಎಂ ಸಿಂಗಲ್ ಡಿಸ್ಕ್ ಅನ್ನು ಪಡೆಯುತ್ತದೆ.

ಬೆನೆಲ್ಲಿ ಟಿಆರ್‌ಕೆ 502ಎಕ್ಸ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ, ಕವಾಸಕಿ ವರ್ಸಿಸ್ 650 ಮತ್ತು ಹೊಸ ಹೋಂಡಾ ಸಿಬಿ500ಎಕ್ಸ್ ಬೈಕುಗಳಿಗೆ ಪೈಪೋಟಿ ನೀಡುತ್ತದೆ. ಹೊಸ ಬೆನೆಲ್ಲಿ ಟಿಆರ್‌ಕೆ 502ಎಕ್ಸ್ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಅಡ್ವೆಂಚರ್ ಟೂರರ್ ಬೈಕುಗಳಲ್ಲಿ ಇದು ಕೂಡ ಒಂದಾಗಿದೆ.