Just In
Don't Miss!
- News
ಪಲ್ಲವಿ ಡೇ ಬಳಿಕ ಮತ್ತೊಬ್ಬ ಯುವ ರೂಪದರ್ಶಿ ಆತ್ಮಹತ್ಯೆ
- Sports
ಮಹಿಳಾ ಟಿ20 ಚಾಲೆಂಜ್: ವೆಲಾಸಿಟಿ ವಿರುದ್ಧ ಗೆದ್ದ ಟ್ರೈಲ್ಬ್ಲೇಜರ್ಸ್, ಆದ್ರೂ ಫೈನಲ್ ಮಿಸ್
- Finance
ಮೇ 26ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Movies
ಬಾಲಕೃಷ್ಣ 107ನೇ ಸಿನಿಮಾದ ಟೈಟಲ್ 'ಜೈ ಬಾಲಯ್ಯ'
- Technology
ಸ್ಯಾಮ್ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್ಫೋನ್ ಬಿಡುಗಡೆ! ವಿಶೇಷತೆ ಏನು?
- Lifestyle
ಕಿಚನ್ ಟಿಪ್ಸ್: ಫ್ರಿಡ್ಜ್ನಲ್ಲಿ ಆಹಾರಗಳನ್ನು ಹೀಗೆ ಇಟ್ಟರೆ ಆರೋಗ್ಯಕ್ಕೆ ಕುತ್ತು ಎಚ್ಚರ..!
- Education
Karnataka SSLC Revaluation 2022 : ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಬೆನೆಲ್ಲಿ ಇಂಪೀರಿಯಲ್ 400 ಬೈಕ್
ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಬೆನೆಲ್ಲಿ ಇಂಡಿಯಾ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಸರಣಿಯಲ್ಲಿರುವ ಬೈಕ್‌ಗಳ ಬೆಲೆಯನ್ನು ಪರಿಷ್ಕರಿಸಿದೆ. ಇದರಲ್ಲಿ ಮಾರ್ಡನ್-ಕ್ಲಾಸಿಕ್ ಮಾದರಿಯಾದ ಇಂಪೀರಿಯರ್ 400 ಕೂಡ ಒಳಗೊಂಡಿದೆ.

ಇದರಿಂದ ಈ ಬೆನೆಲ್ಲಿ ಇಂಪೀರಿಯರ್ 400 ಬೈಕ್ ಕೂಡ ಭಾರತದಲ್ಲಿ ತುಸು ದುಬಾರಿಯಾಗಿದೆ.ಈ ಬೆನೆಲ್ಲಿ ಇಂಪೀರಿಯರ್ 400 ಬೈಕ್ ಮೂರು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಬೆಲೆ ಏರಿಕೆಯ ಬಳಿಕ, ಬೆನೆಲ್ಲಿ ಇಂಪೀರಿಯರ್ 400 ಬೈಕಿನ ಸ್ವಿಲರ್ ಮಾದರಿಯ ಬೆಲೆಯು ರೂ.1,99,999 ಗಳಾದರೆ ರೆಡ್-ಬ್ಲ್ಯಾಕ್ ಆಯ್ಕೆಯ ಬೆಲೆಯು ರೂ.2,05,000 ಗಳಾಗಿದೆ. ಈ ಎಲ್ಲಾ ಬೆಲೆಗಳು ಭಾರತದ ಎಕ್ಸ್ ಶೋರೂಂ ಪ್ರಕಾರವಾಗಿದೆ. ಬೆಲೆ ಏರಿಕೆಯನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬದಲಾವಣೆಗಳನ್ನು ಹೊಂದಿಲ್ಲ.

ಈ ಬೆನೆಲ್ಲಿ ಇಂಪೀರಿಯಲ್ 400 ಬೈಕಿನಲ್ಲಿ 374 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಅನ್ನು ಬಿಎಸ್6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. ಈ ಎಂಜಿನ್ 6000 ಆರ್‌ಪಿಎಂನಲ್ಲಿ 20 ಬಿಹೆಚ್‌ಪಿ ಪವರ್ ಮತ್ತು 3500 ಆರ್‌ಪಿಎಂನಲ್ಲಿ 29 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಈ ಬೆನೆಲ್ಲಿ ಇಂಪೀರಿಯಲ್ 400 ಬೈಕ್ ಕ್ಲಾಸಿಕ್ ಲುಕ್ ಆನ್ನು ಹೊಂದಿದ್ದು, ಮುಂಭಾಗದಿಂದ ಆಕರ್ಷಕವಾಗಿ ಕಾಣುತ್ತದೆ. ಕ್ಲಾಸಿಕ್ ಲುಕ್ ಗಾಗಿ ದುಂಡಾಗಿರುವ ಹೆಡ್‌ಲ್ಯಾಂಪ್‌ಗಳನ್ನು ನೀಡಲಾಗಿದೆ. ಇದರ ಜೊತೆಗೆ ಈ ಬೈಕ್‌ನಲ್ಲಿ ಟ್ವಿನ್ ಪಾಡ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ನೀಡಲಾಗಿದೆ.

ಹೊಸ ಇಂಪೀರಿಯಲ್ 400 ಬೈಕ್ ಮುಂಭಾಗದಲ್ಲಿ 19 ಇಂಚಿನ ಹಾಗೂ ಹಿಂಭಾಗದಲ್ಲಿ 18 ಇಂಚಿನ ಟಯರ್‌ಗಳನ್ನು ಹೊಂದಿದೆ. ಇನ್ನು ಮುಂಭಾಗ ಹಾಗೂ ಹಿಂಭಾಗದಲ್ಲಿ 100/90 ಮತ್ತು 130/80 ವಿಭಾಗದ ಟಯರ್‌ಗಳನ್ನು ಹೊಂದಿವೆ

ಬೆನೆಲ್ಲಿ ಇಂಪೀರಿಯಲ್ 400 ಬೈಕ್ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 41 ಎಂಎಂ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಪ್ರೀಲೋಡ್ ಹೊಂದಾಣಿಕೆ ಮಾಡಬಹುದಾದ ಡ್ಯುಯಲ್ ಸ್ಪ್ರಿಂಗ್‌ಗಳನ್ನು ಹೊಂದಿವೆ

ಇನ್ನು ಪ್ರಮುಖವಾಗಿ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 300 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 300 ಎಂಎಂ ಡಿಸ್ಕ್ ಬ್ರೇಕ್ ಅನ್ನು ನೀಡಲಾಗಿದೆ. ಇದರೊಂದಿಗೆ ಹೆಚ್ಚಿನ ಸುರಕ್ಷಿತೆಗಾಗಿ, 240 ಎಂಎಂ ಡಿಸ್ಕ್ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಜೋಡಿಸಲಾಗಿದೆ.

ಬೆನೆಲ್ಲಿ ಇಂಪೀರಿಯಲ್ 400 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಜಾವ ಬೈಕುಗಳಿಗೆ ಮತ್ತು ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಮಾದರಿಗೆ ನೇರ ಪೈಪೋಟಿಯನ್ನು ನೀಡುತ್ತದೆ. ಬೆಲೆ ಏರಿಕೆ ಪಡೆದಿರುವುದರಿಂದ ಮಾರಾಟದ ಮೇಲೆ ಪರಿಣಾಮ ಬೀರುವುದಿಲ್ಲವೆಂದು ನಿರೀಕ್ಷಿಸುತ್ತೇವೆ.

ಇನ್ನು ಬೆನೆಲ್ಲಿ ತನ್ನ ಬೈಕ್‌ಗಳ ಬೆಲೆಯನ್ನು ಪರಿಷ್ಕರಿಸಿದೆ. ಈ ಬೆಲೆ ಪರಿಷ್ಕರಣೆಯು ಅದರ ಮಿಡಲ್‌ವೇಟ್ ಅಡ್ವೆಂಚರ್ ಟೂರರ್ ಮೋಟಾರ್‌ಸೈಕಲ್‌ಗಳಾದ ಟಿಆರ್‌ಕೆ 502 ಮತ್ತು ಟಿಆರ್‌ಕೆ 502ಎಕ್ಸ್ ಮೇಲೆ ಪರಿಣಾಮ ಬೀರುತ್ತದೆ. ಬೆಲೆ ಏರಿಕೆಯ ಬಳಿಕ ಬೆನೆಲ್ಲಿ ಟಿಆರ್‌ಕೆ 502 ಬೈಕಿನ ಆರಂಭಿಕ ಬೆಲೆಯು ರೂ,5.24 ಲಕ್ಷವಾದರೆ, ಆಫ್-ರೋಡ್-ಫೋಕಸ್ಡ್ ಟಿಆರ್‌ಕೆ 502ಎಕ್ಸ್ ಬೈಕಿನ ಬೆಲೆಯು ರೂ,5.69 ಲಕ್ಷಗಳಾಗಿದೆ. ಬೆಲೆ ಏರಿಕೆಯನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬದಲಾವಣೆಗಳನ್ನು ಹೊಂದಿರುವುದಿಲ್ಲ.

ಮೊದಲಿಗೆ ಈ ಬೆನೆಲ್ಲಿ ಟಿಆರ್‌ಕೆ 502 ಬೈಕ್ ಬಗ್ಗೆ ಹೇಳುವುದಾದರೆ, ಇದು ಮೆಟಾಲಿಕ್ ಡಾರ್ಕ್ ಗ್ರೇ ಮತ್ತು ರೆಡ್ ಮತ್ತು ಪ್ಯೂರ್ ವೈಟ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಈ ಬೆನೆಲ್ಲಿ ಟಿಆರ್‌ಕೆ 502 ಬೈಕಿನಲ್ಲಿ 500ಸಿಸಿ ಲಿಕ್ವಿಡ್-ಕೂಲ್ಡ್ ಪ್ಯಾರೆಲಲ್-ಟ್ವಿನ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 8,500 ಆರ್‌ಪಿಎಂನಲ್ಲಿ 47 ಬಿಎಚ್‌ಪಿ ಪವರ್ ಮತ್ತು 6,000 ಆರ್‌ಪಿಎಂನಲ್ಲಿ 46 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

ಟಿಆರ್‌ಕೆ 502 ಬೈಕಿನ ಎಂಜಿನ್ ಅನ್ನು ಬಿಎಸ್ 6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸುವುದರ ಜೊತೆಗೆ ಬೆನೆಲ್ಲಿ ಮರುವಿನ್ಯಾಸಗೊಳಿಸಿದ ಸೈಡ್ ಮೀರರ್ ಗಳನ್ನು ಅಳವಡಿಸಿದ್ದಾರೆ. ಇನ್ನು ಅಲ್ಯೂಮಿನಿಯಂ ಫ್ರೇಮ್ ನಕಲ್ ಗಾರ್ಡ್‌ಗಳನ್ನು ಸಹ ನೀಡಲಾಗಿದೆ. ಈ ಹಿಂದೆ ಬಿಡುಗಡೆಗೊಂಡಾಗ ಬೆನೆಲ್ಲಿ ಟಿಆರ್‌ಕೆ 502 ಬೈಕಿನಲ್ಲಿ ವೈಟ್ ಮತ್ತು ಅರೇಂಜ್ ಬಣ್ಣದ ಸೆಮಿ-ಡಿಜೆಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಬ್ಯಾಕ್‌ಲಿಟ್, ಹೊಸ ಹ್ಯಾಂಡಲ್‌ಬಾರ್, ಪರಿಷ್ಕೃತ ಬಾಡಿ ಗ್ರಾಫಿಕ್ಸ್ ಮತ್ತು ಇದರ ಕಂಫರ್ಟ್ ಲೆವೆಲ್ ಕೂಡ ಹೆಚ್ಚಾಗಿದೆ ಎಂದು ಕಂಪನಿ ಹೇಳಿಕೊಂಡಿದೆ.

ಇನ್ನು ಬೆನೆಲ್ಲಿ ಟಿಆರ್‌ಕೆ 502ಎಕ್ಸ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ, ಕವಾಸಕಿ ವರ್ಸಿಸ್ 650 ಮತ್ತು ಹೊಸ ಹೋಂಡಾ ಸಿಬಿ500ಎಕ್ಸ್ ಬೈಕುಗಳಿಗೆ ಪೈಪೋಟಿ ನೀಡುತ್ತದೆ. ಹೊಸ ಬೆನೆಲ್ಲಿ ಟಿಆರ್‌ಕೆ 502ಎಕ್ಸ್ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಅಡ್ವೆಂಚರ್ ಟೂರರ್ ಬೈಕುಗಳಲ್ಲಿ ಇದು ಕೂಡ ಒಂದಾಗಿದೆ.