ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾಗುವ 350 ಸಿಸಿ ಬೈಕ್‌ಗಳಿವು...

ರಾಯಲ್ ಎನ್‌ಫೀಲ್ಡ್ ಮತ್ತೊಮ್ಮೆ ಭಾರತದಲ್ಲಿ 350cc ಮತ್ತು ಅದಕ್ಕಿಂತ ಹೆಚ್ಚಿನ ದ್ವಿಚಕ್ರ ವಾಹನಗಳ ವಿಭಾಗದಲ್ಲಿ ಮಾರಾಟ ಪಟ್ಟಿಯಲ್ಲಿ ಪ್ರಾಬಲ್ಯ ಸಾಧಿಸಿದೆ. ಇದಲ್ಲದೆ, ಪ್ರತಿಷ್ಠಿತ ಭಾರತೀಯ ದ್ವಿಚಕ್ರ ವಾಹನ ತಯಾರಕರ ವರ್ಷದಿಂದ ವರ್ಷದ ಮಾರಾಟದಲ್ಲಿಯು ಬೆಳವಣಿಗೆಯನ್ನು ಸಾಧಿಸಿದೆ. ಕಳೆದ ತಿಂಗಳಿನಲ್ಲಿ ಹೆಚ್ಚು ಮಾರಾಟವಾಗುವ 350 ಸಿಸಿ ಬೈಕ್‌ಗಳ ಬಗ್ಗೆ ಮಾಹಿತಿ ಇಲ್ಲಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾಗುವ 350 ಸಿಸಿ ಬೈಕ್‌ಗಳಿವು...

ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350

ಕಳೆದ ತಿಂಗಳಿನಲ್ಲಿ ಹೆಚ್ಚು ಮಾರಾಟವಾಗುವ 350 ಸಿಸಿ ಬೈಕ್‌ಗಳ ವಿಭಾಗದಲ್ಲಿ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. 2022ರ ಜೂನ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು ಕ್ಲಾಸಿಕ್ 350 ಮಾದರಿಯ 25,425 ಯುನಿಟ್‌ಗಳನ್ನು ಭಾರತದಲ್ಲಿ ಮಾರಾಟ ಮಾಡಲು ಯಶಸ್ವಿಯಾಗಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾಗುವ 350 ಸಿಸಿ ಬೈಕ್‌ಗಳಿವು...

2022ರ ಮೇ ತಿಂಗಳಿನಲ್ಲಿ ಲ್ಲಿ ಕಂಪನಿಯು 29,959 ಯುನಿಟ್‌ಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿದ್ದರಿಂದ ಮೋಟಾರ್‌ಸೈಕಲ್‌ನ ತಿಂಗಳಿನಿಂದ ತಿಂಗಳ ಮಾರಾಟದಲ್ಲಿ ಶೇಕಡಾ 15 ಕ್ಕಿಂತ ಹೆಚ್ಚು ಕಡಿಮೆಯಾಗಿದೆ. ಇನ್ನು ವರ್ಷದಿಂದ ವರ್ಷದ ಮಾರಾಟದಲ್ಲಿ ಶೇಕಡಾ 46 ಕ್ಕಿಂತ ಹೆಚ್ಚು ಬೆಳವಣಿಗೆಯನ್ನು ಸಾಧಿಸಿದೆ. ಈ ಹೊಸ ಕ್ಲಾಸಿಕ್ 350 ಬೈಕಿಗೆ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಹೊಂದಿದೆ. ಈ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಮಾದರಿಯಲ್ಲಿ ಮಿಟಿಯೊರ್ 350 ಮಾದರಿಗಾಗಿ ಪರಿಚಯಿಸಿರುವ 349 ಸಿಸಿ SOHC ಎಂಜಿನ್ ಅನ್ನು ಅಳವಡಿಸಲಾಗಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾಗುವ 350 ಸಿಸಿ ಬೈಕ್‌ಗಳಿವು...

ಈ ಎಂಜಿನ್ 19.1 ಬಿಎಚ್‌ಪಿ ಪವರ್ ಮತ್ತು 28 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ, ಇದರಲ್ಲಿ ಹೊಸ ಮಾದರಿಯ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಇದರ ಜೊತೆಗೆ ಎಲ್‌ಸಿಡಿ ಜೊತೆಗೆ ಪ್ರತ್ಯೇಕವಾದ ಫ್ಯೂಲ್ ಗೇಜ್ ಮತ್ತು ಟ್ರಿಪ್ಲರ್ ಮೀಟರ್ ನೀಡಲಾಗಿದ್ದು, ಮಿಟಿಯೊರ್ ಮಾದರಿಯಲ್ಲಿರುವಂತೆ ಪ್ರತ್ಯೇಕವಾದ ಟ್ವಿನ್ ಪಾಡ್ ನೀಡದೆ ಇಂಟ್ರಾಗ್ರೆಟೆಡ್ ಹೊಂದಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾಗುವ 350 ಸಿಸಿ ಬೈಕ್‌ಗಳಿವು...

ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350

ಈ ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ತನ್ನ ಅಸಾಧಾರಣ ಟೂರಿಂಗ್ ಸಾಮರ್ಥ್ಯಗಳಿಗೆ ಹೆಸರುವಾಸಿಯಾಗಿದೆ. 2022ರ ಜೂನ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಮಾದರಿಯ 8,645 ಯುನಿಟ್‌ಗಳನ್ನು ಮಾರಾಟ ಮಾಡಿದ್ದಾರೆ. ವರ್ಷದಿಂದ ವರ್ಷದ ಮಾರಾಟದಲ್ಲಿ ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಶೇಕಡಾ 1.43 ರಷ್ಟು ಕುಸಿತವಾಗಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾಗುವ 350 ಸಿಸಿ ಬೈಕ್‌ಗಳಿವು...

2022ರ ಮೇ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಮಾದರಿಯ 8,209 ಯುನಿಟ್‌ಗಳನ್ನು ಮಾರಾಟ ಮಾಡಿದ್ದಾರೆ. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ತಿಂಗಳಿನಿಂದ ತಿಂಗಳ ಮಾರಾಟದಲ್ಲಿ ಶೇಕಡಾ 5 ಕ್ಕಿಂತ ಹೆಚ್ಚು ಬೆಳವಣಿಗೆಯನ್ನು ಸಾಧಿಸಿದೆ. ಈ ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಬೈಕನ್ನು ತಮಿಳುನಾಡು ಮತ್ತು ಯುಕೆ ಮೂಲದ ಆರ್‌ಇ ತಂಡವು ವಿನ್ಯಾಸಗೊಳಿಸಿದೆ. ಹಿಂದಿನ ಥಂಡರ್‌ಬರ್ಡ್ ಎಕ್ಸ್ ಮಾದರಿಯನ್ನು ಆಧರಿಸಿ ನಿರ್ಮಾಣಗೊಂಡಿರುವ ಮಿಟಿಯೊರ್ 350 ಬೈಕ್ ಮಾದರಿಯು ಥಂಡರ್‌ಬರ್ಡ್ ಬೈಕಿಗಿಂತಲೂ ಸಾಕಷ್ಟು ವಿಭಿನ್ನವಾಗಿ ಮತ್ತು ಆಕರ್ಷಕವಾಗಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾಗುವ 350 ಸಿಸಿ ಬೈಕ್‌ಗಳಿವು...

ಈ ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಬೈಕ್ ಅನ್ನು ಕಂಪನಿಯ ಹೊಸ ಜೆ ಪ್ಲಾಟ್‌ಫಾರ್ಮ್‌ನಲ್ಲಿ ವಿನ್ಯಾಸಗೊಳಿಸಲಾಗಿದ್ದು ಅದು ಹೊಸ ತಲೆಮಾರಿನ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಅನ್ನು ಸಹ ಆಧಾರಗೊಳಿಸುತ್ತದೆ. ಈ ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಬೈಕಿನ ಮುಂಭಾಗ 19-ಇಂಚಿನ ಮತ್ತು ಹಿಂಭಾಗದಲ್ಲಿ 17-ಇಂಚಿನ ಅಲಾಯ್ ವ್ಹೀಲ್ ಗಳನ್ನು ಜೋಡಿಸಲಾಗಿದೆ. ಇದು ಕ್ರಮವಾಗಿ 100 / 90-19 57 ಪಿ ಮತ್ತು 140 / 70-17 66 ಪಿ ಸಿಯೆಟ್ ಟ್ಯೂಬ್‌ಲೆಸ್ ಟೈರ್ ಅನ್ನು ಒಳಗೊಂಡಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾಗುವ 350 ಸಿಸಿ ಬೈಕ್‌ಗಳಿವು...

ಡಬಲ್ ಡೌನ್‌ಟ್ಯೂಬ್ ಕ್ರೆಡಲ್ ಫ್ರೇಮ್ ಮೇಲೆ ಅಭಿವೃದ್ದಿಗೊಂಡಿರುವ ಮಿಟಿಯೊರ್ ಬೈಕ್ ಮಾದರಿಯು ಥಂಡರ್‌ಬರ್ಡ್ ಮಾದರಿಗಿಂತಲೂ ಹೆಚ್ಚು ಅರಾಮದಾಯಕ ರೈಡಿಂಗ್ ಅನುಭವ ನೀಡುತ್ತದೆ. ಈ ಬೈಕಿನ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ 41-ಎಂಎಂ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಟ್ವಿನ್ ಶಾಕ್‌ ಅಬ್ಸಾರ್ಬರ್‌ ಅನ್ನು ನೀಡಲಾಗಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾಗುವ 350 ಸಿಸಿ ಬೈಕ್‌ಗಳಿವು...

ರಾಯಲ್ ಎನ್‌ಫೀಲ್ಡ್ ಬುಲೆಟ್ 350

ಈ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ದೀರ್ಘ ಇತಿಹಾಸವನ್ನು ಹೊಂದಿರುವ ಮೋಟಾರ್‌ಸೈಕಲ್ ಆಗಿದೆ ಮತ್ತು ಭಾರತದಲ್ಲಿ ನಿಜವಾಗಿಯೂ ಈ ಬೈಕ್ ದ್ಪೊಡ್ಡ ಮಟ್ಟದ ಅಭಿಮಾನಿಗಳನ್ನು ಹೊಂದಿದೆ. 2022ರ ಜೂನ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಈ ಮಾದರಿಯ 5,893 ಯೂನಿಟ್‌ಗಳನ್ನು ಮಾರಾಟ ಮಾಡಿತು, ಇದರ ಪರಿಣಾಮವಾಗಿ ವರ್ಷದಿಂದ ವರ್ಷದ ಮಾರಾಟದಲ್ಲಿ ಶೇಕಡಾ 11 ರಷ್ಟು ಹೆಚ್ಚಾಗಿದೆ.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾಗುವ 350 ಸಿಸಿ ಬೈಕ್‌ಗಳಿವು...

ಮತ್ತೊಂದೆಡೆ, ರಾಯಲ್ ಎನ್‌ಫೀಲ್ಡ್ ಬುಲೆಟ್‌ನ ತಿಂಗಳಿನಿಂದ ತಿಂಗಳ ಮಾರಾಟದಲ್ಲಿ ಶೇಕಡಾ 15 ಕ್ಕಿಂತ ಹೆಚ್ಚು ಕಡಿಮೆಯಾಗಿದೆ, ಏಕೆಂದರೆ ಕಂಪನಿಯು ಮೇ 2022 ರಲ್ಲಿ 6,958 ಯುನಿಟ್‌ಗಳನ್ನು ಮಾರಾಟ ಮಾಡಿತ್ತು. ನ್ಯೂ ಜನರೇಷನ್ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಬೈಕ್ ಅನ್ನು ಕಂಪನಿಯು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾಗುವ 350 ಸಿಸಿ ಬೈಕ್‌ಗಳಿವು...

ರಾಯಲ್ ಎನ್‌ಫೀಲ್ಡ್ ಎಲೆಕ್ಟ್ರಾ 350

2022ರ ಜೂನ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಎಲೆಕ್ಟ್ರಾ 350 ಮೋಟಾರ್‌ಸೈಕಲ್‌ಗಳ 4,363 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಜೂನ್‌ನಲ್ಲಿನ ಮಾರಾಟದ ಅಂಕಿಅಂಶಗಳು ಇತರ ರಾಯಲ್ ಎನ್‌ಫೀಲ್ಡ್ ಮಾದರಿಗಳಿಗಿಂತ ತುಲನಾತ್ಮಕವಾಗಿ ಕಡಿಮೆಯಿದ್ದರೂ, ಇದು 350cc ದೇಶದ ಮೋಟಾರ್‌ಸೈಕಲ್‌ಗೆ ಯೋಗ್ಯವಾದ ಅಂಕಿಅಂಶಕ್ಕಿಂತ ಹೆಚ್ಚು.

ಜೂನ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾಗುವ 350 ಸಿಸಿ ಬೈಕ್‌ಗಳಿವು...

ಹೋಂಡಾ ಸಿಬಿ350 ಟ್ವಿನ್ಸ್

ಈ ಹೋಂಡಾ ಸಿಬಿ350 ಟ್ವಿನ್ಸ್ಮೋಟಾರ್‌ಸೈಕಲ್‌ಗಳು ಭಾರತದಲ್ಲಿ ರಾಯಲ್ ಎನ್‌ಫೀಲ್ಡ್ ಮೋಟಾರ್‌ಸೈಕಲ್‌ಗಳಿಗೆ ಯೋಗ್ಯವಾದ ಸ್ಪರ್ಧೆಯನ್ನು ನೀಡುತ್ತಿವೆ ಮತ್ತು ಮಾದರಿಗಳು ಭಾರತೀಯ ದ್ವಿಚಕ್ರ ವಾಹನ ವಿಭಾಗದಲ್ಲಿ ಯೋಗ್ಯವಾದ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. 2022ರ ಜೂನ್ ತಿಂಗಳಿನಲ್ಲಿ ಹೋಂಡಾ ಸಿಬಿ350 ಟ್ವಿನ್ಸ್ ಮಾದರಿಯ 2,120 ಯುನಿಟ್‌ಗಳು ಮಾರಾಟವಾಗಿವೆ. ಇದನ್ನು ತಿಂಗಳಿನಿಂದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಸುಮಾರು 36 ಪ್ರತಿಶತದಷ್ಟು ಕುಸಿದಿದೆ. 2021ರ ಜುನ್ ತಿಂಗಳಿನಲ್ಲಿ ಹೋಂಡಾ ಸಿಬಿ350 ಟ್ವಿನ್ಸ್ ಮಾದರಿಯ 267 ಯುನಿಟ್‌ಗಳನ್ನು ಹೆಚ್ಚು ಮಾರಾಟ ಮಾಡಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಭಾರೀ ಬೆಳವಣಿಗೆಯನ್ನು ಸಾಧಿಸಿದೆ.

Most Read Articles

Kannada
English summary
Best selling 350cc motorcycles in june 2022 details
Story first published: Monday, July 18, 2022, 19:29 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X