Just In
Don't Miss!
- News
ಜಾತಿ ನಿಂದನೆ ಪ್ರಕರಣ: ಬಸವರಾಜ ಹೊರಟ್ಟಿ ವಿರುದ್ಧ ತನಿಖಾ ವರದಿ ಸಲ್ಲಿಕೆ
- Sports
ಐರ್ಲೆಂಡ್ನ ಹ್ಯಾರಿ ಟೆಕ್ಟರ್ಗೆ ಬ್ಯಾಟ್ ಗಿಫ್ಟ್ ನೀಡಿದ ಹಾರ್ದಿಕ್ ಪಾಂಡ್ಯ
- Movies
ಸಿಧು ಮೂಸೆವಾಲಾ ಹಾಡಿದ್ದ ಕೊನೆಯ ಹಾಡು ಬಿಡುಗಡೆ ಆದ ಮೂರೇ ದಿನಕ್ಕೆ ಡಿಲೀಟ್!
- Lifestyle
ನಿಮ್ಮಿಬ್ಬರ ಸಂಬಂಧ ಹೀಗಿದ್ದರೆ ಒಟ್ಟಿಗಿದ್ದು ಪಡುವ ನರಕಕ್ಕಿಂತ ಗುಡ್ಬೈ ಹೇಳುವುದೇ ಬೆಸ್ಟ್!
- Finance
ಜೂ.27ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Education
UAS Dharwad Recruitment 2022 : ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ಜು.2ಕ್ಕೆ ನೇರ ಸಂದರ್ಶನ
- Technology
‘ಫಾಸ್ಟ್ಯಾಗ್' ನಲ್ಲಿರುವ ಹಣವನ್ನು ಕದಿಯಬಹುದಾ? ವೈರಲ್ ವೀಡಿಯೊದ ಅಸಲಿಯತೆ ಏನು?
- Travel
ನಾಡ ಹಬ್ಬ ಮೈಸೂರು ದಸರಾ - ನವರಾತ್ರಿ ಉತ್ಸವ 2022
ಆಕರ್ಷಕ ಬೆಲೆಯಲ್ಲಿ ಅತ್ಯಧಿಕ ಮೈಲೇಜ್ ಪ್ರೇರಿತ ಡಿ15 ಇವಿ ಸ್ಕೂಟರ್ ಬಿಡುಗಡೆಗೊಳಿಸಿದ ಬಿಗೌಸ್
ಬಿಗೌಸ್ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕಂಪನಿಯು ತನ್ನ ಬಹುನೀರಿಕ್ಷಿತ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಾದ ಡಿ15 ಭಾರತದಲ್ಲಿ ಬಿಡುಗಡೆ ಮಾಡಿದ್ದು, ಹೊಸ ಸ್ಕೂಟರ್ ಮಾದರಿಯು ಪ್ರಮುಖ ಎರಡು ವೆರಿಯೆಂಟ್‌ಗಳಲ್ಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 99,999 ಬೆಲೆ ಹೊಂದಿದೆ.

ಪ್ರೀಮಿಯಂ ಫೀಚರ್ಸ್‌ಗಳಿಗೆ ಅನುಗುಣವಾಗಿ ಬಿಗೌಸ್ ಕಂಪನಿಯು ಹೊಸ ಡಿ15 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಡಿ15ಐ ಮತ್ತು ಡಿ15 ಪ್ರೊ ಎನ್ನುವ ಎರಡು ವೆರಿಯೆಂಟ್‌ಗಳನ್ನು ಹೊಂದಿದ್ದು, ಬೆಸ್ ವೆರಿಯೆಂಟ್ ಎಕ್ಸಶೋರೂಂ ಪ್ರಕಾರ ರೂ. 99,999 ಬೆಲೆ ಹೊಂದಿದ್ದರೆ ಡಿ15 ಪ್ರೊ ಮಾದರಿಯು ರೂ. 1,14,999 ಬೆಲೆ ಹೊಂದಿದೆ.
ಪುಣೆ ಮೂಲದ ಬಿಗೌಸ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಪ್ರಸ್ತುತ ಮಾರುಕಟ್ಟೆಯಲ್ಲಿ ಎ2 ಮತ್ತು ಬಿ8 ಎನ್ನುವ ಎರಡು ಇವಿ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದ್ದು, ಇದೀಗ ಅತ್ಯುತ್ತಮ ಫೀಚರ್ಸ್ ಮತ್ತು ಮೈಲೇಜ್ ಶ್ರೇಣಿಯ ಡಿ15 ಇವಿ ಸ್ಕೂಟರ್ ಬಿಡುಗಡೆ ಮಾಡಿದೆ.

ಹೊಸ ಇವಿ ಸ್ಕೂಟರ್ ಮಾದರಿಯು 20ಕ್ಕೂ ಹೆಚ್ಚು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಮುಂದಿನ ತಿಂಗಳು ಅಧಿಕೃತವಾಗಿ ವಿತರಣೆಯಾಗಲಿರುವ ಹೊಸ ಮಾದರಿಯ ಖರೀದಿಗಾಗಿ ಕಂಪನಿಯು ರೂ. 499 ಮುಂಗಡ ಪಾವತಿಯೊಂದಿಗೆ ಬುಕಿಂಗ್ ಆರಂಭಿಸಿದೆ.

ಬಿಗೌಸ್ ಕಂಪನಿಯು ಹೊಸ ಇವಿ ಸ್ಕೂಟರ್ ಮಾದರಿಯಲ್ಲಿ 3.2kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೊತೆ 3.2kWh ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಿದ್ದು, ಹೊಸ ಸ್ಕೂಟರ್ ಮಾದರಿಯು ಪ್ರತಿ ಚಾರ್ಜ್‌ಗೆ ಇಕೋ ಮೋಡ್‌ನಲ್ಲಿ ಗರಿಷ್ಠ 115 ಕಿ.ಮೀ ಮೈಲೇಜ್ ನೀಡಲಿದೆ.
ಹೊಸ ಸ್ಕೂಟರ್‌ನಲ್ಲಿ ಕಂಪನಿಯು ಇಕೋ ಮತ್ತು ಹೈಪರ್ ಎನ್ನುವ ಎರಡು ರೈಡ್ ಮೋಡ್‌ಗಳನ್ನು ನೀಡಿದ್ದು, ಹೈಪರ್ ಮೋಡ್‌ನಲ್ಲಿ ಇದು ಕೇವಲ 7 ಸೆಕೆಂಡುಗಳಲ್ಲಿ ಸೊನ್ನೆಯಿಂದ 60 ಕಿ.ಮೀ ವೇಗವನ್ನು ತಲುಪುತ್ತದೆ.

ಹಾಗೆಯೇ ಹೊಸ ಸ್ಕೂಟರ್ ಮಾದರಿಯಲ್ಲಿ ಬಿಗೌಸ್ ಕಂಪನಿಯು ಸುಮಾರು ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿದ್ದು, ಉತ್ತಮ ರಸ್ತೆ ಉಪಸ್ಥಿತಿ ಪಡೆದುಕೊಂಡಿರುವ ಬಿಗೌಸ್ ಹೊಸ ಇವಿ ಸ್ಕೂಟರ್ ಮಾದರಿಯು ಸ್ಪೋರ್ಟಿ ವಿನ್ಯಾಸವನ್ನು ಹೊಂದಿದೆ.

ಹೊಸ ಸ್ಕೂಟರಿನಲ್ಲಿ ಕಂಪನಿಯು ಹೆಚ್ಚು ಪ್ರಕಾಶಮಾನವಾದ ಎಲ್ಇಡಿ ಹೆಡ್‌ಲ್ಯಾಂಪ್, 16 ಇಂಚಿನ ಅಲಾಯ್ ವ್ಹೀಲ್ ಮತ್ತು ಉತ್ತಮ ವಿನ್ಯಾಸದ ಆಸನ ಸೌಲಭ್ಯ ನೀಡಿದ್ದು, ಹೊಸ ಸ್ಕೂಟರ್ ಮಾದರಿಯ ಮತ್ತೊಂದು ಆಕರ್ಷಕ ಅಂಶವೆಂದರೆ ಬಿಗೌಸ್ ಕಂಪನಿಯು ಹೊಸ ಇವಿ ಸ್ಕೂಟರ್ ಮಾದರಿಯಲ್ಲಿ ಸಂಪೂರ್ಣವಾಗಿ ಮೆಟಲ್ ಬಾಡಿ ಜೋಡಣೆ ಮಾಡಿದೆ.

ಪ್ರೀಮಿಯಂ ಫೀಚರ್ಸ್ ಮತ್ತು ಸೇಫ್ಟಿ ವಿಚಾರದಲ್ಲಿ ಗ್ರಾಹಕರ ಆಕರ್ಷಿಸುವ ಹೊಸ ಮಾದರಿಯು ಪ್ರತಿ ಚಾರ್ಜ್‌ಗೆ ಇಕೋ ಮೋಡ್ ಮೂಲಕ 115 ಕಿ.ಮೀ ಅಧಿಕ ಮೈಲೇಜ್ ನೀಡಲಾಗಿದ್ದು, ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಫಾಸ್ಟ್ ಚಾರ್ಜಿಂಗ್ ಸರ್ಪೊಟ್ ಹೊಂದಿದೆ.
ಹೋಂ ಚಾರ್ಜರ್ ಮೂಲಕ 5.30 ಗಂಟೆಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಮಾಡಬಹುದಾಗಿದ್ದು, IP67 ರೇಟಿಂಗ್ ಹೊಂದಿರುವ ಹೊಸ ಸ್ಕೂಟರ್ ಬ್ಯಾಟರಿ ಪ್ಯಾಕ್ ವಾಟರ್, ಡಸ್ಟ್ ಮತ್ತು ತುಕ್ಕು ನಿರೋಧಕ ವೈಶಿಷ್ಟ್ಯತೆಯನ್ನು ಹೊಂದಿದೆ.

ಹೊಸ ಇವಿ ಸ್ಕೂಟರ್ ಮಾದರಿಯ ಮುಂಭಾಗದಲ್ಲಿ ಟೆಲಿಸ್ಕೊಫಿಕ್ ಮತ್ತು ಹಿಂಬದಿಯಲ್ಲಿ ಮೊನೊಶಾಕ್ ಸಸ್ಷೆಂಷನ್ ನೀಡಲಾಗಿದ್ದು, ಬ್ರೇಕಿಂಗ್ ಸೌಲಭ್ಯಕ್ಕಾಗಿ ಕಂಪನಿಯು ಕಂಬೈನ್ಡ್ ಬ್ರೇಕಿಂಗ್ ಸಿಸ್ಟಂ ನೀಡಿದೆ. ಮೈಲೇಜ್ ಹೆಚ್ಚಳಕ್ಕಾಗಿ ಹೊಸ ಸ್ಕೂಟರ್‌ನಲ್ಲಿ ರೀಜನರೇಟಿವ್ ಬ್ರೇಕಿಂಗ್ ಸಿಸ್ಟಂ ಜೋಡಿಸಲಾಗಿದ್ದು, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಮೂಲಕ ಬಳಕೆದಾರರು ಒಂದೇ ಸೂರಿನಡಿ ಹಲವಾರು ಮಾಹಿತಿಗಳನ್ನು ಪಡೆದುಕೊಳ್ಳಬಹುದು.

ಹೊಸ ಸ್ಕೂಟರ್‌ನಲ್ಲಿ ಕನೆಕ್ಟಿವಿಟಿ ಸೌಲಭ್ಯವು ಸಹ ಉತ್ತಮವಾಗಿದ್ದು, ಡಿಜಿಟಲ್ ಸ್ಪೀಡೋ ಮೀಟರ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಕೀ ಲೆಸ್ ಸ್ಟಾರ್ಟ್, ತೆಗೆದುಹಾಕಬಹುದಾದ ಬ್ಯಾಟರಿ, ಇನ್‌ಬಿಲ್ಟ್ ನ್ಯಾವಿಗೇಶನ್, ಸ್ಮಾರ್ಟ್ ಫೋನ್ ಚಾರ್ಜ್ ಮಾಡಲು ಯುಎಸ್‌ಬಿ ಫೋರ್ಟ್, ಕಾಲ್ ಅಲರ್ಟ್ ನೋಟಿಫಿಕೇಶನ್ ಸೇರಿದಂತೆ ಹಲವಾರು ಫೀಚರ್ಸ್‌ಗಳಿವೆ.

ಇನ್ನು ಹೊಸ ಸ್ಕೂಟರ್ ಅನ್ನು ಕಂಪನಿಯು ಮ್ಯಾಟೆ ಬ್ಲ್ಯಾಕ್ ಅಂಡ್ ಸಿಲ್ವರ್, ಆಲ್ಪೈನ್ ಗ್ರಿನ್, ಪರ್ಲ್ ವೈಟ್, ರೇಸಿಂಗ್ ರೆಡ್ ಮತ್ತು ಗ್ಲಿಸ್ಟಿಂಗ್ ಬ್ಲ್ಯೂ ಬಣ್ಣಗಳ ಆಯ್ಕೆ ನೀಡಿದ್ದು, ಹೊಸ ಮಾದರಿಯ ಮೇಲೆ 36 ಸಾವಿರ ಕಿ.ಮೀ ಅಥವಾ 3 ವರ್ಷಗಳ ವಾರಂಟಿ ನೀಡಲಾಗಿದೆ.