ಅತ್ಯಧಿ ಮೈಲೇಜ್ ನೀಡುವ ಹೊಸ ಇವಿ ಸ್ಕೂಟರ್ ಬಿಡುಗಡೆಗೆ ಸಿದ್ದವಾದ ಬಿಗೌಸ್

ಮಾರುಕಟ್ಟೆಯಲ್ಲಿ ಇಂಧನಗಳ ಬೆಲೆ ಹೆಚ್ಚಳ ಪರಿಣಾಮ ಹೊಸ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಸಾಕಷ್ಟು ಬೇಡಿಕೆ ಪಡೆದುಕೊಳ್ಳುತ್ತಿದ್ದು, ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಬಿಗೌಸ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಶೀಘ್ರದಲ್ಲೇ ಮತ್ತಷ್ಟು ಹೊಸ ಇವಿ ಸ್ಕೂಟರ್ ಉತ್ಪನ್ನಗಳ ಬಿಡುಗಡೆಗೆ ಸಿದ್ದವಾಗಿದೆ.

ಪ್ರತಿ ಚಾರ್ಜ್‌ಗೆ 200 ಕಿ.ಮೀ ಮೈಲೇಜ್ ನೀಡುವ ಹೊಸ ಇವಿ ಸ್ಕೂಟರ್ ಬಿಡುಗಡೆಗೆ ಸಿದ್ದವಾದ ಬಿಗೌಸ್

ಪುಣೆ ಮೂಲದ ಬಿಗೌಸ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಪ್ರಸ್ತುತ ಮಾರುಕಟ್ಟೆಯಲ್ಲಿ ಎ2 ಮತ್ತು ಬಿ8 ಎನ್ನುವ ಎರಡು ಇವಿ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದ್ದು, ಅತ್ಯುತ್ತಮ ಫೀಚರ್ಸ್ ಹೊಂದಿರುವ ಬಿಗೌಸ್ ಇವಿ ಸ್ಕೂಟರ್‌ಗಳ ಖರೀದಿಗೆ ಹೆಚ್ಚಿನ ಬೇಡಿಕೆ ಹರಿದುಬರುತ್ತಿದೆ. ಹೀಗಾಗಿ ಕಂಪನಿಯು ಗ್ರಾಹಕರ ಬೇಡಿಕೆ ಆಧರಿಸಿ ಶೀಘ್ರದಲ್ಲಿಯೇ ತನ್ನ ಹೊಸ ಶ್ರೇಣಿಯ ಇವಿ ಸ್ಕೂಟರ್ ಮಾದರಿಯೊಂದಿಗೆ ಮಾರುಕಟ್ಟೆಗೆ ಪರಿಚಯಿಸುವ ಸಿದ್ದತೆಯಲ್ಲಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಅತ್ಯುತ್ತಮ ಫೀಚರ್ಸ್ ಮತ್ತು ಹೆಚ್ಚಿನ ರೇಂಜ್ ಹೊಂದಿರುವ ಬಿಗೌಸ್ ಹೊಸ ಇವಿ ಸ್ಕೂಟರ್ ಮಾದರಿಯು ಇದೇ ತಿಂಗಳು ಬಿಡುಗಡೆಯಾಗಲಿದ್ದು, ಬಿಡುಗಡೆಯಾಗಲಿರುವ ಹೊಸ ಇವಿ ಸ್ಕೂಟರ್ ಮಾದರಿಯನ್ನು ಕಂಪನಿಯ ಸದ್ಯಕ್ಕೆ ಬಿಜಿ ಡಿ15 ಹೆಸರಿನಲ್ಲಿ ಟೀಸರ್ ವಿಡಿಯೋಗಳನ್ನು ಹಂಚಿಕೊಂಡಿದೆ.

ಪ್ರತಿ ಚಾರ್ಜ್‌ಗೆ 200 ಕಿ.ಮೀ ಮೈಲೇಜ್ ನೀಡುವ ಹೊಸ ಇವಿ ಸ್ಕೂಟರ್ ಬಿಡುಗಡೆಗೆ ಸಿದ್ದವಾದ ಬಿಗೌಸ್

ಹೊಸ ಇವಿ ಸ್ಕೂಟರ್ ಬಿಡುಗಡೆಯ ಸಂದರ್ಭದಲ್ಲಿಯೇ ಅಧಿಕೃತ ಹೆಸರನ್ನು ಅನಾವರಣಗೊಳಿಸಲಿರುವ ಬಿಗೌಸ್ ಕಂಪನಿಯು ಹೊಸ ಇವಿ ಸ್ಕೂಟರ್ ಮಾದರಿಯ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿದ್ದು, ಹೊಸ ಮಾದರಿಯಲ್ಲಿ ಕಂಪನಿಯು 20 ಹೆಚ್ಚು ಪ್ರೀಮಿಯಂ ಫೀಚರ್ಸ್ ಜೋಡಣೆ ಮಾಡಿದೆ.

ಬಿಜಿ ಡಿ15 ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚು ಬಲಿಷ್ಠ ಎಲೆಕ್ಟ್ರಿಕ್ ಮೋಟಾರ್ ಮತ್ತು ಅತ್ಯಧಿಕ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಆಯ್ಕೆ ಹೊಂದಿರಲಿದ್ದು, ಹೊಸ ಸ್ಕೂಟರ್ ಮಾದರಿಯಲ್ಲಿ ಬಿಗೌಸ್ ಕಂಪನಿಯು ಸುಮಾರು ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿದೆ.

ಪ್ರತಿ ಚಾರ್ಜ್‌ಗೆ 200 ಕಿ.ಮೀ ಮೈಲೇಜ್ ನೀಡುವ ಹೊಸ ಇವಿ ಸ್ಕೂಟರ್ ಬಿಡುಗಡೆಗೆ ಸಿದ್ದವಾದ ಬಿಗೌಸ್

ಉತ್ತಮ ರಸ್ತೆ ಉಪಸ್ಥಿತಿ ಪಡೆದುಕೊಂಡಿರುವ ಬಿಗೌಸ್ ಹೊಸ ಇವಿ ಸ್ಕೂಟರ್ ಮಾದರಿಯು ಸ್ಪೋರ್ಟಿ ವಿನ್ಯಾಸವನ್ನು ಹೊಂದಿದ್ದು, ಹೊಸ ಸ್ಕೂಟರಿನಲ್ಲಿ ಕಂಪನಿಯು ಹೆಚ್ಚು ಪ್ರಕಾಶಮಾನವಾದ ಎಲ್ಇಡಿ ಹೆಡ್‌ಲ್ಯಾಂಪ್, 16 ಇಂಚಿನ ಅಲಾಯ್ ವ್ಹೀಲ್ ಮತ್ತು ಉತ್ತಮ ವಿನ್ಯಾಸದ ಆಸನ ಸೌಲಭ್ಯ ನೀಡಿದೆ.

ಹೊಸ ಸ್ಕೂಟರ್ ಮಾದರಿಯ ಮತ್ತೊಂದು ಆಕರ್ಷಕ ಅಂಶವೆಂದರೆ ಬಿಗೌಸ್ ಕಂಪನಿಯು ಹೊಸ ಇವಿ ಸ್ಕೂಟರ್ ಮಾದರಿಯಲ್ಲಿ ಸಂಪೂರ್ಣವಾಗಿ ಮೆಟಲ್ ಬಾಡಿ ಜೋಡಣೆ ಮಾಡಿದ್ದು, ಇದು ಹೊಸ ಸ್ಕೂಟರ್‌ಗೆ ಮತ್ತಷ್ಟು ಪ್ರೀಮಿಯಂ ಅನುಭವ ನೀಡಲಿದೆ.

ಪ್ರತಿ ಚಾರ್ಜ್‌ಗೆ 200 ಕಿ.ಮೀ ಮೈಲೇಜ್ ನೀಡುವ ಹೊಸ ಇವಿ ಸ್ಕೂಟರ್ ಬಿಡುಗಡೆಗೆ ಸಿದ್ದವಾದ ಬಿಗೌಸ್

ಈ ಪ್ರೀಮಿಯಂ ಫೀಚರ್ಸ್ ಮತ್ತು ಸೇಫ್ಟಿ ವಿಚಾರದಲ್ಲಿ ಗ್ರಾಹಕರ ಆಕರ್ಷಿಸುವ ಹೊಸ ಮಾದರಿಯು ಪ್ರತಿ ಚಾರ್ಜ್‌ಗೆ ಇಕೋ ಮೋಡ್ ಮೂಲಕ 120 ಕಿ.ಮೀ ಅಧಿಕ ಮೈಲೇಜ್ ನೀಡಲಾಗಿದ್ದು, ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಫಾಸ್ಟ್ ಚಾರ್ಜಿಂಗ್ ಸರ್ಪೊಟ್ ಹೊಂದಿದೆ.

ಇನ್ನು ಹೊಸ ಇವಿ ಸ್ಕೂಟರ್ ಮಾದರಿಯ ಮುಂಭಾಗದಲ್ಲಿ ಟೆಲಿಸ್ಕೊಫಿಕ್ ಮತ್ತು ಹಿಂಬದಿಯಲ್ಲಿ ಮೊನೊಶಾಕ್ ಸಸ್ಷೆಂಷನ್ ನೀಡಲಾಗಿದ್ದು, ಬ್ರೇಕಿಂಗ್ ಸೌಲಭ್ಯಕ್ಕಾಗಿ ಕಂಪನಿಯು ಕಂಬೈನ್ಡ್ ಬ್ರೇಕಿಂಗ್ ಸಿಸ್ಟಂ ನೀಡಿದೆ.

ಪ್ರತಿ ಚಾರ್ಜ್‌ಗೆ 200 ಕಿ.ಮೀ ಮೈಲೇಜ್ ನೀಡುವ ಹೊಸ ಇವಿ ಸ್ಕೂಟರ್ ಬಿಡುಗಡೆಗೆ ಸಿದ್ದವಾದ ಬಿಗೌಸ್

ಹೊಸ ಸ್ಕೂಟರ್‌ನಲ್ಲಿ ಮೈಲೇಜ್ ಹೆಚ್ಚಳಕ್ಕಾಗಿ ರೀಜನರೇಟಿ ಬ್ರೇಕಿಂಗ್ ಸಿಸ್ಟಂ ಜೋಡಿಸಲಾಗಿದ್ದು, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಮೂಲಕ ಬಳಕೆದಾರರು ಒಂದೇ ಸೂರಿನಡಿ ಹಲವಾರು ಮಾಹಿತಿಗಳನ್ನು ಪಡೆದುಕೊಳ್ಳಬಹುದು.

ಪ್ರತಿ ಚಾರ್ಜ್‌ಗೆ 200 ಕಿ.ಮೀ ಮೈಲೇಜ್ ನೀಡುವ ಹೊಸ ಇವಿ ಸ್ಕೂಟರ್ ಬಿಡುಗಡೆಗೆ ಸಿದ್ದವಾದ ಬಿಗೌಸ್

ಹೀಗಾಗಿ ಪ್ರಸ್ತುತ ಮಾರುಕಟ್ಟೆಯಲ್ಲಿ ಬೇಡಿಕೆ ಅನುಸಾರವಾಗಿ ಬಿಡುಗಡೆ ಸಿದ್ದವಾಗಿರುವ ಹೊಸ ಮಾದರಿಯು ಈ ತಿಂಗಳಾಂತ್ಯಕ್ಕೆ ದೇಶಾದ್ಯಂತ ಖರೀದಿಗೆ ಲಭ್ಯವಿರಲಿದ್ದು, ಹೊಸ ಸ್ಕೂಟರ್ ಮಾದರಿಗಾಗಿ ಕಂಪನಿಯು ಈಗಾಗಲೇ ರೂ.499 ಮುಂಗಡದೊಂದಿಗೆ ಅಧಿಕೃತ ಬುಕಿಂಗ್ ಸಹ ಆರಂಭಿಸಿದೆ.

Most Read Articles

Kannada
English summary
Bgauss to launch the new bg d15 electric scooter details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X