ಇವಿ ದ್ವಿಚಕ್ರ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಘಟಕ ಆರಂಭಿಸಿದ ಬಜಾಜ್ ಆಟೋ

ದ್ವಿಚಕ್ರ ವಾಹನ ಉತ್ಪಾದನೆಯಲ್ಲಿ ತನ್ನದೇ ಜನಪ್ರಿಯತೆ ಹೊಂದಿರುವ ಬಜಾಜ್ ಆಟೋ ಕಂಪನಿಯು ಇವಿ ವಾಹನಗಳ ಉತ್ಪಾದನೆ ಮೇಲೂ ಹೆಚ್ಚಿನ ಗಮನಹರಿಸಿದ್ದು, ಚೇತಕ್ ಇವಿ ಮೂಲಕ ಕಂಪನಿಯು ಹೊಸ ಸಂಚಲನಕ್ಕೆ ಕಾರಣವಾಗಿದೆ.

ಇವಿ ದ್ವಿಚಕ್ರ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಘಟಕ ಆರಂಭಿಸಿದ ಬಜಾಜ್ ಆಟೋ

ಭಾರತದಲ್ಲಿ ಇವಿ ವಾಹನ ಉದ್ಯಮ ಬೆಳವಣಿಗೆ ಕಾಣುತ್ತಿರುವುದರಿಂದ ಬಜಾಜ್ ಕಂಪನಿಯು ಬೃಹತ್ ಪ್ರಮಾಣದ ಬಂಡವಾಳ ಹೂಡಿಕೆಯೊಂದಿಗೆ ಉದ್ಯಮ ವಿಸ್ತರಣೆ ಸಿದ್ದವಾಗುತ್ತಿದ್ದು, ಹೊಸ ಇವಿ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಉತ್ಪಾದನಾ ಘಟಕವನ್ನು ತೆರೆದಿದೆ.

ಇವಿ ದ್ವಿಚಕ್ರ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಘಟಕ ಆರಂಭಿಸಿದ ಬಜಾಜ್ ಆಟೋ

ಪ್ರಸ್ತುತ ಮಾರುಕಟ್ಟೆಯಲ್ಲಿ ಬಜಾಜ್ ಆಟೋ ಕಂಪನಿಯು ಚೇತಕ್ ಇವಿ ಮಾದರಿಯನ್ನು ಮಾರಾಟ ಮಾಡುತ್ತಿದ್ದು, ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಇವಿ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ. ಹೀಗಾಗಿ ಹೊಸ ಯೋಜನೆಗಳಿಗೆ ಪೂರಕವಾಗಿ ಕಂಪನಿಯು ಉತ್ಪಾದನಾ ಸಾಮಾರ್ಥ್ಯ ಹೆಚ್ಚಿಸಲು ಪ್ರತ್ಯೇಕ ಉತ್ಪಾದನಾ ಘಟಕವನ್ನು ಆರಂಭಿಸಿದೆ.

ಇವಿ ದ್ವಿಚಕ್ರ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಘಟಕ ಆರಂಭಿಸಿದ ಬಜಾಜ್ ಆಟೋ

ಪುಣೆ ಹೊರವಲಯದಲ್ಲಿರುವ ಅಕುರ್ಡಿಯಲ್ಲಿ ಅತ್ಯಾಧುನಿಕ ಸೌಲಭ್ಯವುಳ್ಳ ಇವಿ ಸ್ಕೂಟರ್ ಉತ್ಪಾದನಾ ಘಟಕ ಮತ್ತು ಸಂಶೋಧನಾ ವಿಭಾಗವನ್ನು ತೆರೆದಿದ್ದು, ಹೊಸ ವಾಹನ ಉತ್ಪಾದನಾ ಘಟಕದಲ್ಲಿ ಅಧಿಕೃತವಾಗಿ ಉತ್ಪಾದನಾ ಪ್ರಕ್ರಿಯೆಗೂ ಚಾಲನೆ ನೀಡಿದೆ.

ಇವಿ ದ್ವಿಚಕ್ರ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಘಟಕ ಆರಂಭಿಸಿದ ಬಜಾಜ್ ಆಟೋ

ಇವಿ ವಾಹನ ಉತ್ಪಾದನೆಗಾಗಿಯೇ ಕಂಪನಿಯು ಚೇತಕ್ ಟೆಕ್ನಾಲಜಿ ಲಿಮಿಟೆಡ್ ಹೆಸರಿನಲ್ಲಿ ಹೊಸ ಉದ್ಯಮ ಕಾರ್ಯಾಚರಣೆ ಆರಂಭಿಸಿದ್ದು, ಕಂಪನಿಯ ನಿರ್ಮಾತೃ ದಿವಂಗತ ರಾಹುಲ್ ಬಜಾಜ್ ಅವರ 84ನೇ ಜನ್ಮ ವಾರ್ಷಿಕೋತ್ಸವ ದಿನದಂದೆ ಹೊಸ ಘಟಕದಲ್ಲಿನ ಉತ್ಪಾದನಾ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಿತು.

ಇವಿ ದ್ವಿಚಕ್ರ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಘಟಕ ಆರಂಭಿಸಿದ ಬಜಾಜ್ ಆಟೋ

ಭವಿಷ್ಯದಲ್ಲಿ ಹೆಚ್ಚಿನ ಬೇಡಿಕೆ ಪಡೆದುಕೊಳ್ಳಲಿರುವ ಎಲೆಕ್ಟ್ರಿಕ್ ವಾಹನ ವಿಭಾಗದ ಮೇಲೆ ಕೇಂದ್ರೀಕರಿಸಲು ಕಂಪನಿಯು ಹೊಸ ಉತ್ಪಾದನಾ ಘಟಕವನ್ನು ಬಳಸಿಕೊಳ್ಳಲಿದ್ದು, ಹೊಸ ಉತ್ಪಾದನಾ ಘಟಕದ ಮೂಲಕ ವಾರ್ಷಿಕವಾಗಿ 5 ಲಕ್ಷ ಯುನಿಟ್ ದ್ವಿಚಕ್ರ ಉತ್ಪಾದಿಸಬಹುದಾಗಿ ಕಂಪನಿಯು ಹೇಳಿಕೊಂಡಿದೆ.

ಇವಿ ದ್ವಿಚಕ್ರ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಘಟಕ ಆರಂಭಿಸಿದ ಬಜಾಜ್ ಆಟೋ

ಕಂಪನಿಯು ಸದ್ಯ ಗ್ರಾಹಕರ ಬೇಡಿಕೆಯನ್ನು ಪೂರೈಸಲು ಪ್ರತಿ ತಿಂಗಳು ಗರಿಷ್ಠ 5 ಸಾವಿರ ಯುನಿಟ್ ಉತ್ಪಾದನೆ ಮಾಡಲು ನಿರ್ಧರಿಸಿದ್ದು, ಮುಂಬರುವ ದಿನಗಳಲ್ಲಿ ಉತ್ಪಾದನಾ ಪ್ರಯಾಣವನ್ನು ಹೆಚ್ಚಿಸಲಿದೆ.

ಇವಿ ದ್ವಿಚಕ್ರ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಘಟಕ ಆರಂಭಿಸಿದ ಬಜಾಜ್ ಆಟೋ

ಬಜಾಜ್ ಕಂಪನಿಯು ಹೊಸ ಉದ್ಯಮ ಮೇಲೆ ಹೆಚ್ಚಿನ ನೀರಿಕ್ಷೆಯೊಂದಿಗೆ ಆರಂಭಿಕವಾಗಿ ರೂ. 700 ಕೋಟಿ ಹೂಡಿಕೆ ಮಾಡಿದ್ದು, ಸದ್ಯ ಚೇತಕ್ ಇವಿ ಮಾದರಿಯನ್ನು ಮಾತ್ರ ಮಾರಾಟ ಮಾಡುತ್ತಿರುವ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಮಾದರಿಗಳನ್ನು ರಸ್ತೆಗಿಳಿಸಲಿದೆ.

ಇವಿ ದ್ವಿಚಕ್ರ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಘಟಕ ಆರಂಭಿಸಿದ ಬಜಾಜ್ ಆಟೋ

ಹೊಸ ಇವಿ ದ್ವಿಚಕ್ರ ವಾಹನಗಳೊಂದಿಗೆ ಕಂಪನಿಯು ಸಹಭಾಗಿತ್ವದ ಕಂಪನಿಗಳಾದ ಕೆಟಿಎಂ ಮತ್ತು ಹಸ್ಕವರ್ನಾ ಬ್ರಾಂಡ್ ಅಡಿಯಲ್ಲೂ ಪ್ರಮುಖ ಇವಿ ಮಾದರಿಗಳನ್ನು ಬಿಡುಗಡೆ ಮಾಡಲಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಹೊಸ ಇವಿ ಮಾದರಿಗಳನ್ನು ಬಿಡುಗಡೆ ಮಾಡಲಿದ್ದಾರೆ.

ಇವಿ ದ್ವಿಚಕ್ರ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಘಟಕ ಆರಂಭಿಸಿದ ಬಜಾಜ್ ಆಟೋ

ಸದ್ಯ ಮಾರುಕಟ್ಟೆಯಲ್ಲಿ ಬಜಾಜ್ ಕಂಪನಿಯು ಇವಿ ಉದ್ಯಮದಲ್ಲಿ ಎಥರ್, ಓಲಾ ಮತ್ತು ಟಿವಿಎಸ್‌ನಂತಹ ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್ ತಯಾರಕರಿಂದ ತೀವ್ರ ಸ್ಪರ್ಧೆಯನ್ನು ಎದುರಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಹೊಸ ಮಾದರಿಗಳು ಉತ್ತಮ ಬೇಡಿಕೆ ಪಡೆದುಕೊಳ್ಳಲಿವೆ.

ಇವಿ ದ್ವಿಚಕ್ರ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಘಟಕ ಆರಂಭಿಸಿದ ಬಜಾಜ್ ಆಟೋ

ಸದ್ಯ ಪ್ರೀಮಿಯಂ ಇವಿ ಸ್ಕೂಟರ್ ಮಾರಾಟದಲ್ಲಿ ಸಾಧರಣ ಬೇಡಿಕೆ ಹೊಂದಿರುವ ಹೊಸ ಚೇತಕ್ ಇವಿ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಅರ್ಬೈನ್ ಮಾದರಿಯು ಬೆಂಗಳೂರಿನಲ್ಲಿ ಆನ್‌ರೋಡ್ ಪ್ರಕಾರ ರೂ. 1.54 ಲಕ್ಷ ಮತ್ತು ಪ್ರೀಮಿಯಂ ವೆರಿಯೆಂಟ್‌ಗೆ ರೂ. 1.59 ಲಕ್ಷ ಬೆಲೆ ಹೊಂದಿದೆ.

ಇವಿ ದ್ವಿಚಕ್ರ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಘಟಕ ಆರಂಭಿಸಿದ ಬಜಾಜ್ ಆಟೋ

ದುಬಾರಿ ಬೆಲೆ ಕಾರಣಕ್ಕೆ ಚೇಕಕ್ ಇವಿ ಮಾದರಿಯು ತುಸು ಹಿನ್ನಡೆ ಅನುಭವಿಸುತ್ತಿದ್ದು, ಹೊಸದಾಗಿ ಬಿಡುಯಾಗಲಿರುವ ಇವಿ ಸ್ಕೂಟರ್ ಮಾದರಿಗಳು ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ.

ಇವಿ ದ್ವಿಚಕ್ರ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಘಟಕ ಆರಂಭಿಸಿದ ಬಜಾಜ್ ಆಟೋ

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ ಮಾದರಿಯು 4kW ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿದ್ದು, ಇಕೋ‌ ಮೋಡ್‍ನಲ್ಲಿ ಪ್ರತಿ ಚಾರ್ಜ್‌ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 85 ಕಿ.ಮೀ ಚಲಿಸುತ್ತದೆ. ಹೊಸ ಇವಿ ಸ್ಕೂಟರ್‌ನಲ್ಲಿ ಬಜಾಜ್ ಅಪ್ಲಿಕೇಶನ್ ಹೆಚ್ಚು ಅನುಕೂಲಕವಾಗಿದ್ದು, ಈ ಆ್ಯಪ್‍ ಮೂಲಕ ಲೈವ್ ಟ್ರ್ಯಾಕಿಂಗ್ ಜೊತೆಗೆ ಟ್ರಿಪ್ ಅಂಕಿ ಅಂಶಗಳು, ಬಳಕೆದಾರರ ಮಾಹಿತಿ ಮತ್ತು ಹಲವಾರು ಸುರಕ್ಷತಾ ಫೀಚರ್ಸ್ ಬಳಕೆ ಮಾಡಿಕೊಳ್ಳಬಹುದಾಗಿದೆ.

ಇವಿ ದ್ವಿಚಕ್ರ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಘಟಕ ಆರಂಭಿಸಿದ ಬಜಾಜ್ ಆಟೋ

ಹಾಗೆಯೇ ಹೊಸ ಸ್ಕೂಟರ್‌‌ನಲ್ಲಿ ರೌಂಡ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್, ಶಾರ್ಪ್ ಡಿಸೈನ್, ರೆಟ್ರೋ ಸ್ಟೈಲ್ ಬಾಡಿ ಡಿಸೈನ್, ಹಾರ್ನ್ ಮತ್ತು ಇಂಡಿಕೇಟರ್ ಸ್ವಿಚ್‍, ಎಲ್ಇಡಿ ಇಂಡಿಕೇಟರ್, ದೊಡ್ಡದಾದ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ರಿರ್ವಸ್ ಅಸಿಸ್ಟ್ ಮೋಡ್‌ನೊಂದಿಗೆ ಮೊಬಿಲಿಟಿ ತಂತ್ರಜ್ಞಾನ ಹೊಂದಿದೆ.

ಇವಿ ದ್ವಿಚಕ್ರ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಘಟಕ ಆರಂಭಿಸಿದ ಬಜಾಜ್ ಆಟೋ

ಚೇತಕ್ ಸ್ಕೂಟರ್ ಮೊದಲ ನೋಟದಲ್ಲಿ ವೆಸ್ಪಾ ಸ್ಕೂಟರ್ನಂತೆ ಕಂಡರೂ ಹಲವಾರು ಫೀಚರ್ಸ್‌ಗಳ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಹೊಸ ಸ್ಕೂಟರ್ನಲ್ಲಿ ಬಳಕೆ ಮಾಡಲಾಗಿರುವ ಬ್ಯಾಟರಿಯು ಬರೋಬ್ಬರಿ 70 ಸಾವಿರ ಕಿ.ಮೀ ನಷ್ಟು ಕಾರ್ಯಕ್ಷಮತೆ ಹೊಂದಿದೆ.

ಇವಿ ದ್ವಿಚಕ್ರ ವಾಹನಗಳ ಉತ್ಪಾದನೆಗಾಗಿ ಪ್ರತ್ಯೇಕ ಘಟಕ ಆರಂಭಿಸಿದ ಬಜಾಜ್ ಆಟೋ

ಹೊಸ ಸ್ಕೂಟರ್‌ನಲ್ಲಿ ಸವಾರರ ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್, ಜೀಯೊ ಫೆನ್ಸಿಂಗ್, ವೆಹಿಕಲ್ ಟ್ರಾಕಿಂಗ್ ಸೌಲಭ್ಯಗಳನ್ನು ನೀಡಲಾಗಿದ್ದು, ಪ್ರತಿ 15 ಸಾವಿರ ಕಿ.ಮೀ ಗೆ ಒಂದು ಬಾರಿ ಸರ್ವೀಸ್ ಸೇರಿದಂತೆ ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ ಸೌಲಭ್ಯಗಳನ್ನು ಅಪ್‌ಡೇಟ್ ಮಾಡಲಾಗುತ್ತದೆ.

Most Read Articles

Kannada
English summary
Chetak technology limited inaugurates new plant at akurdi details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X