ಇವಿ ಸ್ಕೂಟರ್ ಮಾರಾಟ: ಪ್ರಮುಖ ಕಂಪನಿಗಳನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೆ ಏರಿದ ಹೀರೋ ಎಲೆಕ್ಟ್ರಿಕ್

ಇವಿ ವಾಹನಗಳ ಮಾರಾಟವು ತಿಂಗಳಿನಿಂದ ತಿಂಗಳಿಗೆ ಉತ್ತಮ ಬೆಳವಣಿಗೆ ಕಾಣುತ್ತಿದ್ದು, ಕಳೆದ ತಿಂಗಳು ಪ್ರಮುಖ ಇವಿ ವಾಹನ ಉತ್ಪಾದನಾ ಕಂಪನಿಗಳು ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡಿವೆ. ಸೆಮಿಕಂಡಕ್ಟರ್ ಕೊರತೆ ಪರಿಣಾಮ ತಗ್ಗಿದ್ದ ಉತ್ಪಾದನಾ ಪ್ರಮಾಣವು ಇದೀಗ ಸಾಕಷ್ಟು ಸುಧಾರಿಸಿದ್ದು, ಜುಲೈನಲ್ಲಿ ಅತಿಹೆಚ್ಚು ಮಾರಾಟವಾದ ಇವಿ ದ್ವಿಚಕ್ರ ವಾಹನ ಮಾದರಿಗಳ ಮಾಹಿತಿ ಇಲ್ಲಿದೆ.

ಇವಿ ಸ್ಕೂಟರ್ ಮಾರಾಟ: ಪ್ರಮುಖ ಕಂಪನಿಗಳನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೆ ಏರಿದ ಹೀರೋ ಎಲೆಕ್ಟ್ರಿಕ್

ದುಬಾರಿ ಇಂಧನಗಳ ಪರಿಣಾಮ ಸಾಂಪ್ರದಾಯಿಕ ವಾಹನ ನಿರ್ವಹಣಾ ವೆಚ್ಚವು ಸಹ ಸಾಕಷ್ಟು ಏರಿಕೆಯಾಗುತ್ತಿದ್ದು, ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿವೆ. ಹೀಗಾಗಿ ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಕಳೆದ ಕೆಲ ತಿಂಗಳಿನಲ್ಲಿ ಪ್ರಮುಖ ಇವಿ ಮಾದರಿಗಳ ಮಾರಾಟವು ಸಾಕಷ್ಟು ಏರಿಕೆಯಾಗಿದೆ.

ಇವಿ ಸ್ಕೂಟರ್ ಮಾರಾಟ: ಪ್ರಮುಖ ಕಂಪನಿಗಳನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೆ ಏರಿದ ಹೀರೋ ಎಲೆಕ್ಟ್ರಿಕ್

ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಸದ್ಯ ಹೀರೋ ಎಲೆಕ್ಟ್ರಿಕ್, ಒಕಿನಾವಾ, ಆಂಪಿಯರ್, ಓಲಾ ಎಲೆಕ್ಟ್ರಿಕ್, ಎಥರ್ ಎನರ್ಜಿ, ಟಿವಿಎಸ್ ಮೋಟಾರ್, ಬಜಾಜ್ ಆಟೋ ಕಂಪನಿಗಳು ಮುಂಚೂಣಿಯಲ್ಲಿದ್ದು, ಕಳೆದ ತಿಂಗಳು ಜುಲೈನಲ್ಲಿ ಇವಿ ಸ್ಕೂಟರ್ ಮಾರಾಟವು ಸಾಕಷ್ಟು ಹೆಚ್ಚಳವಾಗಿದೆ.

ಇವಿ ಸ್ಕೂಟರ್ ಮಾರಾಟ: ಪ್ರಮುಖ ಕಂಪನಿಗಳನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೆ ಏರಿದ ಹೀರೋ ಎಲೆಕ್ಟ್ರಿಕ್

ಹೀರೋ ಎಲೆಕ್ಟ್ರಿಕ್

ಕಳೆದ ತಿಂಗಳು ಜುಲೈ ಕಂಪನಿಯು 8,786 ಸ್ಕೂಟರ್‌ಗಳ ಮಾರಾಟದೊಂದಿಗೆ ಶೇ. 35 ರಷ್ಟು ಮಾರಾಟ ಬೆಳವಣಿಗೆ ಸಾಧಿಸಿದೆ. ಸೆಮಿಕಂಡಕ್ಟರ್ ಕೊರತೆಯ ಪರಿಣಾಮ ಮೇ ಮತ್ತು ಜೂನ್ ತಿಂಗಳಲ್ಲಿ ಸಾಕಷ್ಟು ಹಿನ್ನಡೆ ಅನುಭವಿಸಿದ್ದ ಕಂಪನಿಯು ಇದೀಗ ಎಲೆಕ್ಟ್ರಿಕ್ ಸ್ಕೂಟರ್‌ಗಳ ಉತ್ಪಾದನೆ ಹೆಚ್ಚಳದೊಂದಿಗೆ ಮತ್ತೆ ಅಗ್ರಸ್ಥಾನಕ್ಕೆ ಲಗ್ಗೆಯಿಟ್ಟಿದೆ.

ಇವಿ ಸ್ಕೂಟರ್ ಮಾರಾಟ: ಪ್ರಮುಖ ಕಂಪನಿಗಳನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೆ ಏರಿದ ಹೀರೋ ಎಲೆಕ್ಟ್ರಿಕ್

ಒಕಿನಾವ

ಜುಲೈ ತಿಂಗಳಿನಲ್ಲಿ ಒಕಿನಾವಾ ಕಂಪನಿಯು 8,093 ಯುನಿಟ್ ಇವಿ ಸ್ಕೂಟರ್‌ಗಳನ್ನು ಮಾರಾಟ ಮಾಡುವ ಮೂಲಕ 2ನೇ ಸ್ಥಾನದಲ್ಲಿದ್ದು, ಮಾಸಿಕವಾಗಿ ಶೇ. 17 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಕಂಪನಿಯು ಕಳೆದ ಜೂನ್‍‌ನಲ್ಲಿ 6,944 ಯುನಿಟ್‌ಗಳನ್ನು ಮಾರಾಟ ಮಾಡಿತ್ತು. ಆದಾಗ್ಯೂ, ಕಂಪನಿಯು ವಾರ್ಷಿಕ ಮಾರಾಟದಲ್ಲಿ ಶೇ. 214 ರಷ್ಟು ಬೃಹತ್ ಬೆಳವಣಿಗೆಯನ್ನು ದಾಖಲಿಸಿದೆ.

ಇವಿ ಸ್ಕೂಟರ್ ಮಾರಾಟ: ಪ್ರಮುಖ ಕಂಪನಿಗಳನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೆ ಏರಿದ ಹೀರೋ ಎಲೆಕ್ಟ್ರಿಕ್

ಒಕಿನಾವಾ ಕಳೆದ ವರ್ಷ ಜುಲೈನಲ್ಲಿ ಕೇವಲ 2,580 ಯುನಿಟ್ ಸ್ಕೂಟರ್‌ಗಳನ್ನು ಮಾರಾಟ ಮಾಡಿತ್ತು. ಆದರೆ ಓಲಾ ಎಲೆಕ್ಟ್ರಿಕ್, ಎಥರ್ ಎನರ್ಜಿ ಮತ್ತು ರಿವೋಲ್ಟ್ ಮಾಸಿಕ ಮಾರಾಟದಲ್ಲಿ ಕುಸಿತ ಕಂಡಿವೆ.

ಇವಿ ಸ್ಕೂಟರ್ ಮಾರಾಟ: ಪ್ರಮುಖ ಕಂಪನಿಗಳನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೆ ಏರಿದ ಹೀರೋ ಎಲೆಕ್ಟ್ರಿಕ್

ಓಲಾ ಎಲೆಕ್ಟ್ರಿಕ್ ಕಂಪನಿಯು ಕಳೆದ ತಿಂಗಳು 3,852 ಯುನಿಟ್‌ ಇವಿ ಸ್ಕೂಟರ್ ಮಾರಾಟ ಮೂಲಕ ಶೇಕಡಾ 35 ರಷ್ಟು ಕುಸಿದಿದ್ದು, ಜೂನ್ 2022 ರಲ್ಲಿ 5,886 ಯುನಿಟ್‌ಗಳನ್ನು ಮಾರಾಟ ಮಾಡಿತ್ತು.

ಇವಿ ಸ್ಕೂಟರ್ ಮಾರಾಟ: ಪ್ರಮುಖ ಕಂಪನಿಗಳನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೆ ಏರಿದ ಹೀರೋ ಎಲೆಕ್ಟ್ರಿಕ್

ರಿವೋಲ್ಟ್ ತನ್ನ ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ಗಳ ಮಾರಾಟದಲ್ಲಿ ಕುಸಿತವನ್ನು ದಾಖಲಿಸಿದ್ದು, ಕಳೆದ ತಿಂಗಳು ರಿವೋಲ್ಟ್ ಕಂಪನಿಯು 2,316 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಜೂನ್ 2022 ರಲ್ಲಿ ಮಾರಾಟವಾದ 2,424 ಯುನಿಟ್‌ಗಳಿಂತ ಶೇಕಡಾ 4 ರಷ್ಟು ಕಡಿಮೆಯಾಗಿದ್ದು, ಆದಾಗ್ಯೂ, ಕಂಪನಿಯು ತನ್ನ ವಾರ್ಷಿಕ ಮಾರಾಟದಲ್ಲಿ ಶೇ.631 ರಷ್ಟು ಹೆಚ್ಚಳವನ್ನು ದಾಖಲಿಸಿದೆ.

ಇವಿ ಸ್ಕೂಟರ್ ಮಾರಾಟ: ಪ್ರಮುಖ ಕಂಪನಿಗಳನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೆ ಏರಿದ ಹೀರೋ ಎಲೆಕ್ಟ್ರಿಕ್

ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ತಯಾರಕ ಕಂಪನಿ ಎಥರ್ ಎನರ್ಜಿ ಮಾರಾಟದಲ್ಲಿ ಈ ತಿಂಗಳು ಶೇ. 67 ರಷ್ಟು ಕುಸಿತವನ್ನು ವರದಿ ಮಾಡಿದೆ. ಕಳೆದ ತಿಂಗಳು ಕಂಪನಿಯು ಕೇವಲ 1,279 ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾತ್ರ ಮಾರಾಟ ಮಾಡಲು ಯಶಸ್ವಿಯಾಗಿದೆ.

ಇವಿ ಸ್ಕೂಟರ್ ಮಾರಾಟ: ಪ್ರಮುಖ ಕಂಪನಿಗಳನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೆ ಏರಿದ ಹೀರೋ ಎಲೆಕ್ಟ್ರಿಕ್

ಕಳೆದ ತಿಂಗಳು ಜೂನ್‌ನಲ್ಲಿ 3,829 ಯುನಿಟ್‌ಗಳನ್ನು ಮಾರಾಟ ಮಾಡಿದ್ದು, ಕಂಪನಿಯ ವಾರ್ಷಿಕ ಮಾರಾಟವು ಸಹ ಶೇ. 29 ಪ್ರತಿಶತದಷ್ಟು ಕುಸಿತ ಕಂಡಿದೆ. ಎಥರ್ ಕಳೆದ ವರ್ಷ ಜುಲೈನಲ್ಲಿ 1,799 ಯುನಿಟ್‌ಗಳನ್ನು ಮಾರಾಟ ಮಾಡಿದ್ದು, ಸೆಮಿಕಂಡಕ್ಟರ್ ಕೊರತೆಯಿಂದಾಗಿ ಇವಿ ವಾಹನ ಉತ್ಪಾದನಾ ವಲಯದ ಮೇಲೆ ಪರಿಣಾಮ ಬೀರುತ್ತಿದೆ ಎನ್ನಲಾಗಿದೆ.

ಇವಿ ಸ್ಕೂಟರ್ ಮಾರಾಟ: ಪ್ರಮುಖ ಕಂಪನಿಗಳನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೆ ಏರಿದ ಹೀರೋ ಎಲೆಕ್ಟ್ರಿಕ್

ಇನ್ನು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ದೇಶಾದ್ಯಂತ ಕೇಂದ್ರ ಸರ್ಕಾರದೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತಂದಿವೆ. ಇದರಲ್ಲಿ ಕೇಂದ್ರದ ಫೇಮ್ 2 ಸಬ್ಸಡಿ ಯೋಜನೆಯು ಪ್ರಮುಖವಾಗಿದ್ದು, ಫೇಮ್ 2 ಯೋಜನೆಯೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಇವಿ ವಾಹನಗಳ ಉತ್ತೇಜನಕ್ಕೆ ವಿವಿಧ ಸಬ್ಸಡಿ ಯೋಜನೆಗಳನ್ನು ಅಳವಡಿಸಿಕೊಂಡಿವೆ.

ಇವಿ ಸ್ಕೂಟರ್ ಮಾರಾಟ: ಪ್ರಮುಖ ಕಂಪನಿಗಳನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೆ ಏರಿದ ಹೀರೋ ಎಲೆಕ್ಟ್ರಿಕ್

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರೋತ್ಸಾಹದಿಂದಾಗಿ ಎಲೆಕ್ಟ್ರಿಕ್ ವಾಹನಗಳ ಅಳವಡಿಕೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಸಬ್ಸಡಿ ಯೋಜನೆಗಳಿಂದಾಗಿ ಇವಿ ವಾಹನಗಳ ಬಳಕೆಗೆ ಸಾರ್ವಜನಿಕರು ಆದ್ಯತೆ ನೀಡುತ್ತಿದ್ದಾರೆ. ಕರ್ನಾಟಕದಲ್ಲೂ ಸಹ ಇವಿ ವಾಹನಗಳ ಅಳವಡಿಕೆಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ಯೋಜನೆಗಳನ್ನು ಘೋಷಣೆ ಮಾಡಿದ್ದು, ಕಳೆದ ಮೂರು ವರ್ಷಗಳ ಅವಧಿಯಲ್ಲಿ ಇವಿ ವಾಹನಗಳು ಸಾಕಷ್ಟು ಸಂಖ್ಯೆಯಲ್ಲಿ ರಸ್ತೆಗಿಳಿದಿವೆ.

ಇವಿ ಸ್ಕೂಟರ್ ಮಾರಾಟ: ಪ್ರಮುಖ ಕಂಪನಿಗಳನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೆ ಏರಿದ ಹೀರೋ ಎಲೆಕ್ಟ್ರಿಕ್

ರಾಜ್ಯ ಸರ್ಕಾರದ ಸಬ್ಸಡಿ ಯೋಜನೆ ಜಾರಿ ನಂತರ ಇದುವರೆಗೆ ಕರ್ನಾಟಕದಲ್ಲಿ ಸುಮಾರು 1 ಲಕ್ಷಕ್ಕೂ ಹೆಚ್ಚು ಇವಿ ವಾಹನಗಳು ನೋಂದಣಿಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಹೆಚ್ಚಳ ಪರಿಣಾಮ ಇವಿ ವಾಹನಗಳ ಸಂಖ್ಯೆಯು ನಿಧಾನವಾಗಿ ಏರಿಕೆಯಾಗುತ್ತಿದೆ.

ಇವಿ ಸ್ಕೂಟರ್ ಮಾರಾಟ: ಪ್ರಮುಖ ಕಂಪನಿಗಳನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೆ ಏರಿದ ಹೀರೋ ಎಲೆಕ್ಟ್ರಿಕ್

ಎಲೆಕ್ಟ್ರಿಕ್ ವಾಹನಗಳ ಖರೀದಿದಾರರಿಗೆ ಮಾತ್ರವಲ್ಲದೆ ಹೊಸದಾಗಿ ಇವಿ ವಾಹನ ಉತ್ಪಾದನೆಗೆ ಪೂರಕವಾದ ಸ್ಟಾರ್ಟ್‌ಅಪ್ ಕಂಪನಿಗಳಿಗೂ ರಾಜ್ಯ ಸರ್ಕಾರವು ಹಲವಾರು ಸಬ್ಸಡಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಹೊಸ ಯೋಜನೆಗಳಿಂದಾಗಿ ಕರ್ನಾಟಕದಲ್ಲಿ ಇದೀಗ 45ಕ್ಕೂ ಹೆಚ್ಚು ಇವಿ ವಾಹನಗಳಿಗೆ ಸಂಬಂಧಿಸಿದ ಸ್ಟಾರ್ಟ್ಅಪ್ ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ.

More from DriveSpark

Article Published On: Thursday, August 4, 2022, 18:45 [IST]
English summary
Electric scooter july 2022 sales report details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+