ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು!

ದೇಶಿಯ ಮಾರುಕಟ್ಟೆಯಲ್ಲಿನ ಇವಿ ವಾಹನಗಳ ಮಾರಾಟವು ಉತ್ತಮ ಬೆಳವಣಿಗೆ ಕಾಣುತ್ತಿದ್ದು, ಕಳೆದ ತಿಂಗಳು ಪ್ರಮುಖ ಇವಿ ವಾಹನ ಉತ್ಪಾದನಾ ಕಂಪನಿಗಳು ಉತ್ತಮ ಬೆಳವಣಿಗೆ ಸಾಧಿಸಿವೆ. ಸೆಮಿಕಂಡಕ್ಟರ್ ಕೊರತೆ ಪರಿಣಾಮ ಕಳೆದ ಏಪ್ರಿಲ್‌ನಲ್ಲಿ ತಗ್ಗಿದ್ದ ಉತ್ಪಾದನಾ ಪ್ರಮಾಣವು ಇದೀಗ ಸಾಕಷ್ಟು ಸುಧಾರಿಸಿದ್ದು, ಜೂನ್‌ನಲ್ಲಿ ಅತಿಹೆಚ್ಚು ಮಾರಾಟವಾದ ಇವಿ ದ್ವಿಚಕ್ರ ವಾಹನ ಮಾದರಿಗಳ ಮಾಹಿತಿ ಇಲ್ಲಿದೆ.

ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು!

ದುಬಾರಿ ಇಂಧನಗಳ ಪರಿಣಾಮ ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚವು ಸಹ ಸಾಕಷ್ಟು ಏರಿಕೆಯಾಗುತ್ತಿದ್ದು, ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿವೆ. ಹೀಗಾಗಿ ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಕಳೆದ ಕೆಲ ತಿಂಗಳಿನಲ್ಲಿ ಪ್ರಮುಖ ಇವಿ ಮಾದರಿಗಳ ಮಾರಾಟವು ಸಾಕಷ್ಟು ಏರಿಕೆಯಾಗಿದೆ.

ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು!

ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಸದ್ಯ ಒಕಿನಾವಾ, ಆಂಪಿಯರ್, ಓಲಾ ಎಲೆಕ್ಟ್ರಿಕ್, ಎಥರ್ ಎನರ್ಜಿ, ಟಿವಿಎಸ್ ಮೋಟಾರ್, ಬಜಾಜ್ ಆಟೋ ಕಂಪನಿಗಳು ಮುಂಚೂಣಿಯಲ್ಲಿದ್ದು, ಕಳೆದ ತಿಂಗಳು ಜೂನ್ ಅವಧಿಯಲ್ಲಿನ ಇವಿ ಸ್ಕೂಟರ್ ಮಾರಾಟವು ಸಾಕಷ್ಟು ಹೆಚ್ಚಳವಾಗಿದೆ.

ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು!

ಒಕಿನಾವ

ಜೂನ್ ತಿಂಗಳಿನಲ್ಲಿ ಒಕಿನಾವಾ ಕಂಪನಿಯು ಅತಿ ಹೆಚ್ಚು ಇವಿ ಸ್ಕೂಟರ್‌ಗಳನ್ನು ಮಾರಾಟ ಮಾಡುವ ಮೂಲಕ ಅಗ್ರಸ್ಥಾನದಲ್ಲಿದೆ. ಕಳೆದ ತಿಂಗಳು ಕಂಪನಿಯು 6,979 ಯುನಿಟ್ ಇವಿ ಸ್ಕೂಟರ್ ಮಾರಾಟ ಮಾಡುವ ಮೂಲಕ ಕಳೆದ ತಿಂಗಳು ಮೇ ಅವಧಿಯಲ್ಲಿನ ಇವಿ ಸ್ಕೂಟರ್ ಮಾರಾಟಕ್ಕಿಂತ ಶೇ. 21.51 ರಷ್ಟು ಮಾರಾಟದಲ್ಲಿ ಕುಸಿತಕಂಡಿದ್ದರೂ ಉತ್ಪಾದನಾ ಪ್ರಮಾಣವು ಇದೀಗ ಹೆಚ್ಚಳವಾಗಿದೆ.

ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು!

ಆಂಪಿಯರ್

ಇವಿ ಸ್ಕೂಟರ್ ಮಾರಾಟದಲ್ಲಿ ಅತಿ ಹೆಚ್ಚು ಮಾರಾಟದೊಂದಿಗೆ ಆಂಪಿಯರ್ ಕಂಪನಿಯು ಎರಡನೇ ಸ್ಥಾನದಲ್ಲಿ ಮುಂದುವರೆದಿದೆ. ಜೂನ್ ನಲ್ಲಿ ಕಂಪನಿಯು ಒಟ್ಟು 6,534 ಸ್ಕೂಟರ್ ಗಳನ್ನು ಮಾರಾಟ ಮಾಡಿದ್ದು, ಕಳೆದ ಮೇ ತಿಂಗಳಲ್ಲಿ ಕಂಪನಿಯು 5,529 ಸ್ಕೂಟರ್‌ಗಳನ್ನು ಮಾರಾಟ ಮಾಡಿತ್ತು. ಕಳೆದ ತಿಂಗಳು ಸ್ಕೂಟರ್ ಮಾರಾಟವು ಶೇ. 18.18 ರಷ್ಟು ಹೆಚ್ಚಿದ್ದು, ಕಂಪನಿಯು ಇವಿ ಸ್ಕೂಟರ್‌ನಲ್ಲಿ ಒಟ್ಟು ಶೇ. 16.89 ಶೇಕಡಾ ಮಾರುಕಟ್ಟೆ ಪಾಲನ್ನು ಹೊಂದಿದೆ.

ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು!

ಹೀರೋ ಎಲೆಕ್ಟ್ರಿಕ್

ಕಳೆದ ತಿಂಗಳು ಜೂನ್‌ನಲ್ಲಿ ಕಂಪನಿಯು 6,486 ಸ್ಕೂಟರ್‌ಗಳ ಮಾರಾಟದೊಂದಿಗೆ ಶೇ. 136.80 ರಷ್ಟು ಮಾರಾಟ ಬೆಳವಣಿಗೆ ಸಾಧಿಸಿದೆ. ಸೆಮಿಕಂಡಕ್ಟರ್ ಕೊರತೆಯ ಪರಿಣಾಮ ಮೇ ತಿಂಗಳಲ್ಲಿ ಕೇವಲ 2,739 ಸ್ಕೂಟರ್‌ಗಳನ್ನು ಮಾರಾಟ ಮಾಡಿದ್ದ ಕಂಪನಿಯು ಇದೀಗ ಎಲೆಕ್ಟ್ರಿಕ್ ಸ್ಕೂಟರ್‌ಗಳ ಉತ್ಪಾದನೆ ಹೆಚ್ಚಿಸಿದೆ.

ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು!

ಓಲಾ ಎಲೆಕ್ಟ್ರಿಕ್

ಎಲೆಕ್ಚ್ರಿಕ್ ಸ್ಕೂಟರ್ ಮಾರಾಟದಲ್ಲಿ ಸದ್ಯ ಹೊಸ ಸಂಚಲನಕ್ಕೆ ಕಾರಣವಾಗಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಎಸ್1 ಪ್ರೊ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿದ್ದು, ಕಂಪನಿಯು ಕಳೆದ ತಿಂಗಳು 5,689 ಯುನಿಟ್ ಮಾರಾಟ ಮಾಡಿದೆ. ಮೇ ಅವಧಿಯಲ್ಲಿ ಬರೋಬ್ಬರಿ 8,681 ಯುನಿಟ್ ವಿತರಣೆ ಮೂಲಕ ಅಗ್ರಸ್ಥಾನದಲ್ಲಿದ್ದ ಕಂಪನಿಯು ಕಾರಣಾಂತರಗಳಿಂದ ಉತ್ಪಾದನೆಯಲ್ಲಿ ಅನುಭವಿಸಿದ್ದು, ಕಳೆದ ತಿಂಗಳ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಕಂಪನಿಯು ಶೇ.34.47 ರಷ್ಟು ಕುಸಿತ ಕಂಡಿದೆ.

ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು!

ಟಿವಿಎಸ್ ಮೋಟಾರ್

ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಟಿವಿಎಸ್ ಕಂಪನಿಯು ಸದ್ಯ 5ನೇ ಸ್ಥಾನದಲ್ಲಿದೆ. ಕಂಪನಿಯು ಐಕ್ಯೂಬ್ ಸ್ಕೂಟರ್ ಅನ್ನು ಕಳೆದ ತಿಂಗಳು 4,667 ಯುನಿಟ್ ವಿತರಣೆ ಮಾಡಿದೆ. ಇದು ಕಳೆದ ಮೇ ತಿಂಗಳಿನಲ್ಲಿ ಮಾರಾಟವಾದ 2,637 ಸ್ಕೂಟರ್‌ಗಳಿಗೆ ಹೋಲಿಕೆ ಮಾಡಿದರೆ ಇದೀಗ ಶೇ.76.98ರಷ್ಟು ಮಾರಾಟ ಪ್ರಗತಿ ಸಾಧಿಸಿದೆ.

ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು!

ಎಥರ್ ಎನರ್ಜಿ

ಕಳೆದ ತಿಂಗಳು ಜೂನ್‌ನಲ್ಲಿ ಕಂಪನಿಯು ಒಟ್ಟು 3,797 ಸ್ಕೂಟರ್‌ಗಳನ್ನು ಮಾರಾಟ ಮಾಡಿದ್ದು, ಮೇ ತಿಂಗಳಲ್ಲಿ 3,098 ಸ್ಕೂಟರ್‌ಗಳನ್ನು ಮಾರಾಟ ಮಾಡಲಾಗಿತ್ತು. ಇವಿ ಸ್ಕೂಟರ್ ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಂಡಿರಿವ ಎಥರ್ ಕಂಪನಿಯು ಶೇ. 22.56 ಶೇಕಡಾ ಮಾರಾಟ ಬೆಳವಣಿಗೆಯನ್ನು ಸಾಧಿಸಿದ್ದು, ಬಿಡುಗಡೆಯಾಗಲಿರುವ ಹೊಸ ಮಾದರಿಯು ಇನ್ನಷ್ಟು ಬೇಡಿಕೆ ತಂದುಕೊಡುವ ನೀರಿಕ್ಷೆಯಿದೆ.

ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು!

ಇನ್ನು ಇವಿ ದ್ವಿಚಕ್ರ ವಾಹನಗಳ ಮಾರಾಟ ಪಟ್ಟಿಯಲ್ಲಿ ಬಜಾಜ್, ರಿವೋಲ್ಟ್, ಜಾಯ್ ಇ ಕಂಪನಿಗಳು ಕೂಡಾ ಉತ್ತಮ ಬೇಡಿಕೆ ಕಾಯ್ದುಕೊಂಡಿದ್ದು, ಕಳೆದ ಜೂನ್ ನಲ್ಲಿ ವಿವಿಧ ಕಂಪನಿಗಳು ಇವಿ ದ್ವಿಚಕ್ರ ವಾಹನ ವಿಭಾಗದಲ್ಲಿ ಒಟ್ಟು 38,693 ವಾಹನಗಳ ಮಾರಾಟದೊಂದಿಗೆ ಶೇ. 9.89 ಶೇಕಡಾ ಬೆಳವಣಿಗೆಯನ್ನು ಕಂಡಿವೆ.

ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು!

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ದೇಶಾದ್ಯಂತ ಕೇಂದ್ರ ಸರ್ಕಾರದೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತಂದಿವೆ. ಇದರಲ್ಲಿ ಕೇಂದ್ರದ ಫೇಮ್ 2 ಸಬ್ಸಡಿ ಯೋಜನೆಯು ಪ್ರಮುಖವಾಗಿದ್ದು, ಫೇಮ್ 2 ಯೋಜನೆಯೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಇವಿ ವಾಹನಗಳ ಉತ್ತೇಜನಕ್ಕೆ ವಿವಿಧ ಸಬ್ಸಡಿ ಯೋಜನೆಗಳನ್ನು ಅಳವಡಿಸಿಕೊಂಡಿವೆ.

ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು!

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರೋತ್ಸಾಹದಿಂದಾಗಿ ಎಲೆಕ್ಟ್ರಿಕ್ ವಾಹನಗಳ ಅಳವಡಿಕೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಸಬ್ಸಡಿ ಯೋಜನೆಗಳಿಂದಾಗಿ ಇವಿ ವಾಹನಗಳ ಬಳಕೆಗೆ ಸಾರ್ವಜನಿಕರು ಆದ್ಯತೆ ನೀಡುತ್ತಿದ್ದಾರೆ. ಕರ್ನಾಟಕದಲ್ಲೂ ಸಹ ಇವಿ ವಾಹನಗಳ ಅಳವಡಿಕೆಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ಯೋಜನೆಗಳನ್ನು ಘೋಷಣೆ ಮಾಡಿದ್ದು, ಕಳೆದ ಮೂರು ವರ್ಷಗಳ ಅವಧಿಯಲ್ಲಿ ಇವಿ ವಾಹನಗಳು ಸಾಕಷ್ಟು ಸಂಖ್ಯೆಯಲ್ಲಿ ರಸ್ತೆಗಿಳಿದಿವೆ.

ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು!

ರಾಜ್ಯ ಸರ್ಕಾರದ ಸಬ್ಸಡಿ ಯೋಜನೆ ಜಾರಿ ನಂತರ ಇದುವರೆಗೆ ಕರ್ನಾಟಕದಲ್ಲಿ ಸುಮಾರು 1 ಲಕ್ಷಕ್ಕೂ ಹೆಚ್ಚು ಇವಿ ವಾಹನಗಳು ನೋಂದಣಿಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಹೆಚ್ಚಳ ಪರಿಣಾಮ ಇವಿ ವಾಹನಗಳ ಸಂಖ್ಯೆಯು ನಿಧಾನವಾಗಿ ಏರಿಕೆಯಾಗುತ್ತಿದೆ.

ಜೂನ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು!

ಎಲೆಕ್ಟ್ರಿಕ್ ವಾಹನಗಳ ಖರೀದಿದಾರರಿಗೆ ಮಾತ್ರವಲ್ಲದೆ ಹೊಸದಾಗಿ ಇವಿ ವಾಹನ ಉತ್ಪಾದನೆಗೆ ಪೂರಕವಾದ ಸ್ಟಾರ್ಟ್‌ಅಪ್ ಕಂಪನಿಗಳಿಗೂ ರಾಜ್ಯ ಸರ್ಕಾರವು ಹಲವಾರು ಸಬ್ಸಡಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಹೊಸ ಯೋಜನೆಗಳಿಂದಾಗಿ ಕರ್ನಾಟಕದಲ್ಲಿ ಇದೀಗ 45ಕ್ಕೂ ಹೆಚ್ಚು ಇವಿ ವಾಹನಗಳಿಗೆ ಸಂಬಂಧಿಸಿದ ಸ್ಟಾರ್ಟ್ಅಪ್ ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ.

More from DriveSpark

Article Published On: Wednesday, July 6, 2022, 11:49 [IST]
English summary
Electric scooter sales in june 2022 report
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+