India
YouTube

ದುಬಾರಿ ಇಂಧನ: ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ದಾಖಲೆ ಪ್ರಮಾಣದ ಏರಿಕೆ

ತೈಲ ಬೆಲೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚವು ಸಹ ಸಾಕಷ್ಟು ಏರಿಕೆಯಾಗುತ್ತಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ನೋಂದಣಿಯಲ್ಲೂ ಏರಿಕೆಯಾಗುತ್ತಿದೆ.

ದುಬಾರಿ ಇಂಧನ ದರ : ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ದಾಖಲೆ ಪ್ರಮಾಣದ ಏರಿಕೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಕಳೆದ ಕೆಲ ತಿಂಗಳಿನಿಂದ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಸರ್ಕಾರದ ಜೊತೆಗೆ ವಿವಿಧ ಖಾಸಗಿ ಕಂಪನಿಗಳು ಸಹ ಇವಿ ವಾಹನ ಪೂರಕವಾದ ಯೋಜನೆಗಳನ್ನು ಜಾರಿಗೆ ತರುತ್ತಿರುವುದು ಹೊಸ ಬದಲಾವಣೆ ಕಾರಣವಾಗುತ್ತಿದೆ.

ದುಬಾರಿ ಇಂಧನ ದರ : ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ದಾಖಲೆ ಪ್ರಮಾಣದ ಏರಿಕೆ

ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಹೊರತುಪಡಿಸಿ ವಿವಿಧ ರಾಜ್ಯ ಸರ್ಕಾರಗಳು ರಾಜ್ಯ ಮಟ್ಟದಲ್ಲಿ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ದುಬಾರಿ ಇಂಧನ ದರ : ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ದಾಖಲೆ ಪ್ರಮಾಣದ ಏರಿಕೆ

ಇಂಧನಗಳ ಬೆಲೆ ಹೆಚ್ಚಳ ಮತ್ತು ಇವಿ ವಾಹನಗಳಿಗೆ ನೀಡಲಾಗುತ್ತಿರುವ ಸಬ್ಸಡಿ ಯೋಜನೆಗಳಿಂದಾಗಿ ಇವಿ ವಾಹನ ಮಾರಾಟವು ಕಳೆದ ಎರಡು ವರ್ಷಗಳಲ್ಲಿ ಸಾಕಷ್ಟು ಏರಿಕೆಯಾಗಿದ್ದು, ಕಳೆದ ತಿಂಗಳು ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಅತಿ ಹೆಚ್ಚು ಇವಿ ವಾಹನಗಳು ನೋಂದಣಿಯಾಗಿವೆ.

ದುಬಾರಿ ಇಂಧನ ದರ : ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ದಾಖಲೆ ಪ್ರಮಾಣದ ಏರಿಕೆ

ಆಕರ್ಷಕ ಬೆಲೆಗಳು, ಕಡಿಮೆ ನಿರ್ವಹಣಾ ವೆಚ್ಚಗಳು ಮತ್ತು ಕಡಿಮೆ ನಿರ್ವಹಣೆಯ ಜೊತೆಗೆ ಹೆಚ್ಚುತ್ತಿರುವ ಇಂಧನ ಬೆಲೆಗಳು ಸಹ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳತ್ತ ಖರೀದಿಗೆ ಪ್ರಮುಖ ಕಾರಣವಾಗುತ್ತಿದ್ದು, ಮಾರ್ಚ್ 2021 ರಲ್ಲಿ ಮಾರಾಟವಾದ 10,558 ಇವಿ ಸ್ಕೂಟರ್‌ಗಳಿಗೆ ಯುನಿಟ್‌ಗಳಿಗೆ ಹೋಲಿಸಿದರೆ ಮಾರ್ಚ್ 2022 ರಲ್ಲಿನ ಇವಿ ಸ್ಕೂಟರ್ ಮಾರಾಟವು 49,607 ಯುನಿಟ್‌ಗಳಿಗೆ ಏರಿಕೆಯಾಗಿದೆ.

ದುಬಾರಿ ಇಂಧನ ದರ : ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ದಾಖಲೆ ಪ್ರಮಾಣದ ಏರಿಕೆ

ಅಂದರೆ ಎಲೆಕ್ಟ್ರಿಕ್ ವಾಹನಗಳ ವಿಭಾಗದಲ್ಲಿ ಇವಿ ದ್ವಿಚಕ್ರ ವಾಹನ ವಿಭಾಗವು ಶೇ.370ರಷ್ಟು ಏರಿಕೆಯಾಗಿದ್ದು, ಮಾಸಿಕ ವಾಹನ ಮಾರಾಟ ಆಧಾರದ ಮೇಲೆ ಕಳೆದ ಫೆಬ್ರವರಿ ಅವಧಿಗಿಂತ ಮಾರ್ಚ್ ಅವಧಿಯಲ್ಲಿ ಶೇ. 53ರಷ್ಟು ಹೆಚ್ಚಳವಾಗಿದೆ.

ದುಬಾರಿ ಇಂಧನ ದರ : ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ದಾಖಲೆ ಪ್ರಮಾಣದ ಏರಿಕೆ

ಮಾರ್ಚ್ ಅವಧಿಯಲ್ಲಿ ಇವಿ ಸ್ಕೂಟರ್ ಮಾದರಿಗಳ ಮಾರಾಟದಲ್ಲಿ ಹೀರೋ ಎಲೆಕ್ಟ್ರಿಕ್ ಕಂಪನಿಯು ಶೇ.149 ರಷ್ಟು ಹೆಚ್ಚುವರಿ ಬೆಳವಣಿಗೆ ಸಾಧಿಸಿದ್ದರೆ, ಓಲಾ ಮತ್ತು ಒಕಿನಾವ ಕಂಪನಿಗಳು ಶೇ. 441ರಷ್ಟು ಮತ್ತು ಶೇ. 134ರಷ್ಟು ಹೆಚ್ಚು ಬೆಳವಣಿಗೆ ಸಾಧಿಸಿವೆ.

ದುಬಾರಿ ಇಂಧನ ದರ : ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ದಾಖಲೆ ಪ್ರಮಾಣದ ಏರಿಕೆ

ಕೇಂದ್ರ ಸರ್ಕಾರದ ಫೇಮ್ 2 ಸಬ್ಸಿಡಿ ಮತ್ತು ವಿವಿಧ ರಾಜ್ಯಗಳ ರಾಜ್ಯ ಮಟ್ಟದ ಸಬ್ಸಿಡಿಗಳ ಪರಿಣಾಮ ಇವಿ ಸ್ಕೂಟರ್ ಮಾರಾಟ ಬೆಳವಣಿಗೆ ಹೆಚ್ಚುತ್ತಿದ್ದು, ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸದ್ಯ ಇವಿ ಸ್ಕೂಟರ್ ಬೇಡಿಕೆಯು ಅಗ್ರಸ್ಥಾನದಲ್ಲಿದೆ.

ದುಬಾರಿ ಇಂಧನ ದರ : ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ದಾಖಲೆ ಪ್ರಮಾಣದ ಏರಿಕೆ

ಇವಿ ವಾಹನಗಳು ಸಾಂಪ್ರಾದಾಯಿಕ ವಾಹನಗಳಿಂತಲೂ ಕಡಿಮೆ ನಿರ್ವಹಣಾ ವೆಚ್ಚದೊಂದಿಗೆ ಮಾಲಿನ್ಯ ತಡೆಯಲು ಸಾಕಷ್ಟು ಸಹಕಾರಿಯಾಗಿದ್ದು, ಭವಿಷ್ಯದಲ್ಲಿ ಇವಿ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಬಳಕೆಯಾಗಲಿವೆ.

ದುಬಾರಿ ಇಂಧನ ದರ : ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ದಾಖಲೆ ಪ್ರಮಾಣದ ಏರಿಕೆ

ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ದುಬಾರಿ ಬೆಲೆ ನಡುವೆಯೂ ಇವಿ ವಾಹನಗಳ ಮಾರಾಟವು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಆಕರ್ಷಕ ಮೈಲೇಜ್, ಹಲವಾರು ಪ್ರೀಮಿಯಂ ಫೀಚರ್ಸ್, ಅತ್ಯುತ್ತಮ ಎಲೆಕ್ಟ್ರಿಕ್ ಎಂಜಿನ್ ಕಾರ್ಯಕ್ಷಮತೆ ಮತ್ತು ತಾಂತ್ರಿಕ ಸೇವೆಗಳ ವಿಚಾರವಾಗಿ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ಹೊಂದಿವೆ.

ದುಬಾರಿ ಇಂಧನ ದರ : ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ದಾಖಲೆ ಪ್ರಮಾಣದ ಏರಿಕೆ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿಗೊಳಿಸುವಲ್ಲಿ ಸ್ಟಾರ್ಟ್ಅಪ್ ಕಂಪನಿಗಳು ಯಶಸ್ವಿಯಾಗುತ್ತಿವೆ.

ದುಬಾರಿ ಇಂಧನ ದರ : ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ದಾಖಲೆ ಪ್ರಮಾಣದ ಏರಿಕೆ

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಯೋಜನೆ ಜಾರಿಗೆ ತರಲಾಗಿದೆ.

ದುಬಾರಿ ಇಂಧನ ದರ : ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ದಾಖಲೆ ಪ್ರಮಾಣದ ಏರಿಕೆ

ಸದ್ಯ ಕೇಂದ್ರ ಸರ್ಕಾರದ ಹೊಸ ಯೋಜನೆಗೆ ಅನುಗುಣವಾಗಿ ವಿವಿಧ ನಗರಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆಯನ್ನು ಆರಂಭಿಸುತ್ತಿವೆ.

Most Read Articles

Kannada
English summary
Electric two wheeler sales increased in march 2022 details
Story first published: Monday, April 11, 2022, 13:58 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X