ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಸ್ಕೂಟರ್‌ಗಳಿವು..

ಭಾರತೀಯ ಮಾರುಕಟ್ಟೆಯಲ್ಲಿ ಹಲವಾರು ದ್ವಿಚಕ್ರ ವಾಹನ ತಯಾರಕರು ತಮ್ಮ ಜನಪ್ರಿಯ ಸ್ಕೂಟರ್‌ಗಳನ್ನು ಮಾರಾಟ ಮಾದಲಾಗುತ್ತಿದೆ. ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಹಲವು ಮಾದರಿಯ ಸ್ಕೂಟರ್‌ಗಳು ಖರೀದಿಗೆ ಲಭ್ಯವಿದೆ. ಇದರಿಂದ ಗ್ರಾಹಕರು ತಮ್ಮ ಆದ್ಯತೆಯ ಮೇರೆಗೆ ಸ್ಕೂಟರ್ ಅನ್ನು ಆಯ್ಕೆ ಮಾಡಿಕೊಳ್ಳಬಹುದು.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಸ್ಕೂಟರ್‌ಗಳಿವು..

ಸ್ಕೂಟರ್‌ಗಳು ಭಾರತದಲ್ಲಿ ಅತ್ಯಂತ ಜನಪ್ರಿಯವಾಗಿವೆ, ಏಕೆಂದರೆ ಅವುಗಳು ಅತ್ಯಂತ ಪ್ರಾಯೋಗಿಕವಾಗಿವೆ, ನಮ್ಮ ದೇಶದಲ್ಲಿ ವಾಹನಗಳ ಬೆಲೆಗಳು ಸ್ಥಿರವಾಗಿ ಏರುತ್ತಿವೆ ಮತ್ತು ದ್ವಿಚಕ್ರ ವಾಹನಗಳು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ದುಬಾರಿಯಾಗಿದೆ. ಹಾಗೆಯೇ ಕೈಗೆಟುಕುವ ದರದಲ್ಲಿ ಸ್ಕೂಟರ್‌ಗಳು ಕೂಡ ಭಾರತೀಯ ಮಾರುಕಟ್ಟೆಯಲ್ಲಿ ಲಭ್ಯವಿದೆ. ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಖರೀದಿಸಬಹುದಾದ ಐದು ಅತ್ಯಂತ ಕೈಗೆಟುಕುವ ಸ್ಕೂಟರ್‌ಗಳ ಬಗ್ಗೆ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಸ್ಕೂಟರ್‌ಗಳಿವು..

ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್

ಈ ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ಆರಂಭಿಕ ಬೆಲೆಯು ರೂ.58,734 ಆಗಿದೆ. ಟಿವಿಎಸ್ ಸ್ಕೂಟಿ ದೇಶಿಯ ಮಾರುಕಟ್ಟೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ಮಹಿಳೆಯರ ನೆಚ್ಚಿನ ಸ್ಕೂಟರ್ ಗಳಲ್ಲಿ ಒಂದಾಗಿದೆ. ಬಿಡುಗಡೆಯಾದಾಗಿನಿಂದ ಟಿವಿಎಸ್ ಸ್ಕೂಟಿ ಭಾರತೀಯ ಮಹಿಳೆಯರ ಪ್ರಯಾಣದ ಅಗತ್ಯಗಳನ್ನು ಪೂರೈಸುವ ಮೂಲಕ ಸಾಂಪ್ರದಾಯಿಕ ಪ್ರಯಾಣವನ್ನು ಪೂರ್ಣಗೊಳಿಸಿದೆ. ಟಿವಿಎಸ್ ಸ್ಕೂಟಿ ತನ್ನ ಗ್ರಾಹಕರ ವಿಕಾಸವನ್ನು ಪ್ರತಿ ಹಂತದಲ್ಲೂ ಹೊಂದಿಸಿದೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಸ್ಕೂಟರ್‌ಗಳಿವು..

ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್‌ನಲ್ಲಿ ಅಳವಡಿಸಿರುವ ಎಂಜಿನ್ ಬಗ್ಗೆ ಹೇಳುವುದಾದರೆ, ಈ ಮಾದರಿಯಲ್ಲಿ ಬಿಎಸ್ 6 ಆಧಾರಿತ 87.8 ಸಿಸಿ ಫ್ಯೂಯಲ್ ಇಂಜೆಕ್ಟೆಡ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 6,500 ಆರ್‌ಪಿ‌ಎಂನಲ್ಲಿ 5.43 ಬಿ‌ಹೆಚ್‌ಪಿ ಪವರ್ ಹಾಗೂ 3,500 ಆರ್‌ಪಿ‌ಎಂನಲ್ಲಿ 6.5 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಸ್ಕೂಟರ್‌ಗಳಿವು..

ಟಿವಿಎಸ್ ಸ್ಕೂಟಿ ಜೆಸ್ಟ್

ಟಿವಿಎಸ್ ಸ್ಕೂಟಿ ಜೆಸ್ಟ್ ಮೂಲಭೂತವಾಗಿ ಸ್ಕೂಟಿ ಪೆಪ್ ಪ್ಲಸ್‌ನ ಹೆಚ್ಚು ಪವರ್ ಫುಲ್ ಆವೃತ್ತಿಯಾಗಿದ್ದು, ವಿನ್ಯಾಸದಲ್ಲಿ ಸಣ್ಣ ಬದಲಾವಣೆಗಳನ್ನು ಹೊಂದಿದೆ. ಇದು ತುಲನಾತ್ಮಕವಾಗಿ ದೊಡ್ಡದಾದ 109.7ಸಿಸಿ ಸಿಂಗಲ್-ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 7.8 ಪಿಎಸ್ ಮತ್ತು 8.8 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಮೋಟಾರ್ ಅನ್ನು ಸಿವಿಟಿಗೆ ಜೋಡಿಸಲಾಗಿದೆ. ಈ ಸ್ಕೂಟರ್ ಬೆಲೆಯು ರೂ.65,416 ಆಗಿದೆ,

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಸ್ಕೂಟರ್‌ಗಳಿವು..

ಸ್ಕೂಟರ್ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳೊಂದಿಗೆ ಮತ್ತು ಹಿಂಭಾಗದಲ್ಲಿ ಹೈಡ್ರಾಲಿಕ್ ಮೊನೊ-ಶಾಕ್ ಸೆಟ್‌ನೊಂದಿಗೆ ಬರುತ್ತದೆ. ಬ್ರೇಕಿಂಗ್‌ಗಾಗಿ, ಕಂಪನಿಯು ಸ್ಕೂಟಿ ಜೆಸ್ಟ್‌ನ ಮುಂಭಾಗದಲ್ಲಿ 110 ಎಂಎಂ ಡ್ರಮ್ ಬ್ರೇಕ್ ಮತ್ತು ಹಿಂಭಾಗದಲ್ಲಿ 130 ಎಂಎಂ ಡ್ರಮ್ ಬ್ರೇಕ್‌ಗಳನ್ನು ನೀಡಿದೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಸ್ಕೂಟರ್‌ಗಳಿವು..

ಹೀರೋ ಮೆಸ್ಟ್ರೋ ಎಡ್ಜ್ 110

ಈ ಸ್ಕೂಟರ್ ಅನ್ನು ಡ್ರಮ್ ಬ್ರೇಕ್ ಅಲಾಯ್ ವ್ಹೀಲ್ ವಿಎಕ್ಸ್ ಮತ್ತು ಅಲಾಯ್ ವ್ಹೀಲ್ ಎಂಬ ರೂಪಾಂತರಗಳಲ್ಲಿ ಲಭ್ಯವಿರಲಿದೆ. ಹೀರೋ ಮೆಸ್ಟ್ರೋ ಎಡ್ಜ್ 110 ಆರಂಭಿಕ ಬೆಲೆಯು 66,820 ಆಗಿದೆ. ಈ ಹೀರೋ ಮೆಸ್ಟ್ರೋ ಎಡ್ಜ್ 110 ಸ್ಕೂಟರಿನಲ್ಲಿ 110 ಸಿಸಿ ಸಿಂಗಲ್ ಸಿಲಿಂಡರ್, ಏರ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಿದೆ. ಈ ಸ್ಕೂಟರ್ ಬೆಲೆಯು ರೂ,66,820 ಆಗಿದೆ,

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಸ್ಕೂಟರ್‌ಗಳಿವು..

ಈ ಎಂಜಿನ್ 7,500 ಆರ್‌ಪಿಎಂನಲ್ಲಿ 8 ಬಿಹೆಚ್‌ಪಿ ಪವರ್ ಮತ್ತು 5,500 ಆರ್‌ಪಿಎಂನಲ್ಲಿ 8.75 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸಲಾಗುತ್ತದೆ. ಈ ಎಂಜಿನ್ ನೊಂದಿಗೆ ಸಿವಿಟಿ ಯುನಿಟ್ ಅನ್ನು ಜೋಡಿಸಲಾಗಿದೆ. ಈ ಸ್ಕೂಟರಿನಲ್ಲಿ ಎಕ್ಸ್‌ಸೆನ್ಸ್ ತಂತ್ರಜ್ಞಾನ ಮತ್ತು ಪ್ರೋಗ್ರಾಮ್ ಮಾಡಲಾದ ಫ್ಯೂಯಲ್-ಇಂಜೆಕ್ಷನ್ ಒಳಗೊಂಡಿರುವುದರಿಂದ ಹೆಚ್ಚಿನ ಮೈಲೇಜ್ ಅನ್ನು ಒದಗಿಸುತ್ತದೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಸ್ಕೂಟರ್‌ಗಳಿವು..

ಈ ಹೊಸ ಹೀರೋ ಮೆಸ್ಟ್ರೋ ಎಡ್ಜ್ 110 ಸ್ಕೂಟರಿನಲ್ಲಿ ಸೈಡ್-ಸ್ಟ್ಯಾಂಡ್ ಇಂಡಿಕೇಟರ್, ಲೈಟ್ ಸ್ಟೋವೇಜ್ ಲೈಟ್ ಹೊಂದಿರುವ ಯುಎಸ್ಬಿ ಪೋರ್ಟ್, ಫ್ಯೂಯಲ್ ಫಿಲ್ಲರ್ ಕ್ಯಾಪ್ ಮತ್ತು ಕಾಂಬಿನೇಶನ್ ಲಾಕ್ ಅನ್ನು ಸಹ ಹೊಂದಿದೆ. ಇನ್ನು ಈ ಸ್ಕೂಟರಿನಲ್ಲಿ ಡಿಜಿಟಲ್ ಇನ್ಸ್ಟ್ರುಮೆಂಟೇಶನ್ ಕನ್ಸೋಲ್ ಜೊತೆಗೆ ಆನ್ ಹ್ಯಾಲೊಜೆನ್ ಹೆಡ್‌ಲ್ಯಾಂಪ್ ಮತ್ತು ಇಂಟಿಗ್ರೇಟೆಡ್ ಬ್ರೇಕಿಂಗ್ ಸಿಸ್ಟಂ ಅನ್ನು ಹೊಂದಿದೆ. ಜೊತೆಗೆ ಸರ್ವಿಸ್ ರಿಮೈಂಡರ್ ಫಂಕ್ಷನ್ ಅನ್ನು ಕೂಡ ಒಳಗೊಂಡಿದೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಸ್ಕೂಟರ್‌ಗಳಿವು..

ಹೊಸ ಹೀರೋ ಮೆಸ್ಟ್ರೋ ಎಡ್ಜ್ 110 ಸ್ಕೂಟರಿನಲ್ಲಿ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಸ್ಪ್ರಿಂಗ್ ಲೋಡೆಡ್ ಹೈಡ್ರಾಲಿಕ್ ಡ್ಯಾಂಪರ್ ಅನ್ನು ಒಳಗೊಂಡಿದೆ. ಇನ್ನು ಈ ಹೊಸ ಸ್ಕೂಟರಿನಲ್ಲಿ 12 ಇಂಚಿನ ವ್ಹೀಲ್ ಅಪ್ ಫ್ರಂಟ್ ಮತ್ತು ಹಿಂಭಾಗದಲ್ಲಿ 10 ಇಂಚಿನ ವ್ಹೀಲ್ ಅನ್ನು ಅಳವಡಿಸಿದೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಸ್ಕೂಟರ್‌ಗಳಿವು..

ಹೀರೋ ಪ್ಲೆಷರ್ ಪ್ಲಸ್

2019ರಲ್ಲಿ ಹೀರೋ ಪ್ಲೆಷರ್ ಪ್ಲಸ್ ಅನ್ನು ಹೊಸ ವಿನ್ಯಾಸ ಮತ್ತು ಕೆಲವು ಹೊಸ ಮೆಕ್ಯಾನಿಕಲ್‌ಗಳೊಂದಿಗೆ ನವೀಕರಿಸಲಾಗಿದೆ. ಹೀರೋ ಪ್ಲೆಷರ್ ಪ್ಲಸ್ ಸ್ಕೂಟರ್ ಎಲ್ಎಕ್ಸ್, ವಿಎಕ್ಸ್ ಮತ್ತು ಪ್ಲ್ಯಾಟಿನಮ್ ಝಡ್ಎಕ್ಸ್ ಎಂಬ ರೂಪಾಂತರಗಳಲ್ಲಿ ಲಭ್ಯವಿರುತ್ತದೆ. ಈ ಸ್ಕೂಟರ್ ಬೆಲೆಯು ರೂ.62,220 ಆಗಿದೆ,

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಸ್ಕೂಟರ್‌ಗಳಿವು..

ಹೀರೋ ಪ್ಲೆಷರ್ ಪ್ಲಸ್ ಪ್ಲಾಟಿನಂ ಸ್ಕೂಟರ್ ನಲ್ಲಿ 110ಸಿಸಿ ಫ್ಯೂಯಲ್ ಇಂಜೆಕ್ಟ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 8 ಬಿಹೆಚ್‍ಪಿ ಪವರ್ ಮತ್ತು 8.7 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಸ್ಕೂಟರ್ ಗ್ಲಾಸಿ ಬ್ಲಾಕ್, ಗ್ಲಾಸಿ ಬ್ಲೂ, ಗ್ಲಾಸ್ ರೆಡ್, ಗ್ಲಾಸಿ ವೈಟ್, ಮ್ಯಾಟ್ ಆಕ್ಸಿಸ್ ಗ್ರೇ, ಮ್ಯಾಟ್ ಗ್ರೀನ್ ಹಾಗೂ ಮ್ಯಾಟ್ ರೆಡ್ ಎಂಬ ಬಣ್ಣಗಳಲ್ಲಿ ಲಭ್ಯವಿದೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಸ್ಕೂಟರ್‌ಗಳಿವು..

ಈ ಹೀರೊ ಪ್ಲೆಷರ್ ಪ್ಲಸ್ 110 ಸ್ಕೂಟರ್ ಹೆಡ್‍‍ಲೈಟ್ ಸುತ್ತಲೂ ಕ್ರೋಮ್, ಹೊಸ ಅಲಾಯ್ ವ್ಹೀಲ್‍‍ಗಳು, ಸೈಡ್‍‍ನಲ್ಲಿ ಹೈಲೈಟ್ ಹಾಗೂ ಮೂರು ಡೈಮಂಷನ್‍‍ಗಳ ಹೊಸ ಕ್ರೋಮ್ ಬ್ಯಾಡ್ಜ್ ಗಳನ್ನು ಹೊಂದಿದೆ. ಈ ಪ್ಲೆಷರ್ ಪ್ಲಸ್ ಸ್ಕೂಟರ್ ಯುವಜನತೆಯನ್ನು ತನ್ನತ್ತ ಸೆಳೆಯುವ ರೀತಿಯಲ್ಲಿ ಆಕರ್ಷಕ ವಿನ್ಯಾಸವನ್ನು ಹೊಂದಿದೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಸ್ಕೂಟರ್‌ಗಳಿವು..

ಹೋಂಡಾ ಡಿಯೋ

ಹೋಂಡಾ ಡಿಯೋ ಸ್ಕೂಟರ್ ಭಾರತೀಯ ಮಾರುಕಟ್ಟೆಯಲ್ಲಿ ಸ್ಟ್ಯಾಂಡರ್ಡ್, ಡಿಲಕ್ಸ್ ಮತ್ತು ರೆಪ್ಸೋಲ್ ಎಡಿಷನ್ ಎಂಬ ರೂಪಾಂತರಗಳಲ್ಲಿ ಮರಾಟವಾಗುತ್ತಿವೆ. ಈ ಹೊಂಡಾ ಡಿಯೋ ಸ್ಕೂಟರ್ ಆರಂಭೀಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.66,030 ಗಳಾಗಿದೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಸ್ಕೂಟರ್‌ಗಳಿವು..

ಹೋಂಡಾ ಡಿಯೋ ಸ್ಕೂಟರ್ ಅನ್ನು 2002ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಲಾಗಿತ್ತು. ಡಿಯೋ ಸ್ಕೂಟರ್‍ ಇಲ್ಲಿಯವರೆಗೆ 33 ಲಕ್ಷ ಹೆಚ್ಚು ಗ್ರಾಹಕರನ್ನು ಹೊಂದಿದೆ. ಹೋಂಡಾ ಡಿಯೋ ಭಾರತದಿಂದ ಅತಿ ಹೆಚ್ಚು ರಫ್ತು ಮಾಡುವ ಸ್ಕೂಟರ್ ಆಗಿದೆ. ಅಲ್ಲದೇ ಭಾರತದಲ್ಲಿ ಮಾರಾಟವಾಗುವ ಟಾಪ್ 10 ಸ್ಕೂಟರ್‍‍ಗಳಲ್ಲಿ ಡಿಯೋ ಕೂಡ ಒಂದಾಗಿದೆ

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಸ್ಕೂಟರ್‌ಗಳಿವು..

ಈ ಹೋಂಡಾ ಡಿಯೋ ಸ್ಕೂಟರ್‍‍ನಲ್ಲಿ ಫುಲ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ. ಇದರಲ್ಲಿ ರೇಂಜ್, ಸರಾಸರಿ ಇಂಧನ ದಕ್ಷತೆ ಮತ್ತು ರಿಯಲ್ ಟೈಮ್ ಇಂಧನ ದಕ್ಷತೆಯ ವಿವರದ ಮಾಹಿತಿಯನ್ನು ಪ್ರದರ್ಶಿಸುತ್ತದೆ. ಇದಲ್ಲದೆ ಇದು ಟ್ರಿಪ್ ಮೀಟರ್, ಕ್ಲಾಕ್ ಮತ್ತು ಸರ್ವಿಸ್ ಇಂಡಿಕೇಟರ್ ಮಾಹಿತಿಗಳನ್ನು ಪ್ರದರ್ಶಿಸುತ್ತದೆ. ಈ ಹೋಂಡಾ ಡಿಯೋ ಆಕರ್ಷಕ ವಿನ್ಯಾಸವನ್ನು ಹೊಂದಿದೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಸ್ಕೂಟರ್‌ಗಳಿವು..

ಡಿಯೋ ಸ್ಕೂಟರ್ ಮುಂಭಾಗ ಆಕ್ಟಿವಾ 6ಜಿ ಸ್ಕೂಟರ್‍‍ನಂತೆ ಫುಲ್ ಎಲ್‍ಇಡಿ ಹೆಡ್‍‍ಲ್ಯಾಂಪ್ ಮತ್ತು ಡಿ‍ಆರ್‍ಎಲ್ ಅನ್ನು ಅಳವಡಿಸಲಾಗಿದೆ. ಬಿಎಸ್-6 ಹೋಂಡಾ ಡಿಯೋ ಸ್ಕೂಟರ್ ಟೆಲಿಸ್ಕೋಪಿಕ್ ಫೋರ್ಕ್ ಅನ್ನು ಹೊಂದಿದೆ. ಹೋಂಡಾ ಆಕ್ಟಿವಾ 6ಜಿ ಮಾದರಿಯಂತೆಯೇ ಹೋಂಡಾ ಡಿಯೊ ಕೂಡ ಅದೇ ಪ್ಲಾಟ್‍‍ಫಾರ್ಮ್ ಅನ್ನು ಆಧರಿಸಿದೆ. ಈ ಹೋಂಡಾ ಡಿಯೋ ಸ್ಕೂಟರ್‍‍ನಲ್ಲಿ 110 ಸಿಸಿ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 7.9 ಬಿ‍‍ಹೆಚ್‍‍ಪಿ ಪವರ್ ಮತ್ತು 8.9 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

Article Published On: Monday, March 28, 2022, 12:44 [IST]
English summary
Find here some most affordable scooters in india details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+