ರೂ.80 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಮಾರಾಟವಾಗುವ ಅತ್ಯುತ್ತಮ ಬೈಕ್‌ಗಳಿವು..

ಭಾರತದಲ್ಲಿ ಗ್ರಾಹಕರ ಬೇಡಿಕೆ ತಕ್ಕಂತೆ ಮಾರುಕಟ್ಟೆಯಲ್ಲಿ ಹಲವು ಬೈಕ್‌ಗಳ ಆಯ್ಕೆಗಳಿವೆ. ಪ್ರತಿ ವಿಭಾಗದಲ್ಲಿಯು ಹಲವು ವಿಧದ ಆಯ್ಕೆಗಳನ್ನು ಹೊಂದಿದೆ. ಪ್ರತಿ ಖರೀದಿದಾರನು ವಿಭಿನ್ನ ಅವಶ್ಯಕತೆ ಮತ್ತು ಬಯಕೆಗಳನ್ನು ಹೊಂದಿರಬಹುದು. ಗ್ರಾಹಕರ ಅವಶ್ಯಕತೆ ಮತ್ತು ಬಯಕೆಗಳಿಗೆ ತಕ್ಕಂತೆ ವಿಭಿನ್ನ ಆಯ್ಕೆಗಳು ಕೂಡ ಇವೆ.

ರೂ.80 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಮಾರಾಟವಾಗುವ ಅತ್ಯುತ್ತಮ ಬೈಕ್‌ಗಳಿವು..

ಇತ್ತೀಚೆಗೆ ಬಾರತೀಯ ಮಾರುಕಟ್ಟೆಯಲ್ಲಿ ಕೈಗೆಟುಕುವ ದರದ ಮತ್ತು ಅತಿ ಹೆಚ್ಚು ಮೈಲೇಜ್ ಅನ್ನು ಒದಗಿಸುವ ಬೈಕ್‌ಗಳು ಹೆಚ್ಚು ಮಾರಾಟವಾಗುತ್ತಿವೆ. ಮಾಧ್ಯಮ ವರ್ಗದವರಿಗೂ ಕಡಿಮೆ ಬೆಲೆಯಲ್ಲಿ ಖರೀಸಬಹುದಾದ ಜನಪ್ರಿಯ ಬೈಕ್‌ಗಳ ಆಯ್ಕೆಗಳಿವೆ.ಭಾರತದಲ್ಲಿ ಕಮ್ಯೂಟರ್ ಮತ್ತು ಸ್ಪೋರ್ಟ್ಸ್ ಕಮ್ಯೂಟರ್ ಬೈಕ್‌ಗಳಿಗೆ ಭಾರಿ ಬೇಡಿಕೆಯಿದೆ. ಭಾರತೀಯ ಮಾರುಕಟ್ಟೆಯಲ್ಲಿ ರೂ.80 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಉತ್ತಮ ಪ್ರಯಾಣಿಕ ಬೈಕ್‌ಗಳ ಮಾಹಿತಿ ಇಲ್ಲಿದೆ.

ರೂ.80 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಮಾರಾಟವಾಗುವ ಅತ್ಯುತ್ತಮ ಬೈಕ್‌ಗಳಿವು..

ಟಿವಿಎಸ್ ಸ್ಟಾರ್ ಸಿಟಿ ಪ್ಲಸ್

ಟಿವಿಎಸ್ ಮೋಟಾರ್ ಕಂಪನಿ ಪ್ರಾರಂಭವಾದಾಗಿನಿಂದ ದೇಶದಲ್ಲಿ 3 ಮಿಲಿಯನ್‌ಗಿಂತಲೂ ಹೆಚ್ಚು ಸ್ಟಾರ್ ಸಿಟಿ ಪ್ಲಸ್ ಬೈಕ್‌ಗಳು ಮಾರಾಟವಾಗಿವೆ ಎಂದು ಅಂದಾಜಿಸಲಾಗಿದೆ. ಇದು ಉತ್ತಮ ಮೈಲೇಜ್ ಮತ್ತು ಉತ್ತಮ ಗುಣಮಟ್ಟದ ಮಾದರಿಯಾಗಿದೆ.

ರೂ.80 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಮಾರಾಟವಾಗುವ ಅತ್ಯುತ್ತಮ ಬೈಕ್‌ಗಳಿವು..

ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕಿನಲ್ಲಿ 125 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 8.7 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಬೈಕಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ,70,205 ಆಗಿದೆ.

ರೂ.80 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಮಾರಾಟವಾಗುವ ಅತ್ಯುತ್ತಮ ಬೈಕ್‌ಗಳಿವು..

ಬಜಾಜ್ ಪ್ಲಾಟಿನಾ 110 ಇಎಸ್ ಡಿಸ್ಕ್

ಈ ಬಜಾಜ್ ಪ್ಲಾಟಿನಾ 110 ಇಎಸ್ ಡಿಸ್ಕ್ ಬೈಕಿನ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ,68 384 ಗಳಾಗಿದೆ. ಕೊನೆಯ ನವೀಕರಣದೊಂದಿಗೆ, ಕಂಪನಿಯು ಹೊಸ ಬಣ್ಣದ ಆಯ್ಕೆಗಳನ್ನು ಮತ್ತು ಡಿಜಿಟಲ್ ಉಪಕರಣ ಕನ್ಸೋಲ್ ಅನ್ನು ನೀಡಿತು. ಇದು ಡ್ರಮ್ ರೂಪಾಂತರದಲ್ಲಿ ಲಭ್ಯವಿದೆ, ಇದರ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.63,846 ಆಗಿದೆ.

ರೂ.80 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಮಾರಾಟವಾಗುವ ಅತ್ಯುತ್ತಮ ಬೈಕ್‌ಗಳಿವು..

ಈ ಬೈಕಿನಲ್ಲಿ ಹೆಡ್‌ಲ್ಯಾಂಪ್ ಕ್ಲಸ್ಟರ್‌ನಲ್ಲಿ ಎಲ್ಇಡಿ ಡಿಆರ್‌ಎಲ್, ಕ್ವಿಲ್ಟೆಡ್ ಸೀಟುಗಳು, ಹೊಸದಾಗಿ ವಿನ್ಯಾಸಗೊಳಿಸಲಾದ ಟರ್ನ್ ಇಂಡಿಕೇಟರ್ಸ್. ಮೀರರ್ಸ್, ಹ್ಯಾಂಡ್‌ಗಾರ್ಡ್, ಪ್ರೊಟೆಕ್ಟಿವ್ ಟ್ಯಾಂಕ್ ಪ್ಯಾಡ್, ವೈಡ್ ರಬ್ಬರ್ ಫುಟ್‌ಪ್ಯಾಡ್‌ಗಳು ಮತ್ತು ಕೆಲವು ಇತರವುಗಳನ್ನು ಒಳಗೊಂಡಿವೆ.

ರೂ.80 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಮಾರಾಟವಾಗುವ ಅತ್ಯುತ್ತಮ ಬೈಕ್‌ಗಳಿವು..

ಈ ಬಜಾಜ್ ಪ್ಲಾಟಿನಾ 100 ಬೈಕಿನಲ್ಲಿ 102 ಸಿಸಿಯ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 7.7 ಬಿಹೆಚ್‌ಪಿ ಪವರ್ ಹಾಗೂ 8.34 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 4-ಸ್ಪೀಡಿನ ಗೇರ್‌ಬಾಕ್ಸ್ ಅನ್ನು ಜೋಡಿಸಲಾಗಿದೆ. ಇನ್ನು ಈ ಬೈಕ್ 11 ಲೀಟರ್ ಇಂಧನ ಟ್ಯಾಂಕ್ ಸಾಮರ್ಥ್ಯದೊಂದಿಗೆ ಬರುತ್ತದೆ.

ರೂ.80 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಮಾರಾಟವಾಗುವ ಅತ್ಯುತ್ತಮ ಬೈಕ್‌ಗಳಿವು..

ಟಿವಿಎಸ್ ರೈಡರ್

125ಸಿಸಿ ವಿಭಾಗಕ್ಕೆ ಇತ್ತೀಚಿನ ಸೇರ್ಪಡೆಯೆಂದರೆ ಹೊಸ ಟಿವಿಎಸ್ ರೈಡರ್ ಮಾದರಿಯಾಗಿದೆ. ಈ ಹೊಸ ಬೈಕ್ ಮಾದರಿಯು ಟಿವಿಎಸ್ ಕಂಪನಿಯ ಇತರೆ ಕಮ್ಯುಟರ್ ಬೈಕ್ ಮಾದರಿಗಳಿಂತಲೂ ಉತ್ತಮ ತಾಂತ್ರಿಕ ಅಂಶಗಳೊಂದಿಗೆ ಬಿಡುಗಡೆಯಾಗಿದೆ. ಹೊಸ ಬೈಕ್ ಮಾದರಿಯಲ್ಲಿ ಕಂಪನಿಯು ತಂತ್ರಜ್ಞಾನ ಸೌಲಭ್ಯಗಳ ಆಧಾರದ ಮೇಲೆ ಪ್ರಮುಖ ಮೂರು ವೆರಿಯೆಂಟ್ ಬಿಡುಗಡೆ ಮಾಡಿಲಾಗಿದೆ.

ರೂ.80 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಮಾರಾಟವಾಗುವ ಅತ್ಯುತ್ತಮ ಬೈಕ್‌ಗಳಿವು..

ಈ ಹೊಸ ಬೈಕ್ ಡ್ರಮ್, ಡಿಸ್ಕ್ ಮತ್ತು ಕನೆಕ್ಟೆಡ್ ವೆರಿಯೆಂಟ್ ಗಳಲ್ಲಿ ಲಭ್ಯವಿದೆ. ಈ ಹೊಸ ಟಿವಿಎಸ್ ರೈಡರ್ ಆರಂಭಿಕ ಬೆಲೆಯು ರೂ,77,500 ಆಗಿದೆ. ಈ ಬೈಕಿನಲ್ಲಿ 124.8 ಸಿಸಿ ಎಂಜಿನ್ ಅನ್ನು ಒಳಗೊಂಡಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ.

ರೂ.80 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಮಾರಾಟವಾಗುವ ಅತ್ಯುತ್ತಮ ಬೈಕ್‌ಗಳಿವು..

ಹೀರೋ ಸ್ಪ್ಲೆಂಡರ್ ಐಸ್ಮಾರ್ಟ್

ಹೀರೋ ಸ್ಪ್ಲೆಂಡರ್ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ದ್ವಿಚಕ್ರ ವಾಹನವಾಗಿದೆ. ಇನ್ನು ಹೀರೋ ಸ್ಪ್ಲೆಂಡರ್ ಐಸ್ಮಾರ್ಟ್ ಮಾದರಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.70,390 ಗಳಾಗಿದೆ. ಇನ್ನು ಈ ಬೈಕ್ ಡ್ಯುಯಲ್-ಟೋನ್ ಬಣ್ಣಗಳು ಮತ್ತು ನವೀಕರಿಸಿದ ಡೈಮಂಡ್ ಫ್ರೇಮ್‌ನಂತಹ ಹೊಸ ನವೀಕರಣಗಳ ಶ್ರೇಣಿಯನ್ನು ಸ್ವೀಕರಿಸುವಲ್ಲಿ ಯಶಸ್ವಿಯಾಗಿದೆ.

ರೂ.80 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಮಾರಾಟವಾಗುವ ಅತ್ಯುತ್ತಮ ಬೈಕ್‌ಗಳಿವು..

ಈ ಹೀರೋ ಸ್ಪ್ಲೆಂಡರ್ ಐಸ್ಮಾರ್ಟ್ ಬೈಕಿನಲ್ಲಿ 113.2 ಸಿಸಿ, ಸಿಂಗಲ್-ಸಿಲಿಂಡರ್ ಫ್ಯೂಲ್-ಇಂಜೆಕ್ಟ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 7,500 ಆರ್‌ಪಿಎಂನಲ್ಲಿ 9.1 ಬೆಹೆಚ್‍ಪಿ ಪವರ್ ಮತ್ತು 5,500 ಆರ್‌ಪಿಎಂನಲ್ಲಿ 9.89 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಹಿಂದಿನ ಬಿಎಸ್-4 ಮಾದರಿಯಲ್ಲಿ 109.15 ಸಿಸಿ ಕಾರ್ಬ್ಯುರೇಟೆಡ್ ಎಂಜಿನ್ ಅನ್ನು ಅಳವಡಿಸಲಾಗಿತ್ತು. ವಿಶೇಷವೆಂದರೆ ಈ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದರೂ ಶೇ.10 ರಷ್ಟು ಟಾರ್ಕ್ ಉತ್ಪಾದನೆಯು ಹೆಚ್ಚಾಗಿದೆ. ಬಿಎಸ್-6 ಸ್ಪ್ಲೆಂಡರ್ ಐಸ್ಮಾರ್ಟ್ ಬೈಕ್ 1270 ಎಂಎಂ ವ್ಹೀಲ್ ಬೇಸ್ ಮತ್ತು 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಅನ್ನು ಹೊಂದಿದೆ.

ರೂ.80 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಮಾರಾಟವಾಗುವ ಅತ್ಯುತ್ತಮ ಬೈಕ್‌ಗಳಿವು..

ಹೊಸ ಹೀರೋ ಸ್ಪ್ಲೆಂಡರ್ ಐಸ್ಮಾರ್ಟ್ ಬೈಕಿನಲ್ಲಿ ಐಡಲ್ ಸ್ಟಾರ್ಟ್-ಸ್ಟಾಪ್ ಸಿಸ್ಟಂ ಅನ್ನು ಹೊಂದಿದೆ. ಈ ಹೀರೋ ಸ್ಪ್ಲೆಂಡರ್ ಐಸ್ಮಾರ್ಟ್ ಬೈಕನ್ನು ಹಿಂದಿನ ಮಾದರಿಗೆ ಹೋಲಿಸಿದರೆ ದೊಡ್ಡ ಫ್ಯೂಯಲ್ ಟ್ಯಾಂಕ್ ಮತ್ತು ಆಕರ್ಷಕ ಹೆಡ್‌ಲ್ಯಾಂಪ್ ಹೊಂದಿದೆ. ಹೊಸ ಹೀರೋ ಸ್ಪ್ಲೆಂಡರ್ ಐಸ್ಮಾರ್ಟ್ ಬೈಕ್ ಫೋರ್ಸ್ ಸಿಲ್ವರ್ & ಹೆವಿ ಗ್ರೇ, ಟೆಕ್ನೋ ಬ್ಲೂ & ಬ್ಲ್ಯಾಕ್ ಮತ್ತು ಸ್ಪೋರ್ಟ್ಸ್ ರೆಡ್ & ಬ್ಲ್ಯಾಕ್ ಎಂಬ ಮೂರು ಬಣ್ಣ ಆಯ್ಕೆಗಳಲ್ಲಿ ಲಭ್ಯವಿದೆ.

Article Published On: Monday, March 7, 2022, 17:30 [IST]
English summary
Find here some top commuters bikes you can buy under 80 000 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+