ಇವಿ ದ್ವಿಚಕ್ರ ವಾಹನಗಳ ಬಳಕೆ ಉತ್ತೇಜಿಸಲು ಸರ್ಕಾರಿ ನೌಕರರಿಗೆ ಬಂಪರ್ ಆಫರ್

ತೈಲ ಬೆಲೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚವು ಸಹ ಸಾಕಷ್ಟು ಏರಿಕೆಯಾಗುತ್ತಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ನೋಂದಣಿಯಲ್ಲೂ ಸಹ ಸಾಕಷ್ಟು ಏರಿಕೆಯಾಗುತ್ತಿದೆ.

ಇವಿ ದ್ವಿಚಕ್ರ ವಾಹನಗಳ ಬಳಕೆ ಉತ್ತೇಜಿಸಲು ಸರ್ಕಾರಿ ನೌಕರರಿಗೆ ಬಂಪರ್ ಆಫರ್

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಕಳೆದ ಕೆಲ ತಿಂಗಳಿನಿಂದ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಸರ್ಕಾರದ ಜೊತೆಗೆ ವಿವಿಧ ಖಾಸಗಿ ಕಂಪನಿಗಳು ಸಹ ಇವಿ ವಾಹನ ಪೂರಕವಾದ ಯೋಜನೆಗಳನ್ನು ಜಾರಿಗೆ ತರುತ್ತಿರುವುದು ಹೊಸ ಬದಲಾವಣೆ ಕಾರಣವಾಗುತ್ತಿದೆ.

ಇವಿ ದ್ವಿಚಕ್ರ ವಾಹನಗಳ ಬಳಕೆ ಉತ್ತೇಜಿಸಲು ಸರ್ಕಾರಿ ನೌಕರರಿಗೆ ಬಂಪರ್ ಆಫರ್

ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಹೊರತುಪಡಿಸಿ ವಿವಿಧ ರಾಜ್ಯ ಸರ್ಕಾರಗಳು ರಾಜ್ಯ ಮಟ್ಟದಲ್ಲಿ ದೆಹಲಿ ಸರ್ಕಾರವು ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಹೆಚ್ಚಿನ ಮಟ್ಟದ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದೆ.

ಇವಿ ದ್ವಿಚಕ್ರ ವಾಹನಗಳ ಬಳಕೆ ಉತ್ತೇಜಿಸಲು ಸರ್ಕಾರಿ ನೌಕರರಿಗೆ ಬಂಪರ್ ಆಫರ್

ಇದರ ಜೊತೆಗೆ ಹೊಸ ಪ್ರಸ್ತಾವನೆ ಮಂಡಿಸಿರುವ ದೆಹಲಿ ಸರ್ಕಾರವು ಸರ್ಕಾರಿ ನೌಕಕರಿಗೆ ಇವಿ ವಾಹನಗಳನ್ನು ಬಳಕೆ ಮಾಡುವಂತೆ ಕರೆ ನೀಡಿದ್ದು, ಇದಕ್ಕೆ ಪೂರಕವಾಗಿ ಸರ್ಕಾರವು ನೌಕರರಿಗೆ ಸುಲಭ ಇಎಂಐಗಳನ್ನು ಒಳಗೊಂಡ ಸಾಲಸೌಲಭ್ಯಗಳನ್ನು ನೀಡಲು ಮುಂದಾಗಿದೆ.

ಇವಿ ದ್ವಿಚಕ್ರ ವಾಹನಗಳ ಬಳಕೆ ಉತ್ತೇಜಿಸಲು ಸರ್ಕಾರಿ ನೌಕರರಿಗೆ ಬಂಪರ್ ಆಫರ್

ಇದಕ್ಕಾಗಿ ದೆಹಲಿ ಸರ್ಕಾರವು ಕೇಂದ್ರ ಸರ್ಕಾರದ ಉದ್ಯಮ ಸಂಸ್ಥೆಯಾದ ಎನರ್ಜಿ ಎಫಿಷಿಯನ್ಸಿ ಸರ್ವಿಸಸ್ ಲಿಮಿಟೆಡ್ (EESL) ನ ಅಂಗಸಂಸ್ಥೆಯಾದ ಕನ್ವರ್ಜೆನ್ಸ್ ಎನರ್ಜಿ ಸರ್ವಿಸಸ್ ಲಿಮಿಟೆಡ್ (CESL) ನೊಂದಿಗೆ ಪಾಲುದಾರಿಕೆಗೆ ಮಾಡಿಕೊಳ್ಳಲು ಮುಂದಾಗಿದ್ದು, ಶೀಘ್ರದಲ್ಲಿಯೇ ಹೊಸ ಯೋಜನೆ ಕುರಿತಂತೆ ಅಂತಿಮ ನಿರ್ಧಾರ ಪ್ರಕಟಿಸಲಿದೆ.

ಇವಿ ದ್ವಿಚಕ್ರ ವಾಹನಗಳ ಬಳಕೆ ಉತ್ತೇಜಿಸಲು ಸರ್ಕಾರಿ ನೌಕರರಿಗೆ ಬಂಪರ್ ಆಫರ್

ಸದ್ಯ ದೆಹಲಿಯಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಸರ್ಕಾರಿ ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದು, ಆಸಕ್ತ ನೌಕರಿಗೆ ಹೊಸ ಯೋಜನೆಯಡಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಅಡಿಸಿಕೊಳ್ಳಲು ಹೊಸ ಯೋಜನೆ ಸಹಕಾರಿಯಾಗಲಿದೆ.

ಇವಿ ದ್ವಿಚಕ್ರ ವಾಹನಗಳ ಬಳಕೆ ಉತ್ತೇಜಿಸಲು ಸರ್ಕಾರಿ ನೌಕರರಿಗೆ ಬಂಪರ್ ಆಫರ್

ಸರ್ಕಾರದ ಅಂಕಿಅಂಶಗಳ ಪ್ರಕಾರ, ದೆಹಲಿಯಲ್ಲಿ ಸದ್ಯ 1.33 ಕೋಟಿ ನೋಂದಾಯಿತ ವಾಹನಗಳಿದ್ದು, ಅದರಲ್ಲಿ ಸುಮಾರು ಶೇ. 67 ರಷ್ಟು ದ್ವಿಚಕ್ರ ವಾಹನಗಳಾಗಿವೆ. ಇವುಗಳ ಮೂಲಕ ದಹೆಲಿಯಲ್ಲಿ ಹೆಚ್ಚಿನ ಪ್ರಮಾಣದ ಮಾಲಿನ್ಯ ಹೊರಸೂಸುವಿಕೆಯು ದಾಖಲಾಗುತ್ತಿದ್ದು, ಹೀಗಾಗಿ ಮಾಲಿನ್ಯ ಪ್ರಮಾಣವನ್ನು ತಗ್ಗಿಸಲು ಸರ್ಕಾರವು ನಿರಂತರವಾಗಿ ವಿವಿಧ ಯೋಜನೆಗಳನ್ನು ರೂಪಿಸುತ್ತಿದೆ.

ಇವಿ ದ್ವಿಚಕ್ರ ವಾಹನಗಳ ಬಳಕೆ ಉತ್ತೇಜಿಸಲು ಸರ್ಕಾರಿ ನೌಕರರಿಗೆ ಬಂಪರ್ ಆಫರ್

ಹೀಗಾಗಿ ಗರಿಷ್ಠ ಸಬ್ಸಡಿ, ತೆರಿಗೆ ವಿನಾಯ್ತಿ ಮೂಲಕ ಇವಿ ವಾಹನಗಳನ್ನು ಉತ್ತೇಜಿಸಲಾಗುತ್ತಿದ್ದು, ಹೊಸ ಯೋಜನೆಗಳ ಪರಿಣಾಮ ದೆಹಲಿಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ಇವಿ ವಾಹನಗಳು ನೋಂದಣಿಯಾಗಿವೆ.

ಇವಿ ದ್ವಿಚಕ್ರ ವಾಹನಗಳ ಬಳಕೆ ಉತ್ತೇಜಿಸಲು ಸರ್ಕಾರಿ ನೌಕರರಿಗೆ ಬಂಪರ್ ಆಫರ್

ದೆಹಲಿಯಲ್ಲಿ ಮಾತ್ರವಲ್ಲದೇ ವಿವಿಧ ರಾಜ್ಯ ಸರ್ಕಾರಗಳು ಸಹ ಇವಿ ವಾಹನಗಳನ್ನು ಉತ್ತೇಜಿಸುವತ್ತ ಹೊಸ ಯೋಜನೆಗಳನ್ನು ರೂಪಿಸಿದ್ದು, ಮಾರ್ಚ್ 2021 ರಲ್ಲಿ ಮಾರಾಟವಾದ 10,558 ಇವಿ ಸ್ಕೂಟರ್‌ಗಳಿಗೆ ಯುನಿಟ್‌ಗಳಿಗೆ ಹೋಲಿಸಿದರೆ ಮಾರ್ಚ್ 2022 ರಲ್ಲಿನ ಇವಿ ಸ್ಕೂಟರ್ ಮಾರಾಟವು 49,607 ಯುನಿಟ್‌ಗಳಿಗೆ ಏರಿಕೆಯಾಗಿದೆ.

ಇವಿ ದ್ವಿಚಕ್ರ ವಾಹನಗಳ ಬಳಕೆ ಉತ್ತೇಜಿಸಲು ಸರ್ಕಾರಿ ನೌಕರರಿಗೆ ಬಂಪರ್ ಆಫರ್

ಅಂದರೆ ಎಲೆಕ್ಟ್ರಿಕ್ ವಾಹನಗಳ ವಿಭಾಗದಲ್ಲಿ ಇವಿ ದ್ವಿಚಕ್ರ ವಾಹನ ವಿಭಾಗವು ಕಳೆದ ವರ್ಷಕ್ಕಿಂತ ಈ ವರ್ಷ ಶೇ.370ರಷ್ಟು ಏರಿಕೆಯಾಗಿದ್ದು, ಮಾಸಿಕ ವಾಹನ ಮಾರಾಟ ಆಧಾರದ ಮೇಲೆ ಕಳೆದ ಫೆಬ್ರವರಿ ಅವಧಿಗಿಂತ ಮಾರ್ಚ್ ಅವಧಿಯಲ್ಲಿ ಶೇ. 53ರಷ್ಟು ಹೆಚ್ಚಳವಾಗಿದೆ.

ಇವಿ ದ್ವಿಚಕ್ರ ವಾಹನಗಳ ಬಳಕೆ ಉತ್ತೇಜಿಸಲು ಸರ್ಕಾರಿ ನೌಕರರಿಗೆ ಬಂಪರ್ ಆಫರ್

ಮಾರ್ಚ್ ಅವಧಿಯಲ್ಲಿ ಇವಿ ಸ್ಕೂಟರ್ ಮಾದರಿಗಳ ಮಾರಾಟದಲ್ಲಿ ಹೀರೋ ಎಲೆಕ್ಟ್ರಿಕ್ ಕಂಪನಿಯು ಶೇ.149 ರಷ್ಟು ಹೆಚ್ಚುವರಿ ಬೆಳವಣಿಗೆ ಸಾಧಿಸಿದ್ದರೆ, ಓಲಾ ಮತ್ತು ಒಕಿನಾವ ಕಂಪನಿಗಳು ಶೇ. 441ರಷ್ಟು ಮತ್ತು ಶೇ. 134ರಷ್ಟು ಹೆಚ್ಚು ಬೆಳವಣಿಗೆ ಸಾಧಿಸಿವೆ.

ಇವಿ ದ್ವಿಚಕ್ರ ವಾಹನಗಳ ಬಳಕೆ ಉತ್ತೇಜಿಸಲು ಸರ್ಕಾರಿ ನೌಕರರಿಗೆ ಬಂಪರ್ ಆಫರ್

ಕೇಂದ್ರ ಸರ್ಕಾರದ ಫೇಮ್ 2 ಸಬ್ಸಿಡಿ ಮತ್ತು ವಿವಿಧ ರಾಜ್ಯಗಳ ರಾಜ್ಯ ಮಟ್ಟದ ಸಬ್ಸಿಡಿಗಳ ಪರಿಣಾಮ ಇವಿ ಸ್ಕೂಟರ್ ಮಾರಾಟ ಬೆಳವಣಿಗೆ ಹೆಚ್ಚುತ್ತಿದ್ದು, ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸದ್ಯ ಇವಿ ಸ್ಕೂಟರ್ ಬೇಡಿಕೆಯು ಅಗ್ರಸ್ಥಾನದಲ್ಲಿದೆ.

ಇವಿ ದ್ವಿಚಕ್ರ ವಾಹನಗಳ ಬಳಕೆ ಉತ್ತೇಜಿಸಲು ಸರ್ಕಾರಿ ನೌಕರರಿಗೆ ಬಂಪರ್ ಆಫರ್

ಇವಿ ವಾಹನಗಳು ಸಾಂಪ್ರಾದಾಯಿಕ ವಾಹನಗಳಿಂತಲೂ ಕಡಿಮೆ ನಿರ್ವಹಣಾ ವೆಚ್ಚದೊಂದಿಗೆ ಮಾಲಿನ್ಯ ತಡೆಯಲು ಸಾಕಷ್ಟು ಸಹಕಾರಿಯಾಗಿದ್ದು, ಭವಿಷ್ಯದಲ್ಲಿ ಇವಿ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಬಳಕೆಯಾಗಲಿವೆ.

ಇವಿ ದ್ವಿಚಕ್ರ ವಾಹನಗಳ ಬಳಕೆ ಉತ್ತೇಜಿಸಲು ಸರ್ಕಾರಿ ನೌಕರರಿಗೆ ಬಂಪರ್ ಆಫರ್

ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ದುಬಾರಿ ಬೆಲೆ ನಡುವೆಯೂ ಇವಿ ವಾಹನಗಳ ಮಾರಾಟವು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಆಕರ್ಷಕ ಮೈಲೇಜ್, ಹಲವಾರು ಪ್ರೀಮಿಯಂ ಫೀಚರ್ಸ್, ಅತ್ಯುತ್ತಮ ಎಲೆಕ್ಟ್ರಿಕ್ ಎಂಜಿನ್ ಕಾರ್ಯಕ್ಷಮತೆ ಮತ್ತು ತಾಂತ್ರಿಕ ಸೇವೆಗಳ ವಿಚಾರವಾಗಿ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ಹೊಂದಿವೆ.

ಇವಿ ದ್ವಿಚಕ್ರ ವಾಹನಗಳ ಬಳಕೆ ಉತ್ತೇಜಿಸಲು ಸರ್ಕಾರಿ ನೌಕರರಿಗೆ ಬಂಪರ್ ಆಫರ್

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿಗೊಳಿಸುವಲ್ಲಿ ಸ್ಟಾರ್ಟ್ಅಪ್ ಕಂಪನಿಗಳು ಯಶಸ್ವಿಯಾಗುತ್ತಿವೆ.

ಇವಿ ದ್ವಿಚಕ್ರ ವಾಹನಗಳ ಬಳಕೆ ಉತ್ತೇಜಿಸಲು ಸರ್ಕಾರಿ ನೌಕರರಿಗೆ ಬಂಪರ್ ಆಫರ್

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಯೋಜನೆ ಜಾರಿಗೆ ತರಲಾಗಿದೆ.

ಇವಿ ದ್ವಿಚಕ್ರ ವಾಹನಗಳ ಬಳಕೆ ಉತ್ತೇಜಿಸಲು ಸರ್ಕಾರಿ ನೌಕರರಿಗೆ ಬಂಪರ್ ಆಫರ್

ಸದ್ಯ ಕೇಂದ್ರ ಸರ್ಕಾರದ ಹೊಸ ಯೋಜನೆಗೆ ಅನುಗುಣವಾಗಿ ವಿವಿಧ ನಗರಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆಯನ್ನು ಆರಂಭಿಸುತ್ತಿವೆ.

Article Published On: Saturday, April 16, 2022, 18:39 [IST]
English summary
Government employees to get emi on electric two wheelers in delhi
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+