Just In
Don't Miss!
- News
ಅಮೃತ್ ನಗರೋತ್ಥಾನ ಯೋಜನೆಯಡಿ ಬೆಂಗಳೂರು ಪೂರ್ವ ವಲಯಕ್ಕೆ 450 ಕೋಟಿ ಮಂಜೂರು
- Sports
ಇಂಗ್ಲೆಂಡ್ ವಿರುದ್ಧದ ಹೀನಾಯ ಸೋಲು, ಟೀಂ ಇಂಡಿಯಾಗೆ ನೋವುಂಟು ಮಾಡಿದೆ: ಇರ್ಫಾನ್ ಪಠಾಣ್
- Movies
ಹಿಂದಿಗೆ ಹೋಗುತ್ತಿದೆ ಏಳು ವರ್ಷ ಹಳೆಯ ಕನ್ನಡ ಸಿನಿಮಾ: ಅಕ್ಷಯ್-ಶಾಹಿದ್ ನಡುವೆ ಪೈಪೋಟಿ!
- Finance
ಸರ್ವೀಸ್ ಚಾರ್ಜ್ ಬಗ್ಗೆ ಗ್ರಾಹಕರು ದೂರು ನೀಡುವುದು ಹೇಗೆ?
- Lifestyle
ಯಾರೂ ಇಲ್ಲದಿದ್ದಾಗ ಪುರುಷ ಈ ರೀತಿ ವಿಲಕ್ಷಣವಾಗಿ ವರ್ತಿಸುತ್ತಾನೆ, ಗೊತ್ತಾ? ಇದನ್ನು ಓದಿದ್ರೆ ನೀವು ಶಾಕ್ ಆಗೋದು ಪಕ್ಕಾ!
- Technology
ಜಬ್ರೋನಿಕ್ಸ್ ಡ್ರಿಪ್ ಸ್ಮಾರ್ಟ್ವಾಚ್ ಬಿಡುಗಡೆ! ಲಾಂಗ್ ಬ್ಯಾಟರಿ ಬ್ಯಾಕ್ಅಪ್ ವಿಶೇಷ!
- Education
Karnataka Second PUC Results 2022 : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಯ ಪ್ರತಿಗಳು ಜು.6ರಿಂದ ಲಭ್ಯ
- Travel
ಸೂರ್ಯ, ಅಲೆಗಳು ಮತ್ತು ಮರಳು ಇವುಗಳ ಸಮ್ಮಿಲನ ಕಡಲತೀರದ ಪಟ್ಟಣ - ಮಲ್ಪೆ
ಭಾರತದಲ್ಲಿ ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಮಾರಾಟವಾಗುವ ಅತ್ಯುತ್ತಮ ಪ್ರೀಮಿಯಂ ಬೈಕ್‌ಗಳಿವು..
ದೇಶಿಯ ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆ ತಕ್ಕಂತೆ ಹಲವು ಬೈಕ್‌ಗಳ ಆಯ್ಕೆಗಳಿವೆ. ಪ್ರತಿ ವಿಭಾಗದಲ್ಲಿಯು ಹಲವು ವಿಧದ ಆಯ್ಕೆಗಳನ್ನು ಒಳಗೊಂಡಿದೆ, ಪ್ರತಿ ಖರೀದಿದಾರನು ವಿಭಿನ್ನ ಅವಶ್ಯಕತೆ ಮತ್ತು ಬಯಕೆಗಳನ್ನು ಹೊಂದಿರಬಹುದು. ಗ್ರಾಹಕರ ಅವಶ್ಯಕತೆ ಮತ್ತು ಬಯಕೆಗಳಿಗೆ ತಕ್ಕಂತೆ ವಿಭಿನ್ನ ಆಯ್ಕೆಗಳಿವೆ.

ದೇಶಿಯ ಮಾರುಕಟ್ಟೆಯಲ್ಲಿ ಸಾಮಾನ್ಯವಾಗಿ ಕೈಗೆಟುಕುವ ದರದ ಮತ್ತು ಅತಿ ಹೆಚ್ಚು ಮೈಲೇಜ್ ಅನ್ನು ಒದಗಿಸುವ ಬೈಕ್‌ಗಳು ಹೆಚ್ಚು ಮಾರಾಟವಾಗುತ್ತದೆ. ಆದರೆ ಇತ್ತೀಚೆಗೆ ಪ್ರೀಮಿಯಂ ಬೈಕ್‌ಗಳಿಗೂ ಹೆಚ್ಚಿನ ಬೇಡಿಕೆಯನ್ನು ಪಡೆದುಕೊಂಡಿವೆ. ಹೆಚ್ಚಿನ ಯುವ ಖರೀದಿದಾರರು ಪ್ರೀಮಿಯಂ ಬೈಕ್‌ಗಳನ್ನು ಹೆಚ್ಚು ಖರೀದಿಸುತ್ತಿದ್ದಾರೆ. ಇದರಿಂದ ಭಾರತೀಯ ಮಾರುಕಟ್ಟೆಯಲ್ಲಿ ಪ್ರೀಮಿಯಂ ಬೈಕ್‌ಗಳಿಗೆ ಹೆಚ್ಚಿನ ಬೇಡಿಕೆ ಹೊಂದಿದೆ. ಭಾರತದಲ್ಲಿ ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಮಾರಾಟವಾಗುವ ಅತ್ಯುತ್ತಮ ಪ್ರೀಮಿಯಂ ಬೈಕ್‌ಗಳ ಮಾಹಿತಿ ಇಲ್ಲಿದೆ.

ರಾಯಲ್ ಎನ್ಫೀಲ್ಡ್ ಇಂಟರ್‌ಸೆಪ್ಟರ್ 650
ಈ ರಾಯಲ್ ಎನ್ಫೀಲ್ಡ್ ಇಂಟರ್‌ಸೆಪ್ಟರ್ 650 ಚೆನ್ನೈ ಮೂಲದ ದ್ವಿಚಕ್ರ ವಾಹನ ತಯಾರಕರ ಸರಣಿಯಲ್ಲಿ ಅತ್ಯಂತ ಜನಪ್ರಿಯ ಮಾದರಿಗಳಲ್ಲಿ ಒಂದಾಗಿದೆ. ಈ ಬೈಕಿಗೆ ಪ್ರಸ್ತುತ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.2.85 ಲಕ್ಷವಾಗಿದೆ. ಈ ಬೈಕ್ ಹೊಸ 650 ಸಿಸಿ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ.

ಈ ರಾಯಲ್ ಎನ್ಫೀಲ್ಡ್ ಇಂಟರ್‍ಸೆಪ್ಟರ್ 650 ಬೈಕಿನಲ್ಲಿ 649ಸಿಸಿ ಪ್ಯಾರಲಲ್ ಟ್ವಿನ್ ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 7,250 ಆರ್‌ಪಿಎಂನಲ್ಲಿ 47 ಬಿಹೆಚ್‌ಪಿ ಪವರ್ ಮತ್ತು 5,250 ಆರ್‌ಪಿಎಂನಲ್ಲಿ 52 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಇಂಟರ್ಸೆಪ್ಟರ್ 650 ಬೈಕ್ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 41 ಎಂಎಂ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಟ್ವಿನ್-ಗ್ಯಾಸ್ ಚಾರ್ಜ್ಡ್ ಶಾಕ್ ಗಳು 5-ಹಂತದ ಹೊಂದಾಣಿಕೆಯೊಂದಿಗೆ ಪ್ರಿ-ಲೋಡ್ ಡ್ಯಾಂಪಿಂಗ್‌ಗಾಗಿ ನಿರ್ವಹಿಸುತ್ತವೆ. ಇನ್ನು ಈ ಬೈಕಿನ ಮುಂಭಾಗದಲ್ಲಿ 320 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 240 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಹೆಚ್ಚಿನ ಸುರಕ್ಷತೆಗಾಗಿ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಿದೆ.

ಕೆಟಿಎಂ ಆರ್‌ಸಿ390
ಈ ಕೆಟಿಎಂ ಆರ್‌ಸಿ390 ಸ್ಪೋರ್ಟ್ಸ್ ಬೈಕ್ ನಿಖರವಾಗಿ ವಿಭಾಗದಲ್ಲಿ ಹೊಸ ಕೊಡುಗೆಯಲ್ಲ. ಡ್ಯೂಕ್ 200ರ ನಂತರ ಎರಡನೇ ಉತ್ಪನ್ನವಾಗಿ ಬಿಡುಗಡೆಯಾದ ಆರ್‌ಸಿ390 ಭಾರತದಲ್ಲಿ ಕೆಟಿಎಂ ಕಂಪನಿಯಿಂದ ಹೆಚ್ಚು ಆದ್ಯತೆಯ ಬೈಕುಗಳಲ್ಲಿ ಒಂದಾಗಿದೆ. ಈ ಬೈಕಿನ ಬೆಲೆಯು ಎಲ್ಸ್ ಶೋರೂಂ ಪ್ರಕಾರ ರೂ.2.78 ಲಕ್ಷವಾಗಿದೆ.

ಕೆಟಿಎಂ ಆರ್‌ಸಿ 390 373.2 ಸಿಸಿ, ಸಿಂಗಲ್ ಸಿಲಿಂಡರ್, ಲಿಕ್ವಿಡ್ ಕೂಲ್ಡ್, ಫ್ಯೂಯಲ್-ಇಂಜೆಕ್ಟ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 43.5 ಬಿಹೆಚ್ಪಿ ಪವರ್ ಮತ್ತು 37 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಕವಾಸಕಿ ನಿಂಜಾ 400
ಈ ಜನಪ್ರಿಯ ಕವಾಸಕಿ ನಿಂಜಾ 400 ಸೂಪರ್‌ಸ್ಪೋರ್ಟ್ ಬೈಕ್ ಬೆಲೆಯು ಎಕ್ಸ್ ಶೊರೂಂ ಪ್ರಕಾರ ರೂ.4.99 ಲಕ್ಷವಾಗಿದೆ. ಕವಾಸಕಿ ನಿಂಜಾ 400 ಸೂಪರ್‌ಸ್ಪೋರ್ಟ್ ಬೈಕಿನಲ್ಲಿ ಎಲ್ಇಡಿ ಹೆಡ್ ಲ್ಯಾಂಪ್ ಮತ್ತು ಎಲ್ಇಡಿ ಟೈಲ್ ಲ್ಯಾಂಪ್, ಸ್ಪ್ಲಿಟ್ ಸೀಟುಗಳು, ಏರೋಡೈನಾಮಿಕ್ ಮತ್ತು ಸೆಮಿ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಒಳಗೊಂಡಿದೆ.

ಈ ಬೈಕಿನಲ್ಲಿ 399 ಸಿಸಿ ಪ್ಯಾರೆಲ್ ಟ್ವಿನ್ ಲಿಕ್ವಿಡ್ ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 47.5 ಬಿಹೆಚ್ಪಿ ಪವರ್ ಮತ್ತು 37.2 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಗೇರ್ ಬಾಕ್ಸ್ ಅನ್ನು ಅಳವಡಿಸಳಾಗಿದೆ

ಕವಾಸಕಿ ನಿಂಜಾ 400 ಬೈಕಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಯುನಿ-ಟ್ರ್ಯಾಕ್ ಮೊನೊಶಾಕ್ ಸೆಟಪ್ ಸಸ್ಪಂಕ್ಷನ್ ಅನ್ನು ಅಳವಡಿಸಲಾಗಿದೆ. ಇನ್ನು 2021ರ ನಿಂಜಾ 400 ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಡಿಸ್ಕ್ ಬ್ರೇಕ್ ಗಳನ್ನು ಅಳವಡಿಸಲಾಗಿದೆ. ಇದರೊಂದಿಗೆ ಡ್ಯುಯಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಜೋಡಿಸಲಾಗಿದೆ.

ಹೋಂಡಾ ಸಿಬಿ300ಆರ್
ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು ಸಿಬಿ300ಆರ್ ಬೈಕ್ ಅನ್ನು ಈ ಹೋಂಡಾ ಸಿಬಿ300ಆರ್ ಬೈಕ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷದ ಜನವರಿ ತಿಂಗಳಿನಲ್ಲಿ ಬಿಡುಗಡೆಗೊಳಿಸಿತ್ತು.

ಈ ಹೋಂಡಾ ಸಿಬಿ300ಆರ್ ಬೈಕ್ ಬೆಲೆಯು ನವದೆಹಲಿ ಎಕ್ಸ್ ಶೋ ರೂಂ ಪ್ರಕಾರ ರೂ.2.77 ಲಕ್ಷವಾಗಿದೆ. ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಈ ನಿಯೋ-ರೆಟ್ರೊ ಕೆಫೆ ರೇಸರ್ ಎಲ್ಇಡಿ ಹೆಡ್‌ಲ್ಯಾಂಪ್, ಫ್ಲಾಟ್ ಸಿಂಗಲ್-ಪೀಸ್ ಹ್ಯಾಂಡಲ್‌ಬಾರ್, ಸ್ಕಲ್ಪ್ಟೆಡ್ ಇಂಧನ ಟ್ಯಾಂಕ್, ಸ್ಪ್ಲಿಟ್-ಸೀಟ್ ಸೆಟಪ್, ಸ್ಟಬ್ಬಿ ಎಕ್ಸಾಸ್ಟ್ ಮತ್ತು ನಯವಾದ ಎಲ್‌ಇಡಿ ಟೈಲ್‌ಲೈಟ್ ಅನ್ನು ಪಡೆಯುತ್ತದೆ. ರೇಡಿಯೇಟರ್ ಕೌಲ್ ಈಗ ಸಿಲ್ವರ್ ಬದಲಿಗೆ ಬ್ಲ್ಯಾಕ್ ಬಣ್ಣವಾಗಿದೆ.

ಹೊಸ ಹೋಂಡಾ ಸಿಬಿ300ಆರ್ ಬೈಕಿನಲ್ಲಿ 286 ಸಿಸಿ, ಲಿಕ್ವಿಡ್-ಕೂಲ್ಡ್, ಸಿಂಗಲ್-ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ, ಈ 31.14 ಬಿಹೆಚ್‍ಪಿ ಪವರ್ ಮತ್ತು 27.5 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ, ಈ ಎಂಜಿನ್ ಅನ್ನು 6-ಸ್ಪೀಡ್ ಟ್ರಾನ್ಸ್‌ಮಿಷನ್‌ಗೆ ಹೊಂದಿಕೆಯಾಗುತ್ತದೆ, ಜೊತೆಗೆ ಸ್ಲಿಪ್ಪರ್ ಮತ್ತು ಅಸಿಸ್ಟ್ ಕ್ಲಚ್ ಅನ್ನು ಜೋಡಿಸಲಾಗಿದೆ,