ರಿಯಾಯ್ತಿಯೊಂದಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪರಿಚಯಿಸಿದ ಹೀರೋ ಎಲೆಕ್ಟ್ರಿಕ್

ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಮುಂಚೂಣಿ ಹೊಂದಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಇವಿ ವಾಹನ ಖರೀದಿಗಾಗಿ ಹಲವಾರು ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದು, ಕಂಪನಿಯು ಇದೀಗ ಎಸ್‌ಬಿಐ(ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ) ಜೊತೆಗೂಡಿ ಸುಲಭ ಹಣಕಾಸು ಸೌಲಭ್ಯಗಳನ್ನು ಪರಿಚಯಿಸಿದೆ.

ರಿಯಾಯ್ತಿಯೊಂದಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪರಿಚಯಿಸಿದ ಹೀರೋ ಎಲೆಕ್ಟ್ರಿಕ್

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಇಂಟಿಗ್ರೇಟೆಡ್ ಡಿಜಿಟಲ್ ಬ್ಯಾಂಕಿಂಗ್ ಪ್ಲಾಟ್‌ಫಾರ್ಮ್ ಯೋನೋ ಮೂಲಕ ಹೀರೋ ಎಲೆಕ್ಟ್ರಿಕ್ ಸ್ಕೂಟರ್‌ಗಳ ಖರೀದಿಗಾಗಿ ಆಕರ್ಷಕ ಬಡ್ಡಿದರ ಹಣಕಾಸು ಸೇವೆಗಳನ್ನು ಖಚಿತಪಡಿಸಿದ್ದು, ರೂ. 2 ಸಾವಿರ ರಿಯಾಯ್ತಿಯೊಂದಿಗೆ ಕಡಿಮೆ ಬಡ್ಡಿದರದ ಇಎಂಐ ಆಯ್ಕೆ ನೀಡಿದ್ದು, ದೇಶಾದ್ಯಂತ ಹೊಸ ಆಫರ್ ಘೋಷಣೆ ಮಾಡಲಾಗಿದೆ.

ರಿಯಾಯ್ತಿಯೊಂದಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪರಿಚಯಿಸಿದ ಹೀರೋ ಎಲೆಕ್ಟ್ರಿಕ್

ಇವಿ ವಾಹನ ಖರೀದಿದಾರರು ಯೋನೋ ಡಿಜಿಟಲ್ ಬ್ಯಾಂಕಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ಕನಿಷ್ಠ ಮಟ್ಟದ ದಾಖಲೆ ಪತ್ರಗಳೊಂದಿಗೆ ಸಂಪೂರ್ಣ ಡಿಜಿಟಲ್ ಮತ್ತು ಪೇಪರ್‌ಲೆಸ್ ದ್ವಿಚಕ್ರ ವಾಹನ ಸಾಲವನ್ನು ಆಯ್ಕೆ ಮಾಡಬಹುದು.

ರಿಯಾಯ್ತಿಯೊಂದಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪರಿಚಯಿಸಿದ ಹೀರೋ ಎಲೆಕ್ಟ್ರಿಕ್

ಯೋನೋದಲ್ಲಿ ಎಸ್‌ಬಿಐ ಈಸಿ ರೈಡ್ ಲೋನ್ ಅಡಿಯಲ್ಲಿ 4 ವರ್ಷಗಳವರೆಗೆ ಪ್ರತಿ ರೂ. 10 ಸಾವಿರಕ್ಕೆ ರೂ. 251 ಯಷ್ಟು ಕಡಿಮೆ ಇಎಂಐನಲ್ಲಿ ಸಾಲವನ್ನು ಪಡೆಯಬಹುದಾಗಿದ್ದು, ಎಸ್‌ಬಿಐ ಜೊತೆ ಮಾತ್ರವಲ್ಲದೆ ಹೀರೋ ಎಲೆಕ್ಟ್ರಿಕ್ ಕಂಪನಿಯು ಆಕ್ಸಿಸ್ ಬ್ಯಾಂಕ್, ಎಚ್‌ಡಿಬಿ ಫೈನಾನ್ಶಿಯಲ್ ಸರ್ವಿಸಸ್‌ ಮೂಲಕ ವಿವಿಧ ಸಾಲ ಸೌಲಭ್ಯಗಳನ್ನು ನೀಡುತ್ತಿದೆ.

ರಿಯಾಯ್ತಿಯೊಂದಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪರಿಚಯಿಸಿದ ಹೀರೋ ಎಲೆಕ್ಟ್ರಿಕ್

ಎಲೆಕ್ಟ್ರಿಕ್ ವಾಹನ ಕಂಪನಿಗಳು ದುಬಾರಿ ಇಂಧನ ಪರಿಣಾಮ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ದೇಶದ ಅತಿದೊಡ್ಡ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರಾಟ ಕಂಪನಿಯಾಗಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಕೂಡಾ ಕಳೆದ ವರ್ಷದಿಂದಲೂ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡಿದೆ.

ರಿಯಾಯ್ತಿಯೊಂದಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪರಿಚಯಿಸಿದ ಹೀರೋ ಎಲೆಕ್ಟ್ರಿಕ್

ಹೊಸ ಎಲೆಕ್ಟ್ರಿಕ್ ವಾಹನ ಮಾದರಿಗಳ ವಿಚಾರಣೆಯೂ ಕೂಡಾ ಹೆಚ್ಚಿದ್ದು, ಹೆಚ್ಚಿನ ಮಟ್ಟದ ಮೈಲೇಜ್ ಹೊಂದಿರುವ ಇವಿ ವಾಹನಗಳ ಖರೀದಿಗೆ ಆಸಕ್ತಿ ತೋರುತ್ತಿದ್ದಾರೆ. ಇವಿ ಸ್ಕೂಟರ್ ಉತ್ಪಾದನೆಯನ್ನು ಆರಂಭಿಸಿ ಸುಮಾರು 13 ವರ್ಷಗಳನ್ನು ಪೂರೈಸಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಇದುವರೆಗೆ 4 ಲಕ್ಷ ಯುನಿಟ್‌ಗಳಿಗೂ ಹೆಚ್ಚು ಇವಿ ವಾಹನಗಳನ್ನು ಮಾರಾಟ ಮಾಡಿದ್ದು, ಗ್ರಾಹಕರ ಬೇಡಿಕೆಯೆಂತೆ ಇವಿ ಉತ್ಪನ್ನಗಳಲ್ಲಿ ಹಲವಾರು ಬದಲಾವಣೆಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದೆ.

ರಿಯಾಯ್ತಿಯೊಂದಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪರಿಚಯಿಸಿದ ಹೀರೋ ಎಲೆಕ್ಟ್ರಿಕ್

ಹೀರೋ ಎಲೆಕ್ಟ್ರಿಕ್ ಕಂಪನಿಯು ಕಳೆದ ಎರಡು ವರ್ಷಗಳಿಂದ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಈ ಹಿಂದಿನ ಹತ್ತು ವರ್ಷಗಳಲ್ಲಿ ವಾಹನ ಮಾರಾಟ ಪ್ರಮಾಣವು ಕಳೆದ ಎರಡು ವರ್ಷಗಳಲ್ಲಿ ದ್ವಿಗುಣಗೊಂಡಿದೆ.

ರಿಯಾಯ್ತಿಯೊಂದಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪರಿಚಯಿಸಿದ ಹೀರೋ ಎಲೆಕ್ಟ್ರಿಕ್

ಈ ಮೂಲಕ ಕಂಪನಿಯು ಇವಿ ದ್ವಿಚಕ್ರ ವಾಹನ ಮಾರಾಟ ವಿಭಾಗದಲ್ಲಿ ಶೇ.36 ಪಾಲು ತನ್ನದಾಗಿಸಿಕೊಳ್ಳುವ ಮೂಲಕ ಅಗ್ರಸ್ಥಾನ ಕಾಯ್ದುಕೊಂಡಿದ್ದು, ಇವಿ ಸ್ಕೂಟರ್ ಮಾರಾಟವನ್ನು ಪ್ರಸಕ್ತ ವರ್ಷದಲ್ಲಿ ಶೇಕಡಾ 15ರಷ್ಟು ಹೆಚ್ಚಿಸುವ ನೀರಿಕ್ಷೆಯಲ್ಲಿದೆ.

ರಿಯಾಯ್ತಿಯೊಂದಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪರಿಚಯಿಸಿದ ಹೀರೋ ಎಲೆಕ್ಟ್ರಿಕ್

ಇದಕ್ಕಾಗಿ ಕಳೆದ ಒಂದು ವರ್ಷದ ಅವಧಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ನಗರಗಳಲ್ಲಿ ಹಲವು ಹೊಸ ಮಾರಾಟ ಮಳಿಗೆಗಳನ್ನು ತೆರೆದಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಮುಂದಿನ ಮೂರು ವರ್ಷಗಳಲ್ಲಿ ಪ್ರತಿವರ್ಷ 2.5 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡುವ ಗುರಿಯನ್ನು ಹೊಂದಿದೆ.

ರಿಯಾಯ್ತಿಯೊಂದಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪರಿಚಯಿಸಿದ ಹೀರೋ ಎಲೆಕ್ಟ್ರಿಕ್

ಸದ್ಯ ದೇಶಾದ್ಯಂತ 500 ನಗರಗಳಲ್ಲಿ 750ಕ್ಕೂ ಹೆಚ್ಚು ಮಾರಾಟ ಮಳಿಗೆಗಳನ್ನು ಹೊಂದಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಅಗತ್ಯತೆಯ ಆಧಾರದ ಮೇಲೆ ಕಳೆದ ವರ್ಷ ಸುಮಾರು 1,500 ಹೊಸ ಫಾಸ್ಟ್ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಮಾರಾಟ ಮಳಿಗೆಗಳನ್ನು ತೆರೆಯಲು ಸಿದ್ದವಾಗಿದೆ.

ರಿಯಾಯ್ತಿಯೊಂದಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪರಿಚಯಿಸಿದ ಹೀರೋ ಎಲೆಕ್ಟ್ರಿಕ್

2022 ಆರ್ಥಿಕ ವರ್ಷದ ಕೊನೆಯಲ್ಲಿ ದೇಶಾದ್ಯಂತ ಒಟ್ಟು ಒಂದು ಸಾವಿರ ಟಚ್ ಪಾಯಿಂಟ್(ಮಾರಾಟ ಮಳಿಗೆಗಳನ್ನು) ಹೊಂದುವ ಗುರಿಹೊಂದಿದ್ದು, ಚಾರ್ಜಿಂಗ್ ನಿಲ್ದಾಣಗಳ ಲಭ್ಯತೆಯ ಆಧಾರದ ಮೇಲೆ ಹೊಸ ಟಚ್ ಪಾಯಿಂಟ್ ತೆರೆಯಲಾಗುತ್ತಿದೆ.

ರಿಯಾಯ್ತಿಯೊಂದಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪರಿಚಯಿಸಿದ ಹೀರೋ ಎಲೆಕ್ಟ್ರಿಕ್

ಇದಲ್ಲದೆ ಹೀರೋ ಎಲೆಕ್ಟ್ರಿಕ್ ಮತ್ತು ಚಾರ್ಜರ್ ಕಂಪನಿಗಳು ಮುಂದಿನ ಮೂರು ವರ್ಷದಲ್ಲಿ ಒಟ್ಟು 1 ಲಕ್ಷ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದ್ದು, ಮೊದಲ ವರ್ಷದಲ್ಲಿ ದೇಶದ ಪ್ರಮುಖ 30 ನಗರಗಳಲ್ಲಿ 10 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುವ ಯೋಜನೆಯಲ್ಲಿದೆ.

ರಿಯಾಯ್ತಿಯೊಂದಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪರಿಚಯಿಸಿದ ಹೀರೋ ಎಲೆಕ್ಟ್ರಿಕ್

ಚಾರ್ಜರ್ ಕಂಪನಿಯು ಈಗಾಗಲೇ ದೇಶಾದ್ಯಂತ 20 ಪ್ರಮುಖ ನಗರಗಳಲ್ಲಿ ಆರಂಭಿಕ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣ ಮಾಡಿದ್ದು, ಇವಿ ವಾಹನ ಮಾಲೀಕರಿಗೆ ಚಾರ್ಜಿಂಗ್ ನಿಲ್ದಾಣಗಳನ್ನು ಸುಲಭವಾಗಿ ಪತ್ತೆ ಹಚ್ಚಲು ನೆರವಾಗುವಂತೆ ಪ್ರತ್ಯೇಕ ಆ್ಯಪ್ ಕೂಡಾ ಅಭಿವೃದ್ದಿಪಡಿಸಿದೆ.

ರಿಯಾಯ್ತಿಯೊಂದಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪರಿಚಯಿಸಿದ ಹೀರೋ ಎಲೆಕ್ಟ್ರಿಕ್

ಆ್ಯಪ್ ಮೂಲಕ ಹತ್ತಿರದಲ್ಲಿರುವ ಚಾರ್ಜಿಂಗ್ ನಿಲ್ದಾಣಗಳ ಮಾಹಿತಿ ಮತ್ತು ಚಾರ್ಜಿಂಗ್ ನಿಲ್ದಾಣದಲ್ಲಿ ಚಾರ್ಜಿಂಗ್‌ಗಾಗಿ ಸರತಿ ಸಾಲಿನಲ್ಲಿರುವ ವಾಹನಗಳ ಸಂಖ್ಯೆ ಮತ್ತು ಯಾವ ನಿಲ್ದಾಣದಲ್ಲಿ ಕಡಿಮೆ ವಾಹನಗಳಿವೆ ಎನ್ನುವುದರ ಜೊತೆ ಚಾರ್ಜಿಂಗ್‌ಗಾಗಿ ತೆಗೆದುಕೊಳ್ಳುವ ನಿಖರವಾದ ಸಮಯದ ಮಾಹಿತಿಯನ್ನು ಬಳಕೆದಾರರಿಗೆ ನೀಡಲಿದೆ.

ರಿಯಾಯ್ತಿಯೊಂದಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪರಿಚಯಿಸಿದ ಹೀರೋ ಎಲೆಕ್ಟ್ರಿಕ್

ಹೀರೋ ಎಲೆಕ್ಟ್ರಿಕ್ ಮತ್ತು ಚಾರ್ಜರ್ ಕಂಪನಿಗಳು ಸಾರ್ವಜನಿಕ ಬಳಕೆಯ ಇವಿ ಚಾರ್ಜಿಂಗ್ ನಿಲ್ದಾಣಗಳ ಜೊತೆಗೆ ಶಾಂಪಿಂಗ್ ಕಾಂಪ್ಲೆಕ್ಸ್, ಅಂಪಾರ್ಟ್‌ಮೆಂಟ್‌ಗಳು ಮತ್ತು ಮಾಲ್‌ಗಳಲ್ಲೂ ನಿರ್ದಿಷ್ಟ ವಾಹನ ಮಾಲೀಕರಿಗಾಗಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ.

More from DriveSpark

Article Published On: Monday, February 14, 2022, 9:48 [IST]
English summary
Hero electric company partners with sbi for financing options
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+