ಫಾಸ್ಟ್ ಚಾರ್ಜಿಂಗ್ ಸೌಲಭ್ಯಕ್ಕಾಗಿ ಜಿಯೋ ಬಿಪಿ ಜೊತೆ ಕೈಜೋಡಿಸಿದ ಹೀರೋ ಎಲೆಕ್ಟ್ರಿಕ್
ಎಲೆಕ್ಟ್ರಿಕ್ ವಾಹನಗಳ ಮಾರಾಟವು ಕಳೆದ ಕೆಲ ತಿಂಗಳಿನಿಂದ ಉತ್ತಮ ಬೆಲೆ ಪಡೆದುಕೊಳ್ಳುತ್ತಿದ್ದು, ಇವಿ ವಾಹನಗಳಿಗೆ ಪೂರಕವಾಗಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳು ಕೂಡಾ ಹೆಚ್ಚುತ್ತಿವೆ.
Recommended Video
ಈ ನಿಟ್ಟಿನಲ್ಲಿ ಹೊಸ ಯೋಜನೆಯೊಂದಕ್ಕೆ ಚಾಲನೆ ನೀಡಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ತನ್ನ ಗ್ರಾಹಕರಿಗೆ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲು ಮುಂದಾಗಿದ್ದು, ಫಾಸ್ಟ್ ಚಾರ್ಜಿಂಗ್ ಜಾಲ ವಿಸ್ತರಣೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಜಿಯೋ ಬಿಪಿ ಜೊತೆ ಕೈಜೋಡಿಸಿದೆ.

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ವಾಹನ ಮಾರಾಟ ಜಾಲ ವಿಸ್ತರಣೆ ಜೊತೆಗೆ ತನ್ನ ಸಂಭಾವ್ಯ ಗ್ರಾಹಕರಿಗೆ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಕಲ್ಪಿಸಲಿಸುತ್ತಿದೆ. ಫಾಸ್ಟ್ ಚಾರ್ಜಿಂಗ್ ಸೌಲಭ್ಯಕ್ಕಾಗಿ ಕಂಪನಿಯು ಜಿಯೋ ಬಿಪಿ ಕಂಪನಿಯೊಂದಿಗೆ ಪಾಲುದಾರಿಕೆ ಪ್ರಕಟಿಸಿದ್ದು, ಹೀರೋ ಇವಿ ವಾಹನಗಳಿಗೆ ಜಿಯೋ ಬಿಪಿ ಪೆಟ್ರೋಲ್ ಬಂಕ್‌ಗಳಲ್ಲಿ ಸ್ಥಾಪಿಸಲಾಗುತ್ತಿರುವ ಚಾರ್ಜಿಂಗ್ ಸೌಲಭ್ಯವನ್ನು ಸುಲಭವಾಗಿ ಬಳಕೆ ಮಾಡಿಕೊಳ್ಳಬಹುದಾಗಿದೆ.

ಅಸ್ತಿತ್ವದಲ್ಲಿರುವ ಪೆಟ್ರೋಲ್ ಬಂಕ್‌ಗಳಲ್ಲಿ ಜಿಯೋ ಬಿಪಿ ಕಂಪನಿಯು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುತ್ತಿದ್ದು, ವಿವಿಧ ಇವಿ ವಾಹನ ಮಾದರಿಗಳಿಗೆ ವಿವಿಧ ಹಂತದ ಚಾರ್ಜಿಂಗ್ ಸೌಲಭ್ಯವನ್ನು ಕಲ್ಪಿಸುತ್ತಿದೆ.

ಹೊಸ ಚಾರ್ಜಿಂಗ್ ಸೌಲಭ್ಯದೊಂದಿಗೆ ಜಿಯೋ ಬಿಪಿ ಕಂಪನಿಯು ವಿವಿಧ ಕಂಪನಿಗಳೊಂದಿಗೆ ಪಾಲುದಾರಿಕೆ ಪ್ರಕಟಿಸುತ್ತಿದ್ದು, ಕಂಪನಿಯು ಈ ವರ್ಷಾಂತ್ಯಕ್ಕೆ ದೇಶಾದ್ಯಂತ ಪ್ರಮುಖ ನಗರಗಳಲ್ಲಿ 1 ಸಾವಿರಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ಗಳಲ್ಲಿ ಫಾಸ್ಟ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ಹೊಂದಿರುವ ಭರವಸೆ ನೀಡಿದೆ.

ಹೊಸ ಯೋಜನೆಯ ಭಾಗವಾಗಿ ಜಿಯೋ ಬಿಪಿ ಕಂಪನಿಯು ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಈಗಾಗಲೇ ಹಂತ-ಹಂತವಾಗಿ ಚಾರ್ಜಿಂಗ್ ಸೌಲಭ್ಯವನ್ನು ತೆರೆಯುತ್ತಿದ್ದು, ಇದೀಗ ಹೀರೋ ಎಲೆಕ್ಟ್ರಿಕ್ ಕಂಪನಿಯು ತನ್ನ ಗ್ರಾಹಕರಿಗೆ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಕಲ್ಪಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ.

ಇನ್ನು ಎಲೆಕ್ಟ್ರಿಕ್ ಸ್ಕೂಟರ್ ವಿಭಾಗದಲ್ಲಿ ಪ್ರಮುಖ ಮಾದರಿಗಳೊಂದಿಗೆ ಮುಂಚೂಣಿಯಲ್ಲಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಗ್ರಾಹಕರ ಬೇಡಿಕೆ ಪೂರೈಸಲು ಈಗಾಗಲೇ ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಮಾರಾಟ ಸೌಲಭ್ಯವನ್ನು ವಿಸ್ತರಿಸುತ್ತಿದ್ದು, ಶೋರೂಂಗಳ ಜೊತೆಗೆ ಕಂಪನಿಯು ಇದೀಗ ಗ್ರಾಹಕರ ಮನೆ ಬಾಗಿಲಿಗೆ ಇವಿ ಸ್ಕೂಟರ್ ವಿತರಣೆಗೆ ಚಾಲನೆ ನೀಡಿದೆ.

ದೇಶಾದ್ಯಂತ ಈಗಾಗಲೇ ಪ್ರಮುಖ ನಗರಗಳಲ್ಲಿ ಮಾರಾಟ ಸೌಲಭ್ಯ ಹೊಂದಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಮಾರಾಟ ಸೌಲಭ್ಯ ಲಭ್ಯವಿಲ್ಲದ ನಗರಗಳಲ್ಲಿನ ಗ್ರಾಹಕರ ಬೇಡಿಕೆ ಪೂರೈಕೆಗೆ ಅನುಕೂಲಕರವಾಗುವಂತೆ ಹೈಬ್ರಿಡ್ ವಿತರಣಾ ಮಾದರಿಯನ್ನು ಅಳವಡಿಸಿಕೊಂಡಿದ್ದು, 2023ರ ಅಂತ್ಯಕ್ಕೆ ವಾರ್ಷಿಕವಾಗಿ 2.50 ಲಕ್ಷ ಯುನಿಟ್ ಮಾರಾಟ ಗುರಿಯೊಂದಿಗೆ ಹೊಸ ಸೌಲಭ್ಯಕ್ಕೆ ಚಾಲನೆ ನೀಡಿದೆ.

ಕೋವಿಡ್ ಸಂದರ್ಭದಲ್ಲಿಯೇ ಹೈಬ್ರಿಡ್ ವಿತರಣಾ ಜಾರಿಗೆ ಮುಂದಾಗಿದ್ದ ಹೀರೋ ಎಲೆಕ್ಟ್ರಿಕ್ ಕಂಪನಿಗೆ ಬಿಡಿಭಾಗಗಳ ಪೂರೈಕೆಯಲ್ಲಿನ ಸಮಸ್ಯೆಯು ಹಿನ್ನಡೆ ಉಂಟುಮಾಡಿತ್ತು. ಹೀಗಾಗಿ ಹೋಂ ಡೆಲಿವರಿ ಆಯ್ಕೆಯನ್ನು ಜಾರಿಯಿಂದ ಹಿಂದೆ ಸರಿದಿದ್ದ ಕಂಪನಿಯು ಇದೀಗ ಅಧಿಕೃತವಾಗಿ ಜಾರಿಗೆ ತಂದಿದೆ.

2023ರ ಹಣಕಾಸು ವರ್ಷದ ಅಂತ್ಯಕ್ಕೆ ವಾರ್ಷಿಕವಾಗಿ 2.50 ಲಕ್ಷ ಇವಿ ಸ್ಕೂಟರ್ ಮಾರಾಟ ಗುರಿಹೊಂದಿರುವ ಹೀರೋ ಎಲೆಕ್ಟ್ರಿಕ್ ಕಂಪನಿಗೆ ಹೊಸ ವಿತರಣಾ ಕ್ರಮವು ಸಾಕಷ್ಟು ಅನುಕೂಲಕವಾಗಲಿದ್ದು, ಮುಂದಿನ ಐದು ವರ್ಷಗಳಲ್ಲಿ ಕಂಪನಿಯು ಒಂದು ಮಿಲಿಯನ್ ಅಂದರೆ 10 ಲಕ್ಷ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟವನ್ನು ನೋಂದಾಯಿಸಬಹುದು ಎಂದು ಅಂದಾಜಿಸಿದೆ.

ಹೀಗಾಗಿ ಕಂಪನಿಯು ತನ್ನ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ಇತ್ತೀಚೆಗೆ ಲೂಧಿಯಾನದಲ್ಲಿ ತನ್ನ ಎರಡನೇ ಉತ್ಪಾದನಾ ಘಟಕವನ್ನು ಸಹ ಆರಂಭಿಸಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಭವಿಷ್ಯದ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ಧಿ ಯೋಜನೆಗಾಗಿ ಹೀರೋ ಎಲೆಕ್ಟ್ರಿಕ್ ಕಂಪನಿಯು ಮಹೀಂದ್ರಾ ಗ್ರೂಪ್‌ನೊಂದಿಗೆ ಸಹಭಾಗೀತ್ವ ಯೋಜನೆ ಘೋಷಣೆ ಮಾಡಿದ್ದು, ಹೊಸ ಯೋಜನೆ ಅಡಿಯಲ್ಲಿ ಹೀರೋ ಎಲೆಕ್ಟ್ರಿಕ್ ಕಂಪನಿಯು ಇವಿ ಸ್ಕೂಟರ್ ಉತ್ಪಾದನೆಗೆ ಈಗಾಗಲೇ ಅಧಿಕೃತವಾಗಿ ಚಾಲನೆ ನೀಡಿದೆ.

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರಾಟದಲ್ಲಿ ಅತಿ ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಹೊಸ ಮೈಲಿಗಲ್ಲು ಸಾಧಿಸಿದ್ದು, ಇವಿ ಸ್ಕೂಟರ್ ಉತ್ಪಾದನೆಯನ್ನು ಆರಂಭಿಸಿ ಸುಮಾರು 13 ವರ್ಷಗಳನ್ನು ಪೂರೈಸಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಮಾರುಕಟ್ಟೆಯಲ್ಲಿ ಬೇಡಿಕೆ ಪೂರೈಕೆಗಾಗಿ ಉದ್ಯಮ ವಿಸ್ತರಣೆಗಾಗಿ ಮಹತ್ವದ ಯೋಜನೆ ಕೈಗೊಂಡಿದೆ.

ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಸಕಾಲದಲ್ಲಿ ಪೂರೈಸಲು ಬ್ರ್ಯಾಂಡ್‌ನ ವಿಸ್ತರಣೆ ಯೋಜನೆಗಳ ಭಾಗವಾಗಿ ಹೀರೋ ಎಲೆಕ್ಟ್ರಿಕ್ ಕಂಪನಿಯು ಮಹೀಂದ್ರಾ ಗ್ರೂಪ್ ಜೊತೆಗೆ ಹೊಸ ಪಾಲುದಾರಿಕೆ ಮಾಡಿಕೊಂಡಿದ್ದು, ಪಾಲುದಾರಿಕೆಯ ಭಾಗವಾಗಿ ಹೀರೋ ಎಲೆಕ್ಟ್ರಿಕ್ ಕಂಪನಿಯು ಮಧ್ಯಪ್ರದೇಶದ ಪಿಥಮ್‌ಪುರ್‌ದಲ್ಲಿರುವ ಮಹೀಂದ್ರಾ ಕಂಪನಿಯ ವಾಹನ ಉತ್ಪಾದನಾ ಘಟಕದಲ್ಲಿ ಇವಿ ಸ್ಕೂಟರ್ ಉತ್ಪಾದನೆ ಮಾಡುತ್ತಿದೆ.

ಹೀರೋ ಎಲೆಕ್ಟ್ರಿಕ್ ಈಗಾಗಲೇ ಲುಧಿಯಾನದಲ್ಲಿರುವ ತನ್ನ ಇವಿ ವಾಹನ ಉತ್ಪಾದನಾ ಘಟಕದಲ್ಲಿ ಇವಿ ವಾಹನಗಳ ಉತ್ಪಾದನೆ ಕೈಗೊಳ್ಳುತ್ತಿದ್ದು, 2022ರ ಅಂತ್ಯದ ವೇಳೆಗೆ ವಾರ್ಷಿಕವಾಗಿ 1 ಮಿಲಿಯನ್ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಉತ್ಪಾದಿಸುವ ಗುರಿ ಯೋಜನೆಗಾಗಿ ಮಹೀಂದ್ರಾ ವಾಹನ ಉತ್ಪಾದನಾ ಘಟಕವನ್ನು ಇದೀಗ ಇವಿ ಸ್ಕೂಟರ್ ಉತ್ಪಾದನಾ ಘಟಕವಾಗಿ ಮಾರ್ಪಡಿಸಿದೆ.


Click it and Unblock the Notifications








