ಹೆಚ್ಚಿದ ಇವಿ ವಾಹನ ಬೇಡಿಕೆ- ಮೂರು ಹೊಸ ಶೋರೂಂಗಳನ್ನು ತೆರೆದ ಹೀರೋ ಎಲೆಕ್ಟ್ರಿಕ್!

ಇಂಧನಗಳ ಬೆಲೆ ಏರಿಕೆಯ ಪರಿಣಾಮ ಹೊಸ ವಾಹನ ಖರೀದಿದಾರರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಆದ್ಯತೆ ನೀಡುತ್ತಿದ್ದು, ಗ್ರಾಹಕರ ಬೇಡಿಕೆಗೆ ತಕ್ಕಂತೆ ಇವಿ ವಾಹನ ತಯಾರಕ ಕಂಪನಿಗಳು ಸಹ ವಿವಿಧ ಇವಿ ವಾಹನಗಳೊಂದಿಗೆ ಮಾರಾಟ ಸೌಲಭ್ಯವನ್ನು ವಿಸ್ತರಿಸುತ್ತಿವೆ.

ಮೂರು ಹೊಸ ಶೋರೂಂಗಳನ್ನು ತೆರೆದ ಹೀರೋ ಎಲೆಕ್ಟ್ರಿಕ್!

ಭಾರತದ ಅತಿ ದೊಡ್ಡ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಯಾಗಿರುವ ಹೀರೋ ಎಲೆಕ್ಟ್ರಿಕ್ ಸಹ ಗ್ರಾಹಕರ ಬೇಡಿಕೆಯೆಂತೆ ತನ್ನ ಮಾರಾಟ ಜಾಲವನ್ನು ವಿಸ್ತರಿಸುತ್ತಿದ್ದು, 2022ರ ಆರ್ಥಿಕ ವರ್ಷದ ಅಂತ್ಯಕ್ಕೆ ದೇಶಾದ್ಯಂತ ಒಟ್ಟು 1 ಸಾವಿರ ಶೋರೂಂ ಹೊಂದುವ ಗುರಿಹೊಂದಿದೆ. ಹೀಗಾಗಿ ಶೋರೂಂ ಸಂಖ್ಯೆಯನ್ನು ಹಂತ-ಹಂತವಾಗಿ ಹೆಚ್ಚಿಸುತ್ತಿದ್ದು, ಕಂಪನಿಯು ಇತ್ತೀಚೆಗೆ ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಮೂರು ಹೊಸ ಶೋರೂಂಗಳಿಗೆ ಒಂದೇ ದಿನದಲ್ಲಿ ಚಾಲನೆ ನೀಡಿದೆ.

ಮೂರು ಹೊಸ ಶೋರೂಂಗಳನ್ನು ತೆರೆದ ಹೀರೋ ಎಲೆಕ್ಟ್ರಿಕ್!

ಕಳೆದ ಕೆಲ ತಿಂಗಳ ಹಿಂದೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ತನ್ನ ಎರಡನೇ ಶೋರೂಂ ಆರಂಭಿಸಿದ್ದ ಹೀರೋ ಎಲೆಕ್ಟ್ರಿಕ್ ಕಂಪನಿಯು ಇದೀಗ ವಿವಿಧ ನಗರಗಳಲ್ಲಿ ಮತ್ತಷ್ಟು ಹೊಸ ಶೋರೂಂ ತೆರೆಯುತ್ತಿದ್ದು, ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆ ಆಧರಿಸಿ ಇವಿ ವಾಹನಗಳ ಬೇಡಿಕೆ ಹೆಚ್ಚುತ್ತಿದೆ.

ಮೂರು ಹೊಸ ಶೋರೂಂಗಳನ್ನು ತೆರೆದ ಹೀರೋ ಎಲೆಕ್ಟ್ರಿಕ್!

ಸದ್ಯ ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಒಟ್ಟು ಒಂಬತ್ತು ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಅತ್ಯುತ್ತಮ ಬೇಡಿಕೆ ಹೊಂದಿದ್ದು, ಕಂಪನಿಯು ಹೊಸ ಶೋರೂಂಗಳ ಮೂಲಕ ಮಾರಾಟ ಪ್ರಮಾಣವನ್ನು ದ್ವಿಗುಣಗೊಳಿಸುತ್ತಿದೆ.

ಮೂರು ಹೊಸ ಶೋರೂಂಗಳನ್ನು ತೆರೆದ ಹೀರೋ ಎಲೆಕ್ಟ್ರಿಕ್!

ದುಬಾರಿ ಇಂಧನಗಳ ಬೆಲೆ ಹಿನ್ನಲೆಯಲ್ಲಿ ಕಳೆದ ಎರಡು ವರ್ಷದ ಅವಧಿಯಲ್ಲಿ ವಿವಿಧ ಎಲೆಕ್ಟ್ರಿಕ್ ವಾಹನ ಕಂಪನಿಗಳು ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ದೇಶದ ಅತಿದೊಡ್ಡ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರಾಟ ಕಂಪನಿಯಾಗಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಕೂಡಾ ಕಳೆದ ಕೆಲ ತಿಂಗಳಿನಿಂದ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡಿದೆ.

ಮೂರು ಹೊಸ ಶೋರೂಂಗಳನ್ನು ತೆರೆದ ಹೀರೋ ಎಲೆಕ್ಟ್ರಿಕ್!

ಹೊಸ ಎಲೆಕ್ಟ್ರಿಕ್ ವಾಹನ ಮಾದರಿಗಳ ಕುರಿತಾಗಿ ಗ್ರಾಹಕರಿಂದ ವಿಚಾರಣೆಯೂ ಕೂಡಾ ಹೆಚ್ಚಿದ್ದು, ಹೆಚ್ಚಿನ ಮಟ್ಟದ ಮೈಲೇಜ್ ಹೊಂದಿರುವ ಇವಿ ವಾಹನಗಳ ಖರೀದಿಗೆ ಆಸಕ್ತಿ ತೋರುತ್ತಿದ್ದಾರೆ. ಹೀಗಾಗಿ ಗ್ರಾಹಕರ ಬೇಡಿಕೆಯೆಂತೆ ವಿವಿಧ ಇವಿ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ನಗರಳಲ್ಲಿ ತನ್ನ ಮಾರಾಟ ಪ್ರಕ್ರಿಯೆಯನ್ನು ಆರಂಭಿಸುವ ಸಿದ್ದತೆಯಲ್ಲಿದೆ.

ಮೂರು ಹೊಸ ಶೋರೂಂಗಳನ್ನು ತೆರೆದ ಹೀರೋ ಎಲೆಕ್ಟ್ರಿಕ್!

ಕಳೆದ ಒಂದು ವರ್ಷದ ಅವಧಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ನಗರಗಳಲ್ಲಿ ಹಲವು ಹೊಸ ಮಾರಾಟ ಮಳಿಗೆಗಳನ್ನು ತೆರೆದಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಮುಂದಿನ ಮೂರು ವರ್ಷಗಳಲ್ಲಿ ವಾರ್ಷಿಕವಾಗಿ 2.5 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡುವ ಗುರಿಯನ್ನು ಹೊಂದಿದೆ.

ಮೂರು ಹೊಸ ಶೋರೂಂಗಳನ್ನು ತೆರೆದ ಹೀರೋ ಎಲೆಕ್ಟ್ರಿಕ್!

ಸದ್ಯ ದೇಶಾದ್ಯಂತ 500 ನಗರಗಳಲ್ಲಿ 700ಕ್ಕೂ ಹೆಚ್ಚು ಮಾರಾಟ ಮಳಿಗೆಗಳನ್ನು ಹೊಂದಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಅಗತ್ಯತೆಯ ಆಧಾರದ ಮೇಲೆ ಕಳೆದ ವರ್ಷ ಸುಮಾರು 1,500 ಹೊಸ ಫಾಸ್ಟ್ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಮಾರಾಟ ಮಳಿಗೆಗಳನ್ನು ತೆರೆಯಲು ಸಿದ್ದವಾಗಿದೆ.

ಮೂರು ಹೊಸ ಶೋರೂಂಗಳನ್ನು ತೆರೆದ ಹೀರೋ ಎಲೆಕ್ಟ್ರಿಕ್!

2022 ಆರ್ಥಿಕ ವರ್ಷದ ಕೊನೆಯಲ್ಲಿ ದೇಶಾದ್ಯಂತ ಒಟ್ಟು ಒಂದು ಸಾವಿರ ಟಚ್ ಪಾಯಿಂಟ್(ಮಾರಾಟ ಮಳಿಗೆಗಳನ್ನು) ಹೊಂದುವ ಗುರಿಹೊಂದಿದ್ದು, ಚಾರ್ಜಿಂಗ್ ನಿಲ್ದಾಣಗಳ ಲಭ್ಯತೆಯ ಆಧಾರದ ಮೇಲೆ ಹೊಸ ಟಚ್ ಪಾಯಿಂಟ್‌ಗಳನ್ನು ತೆರೆಯಲಾಗುತ್ತಿದೆ.

ಮೂರು ಹೊಸ ಶೋರೂಂಗಳನ್ನು ತೆರೆದ ಹೀರೋ ಎಲೆಕ್ಟ್ರಿಕ್!

ಇವಿ ಸ್ಕೂಟರ್ ಉತ್ಪಾದನೆಯಲ್ಲಿ ಸುಮಾರು 13 ವರ್ಷಗಳ ಪೂರೈಸಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಇದುವರೆಗೆ 3 ಲಕ್ಷಕ್ಕೂ ಅಧಿಕ ಯುನಿಟ್ ಇವಿ ಸ್ಕೂಟರ್ ಮಾರಾಟ ಮಾಡಿದ್ದು, ಗ್ರಾಹಕರ ಬೇಡಿಕೆಯೆಂತೆ ಇವಿ ಉತ್ಪನ್ನಗಳಲ್ಲಿ ಹಲವಾರು ಬದಲಾವಣೆಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದೆ.

ಮೂರು ಹೊಸ ಶೋರೂಂಗಳನ್ನು ತೆರೆದ ಹೀರೋ ಎಲೆಕ್ಟ್ರಿಕ್!

ಸದ್ಯ ಇವಿ ದ್ವಿಚಕ್ರ ವಾಹನ ಮಾರಾಟ ವಿಭಾಗದಲ್ಲಿ ಶೇ.36 ಪಾಲು ತನ್ನದಾಗಿಸಿಕೊಳ್ಳುವ ಮೂಲಕ ಅಗ್ರಸ್ಥಾನ ಕಾಯ್ದುಕೊಂಡಿದ್ದು, ಇವಿ ಸ್ಕೂಟರ್ ಮಾರಾಟವನ್ನು ಪ್ರಸಕ್ತ ವರ್ಷದಲ್ಲಿ ಶೇಕಡಾ 15ರಷ್ಟು ಹೆಚ್ಚಿಸುವ ನೀರಿಕ್ಷೆಯಲ್ಲಿದೆ.

ಮೂರು ಹೊಸ ಶೋರೂಂಗಳನ್ನು ತೆರೆದ ಹೀರೋ ಎಲೆಕ್ಟ್ರಿಕ್!

ಇದಲ್ಲದೆ ಹೀರೋ ಎಲೆಕ್ಟ್ರಿಕ್ ಮತ್ತು ಚಾರ್ಜರ್ ಕಂಪನಿಯು ಹೊಸ ಪಾಲುದಾರಿಕೆ ಅಡಿಯಲ್ಲಿ ಮುಂದಿನ ಮೂರು ವರ್ಷದಲ್ಲಿ ಒಟ್ಟು 1 ಲಕ್ಷ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದ್ದು, ಮೊದಲ ವರ್ಷದಲ್ಲಿ ದೇಶದ ಪ್ರಮುಖ 30 ನಗರಗಳಲ್ಲಿ 10 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುವ ಯೋಜನೆಯಲ್ಲಿದೆ.

ಮೂರು ಹೊಸ ಶೋರೂಂಗಳನ್ನು ತೆರೆದ ಹೀರೋ ಎಲೆಕ್ಟ್ರಿಕ್!

ಚಾರ್ಜರ್ ಕಂಪನಿಯು ಈಗಾಗಲೇ ದೇಶಾದ್ಯಂತ 20 ಪ್ರಮುಖ ನಗರಗಳಲ್ಲಿ ಆರಂಭಿಕ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣ ಮಾಡಿದ್ದು, ಇವಿ ವಾಹನ ಮಾಲೀಕರಿಗೆ ಚಾರ್ಜಿಂಗ್ ನಿಲ್ದಾಣಗಳನ್ನು ಸುಲಭವಾಗಿ ಪತ್ತೆ ಹಚ್ಚಲು ನೆರವಾಗುವಂತೆ ಪ್ರತ್ಯೇಕ ಆ್ಯಪ್ ಕೂಡಾ ಅಭಿವೃದ್ದಿಪಡಿಸಿದೆ.

ಮೂರು ಹೊಸ ಶೋರೂಂಗಳನ್ನು ತೆರೆದ ಹೀರೋ ಎಲೆಕ್ಟ್ರಿಕ್!

ಆ್ಯಪ್ ಮೂಲಕ ಹತ್ತಿರದಲ್ಲಿರುವ ಚಾರ್ಜಿಂಗ್ ನಿಲ್ದಾಣಗಳ ಮಾಹಿತಿ ಮತ್ತು ಚಾರ್ಜಿಂಗ್ ನಿಲ್ದಾಣದಲ್ಲಿ ಚಾರ್ಜಿಂಗ್‌ಗಾಗಿ ಸರತಿ ಸಾಲಿನಲ್ಲಿರುವ ವಾಹನಗಳ ಸಂಖ್ಯೆ ಮತ್ತು ಯಾವ ನಿಲ್ದಾಣದಲ್ಲಿ ಕಡಿಮೆ ವಾಹನಗಳಿವೆ ಎನ್ನುವುದರ ಜೊತೆ ಚಾರ್ಜಿಂಗ್‌ಗಾಗಿ ತೆಗೆದುಕೊಳ್ಳುವ ನಿಖರವಾದ ಸಮಯದ ಮಾಹಿತಿಯನ್ನು ಬಳಕೆದಾರರಿಗೆ ನೀಡಲಿದೆ.

ಮೂರು ಹೊಸ ಶೋರೂಂಗಳನ್ನು ತೆರೆದ ಹೀರೋ ಎಲೆಕ್ಟ್ರಿಕ್!

ಹೀರೋ ಎಲೆಕ್ಟ್ರಿಕ್ ಮತ್ತು ಚಾರ್ಜರ್ ಕಂಪನಿಗಳು ಸಾರ್ವಜನಿಕ ಬಳಕೆಯ ಇವಿ ಚಾರ್ಜಿಂಗ್ ನಿಲ್ದಾಣಗಳ ಜೊತೆಗೆ ಶಾಂಪಿಂಗ್ ಕಾಂಪ್ಲೆಕ್ಸ್, ಅಂಪಾರ್ಟ್‌ಮೆಂಟ್‌ಗಳು ಮತ್ತು ಮಾಲ್‌ಗಳಲ್ಲೂ ನಿರ್ದಿಷ್ಟ ವಾಹನ ಮಾಲೀಕರಿಗಾಗಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ.

Most Read Articles

Kannada
English summary
Hero electric expands three new dealerships in tamil nadu
Story first published: Thursday, March 17, 2022, 22:32 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X