Just In
Don't Miss!
- Sports
ವಿಂಡೀಸ್ ಪ್ರವಾಸದಲ್ಲಿ ಹಿರಿಯ ಆಟಗಾರರಿಗೆ ವಿಶ್ರಾಂತಿ, ಸಂಜು ಸ್ಯಾಮ್ಸನ್ಗೆ ಸಿಗಲಿದೆ ಮತ್ತೊಂದು ಅವಕಾಶ?
- News
ಅಮೃತ್ ನಗರೋತ್ಥಾನ ಯೋಜನೆಯಡಿ ಬೆಂಗಳೂರು ಪೂರ್ವ ವಲಯಕ್ಕೆ 450 ಕೋಟಿ ಮಂಜೂರು
- Movies
ಹಿಂದಿಗೆ ಹೋಗುತ್ತಿದೆ ಏಳು ವರ್ಷ ಹಳೆಯ ಕನ್ನಡ ಸಿನಿಮಾ: ಅಕ್ಷಯ್-ಶಾಹಿದ್ ನಡುವೆ ಪೈಪೋಟಿ!
- Finance
ಸರ್ವೀಸ್ ಚಾರ್ಜ್ ಬಗ್ಗೆ ಗ್ರಾಹಕರು ದೂರು ನೀಡುವುದು ಹೇಗೆ?
- Lifestyle
ಯಾರೂ ಇಲ್ಲದಿದ್ದಾಗ ಪುರುಷ ಈ ರೀತಿ ವಿಲಕ್ಷಣವಾಗಿ ವರ್ತಿಸುತ್ತಾನೆ, ಗೊತ್ತಾ? ಇದನ್ನು ಓದಿದ್ರೆ ನೀವು ಶಾಕ್ ಆಗೋದು ಪಕ್ಕಾ!
- Technology
ಜಬ್ರೋನಿಕ್ಸ್ ಡ್ರಿಪ್ ಸ್ಮಾರ್ಟ್ವಾಚ್ ಬಿಡುಗಡೆ! ಲಾಂಗ್ ಬ್ಯಾಟರಿ ಬ್ಯಾಕ್ಅಪ್ ವಿಶೇಷ!
- Education
Karnataka Second PUC Results 2022 : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಯ ಪ್ರತಿಗಳು ಜು.6ರಿಂದ ಲಭ್ಯ
- Travel
ಸೂರ್ಯ, ಅಲೆಗಳು ಮತ್ತು ಮರಳು ಇವುಗಳ ಸಮ್ಮಿಲನ ಕಡಲತೀರದ ಪಟ್ಟಣ - ಮಲ್ಪೆ
ಇವಿ ಬ್ಯಾಟರಿ ವಿನಿಮಯಕ್ಕಾಗಿ ಹೀರೋ ಎಲೆಕ್ಟ್ರಿಕ್ ಮತ್ತು ಸನ್ ಮೊಬಿಲಿಟಿ ಹೊಸ ಪಾಲುದಾರಿಕೆ
ದೇಶಾದ್ಯಂತ ತೈಲ ಬೆಲೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಭಾರೀ ಏರಿಕೆಯಾಗಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಆಸಕ್ತಿ ಇದ್ದರೂ ಕೂಡಾ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ಇವಿ ವಾಹನಗಳ ಬ್ಯಾಟರಿ ರೇಂಜ್ ಸಾಮರ್ಥ್ಯವು ಖರೀದಿಗೆ ಹಿಂದೇಟು ಹಾಕುವಂತೆ ಮಾಡುತ್ತಿದ್ದು, ಇವಿ ವಾಹನಗಳ ಬಳಕೆಯನ್ನು ಕೊನೆಯ ಮೈಲಿ ತನಕವೂ ವಿಸ್ತರಿಸಲು ಎಲೆಕ್ಟ್ರಿಕ್ ವಾಹನಗಳಿಗೆ ತ್ವರಿತವಾಗಿ ಚಾರ್ಜಿಂಗ್ ಸೌಲಭ್ಯ ಒದಗಿಸಲು ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಹೆಚ್ಚಿನ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದೆ.

ಬ್ಯಾಟರಿ ವಿನಿಮಯದ ವೇಳೆ ಗ್ರಾಹಕರು ತಮ್ಮ ಬಳಿಯಿರುವ ಚಾರ್ಜ್ ಖಾಲಿಯಾದ ಬ್ಯಾಟರಿಯನ್ನು ವಿನಿಮಯ ಕೇಂದ್ರಗಳಿಗೆ ಹಿಂದಿರುಗಿಸುವ ಮೂಲಕ ಚಾರ್ಜ್ ಮಾಡಲಾದ ಬ್ಯಾಟರಿ ಪಡೆದುಕೊಳ್ಳುವ ವ್ಯವಸ್ಥೆ ಇದಾಗಿದ್ದು, ಹೊಸ ಸೌಲಭ್ಯವು ಚಾರ್ಜಿಂಗ್ ಸಮಯವನ್ನು ಉಳಿಸುವ ಮೂಲಕ ಬ್ಯಾಟರಿ ಖಾಲಿಯಾದ ತಕ್ಷಣವೇ ಮತ್ತೊಂದು ಬ್ಯಾಟರಿ ಪಡೆದುಕೊಳ್ಳಲು ಸಹಕಾರಿಯಾಗುತ್ತದೆ.

ಸದ್ಯ ಬೆಂಗಳೂರು, ಮುಂಬೈ, ದೆಹಲಿ ಮತ್ತು ಅಹಮದಾಬಾದ್ ನಗರಗಳಲ್ಲಿ ಪ್ರಮುಖ ಕಂಪನಿಗಳು ಹೊಸ ಬ್ಯಾಟರಿ ವಿನಿಮಯ ಕೇಂದ್ರಗಳಿಗೆ ಚಾಲನೆ ನೀಡಲಾಗಿದ್ದು, ಹೊಯ ಯೋಜನೆಯು ಭವಿಷ್ಯದಲ್ಲಿ ಹೆಚ್ಚು ಬೇಡಿಕೆ ಪಡೆದುಕೊಳ್ಳುವ ವಿಶ್ವಾಸದಲ್ಲಿರುವ ಪ್ರಮುಖ ಇವಿ ಉತ್ಪಾದನಾ ಕಂಪನಿಗಳು ಬ್ಯಾಟರಿ ವಿನಿಮಯ ಕೇಂದ್ರಗಳ ಜೊತೆ ಪಾಲುದಾರಿಕೆ ಪ್ರಕಟಿಸುತ್ತಿವೆ.

ಸನ್ ಮೊಲಿಬಿಟಿ ಕಂಪನಿಯು ಸಹ ದೇಶಾದ್ಯಂತ ಬ್ಯಾಟರಿ ವಿನಿಮಯ ಕೇಂದ್ರಗಳನ್ನು ತೆರೆಯುತ್ತಿದ್ದು, ಸನ್ ಮೊಬಿಲಿಟಿ ಜೊತೆಗೂಡಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ತನ್ನ ಗ್ರಾಹಕರಿಗೆ ತಡೆರಹಿತ ಚಾಲನೆ ಸೌಲಭ್ಯ ಒದಗಿಸುವುದಕ್ಕಾಗಿ ಹೊಸ ಪಾಲುದಾರಿಕೆ ಪ್ರಕಟಿಸಿದೆ.

ಹೊಸ ಪಾಲುದಾರಿಕೆ ಅಡಿಯಲ್ಲಿಸನ್ ಮೊಬಿಲಿಟಿ ಕಂಪನಿಯು ಸ್ಮಾರ್ಟ್ ಮತ್ತು ಸ್ವ್ಯಾಪ್ ಮಾಡಬಹುದಾದ ಬ್ಯಾಟರಿ ಸೌಲಭ್ಯವನ್ನು ಪರಿಚಯಿಸಲಿದ್ದು, ಕ್ವಿಕ್ ಇಂಟರ್‌ಚೇಂಜ್ ಸ್ಟೇಷನ್ (QIS) ಜೊತೆಗೆ ಸನ್ ಮೊಬಿಲಿಟಿಯ ರಾಷ್ಟ್ರವ್ಯಾಪಿ ಸ್ವಾಪ್‌ಪಾಯಿಂಟ್ ನೆಟ್‌ವರ್ಕ್‌ಗೆ ಪ್ರವೇಶವನ್ನು ಒದಗಿಸುತ್ತದೆ.

ಇನ್ನು ಎಲೆಕ್ಟ್ರಿಕ್ ವಾಹನ ಕಂಪನಿಗಳು ದುಬಾರಿ ಇಂಧನ ಪರಿಣಾಮ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ದೇಶದ ಅತಿದೊಡ್ಡ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರಾಟ ಕಂಪನಿಯಾಗಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಕೂಡಾ ಕಳೆದ ವರ್ಷದಿಂದಲೂ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡಿದೆ.

ಹೊಸ ಎಲೆಕ್ಟ್ರಿಕ್ ವಾಹನ ಮಾದರಿಗಳ ವಿಚಾರಣೆಯೂ ಕೂಡಾ ಹೆಚ್ಚಿದ್ದು, ಹೆಚ್ಚಿನ ಮಟ್ಟದ ಮೈಲೇಜ್ ಹೊಂದಿರುವ ಇವಿ ವಾಹನಗಳ ಖರೀದಿಗೆ ಆಸಕ್ತಿ ತೋರುತ್ತಿದ್ದಾರೆ. ಇವಿ ಸ್ಕೂಟರ್ ಉತ್ಪಾದನೆಯನ್ನು ಆರಂಭಿಸಿ ಸುಮಾರು 13 ವರ್ಷಗಳನ್ನು ಪೂರೈಸಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಇದುವರೆಗೆ 4 ಲಕ್ಷ ಯುನಿಟ್‌ಗಳಿಗೂ ಹೆಚ್ಚು ಇವಿ ವಾಹನಗಳನ್ನು ಮಾರಾಟ ಮಾಡಿದ್ದು, ಗ್ರಾಹಕರ ಬೇಡಿಕೆಯೆಂತೆ ಇವಿ ಉತ್ಪನ್ನಗಳಲ್ಲಿ ಹಲವಾರು ಬದಲಾವಣೆಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದೆ.

ಹೀರೋ ಎಲೆಕ್ಟ್ರಿಕ್ ಕಂಪನಿಯು ಕಳೆದ ಎರಡು ವರ್ಷಗಳಿಂದ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಈ ಹಿಂದಿನ ಹತ್ತು ವರ್ಷಗಳಲ್ಲಿ ವಾಹನ ಮಾರಾಟ ಪ್ರಮಾಣವು ಕಳೆದ ಎರಡು ವರ್ಷಗಳಲ್ಲಿ ದ್ವಿಗುಣಗೊಂಡಿದೆ.

ಈ ಮೂಲಕ ಕಂಪನಿಯು ಇವಿ ದ್ವಿಚಕ್ರ ವಾಹನ ಮಾರಾಟ ವಿಭಾಗದಲ್ಲಿ ಶೇ.36 ಪಾಲು ತನ್ನದಾಗಿಸಿಕೊಳ್ಳುವ ಮೂಲಕ ಅಗ್ರಸ್ಥಾನ ಕಾಯ್ದುಕೊಂಡಿದ್ದು, ಇವಿ ಸ್ಕೂಟರ್ ಮಾರಾಟವನ್ನು ಪ್ರಸಕ್ತ ವರ್ಷದಲ್ಲಿ ಶೇಕಡಾ 15ರಷ್ಟು ಹೆಚ್ಚಿಸುವ ನೀರಿಕ್ಷೆಯಲ್ಲಿದೆ.

ಇದಕ್ಕಾಗಿ ಕಳೆದ ಒಂದು ವರ್ಷದ ಅವಧಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ನಗರಗಳಲ್ಲಿ ಹಲವು ಹೊಸ ಮಾರಾಟ ಮಳಿಗೆಗಳನ್ನು ತೆರೆದಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಮುಂದಿನ ಮೂರು ವರ್ಷಗಳಲ್ಲಿ ಪ್ರತಿವರ್ಷ 2.5 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡುವ ಗುರಿಯನ್ನು ಹೊಂದಿದೆ.

ಸದ್ಯ ದೇಶಾದ್ಯಂತ 500 ನಗರಗಳಲ್ಲಿ 750ಕ್ಕೂ ಹೆಚ್ಚು ಮಾರಾಟ ಮಳಿಗೆಗಳನ್ನು ಹೊಂದಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಅಗತ್ಯತೆಯ ಆಧಾರದ ಮೇಲೆ ಕಳೆದ ವರ್ಷ ಸುಮಾರು 1,500 ಹೊಸ ಫಾಸ್ಟ್ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಮಾರಾಟ ಮಳಿಗೆಗಳನ್ನು ತೆರೆಯಲು ಸಿದ್ದವಾಗಿದೆ.

2022 ಆರ್ಥಿಕ ವರ್ಷದ ಕೊನೆಯಲ್ಲಿ ದೇಶಾದ್ಯಂತ ಒಟ್ಟು ಒಂದು ಸಾವಿರ ಟಚ್ ಪಾಯಿಂಟ್(ಮಾರಾಟ ಮಳಿಗೆಗಳನ್ನು) ಹೊಂದುವ ಗುರಿಹೊಂದಿದ್ದು, ಚಾರ್ಜಿಂಗ್ ನಿಲ್ದಾಣಗಳ ಲಭ್ಯತೆಯ ಆಧಾರದ ಮೇಲೆ ಹೊಸ ಟಚ್ ಪಾಯಿಂಟ್ ತೆರೆಯಲಾಗುತ್ತಿದೆ.

ಇದಲ್ಲದೆ ಹೀರೋ ಎಲೆಕ್ಟ್ರಿಕ್ ಮತ್ತು ಚಾರ್ಜರ್ ಕಂಪನಿಗಳು ಮುಂದಿನ ಮೂರು ವರ್ಷದಲ್ಲಿ ಒಟ್ಟು 1 ಲಕ್ಷ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದ್ದು, ಮೊದಲ ವರ್ಷದಲ್ಲಿ ದೇಶದ ಪ್ರಮುಖ 30 ನಗರಗಳಲ್ಲಿ 10 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುವ ಯೋಜನೆಯಲ್ಲಿದೆ.