Just In
- 10 hrs ago
ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು...
- 13 hrs ago
ಮೇಡ್ ಇನ್ ಇಂಡಿಯಾ ಯುದ್ಧ ವಾಹನಗಳ ಅಬ್ಬರ: ಮತ್ತಷ್ಟು ಬಲಿಷ್ಟಗೊಂಡ ಭಾರತೀಯ ಸೇನೆ!
- 14 hrs ago
ವಾರದ ಸುದ್ದಿಗಳು: ಎಕ್ಸ್ಯುವಿ700 ಮಾದರಿಗೆ ಸೇಫರ್ ಚಾಯ್ಸ್ ಪ್ರಶಸ್ತಿ, ಸುರಕ್ಷತೆಯಲ್ಲಿ ಮುಗ್ಗರಿಸಿದ ಕಿಯಾ ಕಾರೆನ್ಸ್..
- 1 day ago
ಶೀಘ್ರದಲ್ಲಿ ಜಾರಿಗೆ ಬರಲಿದೆ ದೇಶಿಯ ಮಾರುಕಟ್ಟೆಯಲ್ಲಿನ ಕಾರುಗಳಿಗೆ ಭಾರತ್ ಎನ್ಸಿಎಪಿ ಕ್ರ್ಯಾಶ್ ಟೆಸ್ಟ್
Don't Miss!
- Movies
ಚಿತ್ರರಂಗಕ್ಕೆ ಗುಡ್ ಬೈ ಹೇಳಲಿದ್ದಾರೆ ಬಹುಭಾಷಾ ನಟ ನಾಸಿರ್! ಕಾರಣವೇನು?
- Sports
ಐರ್ಲೆಂಡ್-ಭಾರತ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿ: ಟಾಸ್ ಗೆದ್ದಿರುವ ಟೀಂ ಇಂಡಿಯಾ
- News
ಮಹಾ ಬಂಡಾಯ: ಸುಪ್ರೀಂಕೋರ್ಟ್ ಅಂಗಳಕ್ಕೆ 16 ಶಾಸಕರ ಅನರ್ಹತೆ ಚೆಂಡು!
- Finance
Gold Rate Today: ನಿಮ್ಮ ನಗರದಲ್ಲಿ ಜೂ.26ರಂದು ಚಿನ್ನದ ಬೆಲೆ ಎಷ್ಟಿದೆ ನೋಡಿ
- Technology
ಬೇರೆಯವರು ನಿಮ್ಮ ನೆಟ್ಫ್ಲಿಕ್ಸ್ ಖಾತೆ ಬಳಸುತ್ತಿದ್ದರೆ ತಿಳಿಯಲು ಹೀಗೆ ಮಾಡಿ?
- Education
PGCIL Recruitment 2022 : 32 ಡೆಪ್ಯುಟಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಜೂನ್ 26 ರಿಂದ ಜುಲೈ 2ರ ವಾರ ಭವಿಷ್ಯ: ಈ ರಾಶಿಯ ವ್ಯಾಪಾರಿಗಳು ಜಾಗರೂಕತೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ
- Travel
ಕರ್ನಾಟಕದಲ್ಲಿರುವ ಈ 5 ಹೆಸರಾಂತ ವಿಷ್ಣುದೇವರ ದೇವಾಲಯಗಳಿಗೆ ಭೇಟಿ ಕೊಟ್ಟು ಧನ್ಯರಾಗಿ!
ಇವಿ ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಗಾಗಿ ಎಲೆಕ್ಟ್ರಿಕ್‌ಪೇ ಜೊತೆಗೂಡಿದ ಹೀರೋ ಎಲೆಕ್ಟ್ರಿಕ್
ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಮಾರಾಟ ಪ್ರಮಾಣ ಉತ್ತಮ ಬೆಳವಣಿಗೆ ಸಾಧಿಸುತ್ತಿದ್ದು, ಇವಿ ಸ್ಕೂಟರ್ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಇವಿ ವಾಹನ ಮಾರಾಟದೊಂದಿಗೆ ಇವಿ ವಾಹನಗಳಿಗೆ ಪೂರಕವಾದ ಚಾರ್ಜಿಂಗ್ ಸೌಲಭ್ಯ ನಿರ್ಮಾಣ ಯೋಜನೆಗಳ ಮೇಲೂ ಒತ್ತು ನೀಡುತ್ತಿದೆ.

ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಹೆಚ್ಚಳಕ್ಕೆ ಈಗಾಗಲೇ ಹಲವಾರು ಕಂಪನಿಗಳ ಜೊತೆಗೆ ಪಾಲುದಾರಿಕೆ ಪ್ರಕಟಿಸಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಇದೀಗ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ಹೆಚ್ಚಿಸಲು ಎಲೆಕ್ಟ್ರಿಕ್‌ಪೇ ಕಂಪನಿಯೊಂದಿಗೆ ಕೈಜೋಡಿಸಿದ್ದು, ಚಾರ್ಜಿಂಗ್ ನಿಲ್ದಾಣಗಳ ಹೆಚ್ಚಳದ ಮೂಲಕ ಇವಿ ವಾಹನ ವಿಭಾಗದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಸದ್ಯದ ಇಂಧನ ಬೆಲೆ ಮತ್ತು ಮಾಲಿನ್ಯ ತಗ್ಗಿಸುವ ಯೋಜನೆಗಳ ಪರಿಣಾಮ ಮುಂಬರುವ 2026ರ ವೇಳೆಗೆ ದೇಶಾದ್ಯಂತ 2 ಮಿಲಿಯನ್‌ಗೂ ಹೆಚ್ಚು ಎಲೆಕ್ಟ್ರಿಕ್ ವಾಹನಗಳು ರಸ್ತೆಗಿಳಿಯುವ ನೀರಿಕ್ಷೆಯಿದ್ದು, ಎಲೆಕ್ಟ್ರಿಕ್ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಪೂರಕವಾದ ಚಾರ್ಜಿಂಗ್ ಸೌಲಭ್ಯ ಒದಗಿಸುವುದು ಕೂಡಾ ಹೊಸ ಸವಾಲಾಗಿದೆ.

ಈ ಹಿನ್ನಲೆಯಲ್ಲಿ ಭವಿಷ್ಯದ ಯೋಜನೆಗಳ ಪ್ರಮುಖ ಸ್ಟಾರ್ಟ್‌ಅಪ್ ಕಂಪನಿಯು ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದ್ದು, ಎಲೆಕ್ಟ್ರಿಕ್‌ಪೇ ಕಂಪನಿಯು ಸಹ ಹೊಸ ಯೋಜನೆಗಾಗಿ ಬೃಹತ್ ಇವಿ ತಯಾಕರ ಕಂಪನಿಯಾಗಿ ಹೀರೋ ಎಲೆಕ್ಟ್ರಿಕ್ ಕಂಪನಿಯೊಂದಿಗೆ ಪಾಲುದಾರಿಕೆ ಯೋಜನೆ ಅಡಿ ಭಾರೀ ಪ್ರಮಾಣದ ಹೂಡಿಕೆಯೊಂದಿಗೆ ಗ್ರಾಹಕರ ಬೇಡಿಕೆಯೆಂತೆ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುತ್ತಿದೆ.

ಸದ್ಯ ಕೇಂದ್ರ ಸರ್ಕಾರದ ಹೊಸ ಯೋಜನೆಗೆ ಅನುಗುಣವಾಗಿ ವಿವಿಧ ನಗರಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆ ಆರಂಭಿಸುತ್ತಿವೆ.

ಇತ್ತೀಚೆಗೆ ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ಸೌಲಭ್ಯವನ್ನು ತೆರೆಯಲು ಉದ್ದೇಶದೊಂದಿಗೆ ರಿಯಲ್ ಎಸ್ಟೇಟ್ ವಲಯದಲ್ಲಿ ಮುಂಚೂಣಿ ಹೊಂದಿರುವ ನೊಬ್ರೋಕರ್ ಕಂಪನಿಯು ಸಹ ಚಾರ್ಜಿಂಗ್ ನಿಲ್ದಾಣಗಳ ಮೇಲೆ ಹೂಡಿಕೆಗೆ ಸಿದ್ದವಾಗಿದ್ದು, ಹೊಸ ಯೋಜನೆಗಾಗಿ ಕಂಪನಿಯು ಚಾರ್ಜಿಂಗ್ ನಿಲ್ದಾಣಗಳನ್ನು ಸ್ಥಾಪಿಸುವಲ್ಲಿ ಮುಂಚೂಣಿಯಲ್ಲಿರುವ ಎಲೆಕ್ಟ್ರಿಕ್‌ಪೇ ಕಂಪನಿಯೊಂದಿಗೆ ಕೈಜೋಡಿಸಿದೆ.

ಹೊಸ ಪಾಲುದಾರಿಕೆ ಅಡಿಯಲ್ಲಿ ನೊಬ್ರೋಕರ್ ಕಂಪನಿಯು ಎಲೆಕ್ಟ್ರಿಕ್ ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಗಾಗಿ ಸಹಕರಿಸಲಿದ್ದು, ಎಲೆಕ್ಟ್ರಿಕ್‌ಪೇ ಕಂಪನಿಯು ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆ ಮತ್ತು ನಿರ್ವಹಣೆ ಜವಾಬ್ದಾರಿ ಹೊತ್ತುಕೊಂಡಿದೆ.

ರಿಯಲ್ ಎಸ್ಟೇಟ್ ವಲಯದಲ್ಲಿಈಗಾಗಲೇ ಸಾಕಷ್ಟು ಜನಪ್ರಿಯತೆ ಹೊಂದುತ್ತಿರುವ ನೊಬ್ರೋಕರ್ ಕಂಪನಿಯು ವಸತಿ ಪ್ರದೇಶಗಳಲ್ಲಿಯೇ ದೇಶಾದ್ಯಂತ ಪ್ರಮುಖ ನಗರಗಳಲ್ಲಿ 100,000 ಎಲೆಕ್ಟ್ರಿಕ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ಸ್ಥಾಪಿಸಲು ಗುರಿಹೊಂದಿದ್ದು, ಚಾರ್ಜಿಂಗ್ ನಿಲ್ದಾಣಗಳಲ್ಲಿ ಇವಿ ಬಳಕೆದಾರರಿಗೆ ಸುಲಭ ಪರಿಹಾರಗಳನ್ನು ಒದಗಿಸಲು ನೊಬ್ರೋಕರ್ ಕಂಪನಿಯು ಪ್ರತ್ಯೇಕ ಅಪ್ಲಿಕೇಷನ್ ಸಿದ್ದಪಡಿಸಿದೆ.

ಹೀಗಾಗಿ ಎಲೆಕ್ಟ್ರಿಕ್‌ಪೇ ಕಂಪನಿಯು ನೊಬ್ರೋಕರ್ ಜೊತೆಗೂಡಿ ಮುಂದಿನ ದಿನಗಳಲ್ಲಿ 1 ಲಕ್ಷ ಚಾರ್ಜಿಂಗ್ ನಿಲ್ದಾಣ ಸ್ಥಾಪನೆಯ ಗುರಿತಲುಪಲು ಮುಂದಾಗಿದ್ದು, ಶೀಘ್ರದಲ್ಲಿ ಹೊಸ ಪಾಲುದಾರಿಕೆಯಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳು ಕಾರ್ಯನಿರ್ವಹಣೆಯನ್ನು ಆರಂಭಿಸಲಿವೆ.

ಈ ಮೂಲಕ ಎಲೆಕ್ಟ್ರಿಕ್ ವಾಹನಗಳಿಗೆ ಕೊನೆಯ ಮೈಲಿ ತನಕವೂ ಚಾರ್ಜಿಂಗ್ ಸೌಲಭ್ಯ ದೊರೆಯುವಂತೆ ಯೋಜನೆ ರೂಪಿಸಲಾಗುತ್ತಿದ್ದು, ಪ್ರಮುಖ ಇವಿ ಕಂಪನಿಗಳು ಕೂಡಾ ಸ್ಥಳ ಲಭ್ಯತೆ ಮತ್ತು ವಿದ್ಯುತ್ ಪೂರೈಕೆ ಆಧರಿಸಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ನಿರ್ಮಾಣಕ್ಕೆ ಚಾಲನೆ ನೀಡಿವೆ.

ಅತಿ ಕಡಿಮೆ ಅವಧಿಯ ಹೆಚ್ಚಿನ ಪ್ರಮಾಣದ ಚಾರ್ಜ್ ಮಾಡಬಹುದಾದ ಫಾಸ್ಟ್ ಚಾರ್ಜಿಂಗ್ ಪರಿಚಯಿಸಲಾಗುತ್ತಿದ್ದು, ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಸಹಕಾರಿಯಾಗುವಂತೆ ಹೊಸ ಯೋಜನೆ ರೂಪಿಸಲಾಗಿದೆ.

ಇದರಿಂದ ಕೇವಲ ನಗರಪ್ರದೇಶಗಳಿಗೆ ಮಾತ್ರ ಸೀಮಿತವಾಗಿರುವ ಇವಿ ವಾಹನಗಳ ಮೂಲಕ ದೂರದ ಪ್ರಯಾಣಕ್ಕೂ ಅನುಕೂಲಕರವಾಗಲಿದ್ದು, ಹೆಚ್ಚುತ್ತಿರುವ ಇಂಧನ ಬೆಲೆ ತಗ್ಗಿಸಲು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಮಟ್ಟದ ವಿನಾಯ್ತಿಗಳನ್ನು ನೀಡುತ್ತಿದೆ.

ಇನ್ನು ತೈಲ ಬೆಲೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚವು ಸಹ ಸಾಕಷ್ಟು ಏರಿಕೆಯಾಗುತ್ತಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ನೋಂದಣಿಯಲ್ಲೂ ಏರಿಕೆಯಾಗುತ್ತಿದೆ.

ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಸರ್ಕಾರದ ಜೊತೆಗೆ ವಿವಿಧ ಖಾಸಗಿ ಕಂಪನಿಗಳು ಸಹ ಇವಿ ವಾಹನ ಪೂರಕವಾದ ಯೋಜನೆಗಳನ್ನು ಜಾರಿಗೆ ತರುತ್ತಿರುವುದು ಹೊಸ ಬದಲಾವಣೆ ಕಾರಣವಾಗುತ್ತಿದೆ.

ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಹೊರತುಪಡಿಸಿ ವಿವಿಧ ರಾಜ್ಯ ಸರ್ಕಾರಗಳು ರಾಜ್ಯ ಮಟ್ಟದಲ್ಲಿ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇಂಧನಗಳ ಬೆಲೆ ಹೆಚ್ಚಳ ಮತ್ತು ಇವಿ ವಾಹನಗಳಿಗೆ ನೀಡಲಾಗುತ್ತಿರುವ ಸಬ್ಸಡಿ ಯೋಜನೆಗಳಿಂದಾಗಿ ಇವಿ ವಾಹನ ಮಾರಾಟವು ಕಳೆದ ಎರಡು ವರ್ಷಗಳಲ್ಲಿ ಸಾಕಷ್ಟು ಏರಿಕೆಯಾಗಿದ್ದು, ಕಳೆದ ತಿಂಗಳು ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಅತಿ ಹೆಚ್ಚು ಇವಿ ವಾಹನಗಳು ನೋಂದಣಿಯಾಗಿವೆ.