2021ರ ಡಿಸೆಂಬರ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ ಕಂಡ Hero Motocorp

ದೇಶದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೀರೋ ಮೋಟೊಕಾರ್ಪ್ 2021ರ ಡಿಸೆಂಬರ್ ತಿಂಗಳ ಮಾಸಿಕ ಮಾರಾಟದ ಅಂಕಿಅಂಶಗಳನ್ನು ಬಹಿರಂಗಪಡಿಸಿದೆ. ಕಳೆದ ತಿಂಗಳು ಹೀರೋ ಮೋಟೊಕಾರ್ಪ್ ಒಟ್ಟಾರೆ 394,733 ಯುನಿಟ್‌ಗಳನ್ನು ಮಾರಾಟಗೊಳಿಸಿದ್ದಾರೆ.

2021ರ ಡಿಸೆಂಬರ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ ಕಂಡ Hero Motocorp

ಕಳೆದ ವರ್ಷದ ಡಿಸೆಂಬರ್ ತಿಂಗಳಿನಲ್ಲಿ ಹೀರೋ ಮೋಟೊಕಾರ್ಪ್ ಕಂಪನಿಯು 447,335 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.11.7 ರಷ್ಟು ಕುಸಿತವಾಗಿದೆ. ಇನ್ನು ಈ ವರ್ಷದ ನವೆಂಬರ್ ತಿಂಗಳಿನಲ್ಲಿ 349,393 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.13 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ.

2021ರ ಡಿಸೆಂಬರ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ ಕಂಡ Hero Motocorp

ದ್ವಿಚಕ್ರ ವಾಹನ ತಯಾರಕ ಹೀರೋ ಮೋಟೊಕಾರ್ಪ್ ಸಂಸ್ಥೆಯು 2021ರ ಕ್ಯಾಲೆಂಡರ್ ವರ್ಷದಲ್ಲಿ ಏಷ್ಯಾ, ಆಫ್ರಿಕಾ ದಕ್ಷಿಣ ಮತ್ತು ಮಧ್ಯ ಅಮೇರಿಕಾ ಮತ್ತು ಕೆರಿಬಿಯನ್‌ನಾದ್ಯಂತ ತನ್ನ ಅತ್ಯಧಿಕ ಜಾಗತಿಕ ಮಾರಾಟವನ್ನು ಪ್ರಕಟಿಸಿದೆ. ಹೀರೋ 2021ರಲ್ಲಿ 2.89 ಲಕ್ಷ ಯುನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ, 2020ರ ವರ್ಷದಲ್ಲಿ 1.69 ಲಕ್ಷ ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಇದನ್ನು 2021ರ ಮಾರಾಟಕ್ಕೆ ಹೋಲಿಸಿದರೆ ಶೇಕಡಾ 71 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

2021ರ ಡಿಸೆಂಬರ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ ಕಂಡ Hero Motocorp

ಹೀರೋ ಮೋಟೊಕಾರ್ಪ್ ಗ್ಲೋಬಲ್ ಬ್ಯುಸಿನೆಸ್ ಹೆಡ್ ಸಂಜಯ್ ಭಾನ್ ಮಾತನಾಡಿ, ನಮ್ಮ ಹೊಸ ಕಾರ್ಯತಂತ್ರ R4 Recalibrate, Revitalize, Revolutionize, Revive - ಈಗಾಗಲೇ ನಮಗೆ ಫಲಿತಾಂಶಗಳನ್ನು ನೀಡಲು ಪ್ರಾರಂಭಿಸಿದೆ. 2021ರ ಕ್ಯಾಲೆಂಡರ್ ವರ್ಷದಲ್ಲಿ ನಮ್ಮ ಜಾಗತಿಕ ಮಾರುಕಟ್ಟೆಗಳಲ್ಲಿನ ಸಂಪುಟಗಳು ಇದಕ್ಕೆ ಅನುಗುಣವಾಗಿರುತ್ತವೆ.

2021ರ ಡಿಸೆಂಬರ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ ಕಂಡ Hero Motocorp

ಚಾಲ್ತಿಯಲ್ಲಿರುವ ಕೋವಿಡ್ 19 ಸಾಂಕ್ರಾಮಿಕದ ಕಾರಣದಿಂದಾಗಿ ಜಾಗತಿಕ ಲಾಜಿಸ್ಟಿಕ್ಸ್ ಮತ್ತು ಪೂರೈಕೆ ಸರಪಳಿಯಲ್ಲಿನ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು ನಮ್ಮ ಯೋಜನೆಗಳು. 2025ರ ವೇಳೆಗೆ ನಮ್ಮ ಜಾಗತಿಕ ವ್ಯಾಪಾರದಿಂದ ಕಂಪನಿಯ ಒಟ್ಟು 15% ರಷ್ಟು ಸಂಗ್ರಹಿಸುವ ನಮ್ಮ ಗುರಿಯನ್ನು ತಲುಪಲು ನಾವು ಉತ್ತಮ ಹಾದಿಯಲ್ಲಿದ್ದೇವೆ ಎಂದು ಹೇಳಿದರು.

2021ರ ಡಿಸೆಂಬರ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ ಕಂಡ Hero Motocorp

ಹೀರೋ ಮೋಟೊಕಾರ್ಪ್ ಹೊಸ ಇವಿ ಸ್ಕೂಟರ್ ಅನ್ನು 2022ರ ಮಾರ್ಚ್ ಮಧ್ಯಂತರದಲ್ಲಿ ಮಾರುಕಟ್ಟೆ ಪ್ರವೇಶಿಸಲಿದೆ. ಅಂಗಸಂಸ್ಥೆಯಾದ ಹೀರೋ ಎಲೆಕ್ಟ್ರಿಕ್ ಕಂಪನಿಯು ಈಗಾಗಲೇ ವಿವಿಧ ಇವಿ ಸ್ಕೂಟರ್ ನಿರ್ಮಾಣ ಮತ್ತು ಮಾರಾಟ ಹೊಂದಿದ್ದರೂ ಮಾಡುತ್ತಿದ್ದರೂ ಹೀರೋ ಮೋಟೊಕಾರ್ಪ್ ಕಂಪನಿಯು ತನ್ನ ಮುಖ್ಯ ಬ್ರಾಂಡ್ ಅಡಿಯಲ್ಲಿ ಪ್ರತ್ಯೇಕವಾಗಿ ಇವಿ ವಾಹನಗಳನ್ನು ಅಭಿವೃದ್ದಿಗೊಳಿಸಿ ಮಾರಾಟ ಮಾಡುವ ಯೋಜನೆಯನ್ನು ಹೊಂದಿದೆ.

2021ರ ಡಿಸೆಂಬರ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ ಕಂಡ Hero Motocorp

ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಹೀರೋ ಮೋಟೊಕಾರ್ಪ್ ದ್ವಿಚಕ್ರ ವಾಹನ ಉತ್ಪಾದನಾ ಘಟಕದಲ್ಲಿಯೇ ಪ್ರತ್ಯೇಕವಾಗಿ ಎಲೆಕ್ಟ್ರಿಕ್ ವಾಹನ ಅಭಿವೃದ್ದಿ ಮತ್ತು ಉತ್ಪಾದನಾ ಘಟಕ ನಿರ್ಮಿಸುತ್ತಿದೆ. ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕಕ್ಕೆ ಹೀರೋ ಕಂಪನಿಯು ಗಾರ್ಡನ್ ಫ್ಯಾಕ್ಟರಿ ಎಂದು ನಾಮಕರಣ ಮಾಡಿದೆ.

2021ರ ಡಿಸೆಂಬರ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ ಕಂಡ Hero Motocorp

ಹೊಸ ಸ್ಕೂಟರ್‌ಗಳ ಉತ್ಪಾದನಾ ಆವೃತ್ತಿಯ ಅನಾವರಣಕ್ಕೂ ಮುನ್ನ ಕಂಪನಿಯ ವರ್ಚುವಲ್ ಸೆಲೆಬ್ರೆಷನ್‌ನಲ್ಲಿ ಬಿಡುಗಡೆಯಾಗಲಿರುವ ವಿವಿಧ ವಿನ್ಯಾಸದ ಹೊಸ ಸ್ಕೂಟರ್‌ಗಳ ಚಿತ್ರಗಳನ್ನು ಬಹಿರಂಗಪಡಿಸಿದೆ. ಹೀರೋ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳಲ್ಲಿ ಸಾಮಾನ್ಯ ಮಾದರಿಗಳೊಂದಿಗೆ ಟ್ರೈ ಸೈಕಲ್ ಮಾದರಿಯು ಸಹ ಬಿಡುಗಡೆಯಾಗಲಿದೆ.

2021ರ ಡಿಸೆಂಬರ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ ಕಂಡ Hero Motocorp

ಇನ್ನು ಹೀರೋ ಮೋಟೋಕಾರ್ಪ್ ಅರ್ಜೆಂಟೀನಾದಲ್ಲಿ ಕಾರ್ಯಾಚರಣೆಯನ್ನು ವಿಸ್ತರಿಸಿದ್ದಾರೆ, ಹೀರೋ ಮೋಟೋಕಾರ್ಪ್ ಕಂಪನಿಯು ಅರ್ಜೆಂಟೀನಾದಲ್ಲಿ ಕಾರ್ಯಾಚರಣೆಯನ್ನು ವಿಸ್ತರಿಸಲು ಗಿಲೆರಾ ಮೋಟಾರ್ಸ್‌ನೊಂದಿಗೆ ಕೈಜೋಡಿಸಿದ್ದಾರೆ. ಹೀರೋ ಮೋಟೋಕಾರ್ಪ್ ಕಂಪನಿಯು ಗಿಲೆರಾ ಮೋಟಾರ್ಸ್ ಅರ್ಜೆಂಟೀನಾ ಜೊತೆ ಸೇರಿ ಲ್ಯಾಟಿನ್ ಅಮೇರಿಕನ್ ದೇಶದಲ್ಲಿ ಕಾರ್ಯಾಚರಣೆಯನ್ನು ವಿಸ್ತರಿಸಿದೆ ಮತ್ತು ಅರ್ಜೆಂಟೀನಾದಲ್ಲಿ ಪ್ರಮುಖ ಡೀಲರ್‌ಶಿಪ್ ಅನ್ನು ಇತ್ತೀಚೆಗೆ ಉದ್ಘಾಟಿಸಿದೆ.

2021ರ ಡಿಸೆಂಬರ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ ಕಂಡ Hero Motocorp

ಹೀರೋ ಇತ್ತೀಚೆಗೆ ಅರ್ಜೆಂಟೀನಾದಲ್ಲಿ ಮೋಟಾರು ವಾಹನ ವಲಯದ ಪ್ರಮುಖ ಕಂಪನಿಗಳಲ್ಲಿ ಒಂದಾದ ಗಿಲೆರಾ ಮೋಟಾರ್ಸ್‌ನೊಂದಿಗೆ ಪಾಲುದಾರಿಕೆ ಮಾಡುವ ಮೂಲಕ ಅರ್ಜೆಂಟೀನಾದಲ್ಲಿ ತನ್ನ ಅಸ್ತಿತ್ವವನ್ನು ಪುನಶ್ಚೇತನಗೊಳಿಸಿದೆ ಮತ್ತು ಲ್ಯಾಟಿನ್ ಅಮೆರಿಕದ ಅತ್ಯಂತ ಅನುಭವಿ ಮೋಟಾರ್‌ಸೈಕಲ್ ತಯಾರಕರಲ್ಲಿ ಒಂದಾಗಿದೆ. ಗಿಲೆರಾ ಮೋಟಾರ್ಸ್ ಅರ್ಜೆಂಟೀನಾ ತನ್ನ ಮೂಲಸೌಕರ್ಯವನ್ನು ಸಂಪೂರ್ಣವಾಗಿ ನವೀಕರಿಸಲು ಮತ್ತು ಹೀರೋ ಮೋಟೋಕಾರ್ಪ್ ಮಾದರಿಗಳಲಿ ಅಳವಡಿಸಲಾಗಿರುವ ಇತ್ತೀಚಿನ ಆಟೋಮೋಟಿವ್ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಬ್ಯೂನಸ್ ಐರಿಸ್‌ನ ಕಾರ್ಲೋಸ್ ಸ್ಪೆಗಜ್ಜಿನಿ ಪ್ರಾಂತ್ಯದಲ್ಲಿ ತನ್ನ ಸ್ಥಾವರವನ್ನು ವಿಸ್ತರಿಸಿದೆ.

2021ರ ಡಿಸೆಂಬರ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ ಕಂಡ Hero Motocorp

ಇನ್ನು ಇತ್ತೀಚೆಗೆ ಹೀರೋ ಮೋಟೋಕಾರ್ಪ್ ಕಂಪನಿಯು ದುಬೈನಲ್ಲಿ ಹೊಸ ವಿಶೇಷ ಡೀಲರ್‌ಶಿಪ್ ಅನ್ನು ಉದ್ಘಾಟಿಸುವ ಮೂಲಕ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸಿದೆ. ಹೊಸ ಅತ್ಯಾಧುನಿಕ ಡೀಲರ್‌ಶಿಪ್ 625 ಚದರ ಅಡಿಗಳಿಂದ ಕೂಡಿದೆ. ಈ ಹೊಸ ಹೀರೋ ಡೀಲರ್‌ಶಿಪ್ ನಲ್ಲಿ ಸೇಲ್ಸ್, ಸರ್ವಿಸ್ ಮತ್ತು ಅಕ್ಸೆಸರೀಸ್ ಗಳು ಲಭ್ಯವಿರುತ್ತದೆ. ಹೀರೋ ಮೋಟೋಕಾರ್ಪ್ ಬೈಕ್‌ಗಳು ಮತ್ತು ಸ್ಕೂಟರ್‌ಗಳ ಸಂಪೂರ್ಣ ಸರಣಿಯನ್ನು ಸಹ ಪ್ರದರ್ಶಿಸುತ್ತದೆ. ಕಾರ್ಯಾಗಾರವು ಎರಡು ಸೇವಾ ವಿಭಾಗವನ್ನು ಹೊಂದಿದ್ದು, ಗ್ರಾಹಕರಿಗೆ ಉತ್ತಮ-ದರ್ಜೆಯ ಮಾರಾಟದ ನಂತರದ ಸೇವಾ ಅನುಭವ ಮತ್ತು ಬಿಡಿಭಾಗಗಳನ್ನು ಒದಗಿಸುತ್ತದೆ.

2021ರ ಡಿಸೆಂಬರ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ ಕಂಡ Hero Motocorp

ಮಧ್ಯಪ್ರಾಚ್ಯ ಮಾರುಕಟ್ಟೆಯಲ್ಲಿ ಹೀರೋ ಮೋಟೋಕಾರ್ಪ್ ಕಂಪನಿಯ ವಿಶೇಷ ವಿತರಕರಾದ Afriventures FZE ಸಹಯೋಗದೊಂದಿಗೆ. ಗಲ್ಫ್ ರಾಷ್ಟ್ರಗಳಲ್ಲಿ ತನ್ನ ಕಾರ್ಯಾಚರಣೆಯನ್ನು ಮತ್ತಷ್ಟು ವಿಸ್ತರಿಸುವ ಗುರಿಯನ್ನು ಹೀರೋ ಮೋಟೋಕಾರ್ಪ್ ಕಂಪನಿಯು ಹೊಂದಿದೆ. ಒಟ್ಟಿನಲ್ಲಿ ಜನಪ್ರಿಯ ಹೀರೋ ಮೋಟೋಕಾರ್ಪ್ ಕಂಪನಿಯು ಜಾಗತಿಕವಾಗಿ ಮಾರುಕಟ್ಟೆಯನ್ನು ವಿಸ್ತರಿಸಲು ಯೋಜಿಸುತ್ತಿದೆ. ಇದರೊಂದಿಗೆ ಹಲವು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ.

Most Read Articles

Kannada
English summary
Hero motocorp december 2021 sales decline nearly 12 percent details
Story first published: Monday, January 3, 2022, 15:27 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X