Just In
- 37 min ago
6 ಏರ್ಬ್ಯಾಗ್ ಜೊತೆ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಸಿಗುವ ಟಾಪ್ 5 ಕಾರುಗಳು
- 1 hr ago
ಎಲೆಕ್ಟ್ರಿಕ್ ಬಳಿಕ ಸಿಎನ್ಜಿ ಕಾರುಗಳ ವಿಭಾಗದಲ್ಲೂ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ ಟಾಟಾ
- 1 hr ago
ಹೊಸ ಮಹೀಂದ್ರಾ ಎಲೆಕ್ಟ್ರಿಕ್ XUV700 ಟೀಸರ್ ಬಿಡುಗಡೆ... ಫೆ.10 ರಂದು BE ಸರಣಿ SUV ಗಳ ಪ್ರದರ್ಶನ
- 2 hrs ago
ಭಾರತದಲ್ಲಿ ಬಿಡುಗಡೆಯಾಗಲಿವೆ ಹೋಂಡಾದ 3 ಕಾರುಗಳು: ಇವು ಬಂದ್ರೆ...!
Don't Miss!
- Movies
27, 100ರ ಸಂಭ್ರಮಕ್ಕೆ ಕೇಕ್ ಕತ್ತರಿಸಿ ಸಂಭ್ರಮಿಸಿದ ಕಿಚ್ಚ - ಶಿವಣ್ಣ, ದರ್ಶನ್!
- News
BBC ಸಾಕ್ಷ್ಯಚಿತ್ರಕ್ಕೆ ನಿರ್ಬಂಧ: ಕೇಂದ್ರಕ್ಕೆ ಸುಪ್ರೀಂ ನೋಟೀಸ್
- Sports
ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಘೋಷಿಸಿದ 2007ರ ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ
- Technology
ಅರ್ಧಕೋಟಿಗೂ ಅಧಿಕ ಬೆಲೆಯಲ್ಲಿ ಈ ಹಳೇ ಐಫೋನ್ ಮಾರಾಟ!..ಅದ್ಹೇಗೆ ಸಾಧ್ಯ ಅಂತೀರಾ!?
- Finance
ಅಮುಲ್ ಹಾಲಿನ ದರ ಮತ್ತೆ 3 ರೂ ಏರಿಕೆ, ನೂತನ ದರ ಪರಿಶೀಲಿಸಿ
- Lifestyle
Maha Shivratri 2023 : ಮಹಾಶಿವರಾತ್ರಿ ದಿನಾಂಕ, ಪೂಜಾ ಮುಹೂರ್ತ, ಮಹತ್ವ, ಆಚರಣೆ ಹಿನ್ನೆಲೆ ಏನು?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಅಕ್ಟೋಬರ್ 7ರಂದು ಬಿಡುಗಡೆಯಾಗಲಿದೆ ಹೀರೋ ಮೋಟೊಕಾರ್ಪ್ ನಿರ್ಮಾಣದ ಮೊದಲ ಇವಿ ಸ್ಕೂಟರ್
ವಿಶ್ವದ ಅತಿದೊಡ್ಡ ದ್ವಿಚಕ್ರ-ವಾಹನ ಉತ್ಪಾದನಾ ಕಂಪನಿಯಾಗಿರುವ ಹೀರೋ ಮೋಟೊಕಾರ್ಪ್ ಶೀಘ್ರದಲ್ಲಿಯೇ ತನ್ನ ಉಪ ಬ್ರಾಂಡ್ ವಿಡಾ(Vida) ಅಡಿಯಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಉತ್ಪಾದನೆಗಾಗಿ ಸಿದ್ದವಾಗುತ್ತಿದ್ದು, ಹೊಸ ಪ್ಲ್ಯಾಟ್‌ಫಾರ್ಮ್ ಆಧರಿಸಿರುವ ವಿಡಾ ಸ್ಕೂಟರ್ ಮಾದರಿಯು ಮುಂಬರುವ ಅಕ್ಟೋಬರ್ 7ರಂದು ಮಾರುಕಟ್ಟೆ ಪ್ರವೇಶಿಸಲಿದೆ.

ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗಾಗಿ ಹೀರೋ ಎಲೆಕ್ಟ್ರಿಕ್ ಕಂಪನಿಯು ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದರೂ ಹೀರೋ ಮೋಟೊಕಾರ್ಪ್ ಕಂಪನಿಯು ಪ್ರತ್ಯೇಕ ನಿಯಂತ್ರಣ ಹೊಂದಿರುವ ಉಪ ಇವಿ ಬ್ರಾಂಡ್ ಆರಂಭಿಸುತ್ತಿದ್ದು, ವಿಡಾ ಬ್ರಾಂಡ್ ಅಡಿ ಕಂಪನಿಯು ಪ್ರಮುಖ ಇವಿ ದ್ವಿಚಕ್ರ ವಾಹನಗಳನ್ನು ಹೊರತರಲಿದೆ.

ಕಳೆದ ವರ್ಷದ ಜುಲೈ 1ರಂದು ವಿಡಾ ಬ್ರ್ಯಾಂಡ್ ಅಡಿಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಯೋಜನೆ ಘೋಷಣೆ ಮಾಡಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು, ಹೊಸ ಇವಿ ಸ್ಕೂಟರ್ ಮಾದರಿಗಾಗಿ ವಿಭಿನ್ನವಾದ ತಾಂತ್ರಿಕ ಸೌಲಭ್ಯಗಳನ್ನು ನೀಡಿದೆ.

ಹೊಸ ಸ್ಕೂಟರ್ ಬಿಡುಗಡೆಯಾಗಿ ಕಂಪನಿಯು ಈಗಾಗಲೇ ಹೂಡಿಕೆದಾರರಿಗೆ ಮತ್ತು ತನ್ನ ಪ್ರಮುಖ ಪಾಲುದಾರ ಕಂಪನಿಗಳಿಗೆ ಆಹ್ವಾನ ನೀಡಿದ್ದು, ಹೊಸ ಇವಿ ಸ್ಕೂಟರ್ ಬಿಡುಗಡೆಗಾಗಿ ಜೈಪುರ್‌ದಲ್ಲಿ ಬೃಹತ್ ಪ್ರಮಾಣದ ಬಿಡುಗಡೆ ಕಾರ್ಯಕ್ಷಮ ಆಯೋಜಿಸಿದೆ.

ಹೊಸ ಬ್ರಾಂಡ್ ಮೂಲಕ ಮಾರುಕಟ್ಟೆಯಲ್ಲಿ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿರುವ ಹೀರೋ ಮೋಟೊಕಾರ್ಪ್ ಕಂಪನಿಯು ಹೊಸ ಸ್ಕೂಟರ್ ಬಿಡುಗಡೆಗೂ ಮುನ್ನ 100 ಮಿಲಿಯನ್ ಯುಎಸ್ಎ ಡಾಲರ್ ಜಾಗತಿಕ ಸುಸ್ಥಿರತೆ ನಿಧಿ ಘೋಷಿಸಿದೆ.

ಪರಿಸರವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಹೊಸ ಉದ್ಯಮಗಳನ್ನು ಪ್ರೋತ್ಸಾಹಿಸುವ ಗುರಿಯೊಂದಿಗೆ ಈ ನಿಧಿಯನ್ನು ಬಳಸಲಾಗುವುದು ಎಂದು ಹೀರೋ ಮೋಟೊಕಾರ್ಪ್ ಅಧ್ಯಕ್ಷ ಪವನ್ ಮುಂಜಾಲ್ ಮಾಹಿತಿ ನೀಡಿದ್ದು, ಭವಿಷ್ಯದ ಯೋಜನೆಗಳೊಂದಿಗೆ ಕಂಪನಿಯು ಭಾರೀ ಪ್ರಮಾಣದ ಆದಾಯದ ನೀರಿಕ್ಷೆಯಲ್ಲಿದೆ.

ಹೀರೋ ಮೋಟೊಕಾರ್ಪ್ ಕಂಪನಿಯು ಕೇವಲ ತನ್ನ ಹೊಸ ಯೋಜನೆಗಳಿಗೆ ಮಾತ್ರವಲ್ಲದೆ ಹಲವು ಇವಿ ಸ್ಟಾರ್ಟ್ಅಪ್ ಕಂಪನಿಗಳ ಮೇಲೆ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದ್ದು, ಹೊಸ ಬಂಡವಾಳ ಯೋಜನೆ ಅಡಿ ಮತ್ತಷ್ಟು ಇವಿ ಸ್ಕೂಟರ್‌ಗಳು ಶೀಘ್ರದಲ್ಲಿಯೇ ಮಾರುಕಟ್ಟೆ ಪ್ರವೇಶಿಸಲಿವೆ.

ದೇಶಾದ್ಯಂತ ತೈಲ ಬೆಲೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನಗಳ ನಿರ್ವಹಣಾ ವೆಚ್ಚದಲ್ಲಿ ಭಾರೀ ಏರಿಕೆಯಾಗುತ್ತಿದ್ದು, ಹೊಸ ವಾಹನ ಖರೀದಿದಾರರಿಗೆ ಪರಿಸರ ಸ್ನೇಹಿ ಮತ್ತು ಅತಿ ಕಡಿಮೆ ನಿರ್ವಹಣಾ ವೆಚ್ಚ ಹೊಂದಿರುವ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿವೆ.

ಹೀಗಾಗಿ ಹೀರೋ ಮೋಟೊಕಾರ್ಪ್ ಕಂಪನಿಯು ತನ್ನ ಮುಖ್ಯ ಬ್ರಾಂಡ್ ಅಡಿಯಲ್ಲಿ ಬದಲಾಗಿ ಪ್ರತ್ಯೇಕ ಬ್ರಾಂಡ್ ಮೂಲಕ ಇವಿ ವಾಹನಗಳನ್ನು ಅಭಿವೃದ್ದಿಗೊಳಿಸಿ ಮಾರಾಟ ಮಾಡುವ ಯೋಜನೆ ಹೊಂದಿದ್ದು, ಆಂಧ್ರಪ್ರದೇಶದ ಚಿತ್ತೂರಿನಲ್ಲಿರುವ ಹೀರೋ ಮೋಟೊಕಾರ್ಪ್ ದ್ವಿಚಕ್ರ ವಾಹನ ಉತ್ಪಾದನಾ ಘಟಕದಲ್ಲಿಯೇ ಪ್ರತ್ಯೇಕವಾಗಿ ಇವಿ ವಾಹನ ಅಭಿವೃದ್ದಿ ಮತ್ತು ಉತ್ಪಾದನಾ ಘಟಕ ನಿರ್ಮಿಸುತ್ತಿದೆ.

ಹೊಸ ಇವಿ ವಾಹನ ಉತ್ಪಾದನಾ ಘಟಕಕ್ಕೆ ಹೀರೋ ಕಂಪನಿಯು ಗಾರ್ಡನ್ ಫ್ಯಾಕ್ಟರಿ ಎಂದು ನಾಮಕರಣ ಮಾಡಿದ್ದು, ಹೊಸ ವಾಹನ ಉತ್ಪಾದನಾ ಘಟಕದಲ್ಲಿ ಬ್ಯಾಟರಿ ಪ್ಯಾಕ್ ತಯಾರಿಕೆ, ರೋಡ್ ಟೆಸ್ಟಿಂಗ್, ವಾಹನ ಜೋಡಣೆ ಮತ್ತು ವೆಹಿಕಲ್ ಎಂಡ್ ಆಫ್ ಲೈನ್ ಟೆಸ್ಟಿಂಗ್(EOL) ಸೌಲಭ್ಯಗಳನ್ನು ಅಳವಡಿಸಿಕೊಂಡಿದೆ.

ಹೀರೋ ಮೋಟೊಕಾರ್ಪ್ ಕಂಪನಿಯ ಹೊಸ ಇವಿ ಸ್ಕೂಟರ್‌ಗಳ ಕುರಿತಾಗಿ ಯಾವುದೇ ತಾಂತ್ರಿಕ ಮಾಹಿತಿ ಲಭ್ಯವಿಲ್ಲವಾದರೂ ಹೊಸ ಇವಿ ಸ್ಕೂಟರ್ ಮಾದರಿಗಳು ಶೀಘ್ರದಲ್ಲೇ ರೋಡ್ ಟೆಸ್ಟಿಂಗ್ ಆರಂಭಿಸಲಿದ್ದು, ಹೊಸ ಸ್ಕೂಟರ್‌ಗಳು ಇತ್ತೀಚೆಗೆ ಬಿಡುಗಡೆಯಾದ ಓಲಾ, ಸಿಂಪಲ್ ಎನರ್ಜಿ ಮಾದರಿಗಳಲ್ಲಿನ ಮೈಲೇಜ್‌ಗೆ ಪೈಪೋಟಿಯಾಗಿ ಬಜೆಟ್ ಬೆಲೆಯಲ್ಲಿ ಬಿಡುಗಡೆಯಾಗಲಿವೆ.

ಬಿಡುಗಡೆಯಾಗಲಿರುವ ಹೀರೋ ಮೊದಲ ಇವಿ ಸ್ಕೂಟರ್ ಸಹಭಾಗೀತ್ವ ಕಂಪನಿಯಾಗಿರುವ ಗೊಗೊರೊ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಾದ ವಿವಾ ಎನ್ನುವ ಹೆಸರಿನಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಈಗಾಗಲೇ ಕೇಂದ್ರ ಸಾರಿಗೆ ಇಲಾಖೆಯಲ್ಲೂ ಹೊಸ ವಾಹನ ಬಿಡುಗಡೆಗಾಗಿ ನೋಂದಣಿ ಕೂಡಾ ಮಾಡಲಾಗಿದೆ.

ಗೊಗೊರೊ ಕಂಪನಿಯು ಸದ್ಯ ತೈವಾನ್‌ನಲ್ಲಿ ವಿವಿಧ ಮಾದರಿಯ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ನಿರ್ಮಾಣಗೊಂದಿಗೆ ಸೌರವಿದ್ಯುತ್ ಮೂಲಕವೇ ಬ್ಯಾಟರಿ ಸ್ವಾಪಿಂಗ್ ಸೌಲಭ್ಯವನ್ನು ಜೋಡಣೆ ಮಾಡುವಲ್ಲಿ ಯಶಸ್ವಿ ಕಂಡುಕೊಂಡಿದ್ದು, ಹೀರೋ ಕಂಪನಿಯು ಕೂಡಾ ಇದೀಗ ಗೊಗೊರೊ ಜೊತೆಗೂಡಿ ಹೊಸ ಉದ್ಯಮದಲ್ಲಿ ತೊಡಗಿಸಿಕೊಳ್ಳುತ್ತಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಆಸಕ್ತಿ ಇದ್ದರೂ ಕೂಡಾ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ಇವಿ ವಾಹನಗಳ ಬ್ಯಾಟರಿ ರೇಂಜ್ ಸಾಮಾರ್ಥ್ಯವು ಖರೀದಿಗೆ ಹಿಂದೇಟು ಹಾಕುವಂತೆ ಮಾಡಿದ್ದು, ಈ ಸಮಸ್ಯೆ ನಿವಾರಣೆಗಾಗಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳಿಗೆ ತ್ವರಿತವಾಗಿ ಚಾರ್ಜಿಂಗ್ ಒದಗಿಸಲು ಬ್ಯಾಟರಿ ವಿನಿಮಯ ಕೇಂದ್ರಗಳನ್ನು ನಿರ್ಮಾಣ ಮಾಡುತ್ತಿವೆ.

ಬ್ಯಾಟರಿ ವಿನಿಯಮ ಕೇಂದ್ರಗಳು ಎಲೆಕ್ಟ್ರಿಕ್ ವಾಹನಗಳಿಗೆ ತ್ವರಿತವಾಗಿ ಬ್ಯಾಟರಿ ಸೌಲಭ್ಯಗಳನ್ನು ಒದಗಿಸಬಹುದಾಗಿದ್ದು, ಬ್ಯಾಟರಿ ರೇಂಜ್ ಆಧಾರದ ಮೇಲೆ ಇಂತಿಷ್ಟು ಪ್ರಮಾಣದ ದರ ಪಾವತಿಸಿಬೇಕಾಗುತ್ತದೆ.

ಬ್ಯಾಟರಿ ವಿನಿಮಯದ ವೇಳೆ ಗ್ರಾಹಕರು ತಮ್ಮ ಬಳಿಯಿರುವ ಚಾರ್ಜ್ ಮುಗಿದಿರುವ ಬ್ಯಾಟರಿಯನ್ನು ವಿನಿಮಯ ಕೇಂದ್ರಗಳಿಗೆ ಹಿಂದಿರುಗಿಸುವ ಮೂಲಕ ಚಾರ್ಜ್ ಮಾಡಲಾದ ಬ್ಯಾಟರಿ ಪಡೆದುಕೊಳ್ಳುವ ವ್ಯವಸ್ಥೆ ಇದಾಗಿದ್ದು, ಹೊಸ ಸೌಲಭ್ಯವು ಚಾರ್ಜಿಂಗ್ ಸಮಯವನ್ನು ಉಳಿಸುವ ಮೂಲಕ ಬ್ಯಾಟರಿ ಖಾಲಿಯಾದ ತಕ್ಷಣವೇ ಮತ್ತೊಂದು ಬ್ಯಾಟರಿ ಪಡೆದುಕೊಳ್ಳಲು ಸಹಕಾರಿಯಾಗುತ್ತದೆ.