ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್

ಭಾರತದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೀರೋ ಮೋಟೊಕಾರ್ಪ್ ತನ್ನ ಬಹುನಿರೀಕ್ಷಿತ ಎಕ್ಸ್‌ಟ್ರಿಮ್ 160ಆರ್ ಬೈಕನ್ನು ಭಾರತದಲ್ಲಿ 2020ರ ಜುನ್ ತಿಂಗಳಲ್ಲಿ ಬಿಡುಗಡೆಗೊಳಿಸಿತ್ತು. ಈ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮವಾಗಿ ಮಾರಾಟವಾಗುತ್ತಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್

ಆದರೆ ಇದೀಗ ಹೀರೋ ಮೋಟೊಕಾರ್ಪ್ ಕಂಪನಿಯು ಎಕ್ಸ್‌ಟ್ರಿಮ್ 160ಆರ್ ಬೈಕ್ ಬೆಲೆಯನ್ನು ಹೆಚ್ಚಿಸಲಾಗಿದೆ. ಈ ಬೈಕಿನ ಬೆಲೆಯನ್ನು ರೂ.500 ರಷ್ಟು ಹೆಚ್ಚಿಸಲಾಗಿದೆ. ಬೆಲೆ ಏರಿಕೆಯ ಬಳಿಕ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನ ಸಿಂಗಲ್ ಡಿಸ್ಕ್ ರೂಪಾಂತರಕ್ಕೆ ರೂ.1,12,110 ರೂ.ಗಳಾಗಿದ್ದರೆ, ಡ್ಯುಯಲ್ ಡಿಸ್ಕ್ ರೂಪಾಂತರದ ಬೆಲೆಯು ರೂ.1,15,160 ಗಳಾಗಿದೆ. ಇನ್ನು ಈ ಬೈಕಿನ ಸ್ಟೆಲ್ತ್ ಆವೃತ್ತಿಯ ಬೆಲೆಯು ರೂ.1,17,160 ಗಳಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್

ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಕಂಪನಿಯ ಪ್ರೀಮಿಯಂ ಬೈಕ್ ಆಗಿದ್ದರೂ ಎಂಟ್ರಿ ಲೆವೆಲ್ ಮಾದರಿಯಂತೆ ಉತ್ತಮವಾಗಿ ಮಾರಾಟವಾಗುತ್ತಿದೆ. ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕನ್ನು ರಾಜಸ್ಥಾನದ ಜೈಪುರದಲ್ಲಿರುವ ಆರ್&ಡಿ ಘಟಕದಲ್ಲಿ ಸಂಪೂರ್ಣವಾಗಿ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಲಾಗಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್

ಬ್ರ್ಯಾಂಡ್‌ನಿಂದ ಪ್ರೀಮಿಯಂ 160 ಸಿಸಿ ಬಿಎಸ್ 6 ಎಂಜಿನ್ ಅನ್ನು ಈ ಬೈಕಿನಲ್ಲಿ ಅಳವಡಿಸಲಾಗಿದೆ. ಹೊಸ ಬೈಕಿಗೆ ಈ ಎಂಜಿನ್ ಉತ್ತಮ ಕಾರ್ಯಕ್ಷಮತೆಯನ್ನು ನೀಡುತ್ತದೆ. ಈ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನಲ್ಲಿ 163 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಅನ್ನು ಆಳವಡಿಸಿಸಲಾಗಿದೆ. ಈ ಎಂಜಿನ್ 8500 ಆರ್‌ಪಿಎಂನಲ್ಲಿ 15 ಬಿಹೆಚ್‌ಪಿ ಪವರ್ ಮತ್ತು 6500 ಆರ್‌ಪಿಎಂನಲ್ಲಿ 14 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್

ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ. ಎಂಜಿನ್ ನಲ್ಲಿ ಹೀರೋನ ಪ್ರೋಗ್ರಾಮ್ ಮಾಡಲಾದ ಫ್ಯೂಯಲ್-ಇಂಜೆಕ್ಷನ್ ಸಿಸ್ಟಂ ಅನ್ನು ಸಹ ಹೊಂದಿದೆ. ಇದು ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಹೆಚ್ಚಿನ ದಕ್ಷತೆಯನ್ನು ಒದಗಿಸುತ್ತದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್

ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಸ್ಪೋರ್ಟಿ ಲುಕ್ ಅನ್ನು ಹೊಂದಿದೆ. ಈ ಬೈಕ್ ಹಲವಾರು ಹೊಸ ಪ್ರೀಮಿಯಂ ಫೀಚರುಗಳನ್ನು ಹೊಂದಿದೆ. ಈ ಬೈಕಿನಲ್ಲಿ ಎಲ್‌ಇಡಿ ಹೆಡ್ ಲ್ಯಾಂಪ್, ಡಿಆರ್‌ಎಲ್‌ ಇಂಡೀಕೆಟರ್ ಮತ್ತು ಟೇಲ್ ಲೈಟ್ ಮತ್ತು ಎಲ್‌ಸಿಡಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಒಳಗೊಂಡಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್

ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನ ಸಸ್ಪೆಂಕ್ಷನ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 37 ಎಂಎಂ ಟೆಲಿಸ್ಕೋಪಿಕ್ ಫೋರ್ಕ್‌ಗಳ ಸೆಟಪ್ ಮತ್ತು ಹಿಂಭಾಗದಲ್ಲಿ ಏಳು-ಹಂತದ ರೈಡರ್-ಹೊಂದಾಣಿಕೆ ಮಾಡಬಹುದಾದ ಮೊನೊಶಾಕ್ ಸಸ್ಪೆಂಕ್ಷನ್ ಸೆಟಪ್ ಅನ್ನು ಒಳಗೊಂಡಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್

ಇನ್ನು ಈ ಬೈಕಿನಲ್ಲಿ ಪ್ರಮುಖವಾಗಿ ಬ್ರೇಕಿಂ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 276 ಎಂಎಂ ಪೆಟಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಅಥವಾ 130 ಎಂಎಂ ಡ್ರಮ್ ಬ್ರೇಕ್ ಅನ್ನು ಹೊಂದಿದೆ. ಇದರ ಜೊತೆಗೆ ಹೆಚ್ಚಿನ ಸುರಕ್ಷತೆಗಾಗಿ ಎಬಿಎಸ್ ಅನ್ನು ನೀಡಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್

ಹೀರೋ ಮೋಟೊಕಾರ್ಪ್ 2022ರ ಫೆಬ್ರವರಿ ತಿಂಗಳ ಮಾಸಿಕ ಮಾರಾಟದ ಅಂಕಿಅಂಶಗಳನ್ನು ಬಹಿರಂಗಪಡಿಸಿದೆ. ಕಳೆದ ತಿಂಗಳು ಹೀರೋ ಮೋಟೊಕಾರ್ಪ್ ಒಟ್ಟಾರೆ 3,58,254 ಯುನಿಟ್‌ಗಳನ್ನು ಮಾರಾಟಗೊಳಿಸಿದ್ದಾರೆ. ಕಳೆದ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಹೀರೋ ಮೋಟೊಕಾರ್ಪ್ ಕಂಪನಿಯು 5,05,467 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್

ಹೀರೋ ಮೊಟೊಕಾರ್ಪ್ ಕಳೆದ ತಿಂಗಳು 19,800 ಸ್ಕೂಟರ್‌ಗಳನ್ನು ಮಾರಾಟ ಮಾಡಿದ್ದು, ಒಂದು ವರ್ಷದ ಹಿಂದೆ ಇದೇ ತಿಂಗಳಲ್ಲಿ ಮಾರಾಟವಾಗಿದ್ದ 41,744 ಯುನಿಟ್‌ಗಳಿಗೆ ಹೋಲಿಸಿದರೆ ಶೇಕಡಾ 52.56 ರಷ್ಟು ಕುಸಿತ ಕಂಡಿದೆ. ಇನ್ನು ದೇಶೀಯ ಮಾರುಕಟ್ಟೆಗೆ ಸಂಬಂಧಿಸಿದಂತೆ, ಕಂಪನಿಯು ಫೆಬ್ರವರಿ 2022 ರಲ್ಲಿ 3,31,462 ಯುನಿಟ್‌ಗಳನ್ನು ಮಾರಾಟ ಮಾಡಿದ್ದು, ಒಂದು ವರ್ಷದ ಹಿಂದೆ ಮಾರಾಟವಾದ 4,84,433 ಯುನಿಟ್‌ಗಳಿಗೆ ಹೋಲಿಸಿದರೆ ಶೇಕಡಾ 31.57 ರಷ್ಟು ಕುಸಿತವನ್ನು ದಾಖಲಿಸಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್

ರಫ್ತಿನ ವಿಭಾಗದಲ್ಲಿ ಕಳೆದ ತಿಂಗಳು ಹೀರೋ ಮೊಟೊಕಾರ್ಪ್ ಕಂಪನಿಯು 26,792 ಯುನಿಟ್‌ಗಳನ್ನು ರಫ್ತು ಮಾಡಿದೆ. ಕಳೆದ ವರ್ಷದ ಫೆಬ್ರವರಿ ತಿಂಗಳಿನಲ್ಲಿ 21,034 ಯುನಿಟ್‌ಗಳನ್ನು ರಫ್ತು ಮಾಡಲಾಗಿತ್ತು. ಇದನ್ನು ಕಳೆದ ತಿಂಗಳ ರಫ್ತಿಗೆ ಹೋಲಿಸಿದರೆ ಶೇ.27.34 ರಷ್ಟು ಏರಿಕೆಯಾಗಿದೆ. ಕಂಪನಿಯು ತನ್ನ ಹೇಳಿಕೆಯಲ್ಲಿ, ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಕುಸಿತದೊಂದಿಗೆ ಮತ್ತು ಆರ್ಥಿಕತೆಯು ಲಾಕ್‌ಡೌನ್ ನಿರ್ಬಂಧಗಳನ್ನು ಸರಾಗಗೊಳಿಸುವ ಮತ್ತು ಫೈನಾನ್ಸ್ ವರ್ಷದಲ್ಲಿ ಘೋಷಿಸಲಾದ ಕ್ರಮಗಳಂತಹ ಹಲವಾರು ಸಕಾರಾತ್ಮಕ ಸೂಚಕಗಳೊಂದಿಗೆ ಕ್ರಮೇಣ ತೆರೆದುಕೊಳ್ಳುತ್ತಿದೆ" 23 ಯೂನಿಯನ್ ಬಜೆಟ್, ಮುಂಬರುವ ತಿಂಗಳುಗಳಲ್ಲಿ ಮಾರಾಟದಲ್ಲಿ ತ್ವರಿತ ಪುನರುಜ್ಜೀವನವನ್ನು ನಿರೀಕ್ಷಿಸಲಾಗಿದೆ ಹೇಳಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್

ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಕೇವಲ 7 ಸೆಕೆಂಡುಗಳಲ್ಲಿ 0 ದಿಂದ 60 ಕಿ.ಮೀ ಕ್ರಮಿಸುತ್ತದ ಎಂದು ಹೀರೋ ಹೇಳಿಕೊಂಡಿದೆ. ಈ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನ ಬೇಸ್ ಸ್ಪೆಕ್ ಮಾದರಿಯು 138.5 ಕೆಜಿ ತೂಕವನ್ನು ಹೊಂದಿದೆ. ಹೀರೋ ಎಕ್ಸ್‌ಟ್ರಿಮ್ 160ಆರ್ ಭಾರತೀಯ ಮಾರುಕಟ್ಟೆಯಲ್ಲಿ ಮಾರುಕಟ್ಟೆಯಲ್ಲಿ ಟಿವಿಎಸ್ ಅಪಾಚೆ ಆರ್‍‍ಟಿ‍ಆರ್ 160 4ವಿ, ಬಜಾಜ್ ಪಲ್ಸರ್ ಎನ್ಎಸ್ 160 ಮತ್ತು ಸುಜುಕಿ ಜಿಕ್ಸರ್ 150 ಬೈಕುಗಳಿಗೆ ಪೈಪೋಟಿ ನೀಡುತ್ತದೆ.

Article Published On: Sunday, April 10, 2022, 13:00 [IST]
English summary
Hero motocorp hiked the prices of xtreme 160r find here all details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+