Just In
- 2 hrs ago
ಎಲೆಕ್ಟ್ರಿಕ್, ಹೈಬ್ರಿಡ್ ಕಾರುಗಳಲ್ಲಿ ಮಾತ್ರ ರಿಜನರೇಟಿವ್ ಬ್ರೇಕಿಂಗ್ ಏಕೆ ಲಭ್ಯವಿದೆ: ಇದರ ಉಪಯೋಗವೇನು?
- 3 hrs ago
ಹೊಸ ನವೀಕರಣಗಳೊಂದಿಗೆ ಸಿಎಫ್ಮೋಟೋ 150ಎನ್ಕೆ ಬೈಕ್ ಬಿಡುಗಡೆ
- 5 hrs ago
ಏಪ್ರಿಲ್ ತಿಂಗಳ ಟಿವಿಎಸ್ ವಾಹನ ಮಾರಾಟ ವರದಿ: ರಫ್ತಿನಲ್ಲಿ ದಾಖಲೆ ನಿರ್ಮಾಣ
- 5 hrs ago
ಎಲೆಕ್ಟ್ರಿಕ್ ಕಾರ್ ಆಗಿ ಪರಿವರ್ತನೆಗೊಂಡು ಮಿಂಚುತ್ತಿದೆ 1954ರ ಫಿಯೆಟ್ ಕಾರು
Don't Miss!
- News
ವಿಡಿಯೋ: ಚಳ್ಳಕೆರೆ ಶಾಸಕ ಟಿ ರಘುಮೂರ್ತಿ ಕಾರು ಅಪಘಾತ
- Lifestyle
ಮೇ. 30ಕ್ಕೆ ಶನಿ ಜಯಂತಿ: ಶನಿ ಧೈಯ್ಯಾ, ಶನಿ ದೋಷವಿದ್ದರೆ ಈ ಪರಿಹಾರಗಳನ್ನು ಮಾಡಿ
- Sports
ಹೀರೋ ಏಷ್ಯಾ ಕಪ್ 2022: ಜಪಾನ್ ವಿರುದ್ಧ ಮುಗ್ಗರಿಸಿದ ಭಾರತ, 2-5 ಅಂತರದಲ್ಲಿ ಸೋಲು
- Finance
ಮೇ 24ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Movies
'ಯುಗಾಂತರ' ಧಾರಾವಾಹಿಗೆ ಪ್ರಾಮಾಣಿಕ ಐಎಎಸ್ ಅಧಿಕಾರಿ ಪ್ರೇರಣೆ: ವಾಹಿನಿ ಮುಖ್ಯಸ್ಥರ ಸ್ಪಷ್ಟನೆಯೇನು?
- Technology
ಭಾರತದಲ್ಲಿ ಎಲ್ಜಿ OLED 2022 ಸ್ಮಾರ್ಟ್ ಟಿವಿ ಸರಣಿ ಅನಾವರಣ!
- Education
BSF Recruitment 2022 : 281 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆಗಾಗಿ ರೂ.1,800 ಕೋಟಿ ಹೂಡಿಕೆ ಮಾಡಿದ ಹೀರೋ ಮೋಟೊಕಾರ್ಪ್
ದೇಶದ ಅಗ್ರಗಣ್ಯ ದ್ವಿಚಕ್ರ ವಾಹನ ಉತ್ಪಾದನಾ ಕಂಪನಿಯಾಗಿರುವ ಹೀರೋ ಮೋಟೊಕಾರ್ಪ್ ಇವಿ ವಾಹನ ಉತ್ಪಾದನಾ ಯೋಜನೆಗಳ ಮೇಲೆ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದ್ದು, ಭಾರತದಲ್ಲಿ ಸಹಭಾಗೀತ್ವ ಯೋಜನೆ ಘೋಷಣೆ ಮಾಡಿರುವ ಗೊಗೊರೊ ಕಂಪನಿಯೊಂದಿಗೆ ಹೀರೋ ಮೋಟೊಕಾರ್ಪ್ ಕಂಪನಿಯು ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದೆ.

ಗೊಗೊರೊ ಕಂಪನಿಯು ಸದ್ಯ ತೈವಾನ್‌ನಲ್ಲಿ ವಿವಿಧ ಮಾದರಿಯ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ನಿರ್ಮಾಣದೊಂದಿಗೆ ಸೌರವಿದ್ಯುತ್ ಮೂಲಕವೇ ಬ್ಯಾಟರಿ ಸ್ವಾಪಿಂಗ್(ಬ್ಯಾಟರಿ ವಿನಿಮಯ) ಸೌಲಭ್ಯವನ್ನು ಜೋಡಣೆ ಮಾಡುವಲ್ಲಿ ಯಶಸ್ವಿಯಾಗಿದ್ದು, ಹೀರೋ ಮೋಟೊಕಾರ್ಪ್ ಕಂಪನಿಯು ಇದೀಗ ಭಾರತದಲ್ಲಿ ಗೊಗೊರೊ ಜೊತೆಗೂಡಿ ಇವಿ ವಾಹನ ಉದ್ಯಮದಲ್ಲಿನ ಅಧಿಪತ್ಯಕ್ಕಾಗಿ ಬೃಹತ್ ಯೋಜನೆ ರೂಪಿಸುತ್ತಿದೆ.

ಸೌರವಿದ್ಯುತ್ ಮೂಲಕವೇ ಬ್ಯಾಟರಿ ವಿನಿಮಯ ಕೇಂದ್ರಗಳ ನಿರ್ವಹಣೆಯಲ್ಲಿ ಯಶಸ್ವಿಯಾಗಿರುವ ಗೊಗೊರೊ ಕಂಪನಿಯ ಜೊತೆಗೂಡಿರುವ ಹೀರೋ ಮೋಟೊಕಾರ್ಪ್ ಕಂಪನಿಯು ದೇಶಾದ್ಯಂತ ಬ್ಯಾಟರಿ ವಿನಿಮಯ ಕೇಂದ್ರಗಳನ್ನು ತೆರೆಯಲು ಸಿದ್ದವಾಗಿದ್ದು, ಇದಕ್ಕಾಗಿ ಕಂಪನಿಯು ಹೊಸ ಉದ್ಯಮ ಯೋಜನೆಗಾಗಿ ರೂ.1,800 ಕೋಟಿ ಹೂಡಿಕೆಗೆ ಒಪ್ಪಿಗೆ ಸೂಚಿಸಿದೆ.

ಭವಿಷ್ಯದಲ್ಲಿ ಇವಿ ವಾಹನಗಳಿಗೆ ಅತ್ಯಾವಶ್ಯಕವಾಗಲಿರುವ ಚಾರ್ಜಿಂಗ್ ನಿಲ್ದಾಣಗಳೊಂದಿಗೆ ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆಯು ಜೋರಾಗುತ್ತಿದ್ದು, ಚಾರ್ಜಿಂಗ್ ನಿಲ್ದಾಣಗಳಲ್ಲಿ ಗಂಟೆಗಟ್ಟಲೇ ಕಾಯುವುದಕ್ಕಿಂತ ನಿಗದಿತ ದರ ಪಾವತಿಸಿ ಚಾರ್ಜ್ ಮಾಡಲಾದ ಬ್ಯಾಟರಿಯನ್ನು ವಿನಿಮಯ ಮಾಡಿಕೊಳ್ಳುವ ಸೌಲಭ್ಯವು ಹೆಚ್ಚು ಜನಪ್ರಿಯವಾಗಲಿದೆ.

ಹೀಗಾಗಿ ಬಹುತೇಕ ಇವಿ ಸ್ಟಾರ್ಟ್‌ಅಪ್ ಕಂಪನಿಗಳು ಇವಿ ಚಾರ್ಜಿಂಗ್ ನಿಲ್ದಾಣಗಳಿಂತಲೂ ಹೆಚ್ಚು ಬ್ಯಾಟರಿ ವಿನಿಯಮ ಕೇಂದ್ರಗಳ ಮೇಲೆ ಗಮನಹರಿಸುತ್ತಿದ್ದು, ಬ್ಯಾಟರಿ ರೀಚಾರ್ಜ್‌ಗಾಗಿ ವಾಹನ ಮಾಲೀಕರು ಗಂಟೆಗಟ್ಟಲೇ ಕಾಯುವುದನ್ನು ತಪ್ಪಿಸಲು ಬ್ಯಾಟರಿ ವಿನಿಯಮ ಕೇಂದ್ರಗಳು ಹೆಚ್ಚು ಸಹಕಾರಿಯಾಗಲಿವೆ.

ಇವಿ ವಾಹನ ಮಾಲೀಕರು ಬ್ಯಾಟರಿ ರೀಚಾರ್ಚ್ ಖಾಲಿಯಾದ ನಂತರ ರೀಚಾರ್ಜ್ ಮಾಡಲಾದ ಬ್ಯಾಟರಿಯೊಂದಿಗೆ ವಿನಿಮಯ ಮಾಡಿಕೊಳ್ಳುವುದು ಸಾಕಷ್ಟು ಸುಲಭವಾಗಿದ್ದು, ಇದು ಭವಿಷ್ಯದಲ್ಲಿ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಗಳಿವೆ.

ಹೀಗಾಗಿ ಇವಿ ವಾಹನಗಳ ಉತ್ಪಾದನೆಯ ಜೊತೆ ಇವಿ ವಾಹನಗಳ ಪೂರಕವಾದ ಉದ್ಯಮ ಯೋಜನೆಗಳ ಮೇಲೆ ಭಾರೀ ಪ್ರಮಾಣದ ಹೂಡಿಕೆಯಾಗುತ್ತಿದ್ದು, ಹೀರೋ ಮೋಟೊಕಾರ್ಪ್ ಕಂಪನಿಯು ಇದೀಗ ತನ್ನ ಸಹಭಾಗೀತ್ವ ಕಂಪನಿಯಾದ ಗೊಗೊರೆ ಕಂಪನಿಯ ಹೊಸ ಯೋಜನೆಯ ಮೇಲೆ ಬೃಹತ್ ಪ್ರಮಾಣದ ಬಂಡವಾಳ ಹೂಡಿಕೆ ಮಾಡಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಆಸಕ್ತಿ ಇದ್ದರೂ ಕೂಡಾ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ಇವಿ ವಾಹನಗಳ ಬ್ಯಾಟರಿ ರೇಂಜ್ ಸಾಮಾರ್ಥ್ಯವು ಖರೀದಿಗೆ ಹಿಂದೇಟು ಹಾಕುವಂತೆ ಮಾಡಿದ್ದು, ಈ ಸಮಸ್ಯೆ ನಿವಾರಣೆಗಾಗಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳಿಗೆ ತ್ವರಿತವಾಗಿ ಚಾರ್ಜಿಂಗ್ ಸೌಲಭ್ಯ ಒದಗಿಸಲು ಬ್ಯಾಟರಿ ವಿನಿಮಯ ಕೇಂದ್ರಗಳನ್ನು ನಿರ್ಮಾಣ ಮಾಡುತ್ತಿವೆ.

ಬ್ಯಾಟರಿ ವಿನಿಯಮ ಕೇಂದ್ರಗಳು ಎಲೆಕ್ಟ್ರಿಕ್ ವಾಹನಗಳಿಗೆ ತ್ವರಿತವಾಗಿ ಬ್ಯಾಟರಿ ಸೌಲಭ್ಯಗಳನ್ನು ಒದಗಿಸಬಹುದಾಗಿದ್ದು, ಬ್ಯಾಟರಿ ರೇಂಜ್ ಆಧಾರದ ಮೇಲೆ ಇಂತಿಷ್ಟು ಪ್ರಮಾಣದ ದರ ಪಾವತಿಸಿಬೇಕಾಗುತ್ತದೆ.

ಬ್ಯಾಟರಿ ವಿನಿಮಯದ ವೇಳೆ ಗ್ರಾಹಕರು ತಮ್ಮ ಬಳಿಯಿರುವ ಚಾರ್ಜ್ ಮುಗಿದಿರುವ ಬ್ಯಾಟರಿಯನ್ನು ವಿನಿಮಯ ಕೇಂದ್ರಗಳಿಗೆ ಹಿಂದಿರುಗಿಸುವ ಮೂಲಕ ಚಾರ್ಜ್ ಮಾಡಲಾದ ಬ್ಯಾಟರಿ ಪಡೆದುಕೊಳ್ಳುವ ವ್ಯವಸ್ಥೆ ಇದಾಗಿದ್ದು, ಹೊಸ ಸೌಲಭ್ಯವು ಚಾರ್ಜಿಂಗ್ ಸಮಯವನ್ನು ಉಳಿಸುವ ಮೂಲಕ ಬ್ಯಾಟರಿ ಖಾಲಿಯಾದ ತಕ್ಷಣವೇ ಮತ್ತೊಂದು ಬ್ಯಾಟರಿ ಪಡೆದುಕೊಳ್ಳಲು ಸಹಕಾರಿಯಾಗುತ್ತದೆ.

ಸದ್ಯ ಬೆಂಗಳೂರು, ಮುಂಬೈ, ದೆಹಲಿ ಮತ್ತು ಅಹಮದಾಬಾದ್ ನಗರಗಳಲ್ಲಿನ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಸಹಭಾಗಿತ್ವ ಯೋಜನೆ ಅಡಿಯಲ್ಲಿ ಹೊಸ ಬ್ಯಾಟರಿ ವಿನಿಯಮ ಕೇಂದ್ರಗಳಿಗೆ ಚಾಲನೆ ನೀಡಿದ್ದು, ಇದೇ ಕಾರಣಕ್ಕೆ ಹೊಸ ಉದ್ಯಮ ಕಾರ್ಯಾಚರಣೆಯ ಮೇಲೆ ಹೀರೋ ಮೋಟೊಕಾರ್ಪ್ ಕಂಪನಿಯು ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದೆ.

ಇನ್ನು ಅಂಗಸಂಸ್ಥೆಯಾದ ಹೀರೋ ಎಲೆಕ್ಟ್ರಿಕ್ ಕಂಪನಿಯು ಈಗಾಗಲೇ ವಿವಿಧ ಇವಿ ಸ್ಕೂಟರ್ ನಿರ್ಮಾಣ ಮತ್ತು ಮಾರಾಟ ಹೊಂದಿದ್ದರೂ ಮಾಡುತ್ತಿದ್ದರೂ ಹೀರೋ ಮೋಟೊಕಾರ್ಪ್ ಕಂಪನಿಯು ತನ್ನ ಮುಖ್ಯ ಬ್ರಾಂಡ್ ಅಡಿಯಲ್ಲಿ ಪ್ರತ್ಯೇಕವಾಗಿ ಇವಿ ವಾಹನಗಳನ್ನು ಅಭಿವೃದ್ದಿಗೊಳಿಸಿ ಮಾರಾಟ ಮಾಡುವ ಯೋಜನೆ ಹೊಂದಿದೆ.

ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಹೀರೋ ಮೋಟೊಕಾರ್ಪ್ ದ್ವಿಚಕ್ರ ವಾಹನ ಉತ್ಪಾದನಾ ಘಟಕದಲ್ಲಿಯೇ ಪ್ರತ್ಯೇಕವಾಗಿ ಇವಿ ವಾಹನ ಅಭಿವೃದ್ದಿ ಮತ್ತು ಉತ್ಪಾದನಾ ಘಟಕ ನಿರ್ಮಿಸುತ್ತಿದ್ದು, ಇವಿ ವಾಹನ ಉತ್ಪಾದನಾ ಘಟಕಕ್ಕೆ ಹೀರೋ ಕಂಪನಿಯು ಗಾರ್ಡನ್ ಫ್ಯಾಕ್ಟರಿ ಎಂದು ನಾಮಕರಣ ಮಾಡಿದೆ.

ಹೊಸ ವಾಹನ ಉತ್ಪಾದನಾ ಘಟಕದಲ್ಲಿ ಬ್ಯಾಟರಿ ಪ್ಯಾಕ್ ತಯಾರಿಕೆ, ರೋಡ್ ಟೆಸ್ಟಿಂಗ್, ವಾಹನ ಜೋಡಣೆ ಮತ್ತು ವೆಹಿಕಲ್ ಎಂಡ್ ಆಫ್ ಲೈನ್ ಟೆಸ್ಟಿಂಗ್(EOL)ಗಾಗಿ ಅತ್ಯುತ್ತಮ ವಾಹನ ಉತ್ಪಾದನಾ ಘಟಕವನ್ನು ತೆರೆದಿದ್ದು, ಕಂಪನಿಯು ಶೀಘ್ರದಲ್ಲಿಯೇ ಹೊಸ ಇವಿ ಸ್ಕೂಟರ್ ಮಾದರಿಯ ಉತ್ಪಾದನಾ ಆವೃತ್ತಿಯನ್ನು ಅನಾವರಣಗೊಳಿಸಲಿದೆ.

ಹೊಸ ಸ್ಕೂಟರ್‌ಗಳ ಉತ್ಪಾದನಾ ಆವೃತ್ತಿಯ ಅನಾವರಣಕ್ಕೂ ಮುನ್ನ ಕಂಪನಿಯ ವರ್ಚುವಲ್ ಸೆಲೆಬ್ರೆಷನ್‌ನಲ್ಲಿ ಬಿಡುಗಡೆಯಾಗಲಿರುವ ವಿವಿಧ ವಿನ್ಯಾಸದ ಹೊಸ ಸ್ಕೂಟರ್‌ಗಳ ಚಿತ್ರಗಳನ್ನು ಬಹಿರಂಗಪಡಿಸಿದ್ದು, ಹೀರೋ ಹೊಸ ಇವಿ ಸ್ಕೂಟರ್‌ಗಳಲ್ಲಿ ಸಾಮಾನ್ಯ ಮಾದರಿಗಳೊಂದಿಗೆ ಟ್ರೈ ಸೈಕಲ್ ಮಾದರಿಯು ಸಹ ಬಿಡುಗಡೆಯಾಗಲಿದೆ.

ಹೀರೋ ಹೊಸ ಸ್ಕೂಟರ್ ಚಿತ್ರಗಳ ಹೊರತಾಗಿ ಯಾವುದೇ ತಾಂತ್ರಿಕ ಮಾಹಿತಿ ಲಭ್ಯವಿಲ್ಲವಾದರೂ ಹೊಸ ಇವಿ ಸ್ಕೂಟರ್ ಮಾದರಿಗಳು ಶೀಘ್ರದಲ್ಲೇ ರೋಡ್ ಟೆಸ್ಟಿಂಗ್ ಆರಂಭಿಸಲಿದ್ದು, ಹೊಸ ಸ್ಕೂಟರ್‌ಗಳು ಇತ್ತೀಚೆಗೆ ಬಿಡುಗಡೆಯಾದ ಓಲಾ, ಸಿಂಪಲ್ ಎನರ್ಜಿ ಮಾದರಿಗಳಲ್ಲಿನ ಮೈಲೇಜ್‌ಗೆ ಪೈಪೋಟಿಯಾಗಿ ಬಜೆಟ್ ಬೆಲೆಯಲ್ಲಿ ಬಿಡುಗಡೆಯಾಗಲಿವೆ.