ಎಥರ್ ಎನರ್ಜಿ ಹೊಸ ಯೋಜನೆಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾದ ಹೀರೋ ಮೋಟೊಕಾರ್ಪ್

ಭಾರತದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿರುವ ಹೀರೋ ಮೋಟೊಕಾರ್ಪ್ ಇವಿ ಸ್ಟಾರ್ಟ್ಅಪ್ ಅಥರ್ ಎನರ್ಜಿಯಲ್ಲಿ ಪಾಲು ಹೊಂದಿದ್ದು, ಎಥರ್ ಕಂಪನಿಯ ಹೊಸ ಯೋಜನೆಗಾಗಿ ಹೀರೋ ಮೋಟೊಕಾರ್ಪ್ ಮತ್ತಷ್ಟು ಬಂಡವಾಳ ಹೂಡಿಕೆಯೊಂದಿಗೆ ತನ್ನ ಪಾಲನ್ನು ಹೆಚ್ಚಿಸಲು ನಿರ್ಧರಿಸಿದೆ.

ಎಥರ್ ಎನರ್ಜಿ ಹೊಸ ಯೋಜನೆಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾದ ಹೀರೋ ಮೋಟೊಕಾರ್ಪ್

ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಎಥರ್ ಎನರ್ಜಿ ಕಂಪನಿಯಲ್ಲಿ ಹೀರೋ ಮೋಟೊಕಾರ್ಪ್ ಕಂಪನಿಯು ಈಗಾಗಲೇ ಶೇ. 34.8 ರಷ್ಟು ಪಾಲು ಹೊಂದಿದ್ದು, ಇದೀಗ ಹೊಸ ಹೂಡಿಕೆಯೊಂದಿಗೆ ಹೀರೋ ಕಂಪನಿಯ ಪಾಲು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಹೊಸ ಬಂಡವಾಳ ಹೂಡಿಕೆಯ ನಿರ್ಧಾರದ ಕುರಿತಾಗಿ ಎಥರ್ ಕಂಪನಿಯೇ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಹೊಸದಾಗಿ ರೂ.420 ಕೋಟಿ ಹೂಡಿಕೆ ಮಾಡುತ್ತಿರುವುದಾಗಿ ಮಾಹಿತಿ ಹಂಚಿಕೊಂಡಿವೆ.

ಎಥರ್ ಎನರ್ಜಿ ಹೊಸ ಯೋಜನೆಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾದ ಹೀರೋ ಮೋಟೊಕಾರ್ಪ್

ಹೊಸದಾಗಿ ಹೂಡಿಕೆ ಮಾಡಲಾಗುತ್ತಿರುವ ರೂ.420 ಕೋಟಿ ಬಂಡವಾಳವನ್ನು ಹೀರೋ ಮೋಟೊಕಾರ್ಪ್ ಕಂಪನಿಯು ಎರಡು ಹಂತದಲ್ಲಿ ಹೂಡಿಕೆ ಮಾಡಲು ನಿರ್ಧರಿಸಿದ್ದು, ಹೊಸ ಬಂಡವಾಳದೊಂದಿಗೆ ಶೇ.50ಕ್ಕಿಂತಲೂ ಹೆಚ್ಚು ಪಾಲು ಪಡೆದುಕೊಳ್ಳುವ ನೀರಿಕ್ಷೆಯಿದೆ.

ಎಥರ್ ಎನರ್ಜಿ ಹೊಸ ಯೋಜನೆಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾದ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಕಂಪನಿಯು ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿಗಾಗಿ ತನ್ನದೆ ಒಡೆತನದ ಹೀರೋ ಎಲೆಕ್ಟ್ರಿಕ್ ಕಂಪನಿಯ ಮೇಲೆ ಮಾತ್ರವಲ್ಲದೆ ಇತರೆ ಸ್ಟಾರ್ಟ್ಅಪ್ ಇವಿ ಕಂಪನಿಗಳಲ್ಲೂ ಭಾರೀ ಪ್ರಮಾಣದ ಹೂಡಿಕೆ ಮಾಡಿದ್ದು, ಹೀರೋ ಮೋಟೊಕಾರ್ಪ್ ಕಂಪನಿಯ ಬಂಡವಾಳದೊಂದಿಗೆ ಹಲವಾರು ಇವಿ ಸ್ಟಾರ್ಟ್ಅಪ್ ಕಂಪನಿಗಳು ವಿವಿಧ ಮಾದರಿಯ ಇವಿ ವಾಹನಗಳನ್ನು ಅಭಿವೃದ್ದಿಪಡಿಸುತ್ತಿವೆ.

ಎಥರ್ ಎನರ್ಜಿ ಹೊಸ ಯೋಜನೆಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾದ ಹೀರೋ ಮೋಟೊಕಾರ್ಪ್

ಎಥರ್ ಎನರ್ಜಿ ಕಂಪನಿಯ ಮೇಲೆ 2016ರಿಂದಲೇ ವಿವಿಧ ಹಂತದಲ್ಲಿ ಹೂಡಿಕೆ ಮಾಡುತ್ತಿರುವ ಹೀರೋ ಮೋಟೊಕಾರ್ಪ್ ಕಂಪನಿಯು ಇದೀಗ ರೂ. 420 ಕೋಟಿ ಬಂಡವಾಳ ಹೂಡಿಕೆಗೆ ಒಪ್ಪಿಗೆ ಸೂಚಿಸಿದ್ದು, ಸದ್ಯದಲ್ಲಿಯೇ ಎಥರ್ ಕಂಪನಿಯು ಇತ್ತೀಚೆಗೆ ಮಾರುಕಟ್ಟೆ ಪ್ರವೇಶಿಸಿರುವ ಓಲಾ ಎಲೆಕ್ಟ್ರಿಕ್‌ ನಿರ್ಮಾಣ ಎಸ್1 ಮತ್ತು ಎಸ್1 ಪ್ರೊ ಮಾದರಿಗಳಿಗೆ ಪ್ರತಿಸ್ಪರ್ಧಿಯಾಗಿ ಹೊಸ ಇವಿ ಸ್ಕೂಟರ್ ಉತ್ಪನ್ನಗಳನ್ನು ಬಿಡುಗಡೆ ಮಾಡಲು ಯೋಜಿಸುತ್ತಿದೆ.

ಎಥರ್ ಎನರ್ಜಿ ಹೊಸ ಯೋಜನೆಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾದ ಹೀರೋ ಮೋಟೊಕಾರ್ಪ್

ಎಥರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಹೊಸ ಇವಿ ಸ್ಕೂಟರ್ ಬೆಂಗಳೂರು ಎಕ್ಸ್‌ಶೋರೂಂ ಪ್ರಕಾರ 450 ಪ್ಲಸ್ ಮಾದರಿಯು ರೂ. 1,31,647ಕ್ಕೆ ಮತ್ತು 450ಎಕ್ಸ್ ಮಾದರಿಯು ರೂ. 1,50,657ಕ್ಕೆ ಖರೀದಿಗೆ ಲಭ್ಯವಿವೆ.

ಎಥರ್ ಎನರ್ಜಿ ಹೊಸ ಯೋಜನೆಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾದ ಹೀರೋ ಮೋಟೊಕಾರ್ಪ್

ಎಥರ್ ಎಲೆಕ್ಟ್ರಿಕ್ ಸ್ಕೂಟರ್‌ಗಳು ಇತ್ತೀಚೆಗೆ ಬಿಡುಗಡೆಯಾಗಿರುವ ಇವಿ ಸ್ಕೂಟರ್‌ಗಳಿಂತಲೂ ತುಸು ಕಡಿಮೆ ಮೈಲೇಜ್ ಹೊಂದಿದ್ದರೂ ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಮತ್ತು ಎಲೆಕ್ಟ್ರಿಕ್ ಎಂಜಿನ್ ಕಾರ್ಯಕ್ಷಮತೆ, ತಾಂತ್ರಿಕ ಸೇವೆಗಳ ವಿಚಾರವಾಗಿ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿರುವುದೇ ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ಎಥರ್ ಎನರ್ಜಿ ಹೊಸ ಯೋಜನೆಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾದ ಹೀರೋ ಮೋಟೊಕಾರ್ಪ್

ಸದ್ಯ ಮಾರುಕಟ್ಟೆಯಲ್ಲಿರುವ 2.9kWh ಬ್ಯಾಟರಿ ಪ್ಯಾಕ್ ಹೊಂದಿರುವ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗರಿಷ್ಠ 6kW ಬ್ಯಾಟರಿ ಬ್ಯಾಟರಿ ಪ್ಯಾಕ್‌ನೊಂದಿಗೆ 26 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 85 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಎಥರ್ ಎನರ್ಜಿ ಹೊಸ ಯೋಜನೆಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾದ ಹೀರೋ ಮೋಟೊಕಾರ್ಪ್

450 ಪ್ಲಸ್ ಮಾದರಿಯು ಪ್ರತಿ ಚಾರ್ಜ್‌ಗೆ 70 ಕಿ.ಮೀ ಮೈಲೇಜ್ ಹೊಂದಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ 450ಎಕ್ಸ್ ಮಾದರಿಯು ಕೇವಲ 10 ನಿಮಿಷಗಳಲ್ಲಿ ಚಾರ್ಜ್ ಮಾಡಿದಲ್ಲಿ 10 ಕಿ.ಮೀ ಹಿಂದಿರುಗಿಸಿದ್ದಲ್ಲಿ 450 ಪ್ಲಸ್ ಮಾದರಿಯು 15 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಎಥರ್ ಎನರ್ಜಿ ಹೊಸ ಯೋಜನೆಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾದ ಹೀರೋ ಮೋಟೊಕಾರ್ಪ್

ಸ್ಟ್ಯಾಂಡರ್ಡ್ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಮಾರಾಟದಿಂದ ಸ್ಥಗಿತಗೊಳಿಸಿದ ನಂತರ ಎಥರ್ ಕಂಪನಿಯು 450 ಪ್ಲಸ್ ಮತ್ತು 450ಎಕ್ಸ್ ಮಾದರಿಯ ಮೇಲೆ ಹೆಚ್ಚು ಗಮನಹರಿಸಿದ್ದು, ಅತಿ ಹೆಚ್ಚು ಮೈಲೇಜ್ ನೀಡುವ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿರುವ ಎಥರ್ ಕಂಪನಿಯು ಕಳೆದ ಒಂದು ವರ್ಷದ ಅವಧಿಯಲ್ಲಿ 12 ಪಟ್ಟು ಹೆಚ್ಚು ಬೆಳವಣಿಗೆ ಸಾಧಿಸಿದೆ.

ಎಥರ್ ಎನರ್ಜಿ ಹೊಸ ಯೋಜನೆಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾದ ಹೀರೋ ಮೋಟೊಕಾರ್ಪ್

ಎಥರ್ ಎನರ್ಜಿ ಕಂಪನಿಯು ಪ್ರೀಮಿಯಂ ಸ್ಕೂಟರ್‌ಗಳ ಜೊತೆಗೆ ಬಜೆಟ್ ಬೆಲೆಯ ಇವಿ ಮಾದರಿಗಳನ್ನು ಸಹ ಅಭಿವೃದ್ದಿಗೊಳಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಉತ್ಪನ್ನಗಳೊಂದಿಗೆ ಇನ್ನು ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಎಥರ್ ಎನರ್ಜಿ ಹೊಸ ಯೋಜನೆಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾದ ಹೀರೋ ಮೋಟೊಕಾರ್ಪ್

ಹೊಸ ಯೋಜನೆಗೆ ಪೂರಕವಾಗಿ ಕಂಪನಿಯು ಉತ್ಪಾದನಾ ಸಾಮರ್ಥ್ಯವನ್ನು ಸಹ ಹೆಚ್ಚಿಸಲು ನಿರ್ಧರಿಸಿದ್ದು, ಇದಕ್ಕಾಗಿ ಕಂಪನಿಯು ಎರಡನೇ ಉತ್ಪಾದನಾ ಘಟಕ ತೆರೆಯಲು ಸಿದ್ದವಾಗಿದೆ. ಎಥರ್ ಕಂಪನಿಯು ಸದ್ಯ ತಮಿಳುನಾಡಿನ ಹೊಸೂರಿನಲ್ಲಿ ವಾರ್ಷಿಕವಾಗಿ 1.20 ಲಕ್ಷ ಸ್ಕೂಟರ್‌ಗಳ ಉತ್ಪಾದನೆ ಮಾಡಬಹುದಾದ ಸಾಮರ್ಥ್ಯದ ಇವಿ ಘಟಕವನ್ನು ಹೊಂದಿದ್ದು, ಇದೀಗ ಕಂಪನಿಯು ಎರಡನೇ ಘಟಕವನ್ನು ಸಹ ಹೊಸೂರಿನಲ್ಲಿಯೇ ತೆರೆಯಲು ನಿರ್ಧರಿಸಿದೆ.

ಎಥರ್ ಎನರ್ಜಿ ಹೊಸ ಯೋಜನೆಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾದ ಹೀರೋ ಮೋಟೊಕಾರ್ಪ್

ಎರಡನೇ ಘಟಕ ನಿರ್ಮಾಣ ಕಾರ್ಯ ಈಗಾಗಲೇ ಆರಂಭಗೊಂಡಿದ್ದು, ಈ ವರ್ಷದ ಕೊನೆಯಲ್ಲಿ ಕಾರ್ಯಾರಂಭ ನಡೆಸಲಿರುವ ಹೊಸ ಘಟಕವು ವಾರ್ಷಿಕವಾಗಿ 2.80 ಲಕ್ಷ ಯುನಿಟ್ ಉತ್ಪಾದನಾ ಸಾಮರ್ಥ್ಯ ಹೊಂದಿರಲಿದೆ ಎನ್ನಲಾಗಿದೆ.

ಎಥರ್ ಎನರ್ಜಿ ಹೊಸ ಯೋಜನೆಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾದ ಹೀರೋ ಮೋಟೊಕಾರ್ಪ್

ಎಥರ್ ಕಂಪನಿಯು ಎರಡು ಘಟಕಗಳ ಮೂಲಕ ವಾರ್ಷಿಕವಾಗಿ 4 ಲಕ್ಷ ಯುನಿಟ್ ಇವಿ ಸ್ಕೂಟರ್ ಉತ್ಪಾದನಾ ಗುರಿಹೊಂದಿದ್ದು, ಗ್ರಾಹಕರ ಬೇಡಿಕೆಗೆ ಪೂರಕವಾಗಿ ಕಂಪನಿಯು ಕಳೆದ ಎರಡು ತಿಂಗಳ ಅವಧಿಯಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಹೊಸ ಶೋರೂಂಗಳಿಗೆ ಚಾಲನೆ ನೀಡಿದೆ.

ಎಥರ್ ಎನರ್ಜಿ ಹೊಸ ಯೋಜನೆಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾದ ಹೀರೋ ಮೋಟೊಕಾರ್ಪ್

ಈ ವರ್ಷಾಂತ್ಯಕ್ಕೆ ಎಥರ್ ಕಂಪನಿಯು ಮತ್ತೆರಡು ಹೊಸ ಉತ್ಪನ್ನಗಳೊಂದಿಗೆ ದೇಶದ ಪ್ರಮುಖ 100 ನಗರಗಳಲ್ಲಿ ಮಾರಾಟ ಸೌಲಭ್ಯ ತೆರೆಯುವ ಯೋಜನೆಯಲ್ಲಿದ್ದು, ಸದ್ಯ ಪ್ರೀಮಿಯಂ ಬೆಲೆಯ ಇವಿ ಸ್ಕೂಟರ್ ಮಾರಾಟ ಹೊಂದಿರುವ ಎಥರ್ ಕಂಪನಿಯು ಮುಂಬರುವ ಇವಿ ಸ್ಕೂಟರ್‌ಗಳಲ್ಲಿ ಹೆಚ್ಚು ಮೈಲೇಜ್‌ನೊಂದಿಗೆ ಬಜೆಟ್ ಮಾದರಿಗಳನ್ನು ಸಹ ಬಿಡುಗಡೆ ಮಾಡಲು ನಿರ್ಧರಿಸಿದೆ.

More from DriveSpark

Article Published On: Monday, January 17, 2022, 9:43 [IST]
English summary
Hero motocorp to invest rs 420 crore in ather energy details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+