Just In
- 41 min ago
ಇವಿಗಳ ಅಬ್ಬರ... 2023 ಜನವರಿಯಲ್ಲಿ ಅತಿ ಹೆಚ್ಚು ಮಾರಾಟ ಕಂಡ ಎಲೆಕ್ಟ್ರಿಕ್ ಸ್ಕೂಟರ್ಗಳಿವು!
- 1 hr ago
ಕಡಿಮೆ ಬೆಲೆಯ ಟಾಟಾ ಎಲೆಕ್ಟ್ರಿಕ್ ಕಾರಿನ ವಿತರಣೆ ಪ್ರಾರಂಭ: 2,000 ಕಾರುಗಳ ಹಸ್ತಾಂತರ
- 2 hrs ago
ಮಾರುತಿ, ಟಾಟಾ ಕಾರುಗಳ ಪ್ರಾಬಲ್ಯದ ನಡುವೆ ದಾಖಲೆ ಮಟ್ಟದ ಮಾರಾಟವಾದ ಹ್ಯುಂಡೈ ಕ್ರೆಟಾ
- 3 hrs ago
13 ಉದ್ಯೋಗಿಗಳಿಗೆ ಹೊಸ ಟೊಯೋಟಾ ಗ್ಲಾನ್ಜಾ ಕಾರುಗಳನ್ನು ಉಡುಗೊರೆಯಾಗಿ ನೀಡಿದ ಕಂಪನಿ
Don't Miss!
- News
ಡಿಕೆಶಿ ಯಾರ ಯಾರ ಸಿಡಿ ಮಾಡ್ತಿದ್ದಾರೋ .? ಇನ್ನು ಯಾವ ಸಿಡಿ,ಸಿನಿಮಾ,ಟ್ರೈಲರ್ ಇದೆ ಅವರನೇ ಕೇಳ್ಬೇಕು: ಅಶ್ವತ್ಥ ನಾರಾಯಣ್
- Movies
ಜನ್ನತ್ ಟು ಮನ್ನತ್: ಬಾಲಿವುಡ್ ಬಾದ್ ಶಾ ಶಾರುಖ್ ಬಳಿಯಿರುವ 6 ಐಷಾರಾಮಿ ಮನೆಗಳಿವು!
- Finance
Infographics: ಬಜೆಟ್ 2023ನಲ್ಲಿ ಕೇಂದ್ರದ ಯೋಜನೆಗಳಿಗೆ ಸಿಕ್ಕ ಅನುದಾನ ಎಷ್ಟು? ವಿವಿರ ಇಲ್ಲಿದೆ
- Sports
Border-Gavaskar Trophy: ಭಾರತ ವಿರುದ್ಧ ಮೊದಲ ಪಂದ್ಯದಲ್ಲಿ ಈ ವೇಗಿ ಬೌಲಿಂಗ್ ಮಾಡಲ್ಲ; ಪ್ಯಾಟ್ ಕಮ್ಮಿನ್ಸ್
- Lifestyle
ಗಂಡ-ಹೆಂಡತಿ ಜಗಳವಾಡಿದರೆ ಈ ಪ್ರಯೋಜನಗಳೂ ಇವೆ!
- Technology
ಕ್ಯಾನನ್ ಕಂಪೆನಿಯಿಂದ ಹೊಸ ಪ್ರಿಂಟರ್ ಬಿಡುಗಡೆ! ಏನೆಲ್ಲಾ ಸೌಲಭ್ಯವಿದೆ ಗೊತ್ತಾ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಹೊಸ ಬಣ್ಣದ ಆಯ್ಕೆ ಪಡೆದು ಮತ್ತಷ್ಟು ಕಲರ್‌ಫುಲ್ ಆದ ಬಹುಬೇಡಿಕೆಯ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್
ಹೀರೋ ಸ್ಪ್ಲೆಂಡರ್ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಬೈಕ್ ಗಳಲ್ಲಿ ಒಂದಾಗಿದೆ. ಈ ಬೈಕ್ ಹೀರೋ ಮೋಟೋಕಾರ್ಪ್ ಕಂಪನಿಗೆ ಮಾರಾಟದಲ್ಲಿ ದೊಡ್ಡ ಕೊಡುಗೆಯನ್ನು ನೀಡುತ್ತಿದೆ. ಇದೀಗ ದೇಶದ ಅತಿ ದೊಡ್ಡ ದ್ವಿಚಕ್ರ ತಯಾರಕ ಕಂಪನಿಯಾದ ಹೀರೋ ಮೋಟೋಕಾರ್ಪ್ ತನ್ನ 100ಸಿಸಿ ಕಮ್ಯೂಟರ್-ಸೆಗ್ಮೆಂಟ್ ಮೋಟಾರ್‌ಸೈಕಲ್ ಸ್ಪ್ಲೆಂಡರ್ ಪ್ಲಸ್‌ಗೆ ಹೊಸ ಬಣ್ಣದ ಆಯ್ಕೆಯನ್ನು ಪರಿಚಯಿಸಿದೆ.

ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ ಗ ಸಿಲ್ವರ್ ನೆಕ್ಸಸ್ ಬ್ಲೂ ಬಣ್ಣದಲ್ಲಿ ಲಭ್ಯವಿದೆ, ಇದು ಈಗ ಒಟ್ಟು ಬಣ್ಣದ ಆಯ್ಕೆಗಳ ಸಂಖ್ಯೆಯನ್ನು ಆರಕ್ಕೆ ಏರಿಸಿದೆ. ಉಳಿದ ಬಣ್ಣಗಳ ಆಯ್ಕೆಯು ಬ್ಲ್ಯಾಕ್ ಜೊತೆ ಪರ್ಪಲ್, ಬ್ಲ್ಯಾಕ್ ಜೊತೆ ಸ್ಪೋರ್ಟ್ಸ್ ರೆಡ್, ಹೆವಿ ಗ್ರೇ ಜೊತೆ ಗ್ರೀನ್, ಮ್ಯಾಟ್ ಶೀಲ್ಡ್ ಗೋಲ್ಡ್ ಮತ್ತು ಬ್ಲ್ಯಾಕ್ ಜೊತೆ ಸಿಲ್ವರ್ ಆಗಿದೆ. ಹೀರೋ ಸ್ಪ್ಲೆಂಡರ್ ಸರಣಿಯು ಯಾವಾಗಲೂ ತಿಂಗಳಿಗೆ ಸರಾಸರಿ 2.5 ಲಕ್ಷ ಯುನಿಟ್‌ಗಳ ಮಾರಾಟದೊಂದಿಗೆ ದೇಶದಲ್ಲಿ ಹೆಚ್ಚು ಮಾರಾಟವಾಗುವ ಮೋಟಾರ್‌ಸೈಕಲ್‌ಗಳಲ್ಲಿ ಒಂದಾಗಿದೆ.

ಹೊಸ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕಿನ ಸಿಲ್ವರ್ ನೆಕ್ಸಸ್ ಬ್ಲೂ ಬಣ್ಣದ ಮಾದರಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.72,978 ರಿಂದ ಪ್ರಾರಂಭವಾಗುತ್ತದೆ. ಸ್ಪ್ಲೆಂಡರ್ ಪ್ಲಸ್ ಕಂಪನಿಯ ಅತಿ ಹೆಚ್ಚು ಮಾರಾಟವಾಗುವ ಸ್ಪ್ಲೆಂಡರ್ ಸರಣಿಯ ಭಾಗವಾಗಿದೆ.

ಈ ಹೊಸ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕಿನಲ್ಲಿ 97.2ಸಿಸಿ, ಸಿಂಗಲ್ ಸಿಲಿಂಡರ್, ಏರ್ ಕೂಲ್ಡ್, ಫ್ಯೂಯಲ್ ಇಂಜೆಕ್ಟೆಡ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 7.9ಬಿಹೆಚ್‍ಪಿ ಪವರ್ ಮತ್ತು 8.05 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಎಂಜಿನ್ ಹೀರೋನ I3S ಎಂಜಿನ್-ಸ್ಟಾರ್ಟ್-ಸ್ಟಾಪ್ ತಂತ್ರಜ್ಞಾನವನ್ನು ಹೊಂದಿದೆ. ಇದರಿಂದ ಹೆಚ್ಚಿನ ಮೈಲೇಜ್ ಅನ್ನು ನೀಡುತ್ತದೆ.

ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್‌ಗಳನ್ನು ಹೊಂದಿದೆ ಮತ್ತು ಒರಟು ವಿಷಯವನ್ನು ನೋಡಿಕೊಳ್ಳಲು ಹಿಂಭಾಗದಲ್ಲಿ ಡ್ಯುಯಲ್ ಸ್ಪ್ರಿಂಗ್-ಲೋಡೆಡ್ ಶಾಕ್ ಅಬ್ಸಾರ್ಬರ್‌ಗಳನ್ನು ಹೊಂದಿದೆ.

ಇನ್ನು ಪ್ರಮುಖವಾಗಿ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಈ ಬೈಕಿನ ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ, ಇದು ಸಂಯೋಜಿತ ಬ್ರೇಕಿಂಗ್ ಸಿಸ್ಟಂ ಅನ್ನು ಸಹ ಪಡೆಯುತ್ತದೆ.

ಹೀರೋ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ ಬೈಕಿನಲ್ಲಿ ಎಂಜಿನ್ ಕಟ್-ಆಫ್ ಮತ್ತು ಸಂಯೋಜಿತ ಬ್ರೇಕಿಂಗ್ ಸಿಸ್ಟಂ ಅನ್ನು ಒಳಗೊಂಡಿದೆ. ಇತರ ವೈಶಿಷ್ಟ್ಯಗಳಲ್ಲಿ ಹ್ಯಾಲೊಜೆನ್ ಹೆಡ್‌ಲೈಟ್, ಬಲ್ಬ್ ಮಾದರಿಯ ಟರ್ನ್ ಇಂಡಿಕೇಟರ್ಸ್, ಹ್ಯಾಲೊಜೆನ್ ಟೈಲ್‌ಲೈಟ್ ಮತ್ತು ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ.

ಇನ್ನು ಹೀರೋ ಕಂಪನಿಯು ಅತ್ಯಾಧುನಿಕ ಫೀಚರ್ಸ್ ಗಳೊಂದಿಗೆ ಎಕ್ಸ್‌ಟೆಕ್ ಆವೃತ್ತಿಯಲ್ಲಿ ಪರಿಚಯಿಸಿದೆ. ಹೊಸ ಹೀರೋ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ ಬೈಕ್ ಬ್ಲೂಟೂತ್-ಸಕ್ರಿಯಗೊಳಿಸಿದ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‌ನಿಂದ ಜೊತೆಗೆ ಇತರ ಪ್ರಯೋಜನ ಪಡೆಯುತ್ತದೆ. ವಿನ್ಯಾಸದ ವಿಷಯದಲ್ಲಿ, ಈ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ ಬೈಕ್ ಹೊಸ ಎಲ್ಇಡಿ ಹೈ ಇಂಟೆನ್ಸಿಟಿ ಪೊಸಿಷನ್ ಲ್ಯಾಂಪ್ ಮತ್ತು ಹೊಸ ಗ್ರಾಫಿಕ್ಸ್ ಅನ್ನು ಪಡೆಯುತ್ತದೆ ಅದು ಹೊಸ ಎಕ್ಸ್‌ಟೆಕ್ ಮಾದರಿಯನ್ನು ಉಳಿದ ಸ್ಪ್ಲೆಂಡರ್ ಪ್ಲಸ್ ಲೈನ್‌ಅಪ್‌ನಿಂದ ಪ್ರತ್ಯೇಕಿಸುತ್ತದೆ.

ಈ ಹೀರೋ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ ಬೈಕ್ ಹೊಸ ಸಂಪೂರ್ಣ ಡಿಜಿಟಲ್ ಕ್ಲಸ್ಟರ್ ಅನ್ನು ಬ್ಲೂಟೂತ್ ಕನೆಕ್ಟಿವಿಟಿಯೊಂದಿಗೆ ಪಡೆದುಕೊಂಡಿದೆ, ಕರೆಗಳು ಮತ್ತು SMS ಅಲರ್ಟ್, ಮೈಲೇಜ್ ಸೂಚಕ, ಎರಡು ಟ್ರಿಪ್ ಮೀಟರ್‌ಗಳು ಮತ್ತು ಕಡಿಮೆ ಇಂಧನ ಎಚ್ಚರಿಕೆಯ ಸೂಚನೆಯನ್ನು ಇದು ನೀಡುತ್ತದೆ. ಹೊಸ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ ಸಹ USB ಚಾರ್ಜಿಂಗ್ ಪೋರ್ಟ್ ಅನ್ನು ಹೊಂದಿದೆ, ಇದು ಸವಾರರು ತಮ್ಮ ಮೊಬೈಲ್‌ಗಳನ್ನು ಪ್ರಯಾಣದಲ್ಲಿರುವಾಗ ಚಾರ್ಜ್ ಮಾಡಬಹುದೆಂದು ಖಚಿತಪಡಿಸುತ್ತದೆ.

ಇನ್ನು ಇತರ ಹೊಸ ವೈಶಿಷ್ಟ್ಯಗಳು ಸೈಡ್ ಸ್ಟ್ಯಾಂಡ್ ಇಂಜಿನ್ ಕಟ್ಆಫ್ ವೈಶಿಷ್ಟ್ಯದ ಜೊತೆಗೆ ಸೈಡ್-ಸ್ಟ್ಯಾಂಡ್ ಸೂಚಕವನ್ನು ಒಳಗೊಂಡಿವೆ, ಇದು ಸೈಡ್ ಸ್ಟ್ಯಾಂಡ್ ಅನ್ನು ನಿಯೋಜಿಸಿದರೆ ಎಂಜಿನ್ ಅನ್ನು ಆಫ್ ಮಾಡುತ್ತದೆ. ಮತ್ತೊಂದು ಹೊಸ ಸುರಕ್ಷತಾ ವೈಶಿಷ್ಟ್ಯವು ಬ್ಯಾಂಕ್ ಆಂಗಲ್ ಸೆನ್ಸರ್ ರೂಪದಲ್ಲಿ ಬರುತ್ತದೆ, ಅದು ಬೀಳುವ ಸಮಯದಲ್ಲಿ ಎಂಜಿನ್ ಅನ್ನು ಆಫ್ ಮಾಡುತ್ತದೆ. ಈ ಹೊಸ ಹೀರೋ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ ಬೈಕ್ ಸ್ಪಾರ್ಕ್ಲಿಂಗ್ ಬೀಟಾ ಬ್ಲೂ, ಕ್ಯಾನ್ವಾಸ್ ಬ್ಲಾಕ್, ಟೊರ್ನಾಡೋ ಗ್ರೇ ಮತ್ತು ಪರ್ಲ್ ವೈಟ್ ಎಂಬ ನಾಲ್ಕು ಹೊಸ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.

ಈ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಟಿವಿಎಸ್ ರೇಡಿಯನ್, ಸ್ಟಾರ್ ಸಿಟಿ ಪ್ಲಸ್, ಬಜಾಜ್ ಪ್ಲಾಟಿನಾ ಮತ್ತು ಹೋಂಡಾ ಸಿಡಿ 110 ಡ್ರೀಮ್ ಬೈಕ್ ಗಳಿಗೆ ಪೈಪೋಟಿ ನೀಡುತ್ತದೆ. ಈ ವಿಭಾಗದಲ್ಲಿ ಸ್ಪ್ಲೆಂಡರ್ ಪ್ಲಸ್ ಬೈಕ್ ಹಲವು ವರ್ಷಗಲಿಂದ ನಾಯಕನಾಗಿ ಪಾರುಪತ್ಯ ಸಾಧಿಸುತ್ತಿದೆ.