ವಿಡಾ ಬ್ರಾಂಡ್ ಎಲೆಕ್ಟ್ರಿಕ್ ಸ್ಕೂಟರ್ ಟೀಸರ್ ಬಿಡುಗಡೆ ಮಾಡಿದ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಕಂಪನಿಯು ಶೀಘ್ರದಲ್ಲಿಯೇ ತನ್ನ ಉಪ ಬ್ರಾಂಡ್ ವಿಡಾ(Vida) ಅಡಿಯಲ್ಲಿ ಹೊಸ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಅಕ್ಟೋಬರ್ 7ರಂದು ಮಾರುಕಟ್ಟೆಗೆ ಪ್ರವೇಶಿಸಲಿರುವ ಹೊಸ ಇವಿ ಸ್ಕೂಟರ್ ಮಾದರಿಯ ಟೀಸರ್ ಬಿಡುಗಡೆ ಮಾಡಿದೆ.

ವಿಡಾ ಬ್ರಾಂಡ್ ಎಲೆಕ್ಟ್ರಿಕ್ ಸ್ಕೂಟರ್ ಟೀಸರ್ ಬಿಡುಗಡೆ ಮಾಡಿದ ಹೀರೋ ಮೋಟೊಕಾರ್ಪ್

ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗಾಗಿ ಹೀರೋ ಎಲೆಕ್ಟ್ರಿಕ್ ಕಂಪನಿಯು ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದರೂ ಹೀರೋ ಮೋಟೊಕಾರ್ಪ್ ಕಂಪನಿಯು ಪ್ರತ್ಯೇಕ ನಿಯಂತ್ರಣ ಹೊಂದಿರುವ ಉಪ ಇವಿ ಬ್ರಾಂಡ್ ಆರಂಭಿಸುತ್ತಿದ್ದು, ವಿಡಾ ಬ್ರಾಂಡ್ ಅಡಿ ಕಂಪನಿಯು ಪ್ರಮುಖ ಇವಿ ದ್ವಿಚಕ್ರ ವಾಹನಗಳನ್ನು ಹೊರತರಲಿದೆ.

ವಿಡಾ ಬ್ರಾಂಡ್ ಎಲೆಕ್ಟ್ರಿಕ್ ಸ್ಕೂಟರ್ ಟೀಸರ್ ಬಿಡುಗಡೆ ಮಾಡಿದ ಹೀರೋ ಮೋಟೊಕಾರ್ಪ್

ಕಳೆದ ವರ್ಷದ ಜುಲೈ 1ರಂದು ವಿಡಾ ಬ್ರ್ಯಾಂಡ್ ಅಡಿಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಯೋಜನೆ ಘೋಷಣೆ ಮಾಡಿದ್ದ ಹೀರೋ ಎಲೆಕ್ಟ್ರಿಕ್ ಕಂಪನಿಯು ಇದೀಗ ಹೊಸ ಇವಿ ಸ್ಕೂಟರ್ ಮಾದರಿಗಾಗಿ ವಿಭಿನ್ನವಾದ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆ ಮಾಡುತ್ತಿದೆ.

ವಿಡಾ ಬ್ರಾಂಡ್ ಎಲೆಕ್ಟ್ರಿಕ್ ಸ್ಕೂಟರ್ ಟೀಸರ್ ಬಿಡುಗಡೆ ಮಾಡಿದ ಹೀರೋ ಮೋಟೊಕಾರ್ಪ್

ಹೊಸ ಇವಿ ಸ್ಕೂಟರ್ ಬಿಡುಗಡೆಯಾಗಿ ಕಂಪನಿಯು ಈಗಾಗಲೇ ಹೂಡಿಕೆದಾರರಿಗೆ ಮತ್ತು ತನ್ನ ಪ್ರಮುಖ ಪಾಲುದಾರ ಕಂಪನಿಗಳಿಗೆ ಆಹ್ವಾನ ನೀಡಿದ್ದು, ಹೊಸ ಇವಿ ಸ್ಕೂಟರ್ ಬಿಡುಗಡೆಗಾಗಿ ಜೈಪುರ್‌‌ದಲ್ಲಿ ಬೃಹತ್ ಪ್ರಮಾಣದ ಬಿಡುಗಡೆ ಕಾರ್ಯಕ್ಷಮ ಆಯೋಜಿಸಿದೆ.

ವಿಡಾ ಬ್ರಾಂಡ್ ಎಲೆಕ್ಟ್ರಿಕ್ ಸ್ಕೂಟರ್ ಟೀಸರ್ ಬಿಡುಗಡೆ ಮಾಡಿದ ಹೀರೋ ಮೋಟೊಕಾರ್ಪ್

ಹೊಸ ಬ್ರಾಂಡ್ ಮೂಲಕ ಮಾರುಕಟ್ಟೆಯಲ್ಲಿ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿರುವ ಹೀರೋ ಮೋಟೊಕಾರ್ಪ್ ಕಂಪನಿಯು ಹೊಸ ಸ್ಕೂಟರ್ ಬಿಡುಗಡೆಗೂ ಮುನ್ನ 100 ಮಿಲಿಯನ್ ಯುಎಸ್ಎ ಡಾಲರ್ ಜಾಗತಿಕ ಸುಸ್ಥಿರತೆ ನಿಧಿ ಘೋಷಿಸಿದೆ.

ವಿಡಾ ಬ್ರಾಂಡ್ ಎಲೆಕ್ಟ್ರಿಕ್ ಸ್ಕೂಟರ್ ಟೀಸರ್ ಬಿಡುಗಡೆ ಮಾಡಿದ ಹೀರೋ ಮೋಟೊಕಾರ್ಪ್

ಪರಿಸರವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಹೊಸ ಉದ್ಯಮಗಳನ್ನು ಪ್ರೋತ್ಸಾಹಿಸುವ ಗುರಿಯೊಂದಿಗೆ ಈ ನಿಧಿಯನ್ನು ಬಳಸಲಾಗುವುದು ಎಂದು ಹೀರೋ ಮೋಟೊಕಾರ್ಪ್ ಅಧ್ಯಕ್ಷ ಪವನ್ ಮುಂಜಾಲ್ ಮಾಹಿತಿ ನೀಡಿದ್ದು, ಭವಿಷ್ಯದ ಯೋಜನೆಗಳೊಂದಿಗೆ ಕಂಪನಿಯು ಭಾರೀ ಪ್ರಮಾಣದ ಆದಾಯದ ನೀರಿಕ್ಷೆಯಲ್ಲಿದೆ.

ವಿಡಾ ಬ್ರಾಂಡ್ ಎಲೆಕ್ಟ್ರಿಕ್ ಸ್ಕೂಟರ್ ಟೀಸರ್ ಬಿಡುಗಡೆ ಮಾಡಿದ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಕಂಪನಿಯು ಕೇವಲ ತನ್ನ ಹೊಸ ಯೋಜನೆಗಳಿಗೆ ಮಾತ್ರವಲ್ಲದೆ ಹಲವು ಇವಿ ಸ್ಟಾರ್ಟ್ಅಪ್ ಕಂಪನಿಗಳ ಮೇಲೆ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದ್ದು, ಹೊಸ ಬಂಡವಾಳ ಯೋಜನೆ ಅಡಿ ಮತ್ತಷ್ಟು ಇವಿ ಸ್ಕೂಟರ್‌ಗಳು ಶೀಘ್ರದಲ್ಲಿಯೇ ಮಾರುಕಟ್ಟೆ ಪ್ರವೇಶಿಸಲಿವೆ.

ವಿಡಾ ಬ್ರಾಂಡ್ ಎಲೆಕ್ಟ್ರಿಕ್ ಸ್ಕೂಟರ್ ಟೀಸರ್ ಬಿಡುಗಡೆ ಮಾಡಿದ ಹೀರೋ ಮೋಟೊಕಾರ್ಪ್

ದೇಶಾದ್ಯಂತ ತೈಲ ಬೆಲೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನಗಳ ನಿರ್ವಹಣಾ ವೆಚ್ಚದಲ್ಲಿ ಭಾರೀ ಏರಿಕೆಯಾಗುತ್ತಿದ್ದು, ಹೊಸ ವಾಹನ ಖರೀದಿದಾರರಿಗೆ ಪರಿಸರ ಸ್ನೇಹಿ ಮತ್ತು ಅತಿ ಕಡಿಮೆ ನಿರ್ವಹಣಾ ವೆಚ್ಚ ಹೊಂದಿರುವ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿವೆ.

ವಿಡಾ ಬ್ರಾಂಡ್ ಎಲೆಕ್ಟ್ರಿಕ್ ಸ್ಕೂಟರ್ ಟೀಸರ್ ಬಿಡುಗಡೆ ಮಾಡಿದ ಹೀರೋ ಮೋಟೊಕಾರ್ಪ್

ಹೀಗಾಗಿ ಹೀರೋ ಮೋಟೊಕಾರ್ಪ್ ಕಂಪನಿಯು ತನ್ನ ಮುಖ್ಯ ಬ್ರಾಂಡ್ ಅಡಿಯಲ್ಲಿ ಬದಲಾಗಿ ಪ್ರತ್ಯೇಕ ಬ್ರಾಂಡ್ ಮೂಲಕ ಇವಿ ವಾಹನಗಳನ್ನು ಅಭಿವೃದ್ದಿಗೊಳಿಸಿ ಮಾರಾಟ ಮಾಡುವ ಯೋಜನೆ ಹೊಂದಿದ್ದು, ಆಂಧ್ರಪ್ರದೇಶದ ಚಿತ್ತೂರಿನಲ್ಲಿರುವ ಹೀರೋ ಮೋಟೊಕಾರ್ಪ್ ದ್ವಿಚಕ್ರ ವಾಹನ ಉತ್ಪಾದನಾ ಘಟಕದಲ್ಲಿಯೇ ಪ್ರತ್ಯೇಕವಾಗಿ ಇವಿ ವಾಹನ ಅಭಿವೃದ್ದಿ ಮತ್ತು ಉತ್ಪಾದನಾ ಘಟಕ ನಿರ್ಮಿಸುತ್ತಿದೆ.

ವಿಡಾ ಬ್ರಾಂಡ್ ಎಲೆಕ್ಟ್ರಿಕ್ ಸ್ಕೂಟರ್ ಟೀಸರ್ ಬಿಡುಗಡೆ ಮಾಡಿದ ಹೀರೋ ಮೋಟೊಕಾರ್ಪ್

ಹೊಸ ಇವಿ ವಾಹನ ಉತ್ಪಾದನಾ ಘಟಕಕ್ಕೆ ಹೀರೋ ಕಂಪನಿಯು ಗಾರ್ಡನ್ ಫ್ಯಾಕ್ಟರಿ ಎಂದು ನಾಮಕರಣ ಮಾಡಿದ್ದು, ಹೊಸ ವಾಹನ ಉತ್ಪಾದನಾ ಘಟಕದಲ್ಲಿ ಬ್ಯಾಟರಿ ಪ್ಯಾಕ್ ತಯಾರಿಕೆ, ರೋಡ್ ಟೆಸ್ಟಿಂಗ್, ವಾಹನ ಜೋಡಣೆ ಮತ್ತು ವೆಹಿಕಲ್ ಎಂಡ್ ಆಫ್ ಲೈನ್ ಟೆಸ್ಟಿಂಗ್(EOL) ಸೌಲಭ್ಯಗಳನ್ನು ಅಳವಡಿಸಿಕೊಂಡಿದೆ.

ವಿಡಾ ಬ್ರಾಂಡ್ ಎಲೆಕ್ಟ್ರಿಕ್ ಸ್ಕೂಟರ್ ಟೀಸರ್ ಬಿಡುಗಡೆ ಮಾಡಿದ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಕಂಪನಿಯ ಹೊಸ ಇವಿ ಸ್ಕೂಟರ್‌ಗಳ ಕುರಿತಾಗಿ ಯಾವುದೇ ತಾಂತ್ರಿಕ ಮಾಹಿತಿ ಲಭ್ಯವಿಲ್ಲವಾದರೂ ಹೊಸ ಇವಿ ಸ್ಕೂಟರ್ ಮಾದರಿಗಳು ಶೀಘ್ರದಲ್ಲೇ ರೋಡ್ ಟೆಸ್ಟಿಂಗ್ ಆರಂಭಿಸಲಿದ್ದು, ಹೊಸ ಸ್ಕೂಟರ್‌ಗಳು ಇತ್ತೀಚೆಗೆ ಬಿಡುಗಡೆಯಾದ ಓಲಾ, ಸಿಂಪಲ್ ಎನರ್ಜಿ ಮಾದರಿಗಳಲ್ಲಿನ ಮೈಲೇಜ್‌ಗೆ ಪೈಪೋಟಿಯಾಗಿ ಬಜೆಟ್ ಬೆಲೆಯಲ್ಲಿ ಬಿಡುಗಡೆಯಾಗಲಿವೆ.

ವಿಡಾ ಬ್ರಾಂಡ್ ಎಲೆಕ್ಟ್ರಿಕ್ ಸ್ಕೂಟರ್ ಟೀಸರ್ ಬಿಡುಗಡೆ ಮಾಡಿದ ಹೀರೋ ಮೋಟೊಕಾರ್ಪ್

ಬಿಡುಗಡೆಯಾಗಲಿರುವ ಹೀರೋ ಮೊದಲ ಇವಿ ಸ್ಕೂಟರ್ ಸಹಭಾಗೀತ್ವ ಕಂಪನಿಯಾಗಿರುವ ಗೊಗೊರೊ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಾದ ವಿವಾ ಎನ್ನುವ ಹೆಸರಿನಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಈಗಾಗಲೇ ಕೇಂದ್ರ ಸಾರಿಗೆ ಇಲಾಖೆಯಲ್ಲೂ ಹೊಸ ವಾಹನ ಬಿಡುಗಡೆಗಾಗಿ ನೋಂದಣಿ ಕೂಡಾ ಮಾಡಲಾಗಿದೆ.

ವಿಡಾ ಬ್ರಾಂಡ್ ಎಲೆಕ್ಟ್ರಿಕ್ ಸ್ಕೂಟರ್ ಟೀಸರ್ ಬಿಡುಗಡೆ ಮಾಡಿದ ಹೀರೋ ಮೋಟೊಕಾರ್ಪ್

ಗೊಗೊರೊ ಕಂಪನಿಯು ಸದ್ಯ ತೈವಾನ್‌ನಲ್ಲಿ ವಿವಿಧ ಮಾದರಿಯ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ನಿರ್ಮಾಣಗೊಂದಿಗೆ ಸೌರವಿದ್ಯುತ್ ಮೂಲಕವೇ ಬ್ಯಾಟರಿ ಸ್ವಾಪಿಂಗ್ ಸೌಲಭ್ಯವನ್ನು ಜೋಡಣೆ ಮಾಡುವಲ್ಲಿ ಯಶಸ್ವಿ ಕಂಡುಕೊಂಡಿದ್ದು, ಹೀರೋ ಕಂಪನಿಯು ಕೂಡಾ ಇದೀಗ ಗೊಗೊರೊ ಜೊತೆಗೂಡಿ ಹೊಸ ಉದ್ಯಮದಲ್ಲಿ ತೊಡಗಿಸಿಕೊಳ್ಳುತ್ತಿದೆ.

ವಿಡಾ ಬ್ರಾಂಡ್ ಎಲೆಕ್ಟ್ರಿಕ್ ಸ್ಕೂಟರ್ ಟೀಸರ್ ಬಿಡುಗಡೆ ಮಾಡಿದ ಹೀರೋ ಮೋಟೊಕಾರ್ಪ್

ಎಲೆಕ್ಟ್ರಿಕ್ ವಾಹನಗಳ ಬಳಕೆ ಆಸಕ್ತಿ ಇದ್ದರೂ ಕೂಡಾ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ಇವಿ ವಾಹನಗಳ ಬ್ಯಾಟರಿ ರೇಂಜ್ ಸಾಮಾರ್ಥ್ಯವು ಖರೀದಿಗೆ ಹಿಂದೇಟು ಹಾಕುವಂತೆ ಮಾಡಿದ್ದು, ಈ ಸಮಸ್ಯೆ ನಿವಾರಣೆಗಾಗಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳಿಗೆ ತ್ವರಿತವಾಗಿ ಚಾರ್ಜಿಂಗ್ ಒದಗಿಸಲು ಬ್ಯಾಟರಿ ವಿನಿಮಯ ಕೇಂದ್ರಗಳನ್ನು ನಿರ್ಮಾಣ ಮಾಡುತ್ತಿವೆ.

ವಿಡಾ ಬ್ರಾಂಡ್ ಎಲೆಕ್ಟ್ರಿಕ್ ಸ್ಕೂಟರ್ ಟೀಸರ್ ಬಿಡುಗಡೆ ಮಾಡಿದ ಹೀರೋ ಮೋಟೊಕಾರ್ಪ್

ಬ್ಯಾಟರಿ ವಿನಿಯಮ ಕೇಂದ್ರಗಳು ಎಲೆಕ್ಟ್ರಿಕ್ ವಾಹನಗಳಿಗೆ ತ್ವರಿತವಾಗಿ ಬ್ಯಾಟರಿ ಸೌಲಭ್ಯಗಳನ್ನು ಒದಗಿಸಬಹುದಾಗಿದ್ದು, ಬ್ಯಾಟರಿ ರೇಂಜ್ ಆಧಾರದ ಮೇಲೆ ಇಂತಿಷ್ಟು ಪ್ರಮಾಣದ ದರ ಪಾವತಿಸಿಬೇಕಾಗುತ್ತದೆ.

ವಿಡಾ ಬ್ರಾಂಡ್ ಎಲೆಕ್ಟ್ರಿಕ್ ಸ್ಕೂಟರ್ ಟೀಸರ್ ಬಿಡುಗಡೆ ಮಾಡಿದ ಹೀರೋ ಮೋಟೊಕಾರ್ಪ್

ಬ್ಯಾಟರಿ ವಿನಿಮಯದ ವೇಳೆ ಗ್ರಾಹಕರು ತಮ್ಮ ಬಳಿಯಿರುವ ಚಾರ್ಜ್ ಮುಗಿದಿರುವ ಬ್ಯಾಟರಿಯನ್ನು ವಿನಿಮಯ ಕೇಂದ್ರಗಳಿಗೆ ಹಿಂದಿರುಗಿಸುವ ಮೂಲಕ ಚಾರ್ಜ್ ಮಾಡಲಾದ ಬ್ಯಾಟರಿ ಪಡೆದುಕೊಳ್ಳುವ ವ್ಯವಸ್ಥೆ ಇದಾಗಿದ್ದು, ಹೊಸ ಸೌಲಭ್ಯವು ಚಾರ್ಜಿಂಗ್ ಸಮಯವನ್ನು ಉಳಿಸುವ ಮೂಲಕ ಬ್ಯಾಟರಿ ಖಾಲಿಯಾದ ತಕ್ಷಣವೇ ಮತ್ತೊಂದು ಬ್ಯಾಟರಿ ಪಡೆದುಕೊಳ್ಳಲು ಸಹಕಾರಿಯಾಗುತ್ತದೆ.

Article Published On: Tuesday, September 27, 2022, 8:45 [IST]
English summary
Hero vida electric scooter teaser ahead of unveiled
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+