ಮತ್ತೆ ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಹೀರೋ ಎಕ್ಸ್‌ಪಲ್ಸ್ 200 ಬೈಕ್

ಹೆಚ್ಚುತ್ತಿರುವ ಇನ್‌ಪುಟ್ ವೆಚ್ಚವನ್ನು ಭಾಗಶಃ ಸರಿದೂಗಿಸಲು ದೇಶದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕರಾದ ಹೀರೋ ಮೋಟೋಕಾರ್ಪ್ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಮೋಟಾರ್‌ಸೈಕಲ್‌ಗಳು ಮತ್ತು ಸ್ಕೂಟರ್‌ಗಳ ಬೆಲೆಗಳನ್ನು ಪರಿಷ್ಕರಿಸಿದೆ. ಈ ಬೆಲೆ ಪರಿಷ್ಕರಣೆಯು ಪ್ರಸ್ತುತ ಮೂರು ರೂಪಾಂತರಗಳನ್ನು ಒಳಗೊಂಡಿರುವ ಹೀರೋ ಎಕ್ಸ್‌ಪಲ್ಸ್ 200 ಬೈಕ್ ಮೇಲೆ ಪರಿಣಾಮ ಬೀರುತ್ತದೆ.

ಮತ್ತೆ ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಹೀರೋ ಎಕ್ಸ್‌ಪಲ್ಸ್ 200 ಬೈಕ್

ಬೆಲೆ ಏರಿಕೆಯ ಬಳಿಕ ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಸ್ಟ್ಯಾಂಡರ್ಡ್ ಆವೃತ್ತಿಯ ಬೆಲೆಯು ರೂ.1,26,778 ಗಳಾದರೆ ಎಕ್ಸ್‌ಪಲ್ಸ್ 200ಟಿ ರೂಪಾಂತರದ ಬೆಲೆಯು ರೂ.1,24,278 ಮತ್ತು ಹೀರೋ ಎಕ್ಸ್‌ಪಲ್ಸ್ 200 4ವಿ ರೂಪಾಂತರದ ಬೆಲೆಯು ರೂ.1,35,978 ಗಳಾಗಿದೆ. ಹೀರೋ ಎಕ್ಸ್‌ಪಲ್ಸ್ 200 4ವಿ ಯಾವಾಗಲೂ ನೈಜ ಆಫ್-ರೋಡ್ ಸಾಮರ್ಥ್ಯ ಹೊಂದಿರುವ ಅತ್ಯಂತ ಸಮರ್ಥ ಎಂಟ್ರಿ ಲೆವೆಲ್ ಅಡ್ವೆಂಚರ್ ಬೈಕ್ ಆಗಿದೆ. ಹೀರೋ ಎಕ್ಸ್‌ಪಲ್ಸ್ 200 ಕಡಿಮೆ ತೂಕ ಮತ್ತು ವೇಗದ ಆಫ್-ರೋಡ್ ಸಾಮರ್ಥ್ಯದೊಂದಿಗೆ ಸಾಕಷ್ಟು ಜನಪ್ರಿಯ ಮಾದರಿಯಾಗಿದೆ.

ಮತ್ತೆ ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಹೀರೋ ಎಕ್ಸ್‌ಪಲ್ಸ್ 200 ಬೈಕ್

ಈ ಹೀರೋ ಎಕ್ಸ್‌ಪಲ್ಸ್ 200 ಬೈಕ್ ಬಗ್ಗೆ ಹೇಳುವುದಾದರೆ, ಈ ಬೈಕಿನಲ್ಲಿ 199.6 ಸಿಸಿ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 8,500 ಆರ್‌ಪಿಎಂನಲ್ಲಿ 17.8 ಬಿಹೆಚ್‌ಪಿ ಪವರ್ ಮತ್ತು 6,400 ಆರ್‌ಪಿಎಂನಲ್ಲಿ 16.4 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಐದು-ಸ್ಪೀಡ್ ಗೇರ್‌ಬಾಕ್ಸ್‌ ಅನ್ನು ಜೋಡಿಸಲಾಗಿದೆ.

ಮತ್ತೆ ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಹೀರೋ ಎಕ್ಸ್‌ಪಲ್ಸ್ 200 ಬೈಕ್

ಈ ಬೈಕಿನಲ್ಲಿ ಏರ್/ಆಯಿಲ್-ಕೂಲಿಂಗ್ ಮತ್ತು ಫ್ಯೂಯಲ್ ಇಂಜೆಕ್ಷನ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ. ಹೀರೋ ಎಕ್ಸ್‌ಪಲ್ಸ್ 200 ಬೈಕ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದ ಬಳಿಕ ಹಿಂದಿನ ಮಾದರಿಗಿಂತ ತೂಕ ಹೆಚ್ಚಾಗಿದೆ. ಈ ಹೊಸ ಹೀರೋ ಎಕ್ಸ್‌ಪಲ್ಸ್ 200 ಬೈಕ್ 157 ಕೆಜೆ ತೂಕವನ್ನು ಒಳಗೊಂಡಿದೆ. ಜನಪ್ರಿಯ ಹೀರೋ ಎಕ್ಸ್‌ಪಲ್ಸ್ 200 ಬೈಕಿನಲ್ಲಿ ಎಕ್ಸಾಸ್ಟ್ ಪೈಪಿನ ಸ್ಥಾನವನ್ನು ಬದಲಾಯಿಸಲಾಗಿದೆ.

ಮತ್ತೆ ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಹೀರೋ ಎಕ್ಸ್‌ಪಲ್ಸ್ 200 ಬೈಕ್

ಜನಪ್ರಿಯ ಬೈಕಿನ ಎಂಜಿನ್ ಬೆಲ್ಲಿ-ಪ್ಯಾನ್ ಅನ್ನು ಮರುವಿನ್ಯಾಸಗೊಳಿಸಲಾಗಿದೆ. ಬಿಎಸ್-6 ಎಕ್ಸ್‌ಪಲ್ಸ್ ಮೊದಲಿನಂತೆಯೇ 220 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಅನ್ನು ಹೊಂದಿದೆ. ಇನ್ನು ಈ ಬೈಕಿನ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ 37 ಎಂಎಂ ಲಾಂಗ್-ಟ್ರಾವೆಲ್ ಟೆಲಿಸ್ಕೋಪಿಕ್ ಫೋರ್ಕ್‌ಗಳನ್ನು ಮತ್ತು ಹಿಂಭಾಗದಲ್ಲಿ 10-ಹಂತದ ಹೊಂದಾಣಿಕೆ ಮಾಡಬಹುದಾದ ಮೊನೊ-ಶಾಕ್ ಸೆಟಪ್ ಅನ್ನು ಒಳಗೊಂಡಿದೆ.

ಮತ್ತೆ ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಹೀರೋ ಎಕ್ಸ್‌ಪಲ್ಸ್ 200 ಬೈಕ್

ಇನ್ನು ಪ್ರಮುಖವಾಗಿ ಈ ಬೈಕಿನ ಬ್ರೇಕಿಂಗ್ ಸಿಸ್ಟಂಗಾಗಿ ಮುಂಭಾಗದಲ್ಲಿ 276 ಎಂಎಂ ಪೆಟಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಪೆಟಲ್ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಸಿಂಗಲ್-ಚಾನೆಲ್ ಎಬಿಎಸ್ ಅನ್ನು ಕೂಡ ಅಳವಡಿಸಲಾಗಿದೆ.

ಮತ್ತೆ ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಹೀರೋ ಎಕ್ಸ್‌ಪಲ್ಸ್ 200 ಬೈಕ್

ಜನಪ್ರಿಯ ಹೀರೋ ಎಕ್ಸ್‌ಪಲ್ಸ್ 200 ಬೈಕಿನಲ್ಲಿ ಎಲ್‌ಇಡಿ ಹೆಡ್‌ಲೈಟ್, ಎಲ್‌ಇಡಿ ಟೈಲ್‌ಲೈಟ್, ಬ್ಲೂಟೂತ್ ಕನೆಕ್ಟ್ ಆಗಿರುವ ಇನ್ಸ್ ಟ್ರೂಮೆಂಟ್ ಕನ್ಸೋಲ್ ಮತ್ತು ಮತ್ತು ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಅನ್ನು ಹೊಂದಿದೆ. ಎಕ್ಸ್‌ಪಲ್ಸ್ 200 ಬೈಕ್ ವೈಟ್, ಮ್ಯಾಟ್ ಗ್ರೀನ್, ಮ್ಯಾಟ್ ಗ್ರೇ, ಸ್ಪೋರ್ಟ್ಸ್ ರೆಡ್ ಮತ್ತು ಪ್ಯಾಂಥರ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

ಮತ್ತೆ ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಹೀರೋ ಎಕ್ಸ್‌ಪಲ್ಸ್ 200 ಬೈಕ್

ಇನ್ನು ಹೀರೋ ಮೋಟೋಕಾರ್ಪ್ ಹೀರೋ ಕನೆಕ್ಟ್ ಎಂಬ ತನ್ನ ಕನೆಕ್ಟಿವಿಟಿ ಫೀಚರ್ ಅನ್ನು ಪರಿಚಯಿಸಿತ್ತು. ಈ ಹೀರೋ ಕನೆಕ್ಟಿವಿಟಿ ಫೀಚರ್ಸ್ ದ್ವಿಚಕ್ರ ವಾಹನಗಳ ಮಾರಾಟವನ್ನು ಹೆಚ್ಚಿಸಲು ನೆರವಾಗಿದೆ. ಕನೆಕ್ಟಿವಿಟಿ ಫೀಚರ್ ಆಯ್ದ ನಗರಗಳಲ್ಲಿನ ಡೀಲರ್‌ಶಿಪ್‌ಗಳಲ್ಲಿ ಇದು ಲಭ್ಯವಿತ್ತು. ಇದೇ ರೀತಿ ಹೀರೋ ಕನೆಕ್ಟ್ ಹಲವಾರು ಕನೆಕ್ಟಿವಿಟಿ ಫೀಚರ್ಸ್ ಗಳನ್ನು ನೀಡುತ್ತದೆ. ಈಗ ಟಾಪ್ಲ್ ಅಲರ್ಟ್ ಫೀಚರ್ ಎಕ್ಸ್‌ಪಲ್ಸ್ 200 ಬೈಕಿನಲ್ಲಿದೆ.

ಮತ್ತೆ ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಹೀರೋ ಎಕ್ಸ್‌ಪಲ್ಸ್ 200 ಬೈಕ್

ಇದು ಬೈಕಿ ಉರುಳಿದರೆ ಆಟೋಮ್ಯಾಟಿಕ್ ಅಪ್ಲಿಕೇಶನ್ ನೋಟಿಫಿಕೇಶನ್ ಕಳುಹಿಸಿ ಮತ್ತು ಎಸ್‌ಎಂಎಸ್ ಅನ್ನು ತುರ್ತು ಸಂಪರ್ಕಗಳಿಗೆ ಕಳುಹಿಸಲಾಗುತ್ತದೆ. ನೋಂದಾಯಿತ ಮೊಬೈಲ್ ಸಂಖ್ಯೆಗೆ ನೋಟಿಫಿಕೇಶನ್ ಅನ್ನು ಕಳುಹಿಸಲಾಗುತ್ತದೆ. ವಾಹನ ಉರುಳಿಬಿದ್ದಾಗ ಬಳಕೆದಾರರು ತಮಗೆ ನೋಟಿಫಿಕೇಶನ್ ಗಾಗಿ ತುರ್ತು ಸಂಪರ್ಕಗಳನ್ನು ಆಯ್ಕೆ ಮಾಡಬಹುದು. ಅಪಘಾತದ ಸಂದರ್ಭದಲ್ಲಿ ಸಕಾಲಿಕ ವೈದ್ಯಕೀಯ ಸಹಾಯವು ನಿರ್ಣಾಯಕವಾಗಿರುವುದರಿಂದ ಈ ವೈಶಿಷ್ಟ್ಯವು ಜೀವ ರಕ್ಷಕವಾಗಬಹುದು.

ಮತ್ತೆ ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಹೀರೋ ಎಕ್ಸ್‌ಪಲ್ಸ್ 200 ಬೈಕ್

ವಾಹನ ಉರುಳಿ ಬಿದ್ದಾಗ ನೋಟಿಫಿಕೇಶನ್ ಸ್ವೀಕರಿಸಿದ ನಂತರ, ತುರ್ತು ಸಂಪರ್ಕಗಳು ಪರಿಸ್ಥಿತಿಗೆ ತ್ವರಿತವಾಗಿ ಪ್ರತಿಕ್ರಿಯಿಸಬಹುದು.ಪರಿಸ್ಥಿತಿ ಅಗತ್ಯವಿದ್ದಲ್ಲಿ ವೈದ್ಯಕೀಯ ಸಹಾಯವನ್ನು ಕೋರಬಹುದು. ಇನ್ನು ಹೀರೋ ಕನೆಕ್ಟ್ ಅಪ್ಲಿಕೇಶನ್ ಟಾಪಲ್ ಅಲರ್ಟ್, ಟ್ರಿಪ್ ಅನಾಲಿಸಿಸ್, ಲೈವ್ ವೆಹಿಕಲ್ ಟ್ರ್ಯಾಕಿಂಗ್, ಟೌ ಅಲರ್ಟ್, ಜಿಯೋ-ಫೆನ್ಸ್ ಅಲರ್ಟ್, ಹೀರೋ ಲೊಕೇಟ್, ಸ್ಪೀಡ್ ಅಲರ್ಟ್ ಮುಂತಾದ ಫೀಚರ್ ಗಳನ್ನು ಕೂಡ ಹೊಂದಿವೆ.

ಮತ್ತೆ ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಹೀರೋ ಎಕ್ಸ್‌ಪಲ್ಸ್ 200 ಬೈಕ್

ಈ ಹೀರೋ ಎಕ್ಸ್‌ಪಲ್ಸ್ 200 4ವಿ ಯಾವಾಗಲೂ ನೈಜ ಆಫ್-ರೋಡ್ ಸಾಮರ್ಥ್ಯ ಹೊಂದಿರುವ ಅತ್ಯಂತ ಸಮರ್ಥ ಎಂಟ್ರಿ ಲೆವೆಲ್ ಅಡ್ವೆಂಚರ್ ಬೈಕ್ ಆಗಿದೆ. ಈಗಲೂ ಹೊಸ ಬೈಕ್ ಕೈಗೆಟುಕುವ ಬೆಲೆಯನ್ನು ಹೊಂದಿದೆ. ಇನ್ನು ರಾಯಲ್ ಎನ್ ಫೀಲ್ಡ್ ಹಿಮಾಲಯನ್ ಮೇಲಿನ ವಿಭಾಗದಲ್ಲಿ ಗಣನೀಯವಾಗಿ ಹೆಚ್ಚಿನ ಬೆಲೆಯನ್ನು ಹೊಂದಿರುವುದರಿಂದ ಇದು ಯಾವುದೇ ನೇರ ಪ್ರತಿಸ್ಪರ್ಧಿ ಹೊಂದಿಲ್ಲ. ಹೀರೋ ಎಕ್ಸ್‌ಪಲ್ಸ್ 200 4ವ್ಯಾಲ್ಸ್ ಹೊಸ ಮನವಿಯೊಂದಿಗೆ ಪರಿಚಯಿಸಲು ಸಣ್ಣ ನವೀಕರಣಗಳನ್ನು ನೀಡುತ್ತದೆ ಮತ್ತು ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿದೆ. ಅಲ್ಲದೇ ಕೈಗೆಟುಕುವ ಬೆಲೆಯನ್ನು ಹೊಂದಿರುವುದರಿಂದ ಭಾರತದ ಹೆಚ್ಚಿನ ಆಫ್-ರೋಡ್ ಪ್ರೇಮಿಗಳನ್ನು ಈ ಬೈಕ್ ಸೆಳದಿದೆ.

ಮತ್ತೆ ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಹೀರೋ ಎಕ್ಸ್‌ಪಲ್ಸ್ 200 ಬೈಕ್

ಹೀರೋ ಎಕ್ಸ್‌ಪಲ್ಸ್ 200 4ವಿ ಬೈಕಿನ ಆಕ್ಸೆಸರೀಸ್ ಪಟ್ಟಿಯಲ್ಲಿ, ಮ್ಯಾಗ್ನೆಟಿಕ್ ಟ್ಯಾಂಕ್ ಬ್ಯಾಗ್ ಮತ್ತು ಟೈಲ್ ಬ್ಯಾಗ್ ನಂತಹ ಲಗೇಜ್ ಆಯ್ಕೆಗಳನ್ನು ಆಯ್ಕೆಯ ಎಕ್ಸ್ಟ್ರಾಗಳ ಪಟ್ಟಿಯು ಒಳಗೊಂಡಿದೆ. ಕಂಪನಿಯು ಮೋಟೋಕ್ರಾಸ್ ಹೆಲ್ಮೆಟ್ ಅನ್ನು ನೀಡಲಿದ್ದು, ಇದರಲ್ಲಿ ಎಕ್ಸ್ ಪಲ್ಸ್ 200 ಬ್ರ್ಯಾಂಡಿಂಗ್ ಮತ್ತು ಹೊಂದಾಣಿಕೆಯ ಗ್ರಾಫಿಕ್ಸ್ ಇರುತ್ತದೆ. ಮೊಬೈಲ್ ಹೋಲ್ಡರ್ ಆಯ್ಕೆಯ ಪ್ಯಾಕೇಜ್‌ನ ಭಾಗವಾಗಿದೆ. ಇನ್ನು ಬೈಕ್ ಟ್ಯಾಂಕ್ ಪ್ಯಾಡ್-ಮೌಂಟಡ್ ನೀ ಪ್ಯಾಡ್‌ಗಳು ಮತ್ತು ನಾಲ್ಕು ಸೀಟ್ ಆಯ್ಕೆಗಳಿವೆ,

Most Read Articles

Kannada
English summary
Hero xpulse 200 range gets price increased in july details
Story first published: Thursday, July 7, 2022, 19:13 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X