ದೀಪಾವಳಿ ಹಬ್ಬದ ಪ್ರಯುಕ್ತ ಹೋಂಡಾ ಆಕ್ಟಿವಾ ಸ್ಕೂಟರ್ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ (ಹೆಚ್‌ಎಂಎಸ್‌ಐ) ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾಗುವ ತನ್ನ ಜನಪ್ರಿಯ ಆಕ್ಟಿವಾ ಸ್ಕೂಟರ್ ಮೇಲೆ ದೀಪಾವಳಿ ಹಬ್ಬದ ಪ್ರಯುಕ್ತ ಭರ್ಜರಿ ಆಫರ್ ಅನ್ನು ಘೋಷಿಸಿದೆ.

ಹೋಂಡಾ ಆಕ್ಟಿವಾ ಸ್ಕೂಟರ್ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಈ ಸೀಮಿತ ಅವಧಿಯ ಕೊಡುಗೆಯ ಅಡಿಯಲ್ಲಿ, ಹೋಂಡಾ ಆಕ್ಟಿವಾ ಸ್ಕೂಟರ್ ಮೇಲೆ ಶೇಕಡಾ 5 ರಷ್ಟು (ರೂ. 5,000 ವರೆಗೆ) ಕ್ಯಾಶ್‌ಬ್ಯಾಕ್‌ ಲಭ್ಯವಿರುತ್ತದೆ. ಈ ಕ್ಯಾಶ್‌ಬ್ಯಾಕ್, ಆಯ್ದ ಡೆಬಿಟ್/ಕ್ರೆಡಿಟ್ ಕಾರ್ಡ್‌ಗಳಲ್ಲಿನ EMI ವಹಿವಾಟುಗಳಿಗೆ ಮಾತ್ರ ಮಾನ್ಯವಾಗಿರುತ್ತದೆ. ಕ್ಯಾಶ್‌ಬ್ಯಾಕ್ ಕೊಡುಗೆಯ ಹೊರತಾಗಿ, ಹೋಂಡಾ 2ವೀಲರ್ಸ್ ಇಂಡಿಯಾ ಸ್ಕೂಟರ್‌ನಲ್ಲಿ ಶೂನ್ಯ ಡೌನ್‌ಪೇಮೆಂಟ್ ಮತ್ತು ನೋ ಕಾಸ್ಟ್ ಇಎಂಐ ಆಯ್ಕೆಯನ್ನು ಸಹ ನೀಡುತ್ತಿದೆ.

ಹೋಂಡಾ ಆಕ್ಟಿವಾ ಸ್ಕೂಟರ್ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಖರೀದಿದಾರರು ಕೇವಲ ಒಂದು ಕೊಡುಗೆಯನ್ನು ಮಾತ್ರ ಆರಿಸಿಕೊಳ್ಳಬಹುದು ಮತ್ತು ಸ್ಕೂಟರ್ ಅನ್ನು ಖರೀದಿಸುವಾಗ ಈ ಎರಡು ಪ್ರಯೋಜನಗಳನ್ನು ಒಟ್ಟಿಗೆ ಸೇರಿಸಲು ಸಾಧ್ಯವಿಲ್ಲ ಎಂಬುದನ್ನು ಗಮನಿಸಿ. ಇದಲ್ಲದೆ, ನಿರ್ದಿಷ್ಟಪಡಿಸಿದ ಮಾನದಂಡಗಳನ್ನು ಅಡಿಯಲ್ಲಿ ಗ್ರಾಹಕರಿಗೆ ಆಯ್ದ ಹಣಕಾಸು ಪಾಲುದಾರರ ಮೂಲಕ ಹಣಕಾಸು ಯೋಜನೆಗಳು ಲಭ್ಯವಿವೆ.

ಹೋಂಡಾ ಆಕ್ಟಿವಾ ಸ್ಕೂಟರ್ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಈ ಕೊಡುಗೆಯು ಸೀಮಿತ ಅವಧಿಗೆ ಮಾತ್ರ ಮಾನ್ಯವಾಗಿರುತ್ತದೆ ಮತ್ತು ಪ್ರಯೋಜನಗಳನ್ನು ಪಡೆಯಲು ಕೊನೆಯ ದಿನಾಂಕ 2022ರ ಅಕ್ಟೋಬರ್ 31 ಆಗಿದೆ. ಹೋಂಡಾ ಆಕ್ಟಿವಾ ಶ್ರೇಣಿಯು ಎರಡು ಮಾದರಿಗಳನ್ನು ಒಳಗೊಂಡಿದೆ . ಇದು ಹೋಂಡಾ ಆಕ್ಟಿವಾ 6ಜಿ ಮತ್ತು ಆಕ್ಟಿವಾ 125 ಆಗಿದೆ.

ಹೋಂಡಾ ಆಕ್ಟಿವಾ ಸ್ಕೂಟರ್ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಪ್ರಸ್ತುತ ಹೋಂಡಾ ಆಕ್ಟಿವಾ 6ಜಿ ಸ್ಕೂಟರ್ ಬೆಲೆಯು ರೂ.73,086 ರಿಂದ ಲಭ್ಯವಿರುತ್ತದೆ. ಇನ್ನು ಆಕ್ಟಿವಾ 125 ಸ್ಕೂಟರ್ ಬೆಲೆಯು ಆಕ್ಟಿವಾ 125 ರೂ.77,062 ರಿಂದ ಲಭ್ಯವಿರುತ್ತದೆ. ಹೋಂಡಾ ಆಕ್ಟಿವಾ ದೇಶದಲ್ಲಿ ಹೆಚ್ಚು ಮಾರಾಟವಾಗುವ ಸ್ಕೂಟರ್ ಆಗಿದೆ.

ಹೋಂಡಾ ಆಕ್ಟಿವಾ ಸ್ಕೂಟರ್ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ದೇಶದಲ್ಲಿ ಮಾರಾಟವಾಗುವ ಪ್ರತಿ ಎರಡನೇ ಸ್ಕೂಟರ್ ಮತ್ತು ಪ್ರತಿ ಮೂರನೇ ದ್ವಿಚಕ್ರ ವಾಹನವು ಆಕ್ಟಿವಾ ಆಗಿರುತ್ತದೆ ಮತ್ತು ಮಾರಾಟದ ವಿಷಯದಲ್ಲಿ ಮೊದಲ ಸ್ಥಾನದಲ್ಲಿದೆ. ಮೊದಲಿಗೆ ಹೋಂಡಾ ಆಕ್ಟಿವಾ 125 ಸ್ಕೂಟರ್ ಬಗ್ಗೆ ಹೇಳುವುದಾದರೆ ಸ್ಟ್ಯಾಂಡರ್ಡ್, ಅಲಾಯ್ ಮತ್ತು ಡಿಲಕ್ಸ್ ಎಂಬ ರೂಪಾಂತರಗಳಲ್ಲಿ ಲಭ್ಯವಿದೆ.

ಹೋಂಡಾ ಆಕ್ಟಿವಾ ಸ್ಕೂಟರ್ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ವಿಶ್ವಾಸಾರ್ಹವಾದ ಹಾಗೂ ಹೆಚ್ಚು ಮೈಲೇಜ್ ನೀಡುವ ಈ ಸ್ಕೂಟರ್ ಹೆಚ್ಚು ಜನಪ್ರಿಯತೆಯನ್ನು ಗಳಿಸಿದೆ. ಈ ಹೋಂಡಾ ಆಕ್ಟಿವಾ 125 ಸ್ಕೂಟರ್ ನಲ್ಲಿ 124 ಸಿಸಿ ಏರ್-ಕೂಲ್ಡ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 6,500 ಆರ್‌ಪಿಎಂನಲ್ಲಿ 8.18 ಬಿಹೆಚ್‍ಪಿ ಪವರ್ ಮತ್ತು 5,000 ಆರ್‌ಪಿಎಂನಲ್ಲಿ 10.3 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಹೋಂಡಾ ಆಕ್ಟಿವಾ ಸ್ಕೂಟರ್ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಬಿಎಸ್ 6 ಎಂಜಿನ್ ಹೊಂದಿರುವ ಈ ಆಕ್ಟಿವಾ 125 ಸ್ಕೂಟರಿನಲ್ಲಿ ಪರಿಷ್ಕರಿಸಿದ ಎಲ್‍ಇ‍‍ಡಿ ಹೆಡ್ ಲ್ಯಾಂಪ್, ಮುಂಭಾಗ ಹಾಗೂ ಸೈಡ್‍‍ನಲ್ಲಿ ಕ್ರೋಮ್ ಟ್ರಿಮ್ ಹಾಗೂ ಇದರ ಮುಂಭಾಗದಲ್ಲಿ ಹೊಸ ಎಪ್ರಾನ್‍‍ಗಳನ್ನು ಒಳಗೊಂಡಿವೆ.

ಹೋಂಡಾ ಆಕ್ಟಿವಾ ಸ್ಕೂಟರ್ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಈ ಹೋಂಡಾ ಆಕ್ಟಿವಾ 125 ಸ್ಕೂಟರ್ ಸಸ್ಪೆಂಕ್ಷನ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಹಿಂಭಾಗದಲ್ಲಿ ಮೂರು-ಹಂತದ ಹೊಂದಾಣಿಕೆ ಮಾಡಬಹುದಾದ ಸ್ಪ್ರಿಂಗ್-ಲೋಡೆಡ್ ಹೈಡ್ರಾಲಿಕ್ ಸೆಟಪ್ ಅನ್ನು ಹೊಂದಿದೆ..

ಹೋಂಡಾ ಆಕ್ಟಿವಾ ಸ್ಕೂಟರ್ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಈ ಆಕ್ಟಿವಾ 125 ಸ್ಕೂಟರ್ ಸ್ಕೂಟರ್ ನಲ್ಲಿ ಸೆಮಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಎಸಿಜಿ ಸ್ಟಾರ್ಟರ್, ಐಡಲ್ ಸ್ಟಾಪ್-ಸ್ಟಾರ್ಟ್ ಸಿಸ್ಟಮ್ ಮತ್ತು ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ನಂತಹ ಅತ್ಯಾಧುನಿಕ ಫೀಚರ್ಸ್ ಗಳನ್ನು ಹೊಂದಿವೆ.

ಹೋಂಡಾ ಆಕ್ಟಿವಾ ಸ್ಕೂಟರ್ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಇನ್ನು ಹೋಂಡಾ ಆಕ್ಟಿವಾ 6ಜಿ ಸ್ಕೂಟರ್ ಬಗ್ಗೆ ಹೇಳುವುದಾದರೆ, ಈ ಬಿಎಸ್-6 ಆಕ್ಟಿವಾ 6ಜಿ ಸ್ಕೂಟರನ್ನು ಹೊಸ ಫೀಚರ್ ಗಳು ಮತ್ತು ಉತ್ತಮ ಗ್ರೌಂಡ್ ಕ್ಲಿಯರೆನ್ಸ್ ಮತ್ತು ಉದ್ದವಾದ ವೀಲ್‌ಬೇಸ್‌ ಅನ್ನು ಒಳಗೊಂಡಿದೆ. ಈ ಹೋಂಡಾ ಆಕ್ಟಿವಾ 6ಜಿ ಡಿಲಕ್ಸ್ ರೂಪಾಂತರದಲ್ಲಿ ಎಸಿಜಿ ಸ್ಟಾರ್ಟರ್ ಮತ್ತು ಎಲ್ಇಡಿ ಹೆಡ್‌ಲ್ಯಾಂಪ್‌ಗಳನ್ನು ಹೊಂದಿದೆ.

ಹೋಂಡಾ ಆಕ್ಟಿವಾ ಸ್ಕೂಟರ್ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಇನ್ನು ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್ ಮತ್ತು ಫ್ಯುಯಲ್ ಫಿಲ್ಲರ್ ಕ್ಯಾಪ್ ಅನ್ನು ಕೂಡ ಹೊಂದಿದೆ. ಈ ಹೋಂಡಾ ಆಕ್ಟಿವಾ 6ಜಿ ಸ್ಕೂಟರಿನಲ್ಲಿ 109 ಸಿಸಿ ಸಿಂಗಲ್-ಸಿಲಿಂಡರ್, ಏರ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 7.79 ಬಿಹೆಚ್‍ಪಿ ಪವರ್ ಮತ್ತು 8.79 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಹೋಂಡಾ ಆಕ್ಟಿವಾ ಸ್ಕೂಟರ್ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಸ್ಕೂಟರ್ ಕಂಪನಿಯ ಪಿಜಿಎಂ-ಫೈ ತಂತ್ರಜ್ಞಾನವನ್ನು ಸಹ ಒಳಗೊಂಡಿದೆ. ಇದರಿಂದಾಗಿ ಈ ಬಿಎಸ್-6 ಹೋಂಡಾ ಆಕ್ಟಿವಾ 6ಜಿ ಸ್ಕೂಟರಿಗೆ ಉತ್ತಮ ಕಾರ್ಯಕ್ಷಮತೆ ಮತ್ತು ಹೆಚ್ಚಿನ ಮೈಲೇಜ್ ಅನ್ನು ನೀಡುತ್ತದೆ. ಜನಪ್ರಿಯ ಹೋಂಡಾ ಆಕ್ಟಿವಾ 6ಜಿ ಸ್ಕೂಟರ್ ಬ್ಲ್ಯಾಕ್, ಡ್ಯಾಝಲ್ ಯೆಲ್ಲೊ, ಗ್ಲಿಟರ್ ಬ್ಲೂ ಮೆಟಾಲಿಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ಪರ್ಲ್ ಪ್ರೆಷಿಯಸ್ ವೈಟ್ ಮತ್ತು ಪರ್ಲ್ ಸ್ಪಾರ್ಟನ್ ರೆಡ್ ಎಂಬ ಬಣ್ಣಗಳ ಆಯ್ಕೆಗಳಲ್ಲಿಯೂ ಲಭ್ಯವಿದೆ.

ಹೋಂಡಾ ಆಕ್ಟಿವಾ ಸ್ಕೂಟರ್ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಹೋಂಡಾ ಆಕ್ಟಿವಾ ಹೊಸ ಪ್ರೀಮಿಯಂ ಆವೃತ್ತಿಯ ರೂಪಾಂತರವನ್ನು ಪಡೆಯುತ್ತದೆ. ಇದು ಹೋಂಡಾ ಆಕ್ಟಿವಾ ಪ್ರೀಮಿಯಂ ಎಡಿಷನ್ ಆಗಿದೆ. ಯುವ ಪೀಳಿಗೆಯನ್ನು ಗುರಿಯಾಗಿಸಿಕೊಂಡು ಹೊಸ ಹೋಂಡಾ ಆಕ್ಟಿವಾ ಪ್ರೀಮಿಯಂ ಎಡಿಷನ್ ಅನ್ನು ಬಿಡುಗಡೆಗೊಳಿಸಲಾಗಿದೆ. ಆಕ್ಟಿವಾ ಪ್ರೀಮಿಯಂ ಆವೃತ್ತಿಯ ಹಾರ್ಡ್‌ವೇರ್ ವಿಶೇಷಣಗಳು ಮತ್ತು ವೈಶಿಷ್ಟ್ಯಗಳು ಆಕ್ಟಿವಾ ಡಿಎಲ್‌ಎಕ್ಸ್ ರೂಪಾಂತರದಂತೆಯೇ ಇರುತ್ತವೆ. ಆಕ್ಟಿವಾ ತನ್ನ ಉತ್ಸಾಹಭರಿತ ಕಾರ್ಯಕ್ಷಮತೆಗಾಗಿ ಈಗಾಗಲೇ ಜನಪ್ರಿಯವಾಗಿರುವ ಕಾರಣ ಕಾರ್ಯಕ್ಷಮತೆಯ ನವೀಕರಣಗಳ ಅಗತ್ಯವಿಲ್ಲ.

ಹೋಂಡಾ ಆಕ್ಟಿವಾ ಸ್ಕೂಟರ್ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಈ ಹೊಸ ಹೋಂಡಾ ಆಕ್ಟಿವಾ ಪ್ರೀಮಿಯಂ ಎಡಿಷನ್ ಪ್ರಮುಖ ವೈಶಿಷ್ಟ್ಯವೆಂದರೆ ಗೋಲ್ಡನ್ ಬಣ್ಣದ ವ್ಹೀಲ್ ಗಳು, ಇದು ಸ್ಕೂಟರ್‌ಗೆ ಪ್ರೀಮಿಯಂ ನೋಟ ಮತ್ತು ಅನುಭವವನ್ನು ಖಚಿತಪಡಿಸುತ್ತದೆ. ಮುಂಭಾಗದಲ್ಲಿ, ಆಕ್ಟಿವಾ ಪ್ರೀಮಿಯಂ ಟರ್ನ್ ಇಂಡಿಕೇಟರ್ ಹೌಸಿಂಗ್‌ನಲ್ಲಿ ಗೋಲ್ಡ್ ಲೇಪಿತ ಕ್ರೋಮ್ ಗಾರ್ನಿಶ್ ಅನ್ನು ಪಡೆಯುತ್ತದೆ. ಮುಂಭಾಗದಲ್ಲಿರುವ ಹೋಂಡಾ ಲೋಗೋ ಕೂಡ ಅದೇ ಛಾಯೆಯನ್ನು ಒಳಗೊಂಡಿದೆ.

ಹೋಂಡಾ ಆಕ್ಟಿವಾ ಸ್ಕೂಟರ್ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಗೋಲ್ಡನ್ ಫಿನಿಶ್‌ನಲ್ಲಿ 'ಆಕ್ಟಿವಾ ಪ್ರೀಮಿಯಂ' ಲೋಗೋದೊಂದಿಗೆ ಸೈಡ್ ಪ್ರೊಫೈಲ್ ಅನ್ನು ವರ್ಧಿಸಲಾಗಿದೆ. ಸ್ಕೂಟರ್ ಕಂದು ಬಣ್ಣದ ಒಳಗಿನ ಬಾಡಿ ಮತ್ತು ಹೊಂದಾಣಿಕೆಯ ಸೀಟ್ ಕವರ್ ಅನ್ನು ಸಹ ಪಡೆಯುತ್ತದೆ. ಈ ಕಾಸ್ಮೆಟಿಕ್ ನವೀಕರಣಗಳು ಸ್ಕೂಟರ್‌ಗೆ ಹೆಚ್ಚು ರೋಮಾಂಚಕ ಪ್ರೊಫೈಲ್ ಅನ್ನು ಖಚಿತಪಡಿಸಿಸುತ್ತದೆ.

ಹೋಂಡಾ ಆಕ್ಟಿವಾ ಸ್ಕೂಟರ್ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಸ್ಟ್ಯಾಂಡರ್ಡ್ ಆಕ್ಟಿವಾ ಮಾದರಿಯ ಒಳಗಿನ ಬಾಡಿ ಮತ್ತು ಸೀಟ್ ಕವರ್ ಸಾಂಪ್ರದಾಯಿಕ ಕಪ್ಪು ಛಾಯೆಯನ್ನು ಹೊಂದಿರುತ್ತದೆ. ಈ ಆಕ್ಟಿವಾ ಪ್ರೀಮಿಯಂ ಮೂರು ಹೊಸ ಬಣ್ಣಗಳ ಆಯ್ಕೆಗಳಾದ ಮ್ಯಾಟ್ ಮಾರ್ಷಲ್ ಗ್ರೀನ್ ಮೆಟಾಲಿಕ್, ಮ್ಯಾಟ್ ಸಂಗ್ರಿಯಾ ರೆಡ್ ಮೆಟಾಲಿಕ್ ಮತ್ತು ಪರ್ಲ್ ಸೈರನ್ ಬ್ಲೂ ವಿನಲ್ಲಿ ಲಭ್ಯವಿದೆ.

Article Published On: Friday, October 21, 2022, 11:10 [IST]
English summary
Honda activa scooter available with cashback offers details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+