1 ಕೋಟಿ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ Honda Shine

ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ (ಎಚ್‌ಎಂಎಸ್‌ಐ) ತನ್ನ 125 ಸಿಸಿ ಹೋಂಡಾ ಶೈನ್ (Honda Shine) ಬೈಕ್ ಹೆಚ್ಚು ಮಾರಾಟವಾಗಿ ಹೊಸ ಮೈಲಿಗಲ್ಲು ಸಾಧಿಸಿದೆ ಎಂದು ಘೋಷಿಸಿದೆ, ಹೋಂಡಾ ಶೈನ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ 1 ಕೋಟಿ ಮಾರಾಟವಾಗಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ.

1 ಕೋಟಿ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ Honda Shine

ಹೋಂಡಾ ಶೈನ್ ಪ್ರಪಂಚದಾದ್ಯಂತ ಅತಿ ಹೆಚ್ಚು ಮಾರಾಟವಾಗುವ ಹೋಂಡಾ ಮೋಟಾರ್‌ಸೈಕಲ್ ಆಗಿದೆ. ಇದು ಭಾರತದಲ್ಲಿ 125 ಸಿಸಿ ಬೈಕ್ ವಿಭಾಗದಲ್ಲಿ ಅಗ್ರ ಸ್ಥಾನವನ್ನು ಹೊಂದಿದೆ. ಅಲ್ಲದೇ ಹೋಂಡಾ ಶೈನ್ ಶೇಕಡಾ 50 ಕ್ಕಿಂತ ಹೆಚ್ಚು ಮಾರುಕಟ್ಟೆ ಪಾಲನ್ನು ಹೊಂದಿದೆ. ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರರ್ಸ್ (SIAM) ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ ಹೋಂಡಾ ಶೈನ್ ವರ್ಷದಿಂದ ವರ್ಷಕ್ಕೆ 29 ಪ್ರತಿಶತದಷ್ಟು ಬೆಳವಣಿಗೆಯನ್ನು ಹೊಂದಿದೆ ಮತ್ತು ಈಗ 1 ಕೋಟಿ ಗ್ರಾಹಕರ ಮೈಲಿಗಲ್ಲನ್ನು ತಲುಪಿದ ಮೊದಲ 125 ಸಿಸಿ ಬೈಕ್ ಆಗಿದೆ.

1 ಕೋಟಿ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ Honda Shine

ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ, ಅಧ್ಯಕ್ಷ ಮತ್ತು ಸಿಇಒ ಅತ್ಸುಶಿ ಒಗಾಟಾ ಅವರ್ಯ್ ಈ ಸಾಧನೆಯ ಕುರಿತು ಮಾತನಾಡಿ, ವರ್ಷಗಳಿಂದ ಶೈನ್ ಪಡೆದಿರುವ ಅದ್ಭುತ ಪ್ರತಿಕ್ರಿಯೆಯಿಂದ ನಾವು ವಿನಮ್ರರಾಗಿದ್ದೇವೆ. ಭಾರತವು 2022 ಕ್ಕೆ ಅದ್ಭುತ ಶೈನ್‌ನೊಂದಿಗೆ ಸವಾರಿ ಮಾಡುತ್ತಿದೆ.

1 ಕೋಟಿ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ Honda Shine

ನಾವು ಹೊಸ ಸವಾಲುಗಳನ್ನು ಸ್ವೀಕರಿಸಲು ಮತ್ತು ನಮ್ಮ ನಿಷ್ಠಾವಂತ ಗ್ರಾಹಕರನ್ನು ಅತ್ಯುತ್ತಮ ಉತ್ಪನ್ನಗಳೊಂದಿಗೆ ಸಂತೋಷಪಡಿಸಲು ಬದ್ಧರಾಗಿದ್ದೇವೆ. HMSI ಕುಟುಂಬದ ಪರವಾಗಿ, ಬ್ರ್ಯಾಂಡ್ ಶೈನ್‌ನಲ್ಲಿ ತಮ್ಮ ಅಮೂಲ್ಯವಾದ ನಂಬಿಕೆಯನ್ನು ಇರಿಸಿದ್ದಕ್ಕಾಗಿ ನಾನು ನಮ್ಮ ಗ್ರಾಹಕರಿಗೆ ಧನ್ಯವಾದಗಳನ್ನು ಅರ್ಪಿಸಲು ಬಯಸುತ್ತೇನೆ ಎಂದು ಹೇಳಿದರು.

1 ಕೋಟಿ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ Honda Shine

ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಸೇಲ್ಸ್ ಮತ್ತು ಮಾರ್ಕೆಟಿಂಗ್ ನಿರ್ದೇಶಕ ಯದ್ವಿಂದರ್ ಸಿಂಗ್ ಗುಲೇರಿಯಾ ಅವರು ಮಾತನಾಡಿ, ಲಕ್ಷಾಂತರ ಶೈನ್ ಬಳಕೆದಾರರಿಂದ ಪಡೆದ ಪ್ರೀತಿ ಮತ್ತು ವಿಶ್ವಾಸಕ್ಕೆ ನಾವು ಗೌರವ ಮತ್ತು ಕೃತಜ್ಞರಾಗಿದ್ದೇವೆ. ಒಂದೂವರೆ ದಶಕಗಳಿಂದ ಬ್ರ್ಯಾಂಡ್ ಶೈನ್ ಇದೆ. ಅನೇಕ ತಲೆಮಾರುಗಳ ಸವಾರರಿಗೆ ನಿಜವಾದ ಒಡನಾಡಿ, ಇದು ಎಲ್ಲಾ ಪ್ರದೇಶಗಳಲ್ಲಿ ಭಾರತೀಯ ಮನೆಗಳಲ್ಲಿ ಅತ್ಯಂತ ಜನಪ್ರಿಯ ಮೋಟಾರ್‌ಸೈಕಲ್ ಬ್ರಾಂಡ್‌ಗಳಲ್ಲಿ ಒಂದಾಗಿದೆ.

1 ಕೋಟಿ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ Honda Shine

ಇದು 125cc ವಿಭಾಗದಲ್ಲಿ ವಿಶ್ವಾಸಾರ್ಹತೆ ಮತ್ತು ಗಮನಾರ್ಹ ಗುಣಮಟ್ಟದ ಮಾನದಂಡಗಳನ್ನು ನಿಜವಾಗಿ ಹೆಮ್ಮೆಯಿಂದ ಎತ್ತಿಹಿಡಿದಿದೆ. . ಗ್ರಾಹಕರ ನಿಷ್ಠೆಯನ್ನು ನಾವು ದೃಢವಾಗಿ ನಂಬುತ್ತೇವೆ ಇದು ಅದ್ಭುತ ಉತ್ಪನ್ನ ಮತ್ತು ಮಾರಾಟದ ನಂತರದ ಸೇವೆಯ ಫಲಿತಾಂಶವಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ನಾವು ನಮ್ಮ ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ನೀಡುವುದನ್ನು ಮುಂದುವರಿಸುತ್ತೇವೆ ಎಂದು ಹೇಳಿದರು.

1 ಕೋಟಿ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ Honda Shine

ಇನ್ನು ಹೋಂಡಾ ಶೈನ್ ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಜನಪ್ರಿಯ ಕಮ್ಯೂಟರ್ ಬೈಕ್ ಗಳಲ್ಲಿ ಒಂದಾಗಿದೆ. ಈ ಹೋಂಡಾ ಶೈನ್ ಬೈಕಿನಲ್ಲಿ 124 ಸಿಸಿ, ಸಿಂಗಲ್-ಸಿಲಿಂಡರ್, ನಾಲ್ಕು-ಸ್ಟ್ರೋಕ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 7500 ಆರ್‌ಪಿಎಂನಲ್ಲಿ 10.7 ಬಿಹೆಚ್‍ಪಿ ಪವರ್ ಮತ್ತು 6000 ಆರ್‌ಪಿಎಂನಲ್ಲಿ 11 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

1 ಕೋಟಿ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ Honda Shine

ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಇನ್ನು ಹೋಂಡಾ ಶೈನ್ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಮತ್ತು ಹಿಂಭಾಗದಲ್ಲಿ ಹೈಡ್ರಾಲಿಕ್ ಯುನಿಟ್ ಸಸ್ಪೆಂಕ್ಷನ್ ಸೆಟಪ್ ಅನ್ನು ಹೊಂದಿದೆ.

1 ಕೋಟಿ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ Honda Shine

ಇನ್ನು ಈ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್‌ಗಳನ್ನು ನೀಡಲಗಿದೆ, ಇದರೊಂದಿಗೆ ಮುಂಭಾಗದಲ್ಲಿ 240 ಎಂಎಂ ಡಿಸ್ಕ್ ಬ್ರೇಕ್ ಆಯ್ಕೆಯನ್ನು ಕೂಡ ನೀಡಲಾಗಿದೆ.

1 ಕೋಟಿ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ Honda Shine

ಹೋಂಡಾ ಶೈನ್ ಅನ್ನು ಮೊದಲು 2006 ರಲ್ಲಿ ಬಿಡುಗಡೆ ಮಾಡಲಾಯಿತು ಮತ್ತು 2008 ರಲ್ಲಿ ಬಿಡುಗಡೆಯಾದ ಕೇವಲ ಎರಡು ವರ್ಷಗಳ ನಂತರ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ 125 ಸಿಸಿ ಬೈಕ್ ಆಯ್ತು, 2017 ರಲ್ಲಿ, ಹೋಂಡಾ ಶೈನ್ 50 ಲಕ್ಷ ಯುನಿಟ್ ಮಾರಾಟದ ಮೈಲಿಗಲ್ಲನ್ನು ತಲುಪಿದ ಮೊದಲ 125 ಸಿಸಿ ಬೈಕ್ ಆಗಿದೆ,2018 ರ ಹೊತ್ತಿಗೆ, ಇದು 70 ಲಕ್ಷ ಯುನಿಟ್‌ಗಳ ಮಾರಾಟವನ್ನು ಸಾಧಿಸಿದೆ. 2020 ರ ವೇಳೆಗೆ ಹೋಂಡಾ ಶೈನ್ ಕುಟುಂಬವು 90 ಲಕ್ಷಕ್ಕೂ ಹೆಚ್ಚು ಗ್ರಾಹಕರನ್ನು ಸಾಧಿಸಿದೆ ಮತ್ತು ಈಗ, 2022 ರಲ್ಲಿ, ಇದು 1 ಕೋಟಿಗೂ ಹೆಚ್ಚು ಗ್ರಾಹಕರನ್ನು ಸಾಧಿಸಿದೆ.

1 ಕೋಟಿ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ Honda Shine

ಇನ್ನು ಭಾರತದಲ್ಲಿ ಅಡ್ವೆಂಚರ್ ಬೈಕ್‌ಗಳ ಬೇಡಿಕೆ ಹೆಚ್ಚಾಗುತ್ತಿದೆ. ಇದರಿಂದ ಹಲವಾರು ದ್ವಿಚಕ್ರ ವಾಹನ ಕಂಪನಿಗಳು ಭಾರತದಲ್ಲಿ ಅಡ್ವೆಂಚರ್ ಬೈಕ್ ಅನ್ನು ಬಿಡುಗಡೆಗೊಳಿಸುತ್ತಿದೆ. ಇದರ ನಡುವೆ ಜಪಾನ್ ಮೂಲದ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೋಂಡಾ ಮೋಟಾರ್‌ಸೈಕಲ್ ತನ್ನ X-ADV ಸ್ಕೂಟರ್ ಅನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಯೋಜಿಸುತ್ತಿದೆ. ಇದಕ್ಕಾಗಿ ಹೋಂಡಾ ಮೋಟಾರ್‌ಸೈಕಲ್ ಕಂಪನಿಯು X-ADV ಸ್ಕೂಟರ್ ಗಾಗಿ ಟ್ರೇಡ್‌ಮಾರ್ಕ್ ಅನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಲ್ಲಿಸಲಾಯಿತು ಮತ್ತು ಅದನ್ನು ಈಗ ಅನುಮೋದಿಸಲಾಗಿದೆ.

1 ಕೋಟಿ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ Honda Shine

ಒಟ್ಟಾರೆಯಾಗಿ ಹೋಂಡಾ ಶೈನ್ 1 ಕೋಟಿಗೂ ಹೆಚ್ಚು ಮಾರಾಟವಾಗಿ ಹೊಸ ಮೈಲಿಗಲ್ಲನ್ನು ಸಾಧಿಸಿದ್ದಾರೆ. ಈ ಹೋಂಡಾ ಶೈನ್ ಮಾದರಿಯು ಕಂಪನಿಗೆ ಮಾರಾಟದಲ್ಲಿ ದೊಡ್ಡ ಕೊಡುಗೆಯನ್ನು ನೀಡುತ್ತಿದೆ. ಇನ್ನು ಹೋಂಡಾ ಕಂಪನಿಯು ಭಾರತದಲ್ಲಿ ಹೊಸ ಮಾದರಿಗಳನ್ನು ಪರಿಚಯಿಸಲು ಸಜ್ಜಾಗುತ್ತಿದೆ.

Article Published On: Wednesday, January 19, 2022, 10:34 [IST]
English summary
Honda shine hit 1 crore sales milestone in india find here all details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+