ಹೈ ಸ್ಪೀಡ್ ವೈಶಿಷ್ಟ್ಯತೆ ಆಕ್ಸೊ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಬಿಡುಗಡೆಗೆ ಸಿದ್ದವಾದ ಹೊಪ್

ಜೈಪುರ್ ಮೂಲದ ಹೊಪ್ ಎಲೆಕ್ಟ್ರಿಕ್ ಮೊಬಿಲಿಟಿ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಈಗಾಗಲೇ ಎರಡು ಹೊಸ ಇವಿ ಸ್ಕೂಟರ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ.

Recommended Video

Royal Enfield Hunter 350 | ಹೊಸ ಬೈಕ್ ಕುರಿತಾದ ಮೊದಲ ಅನಿಸಿಕೆಯ ವಾಕ್‌ರೌಂಡ್ #FirstLook

ಹೊಸ ಇವಿ ಮಾದರಿಗಳೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಹೊಪ್ ಎಲೆಕ್ಟ್ರಿಕ್ ಕಂಪನಿಯು ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದೆ.

ಹೈ ಸ್ಪೀಡ್ ವೈಶಿಷ್ಟ್ಯತೆ ಆಕ್ಸೊ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಬಿಡುಗಡೆಗೆ ಸಿದ್ದವಾದ ಹೊಪ್

ಹೊಪ್ ಎಲೆಕ್ಟ್ರಿಕ್ ಮೊಬಿಲಿಟಿ ಕಂಪನಿಯು ಭಾರತದಲ್ಲಿ ತನ್ನ ಬಹುನೀರಿಕ್ಷಿತ ಹೈ-ಸ್ಪೀಡ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಆಕ್ಸೊವನ್ನು ಬಿಡುಗಡೆ ಮಾಡಲು ಸಿದ್ಧವಾಗಿದ್ದು, ಹೊಸ ಇವಿ ಬೈಕ್ ಮಾದರಿಯು ಮುಂದಿನ ತಿಂಗಳು ಸೆಪ್ಟೆಂಬರ್ 5ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸುವುದು ಬಹುತೇಕ ಖಚಿತವಾಗಿದೆ.

ಹೈ ಸ್ಪೀಡ್ ವೈಶಿಷ್ಟ್ಯತೆ ಆಕ್ಸೊ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಬಿಡುಗಡೆಗೆ ಸಿದ್ದವಾದ ಹೊಪ್

ಹೊಸ ಎಲೆಕ್ಟ್ರಿಕ್ ಬೈಕ್ ಬಿಡುಗಡೆಗಾಗಿ ಹೊಪ್ ಎಲೆಕ್ಟ್ರಿಕ್ ಮೊಬಿಲಿಟಿ ಕಂಪನಿಯು ಈಗಾಗಲೇ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ​​ಆಫ್ ಇಂಡಿಯಾ (ARAI) ಸಂಸ್ಥೆಯಿಂದ ಪ್ರಮಾಣೀಕರಣವನ್ನು ಪಡೆದುಕೊಂಡಿದೆ.

ಹೈ ಸ್ಪೀಡ್ ವೈಶಿಷ್ಟ್ಯತೆ ಆಕ್ಸೊ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಬಿಡುಗಡೆಗೆ ಸಿದ್ದವಾದ ಹೊಪ್

ಆಕ್ಸೊ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಮಾದರಿಯು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಪೂರ್ತಿ ಚಾರ್ಜ್‌ ಮಾಡಿದಾಗ ಸುಮಾರು 150 ಕಿಮೀ ವ್ಯಾಪ್ತಿಯನ್ನು ನೀಡುವ ಸಾಮರ್ಥ್ಯ ಹೊಂದಿದೆ.

ಹೈ ಸ್ಪೀಡ್ ವೈಶಿಷ್ಟ್ಯತೆ ಆಕ್ಸೊ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಬಿಡುಗಡೆಗೆ ಸಿದ್ದವಾದ ಹೊಪ್

ಮೈಲೇಜ್ ಮಾತ್ರವಲ್ಲ ಅತ್ಯುತ್ತಮ ಪರ್ಫಾಮೆನ್ಸ್ ಮಾದರಿಯಾಗಿರುವ ಆಕ್ಸೊ ಇವಿ ಬೈಕ್ ಮಾದರಿಯು ಪ್ರತಿ ಗಂಟೆಗೆ ಗರಿಷ್ಠ 100 ಕಿ.ಮೀ ಟಾಪ್ ಸ್ಪೀಡ್ ಹೊಂದಿದ್ದು, ಹೆಚ್ಚಿನ ಸಾಮರ್ಥ್ಯದ ಲೀಥಿಯಂ-ಐಯಾನ್ ಬ್ಯಾಟರಿ ಪ್ಯಾಕ್ ಅನ್ನು ಈ ಬೈಕ್‌ನಲ್ಲಿ ಬಳಸಲಾಗಿದೆ.

ಹೈ ಸ್ಪೀಡ್ ವೈಶಿಷ್ಟ್ಯತೆ ಆಕ್ಸೊ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಬಿಡುಗಡೆಗೆ ಸಿದ್ದವಾದ ಹೊಪ್

ಹೊಸ ಇವಿ ಬೈಕ್ ಬಿಡುಗಡೆಗಾಗಿ ಹೊಪ್ ಎಲೆಕ್ಟ್ರಿಕ್ ಮೊಬಿಲಿಟಿ ಕಂಪನಿಯು ಕಳೆದ ಒಂದು ವರ್ಷದಿಂದ ನಿರಂತರವಾಗಿ ಪರೀಕ್ಷೆಗೊಳಪಡಿಸಿದ್ದು, ಆಕ್ಸೊ ಇವಿ ಮಾದರಿಯನ್ನು ಸುಮಾರು 30 ಸಾವಿರ ಕಿ.ಮೀ ನಿರಂತವಾಗಿ ರೈಡ್ ಮಾಡಲಾಗಿದೆ.

ಹೈ ಸ್ಪೀಡ್ ವೈಶಿಷ್ಟ್ಯತೆ ಆಕ್ಸೊ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಬಿಡುಗಡೆಗೆ ಸಿದ್ದವಾದ ಹೊಪ್

ಆಧುನಿಕ ಗ್ರಾಹಕರ ಅಗತ್ಯತೆಗಳನ್ನು ಪೂರೈಸುವ ಉದ್ದೇಶದೊಂದಿಗೆ ಹೊಸ ಉತ್ಪನ್ನವನ್ನು ವಿವಿಧ ಹಂತಗಳಲ್ಲಿ ಪರೀಕ್ಷೆಗೊಳಪಡಿಸಿರುವ ಹೊಪ್ ಕಂಪನಿಯು ಆಕ್ಸೊ ಮಾದರಿಯನ್ನು ಆಕರ್ಷಕ ಬೆಲೆಯಲ್ಲಿ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಹೈ ಸ್ಪೀಡ್ ವೈಶಿಷ್ಟ್ಯತೆ ಆಕ್ಸೊ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಬಿಡುಗಡೆಗೆ ಸಿದ್ದವಾದ ಹೊಪ್

ಹೊಪ್ ಎಲೆಕ್ಟ್ರಿಕ್ ಮೊಬಿಲಿಟಿ ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಲಿಯೋ ಮತ್ತು ಎಲ್‌ವೈಎಫ್ ಎನ್ನುವ ಎರಡು ಇವಿ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದ್ದು, ಹೊಸ ಆಕ್ಸೊ ಮಾದರಿಯು ಉತ್ತಮ ಬೇಡಿಕೆ ತಂದುಕೊಡುವ ನೀರಿಕ್ಷೆಯಲ್ಲಿದೆ.

ಹೈ ಸ್ಪೀಡ್ ವೈಶಿಷ್ಟ್ಯತೆ ಆಕ್ಸೊ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಬಿಡುಗಡೆಗೆ ಸಿದ್ದವಾದ ಹೊಪ್

ಜೊತೆಗೆ ಹೊಸ ಉತ್ಪನ್ನವನ್ನು ಕೇಂದ್ರ ಸರ್ಕಾರದ ಇತ್ತೀಚಿನ ಹೊಸ ಮಾನದಂಡಗಳಿಗೆ ಅನುಗುಣವಾಗಿ ನಿರ್ಮಾಣ ಮಾಡಲಾಗಿದ್ದು, ಹೊಸ ಉತ್ಪನ್ನದಲ್ಲಿ ಕಂಪನಿಯು ಗರಿಷ್ಠ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ನೀಡಲಾಗುತ್ತಿದೆ.

ಹೈ ಸ್ಪೀಡ್ ವೈಶಿಷ್ಟ್ಯತೆ ಆಕ್ಸೊ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಬಿಡುಗಡೆಗೆ ಸಿದ್ದವಾದ ಹೊಪ್

ಪ್ರಸ್ತುತ ಕಂಪನಿಯು ಪ್ರತಿದಿನ 100 ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಉತ್ಪಾದಿಸುವ ಉತ್ಪಾದನಾ ಘಟಕವನ್ನು ಹೊಂದಿದ್ದು, ಮುಂಬರುವ ದಿನಗಳಲ್ಲಿ ಹೊಸ ಮಾದರಿಯೊಂದಿಗೆ ಹೆಚ್ಚಿಸಲು ಯೋಜಿಸಲಾಗಿದೆ.

ಹೈ ಸ್ಪೀಡ್ ವೈಶಿಷ್ಟ್ಯತೆ ಆಕ್ಸೊ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಬಿಡುಗಡೆಗೆ ಸಿದ್ದವಾದ ಹೊಪ್

ಮುಂದಿನ ಮೂರು ವರ್ಷಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ ಹೊಪ್ ಎಲೆಕ್ಟ್ರಿಕ್ ಮೊಬಿಲಿಟಿ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಸುಮಾರು 10 ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲು ಯೋಜಿಸುತ್ತಿದೆ.

ಹೈ ಸ್ಪೀಡ್ ವೈಶಿಷ್ಟ್ಯತೆ ಆಕ್ಸೊ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಬಿಡುಗಡೆಗೆ ಸಿದ್ದವಾದ ಹೊಪ್

ಸದ್ಯ ಹೊಪ್ ಕಂಪನಿಯು ದೇಶಾದ್ಯಂತ ಪ್ರಮುಖ ರಾಜ್ಯಗಳಲ್ಲಿ 50ಕ್ಕೂ ಹೆಚ್ಚು ಡೀಲರ್‌ಶಿಪ್‌ಗಳ ಜಾಲವನ್ನು ನಿರ್ವಹಿಸುತ್ತಿದ್ದು, ಆಕ್ಸೊ ಮಾದರಿಯ ಮೂಲಕ ಮುಂದಿನ ಒಂದು ವರ್ಷದಲ್ಲಿ 100ಕ್ಕೂ ಹೆಚ್ಚು ಮಾರಾಟ ಮಳಿಗೆಗಳನ್ನು ತೆರೆಯುವ ಸಿದ್ದತೆಯಲ್ಲಿದೆ.

ಹೈ ಸ್ಪೀಡ್ ವೈಶಿಷ್ಟ್ಯತೆ ಆಕ್ಸೊ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಬಿಡುಗಡೆಗೆ ಸಿದ್ದವಾದ ಹೊಪ್

ಹೊಪ್ ಎಲೆಕ್ಟ್ರಿಕ್ ಮೊಬಿಲಿಟಿ ಕಂಪನಿಯು ತನ್ನ ಹೊಸ ಎಲೆಕ್ಟ್ರಿಕ್ ವಾಹನಗಳಲ್ಲಿ ಹೊಸ ತಂತ್ರಜ್ಞಾನ, ಅತ್ಯಾಧುನಿಕ ವೈಶಿಷ್ಟ್ಯತೆಗಳು ಮತ್ತು ಉತ್ತಮ ಸವಾರಿ ಸೌಕರ್ಯವನ್ನು ಒದಗಿಸುವ ಮೂಲಕ ಗ್ರಾಹಕರನ್ನ ಸೆಳೆಯಲು ಯಶಸ್ವಿಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಹೊಸ ಬೈಕ್ ಮಾದರಿಗಳು ಸಹ ಹೆಚ್ಚಿನ ಬೇಡಿಕೆ ಪಡೆದುಕೊಳ್ಳಲಿವೆ.

ಹೈ ಸ್ಪೀಡ್ ವೈಶಿಷ್ಟ್ಯತೆ ಆಕ್ಸೊ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಬಿಡುಗಡೆಗೆ ಸಿದ್ದವಾದ ಹೊಪ್

ಅಂದಾಜಿನ ಪ್ರಕಾರ ಹೊಪ್ ಆಕ್ಸೊ ಬೈಕ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ 1.20 ಲಕ್ಷದಿಂದ 1.40 ಲಕ್ಷ ಹೊಂದಿರಬಹುದೆಂದು ನೀರಿಕ್ಷಿಸಲಾಗಿದ್ದು, ಇದು ಬಿಡುಗಡೆಯಾಗಿ ವಿತರಣೆಗೆ ಸಜ್ಜಾಗಿರುವ ಒಬೆನ್ ರೊರ್ ಎಲೆಕ್ಟ್ರಿಕ್ ಬೈಕ್ ಮಾದರಿಗೆ ಉತ್ತಮ ಪೈಪೋಟಿಯಾಗಲಿದೆ.

ಹೈ ಸ್ಪೀಡ್ ವೈಶಿಷ್ಟ್ಯತೆ ಆಕ್ಸೊ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಬಿಡುಗಡೆಗೆ ಸಿದ್ದವಾದ ಹೊಪ್

ತೈಲ ಬೆಲೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚವು ಸಹ ಸಾಕಷ್ಟು ಏರಿಕೆಯಾಗುತ್ತಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ನೋಂದಣಿಯಲ್ಲೂ ಏರಿಕೆಯಾಗುತ್ತಿದೆ.

ಹೈ ಸ್ಪೀಡ್ ವೈಶಿಷ್ಟ್ಯತೆ ಆಕ್ಸೊ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಬಿಡುಗಡೆಗೆ ಸಿದ್ದವಾದ ಹೊಪ್

ಆಕರ್ಷಕ ಬೆಲೆಗಳು, ಕಡಿಮೆ ನಿರ್ವಹಣಾ ವೆಚ್ಚಗಳು ಮತ್ತು ಕಡಿಮೆ ನಿರ್ವಹಣೆಯ ಜೊತೆಗೆ ಹೆಚ್ಚುತ್ತಿರುವ ಇಂಧನ ಬೆಲೆಗಳು ಸಹ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳತ್ತ ಖರೀದಿಗೆ ಪ್ರಮುಖ ಕಾರಣವಾಗುತ್ತಿದ್ದು, ಇವಿ ಸ್ಕೂಟರ್ ಮಾರಾಟವು ಹೆಚ್ಚಿನ ಬೇಡಿಕೆ ಹೊಂದಿದೆ ಎನ್ನಬಹುದು.

Most Read Articles

Kannada
English summary
Hop oxo electric motorcycle launch 5 september range features
Story first published: Tuesday, August 23, 2022, 21:46 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X